Home Latest News ಆರ್‌ಸಿಬಿ ತಂಡ ಗೆಲುವಿಗೆ ಶಾಸಕ ತಮ್ಮಯ್ಯ ಶುಭ ಹಾರೈಕೆ
Latest NewschikamagalurHomenamma chikmagalur

ಆರ್‌ಸಿಬಿ ತಂಡ ಗೆಲುವಿಗೆ ಶಾಸಕ ತಮ್ಮಯ್ಯ ಶುಭ ಹಾರೈಕೆ

Share
Share

ಚಿಕ್ಕಮಗಳೂರು: ಜಾತ್ಯಾತೀತ ರಾಷ್ಟ್ರ ಭಾರತದಲ್ಲಿ ಜನಿಸಿದ ನಾವು ಬೇರೆ ಬೇರೆ ರಾಷ್ಟ್ರಗಳಿಗೆ ಭೇಟಿನೀಡುತ್ತೇವೆ ಆದರೆ, ನಮ್ಮ ಭಾರತದ ಸಂಸ್ಕೃತಿ, ಪರಂಪರೆ ಬೇರೆಲ್ಲೂ ಕಾಣಲು ಸಾಧ್ಯವಿಲ್ಲ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು.

ನಿನ್ನೆ ನಡೆದ ಟಾಟಾ ಐಪಿಎಲ್ ಕ್ರಿಕೆಟ್ ಪಂದ್ಯದಲ್ಲಿ ಆರ್‌ಸಿಬಿ ತಂಡ ಜಯಗಳಿಸಿರುವ ಬಗ್ಗೆ ಪ್ರತಿಕ್ರಿಯಿಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೆ ಮೊದಲು ದೇಶ, ನಂತರ ಗ್ರಾಮ, ಬಳಿಕ ಪಕ್ಷಕ್ಕೆ ಆದ್ಯತೆ ನೀಡುತ್ತೇವೆ ಎಂದರು.

ಭಾರತ-ಪಾಕಿಸ್ತಾನ ನಡುವೆ ನಡೆದ ಯುದ್ಧದಲ್ಲಿ ಜಯಗಳಿಸಿದ ಹಿನ್ನೆಲೆಯಲ್ಲಿ ರಾಜ್ಯಸರ್ಕಾರ ತಿರಂಗಾ ಯಾತ್ರೆಯನ್ನು ನಡೆಸುವ ಮೂಲಕ ಯೋಧರಿಗೆ ಶಕ್ತಿ ತುಂಬುವ ಕೆಲಸವನ್ನು ಮಾಡಿದೆ ಎಂದು ಪ್ರಶಂಸಿಸಿದರು.

ಕರ್ನಾಟಕ ನಮ್ಮ ತಾಯ್ನಾಡು, ಬೆಂಗಳೂರು ಆರ್‌ಸಿಬಿ ಕ್ರಿಕೆಟ್ ತಂಡ ಕಳೆದ ಮೂರು ಬಾರಿ ಅಂತಿಮ ಹಂತಕ್ಕೆ ಹೋಗಿದ್ದರೂ ಗೆಲುವು ಸಾಧಿಸಲು ಸಾಧ್ಯವಾಗಿರಲಿಲ್ಲ. ಈ ಬಾರಿ ಗೆಲುವಿಗೆ ರಾಜ್ಯದ ಎಲ್ಲಾ ಸ್ನೇಹಿತರು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿರುವುದು ಕಾರಣ ಎಂದು ಹೇಳಿದರು.

ಇದಕ್ಕೆ ಪೂರಕವಾಗಿ ನಗರದ ಅಜಾದ್ ವೃತ್ತದಲ್ಲಿ ನಿನ್ನೆ ಎಲ್ಲಾ ಬಡವರ ಮಕ್ಕಳು ಕ್ರಿಕೆಟ್ ಪಂದ್ಯವನ್ನು ವೀಕ್ಷಿಸಲು ಅನುಕೂಲವಾಗುವಂತೆ ಎಲ್‌ಇಡಿ ಪರದೆಯನ್ನು ಅಳವಡಿಸಿ ದೇವರಲ್ಲಿ ಗೆಲುವಿಗೆ ಪ್ರಾರ್ಥನೆ ಸಲ್ಲಿಸಿದ್ದು, ಅದೇ ರೀತಿ ಆರ್‌ಸಿಬಿ ತಂಡ ಜಯಗಳಿಸಿ ನಮ್ಮದೇ ಕಪ್ಪು ತಂದಿದೆ ಎಂದು ತಿಳಿಸಿದರು.

ಭಾರತದಲ್ಲಿ ಎಲ್ಲಾ ಕ್ರೀಡೆಗಳನ್ನು ಪ್ರೋತ್ಸಾಹಿಸುತ್ತೇವೆ. ಆದರೆ, