Home namma chikmagalur chikamagalur ಸಮಯಪ್ರಜ್ಞೆ ಮೆರೆದು ಮಾನವೀಯತೆ ಪ್ರದರ್ಶಿಸಿದ ಶಾಸಕಿ ನಯನಾ ಮೋಟಮ್ಮ
chikamagalurHomeLatest Newsnamma chikmagalur

ಸಮಯಪ್ರಜ್ಞೆ ಮೆರೆದು ಮಾನವೀಯತೆ ಪ್ರದರ್ಶಿಸಿದ ಶಾಸಕಿ ನಯನಾ ಮೋಟಮ್ಮ

Share
Share

ಮೂಡಿಗೆರೆ: ಮೂಡಿಗೆರೆ ತಾಲೂಕಿನ ನಿಡುವಾಳೆ ಬಳಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಯುವಕರ ಜೀವ ಉಳಿಸಲು ಶಾಸಕಿ ನಯನಾ ಮೋಟಮ್ಮ ಅವರು ಸಮಯಪ್ರಜ್ಞೆ ಮೆರೆದು ಮಾನವೀಯತೆ ಪ್ರದರ್ಶಿಸಿದ್ದಾರೆ.

ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಪಕ್ಕದ ಮರಕ್ಕೆ ವೇಗವಾಗಿ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಕಾರಿನಲ್ಲಿದ್ದ ಇಬ್ಬರು ಯುವಕರು ತೀವ್ರ ರಕ್ತಸ್ರಾವಕ್ಕೊಳಗಾಗಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದರು.

ಅದೇ ಸಮಯದಲ್ಲಿ ಹೊರನಾಡಿನಿಂದ ಮೂಡಿಗೆರೆ ಕಡೆಗೆ ಪ್ರಯಾಣಿಸುತ್ತಿದ್ದ ಶಾಸಕಿ ನಯನಾ ಮೋಟಮ್ಮ ಅವರು ಅಪಘಾತವನ್ನು ಕಂಡು ಕೂಡಲೇ ವಾಹನ ನಿಲ್ಲಿಸಿದ್ದಾರೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಅವರು, ಕ್ಷಣವೂ ತಡಮಾಡದೆ ತಮ್ಮ ಅಂಗರಕ್ಷಕರ ಸಹಾಯದಿಂದ ಗಾಯಾಳುಗಳನ್ನು ತಮ್ಮದೇ ಕಾರಿನಲ್ಲಿ ಹತ್ತಿಸಿಕೊಂಡು ಆಸ್ಪತ್ರೆಗೆ ಧಾವಿಸಿದ್ದಾರೆ.

ಗಾಯಾಳುಗಳನ್ನು ಬಣಕಲ್‌ನ ಕೃಷ್ಣ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಯಿತು. ಗಾಯಾಳುಗಳ ಮೈಯಿಂದ ಅತಿಯಾದ ರಕ್ತಸ್ರಾವವಾಗುತ್ತಿದ್ದ ಕಾರಣ ಶಾಸಕರ ಅಧಿಕೃತ ಕಾರು ಸಂಪೂರ್ಣ ರಕ್ತಮಯವಾಗಿತ್ತು. ಆದರೂ ಶಿಷ್ಟಾಚಾರ (Protocol) ಅಥವಾ ವಾಹನದ ಬಗ್ಗೆ ಯೋಚಿಸದೆ, ಜೀವ ಉಳಿಸುವುದೇ ಮುಖ್ಯ ಎಂದು ಶಾಸಕರು ತೋರಿದ ಈ ಕಾಳಜಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.

ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದ್ದರಿಂದ ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಸಂಕಷ್ಟದ ಸಮಯದಲ್ಲಿ ಶಾಸಕಿ ತೋರಿದ ಸಮಯಪ್ರಜ್ಞೆ ಮತ್ತು ಮಾನವೀಯ ಗುಣಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ.

MLA Nayana Motamma showed humanity by being punctual

Share

Leave a comment

Leave a Reply

Your email address will not be published. Required fields are marked *

Don't Miss

ಬಸವಣ್ಣ ಸಮಾನತೆ ದಾರಿ ತೋರಿದ ಮಹಾನ್ ಮಾನವತಾವಾದಿ

ಚಿಕ್ಕಮಗಳೂರು: ಬಸವಣ್ಣನವರು ಕೇವಲ ಒಂದು ಧರ್ಮ ಅಥವಾ ಜಾತಿಗೆ ಸೀಮಿತರಾದವರಲ್ಲ, ಅವರು ಇಡೀ ಮಾನವಕುಲಕ್ಕೆ ಸಮಾನತೆಯ ದಾರಿ ತೋರಿದ ಮಹಾನ್ ಮಾನವತಾವಾದಿ ಎಂದು ಶಾಸಕ ಹೆಚ್.ಡಿ.ತಮ್ಮಯ್ಯ ಹೇಳಿದರು. ನಗರದ ಕುವೆಂಪು ಕಲಾಮಂದಿರದಲ್ಲಿ...

ಸಾಕು ನಾಯಿ ದಾಳಿಯಿಂದ ಏಳು ವರ್ಷದ ಮಗುವಿಗೆ ಗಾಯ

ಚಿಕ್ಕಮಗಳೂರು: ಜಿಲ್ಲೆಯ ಕಳಸ ತಾಲೂಕಿನ ಕೆ. ಕೆಳಗೂರು ಗ್ರಾಮದ ಕಾಫಿ ಎಸ್ಟೇಟ್ ಒಂದರಲ್ಲಿ ಸಾಕು ನಾಯಿಯೊಂದು ಏಕಾಏಕಿ ಬಾಲಕನ ಮೇಲೆ ದಾಳಿ ನಡೆಸಿದ್ದು, ಏಳು ವರ್ಷದ ಮಗು ಸಾವು ಬದುಕಿನ ನಡುವೆ...

Related Articles

ಒಳ ಮೀಸಲಾತಿ ಜಾರಿಯಲ್ಲಿ ರಾಜ್ಯ ಸರ್ಕಾರ ಸಾಮಾಜಿಕ ನ್ಯಾಯ ಪಾಲಿಸಿಲ್ಲ

ಚಿಕ್ಕಮಗಳೂರು: ಒಳ ಮೀಸಲಾತಿ ಜಾರಿಯಲ್ಲಿ ರಾಜ್ಯ ಸರ್ಕಾರ ಸಾಮಾಜಿಕ ನ್ಯಾಯ ಪಾಲಿಸಿಲ್ಲ, ಎಸ್‌ಸಿಎಸ್‌ಟಿ ಮೀಸಲಾತಿಯನ್ನು ಕಡಿತಗೊಳಿಸಿರುವುದು...

ಜಿಲ್ಲಾ ಜಾನಪದ ಸಮ್ಮೇಳನದಲ್ಲಿ ಜಾನಪದ ಲೋಕ ಅನಾವರಣ

ಚಿಕ್ಕಮಗಳೂರು: ಕರ್ನಾಟಕ ಜಾನಪದ ಪರಿ?ತ್ತಿನಿಂದ ನಗರದ ಕುವೆಂಪು ಕಲಾಮಂ ದಿರದಲ್ಲಿ ಭಾನುವಾರ ನಡೆದ ೬ ನೇ...

ಚಾರ್ಮಾಡಿ ಘಾಟಿಯಲ್ಲಿ ಎರಡು ವಾಹನಗಳು ಪಲ್ಟಿ

ಮೂಡಿಗೆರೆ: ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳನ್ನು ಸಂಪರ್ಕಿಸುವ ಚಾರ್ಮಾಡಿ ಘಾಟಿಯ ಎಂಟನೇ ತಿರುವಿನಲ್ಲಿ ಅಪಘಾತ...

ಮೊಬೈಲ್ ಸಂದೇಶ ಕಳುಹಿಸುವ ವಿಚಾರ – ಎರಡು ಕುಟುಂಬಗಳ ನಡುವೆ ಭೀಕರ ಮಾರಾಮಾರಿ

ಕಡೂರು: ಸಕ್ಕರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯ ಕುನ್ನಾಳು ಗ್ರಾಮದಲ್ಲಿ ಮೊಬೈಲ್ ಸಂದೇಶ ಕಳುಹಿಸುವ ವಿಚಾರಕ್ಕೆ ಸಂಬಂಧಿಸಿದಂತೆ...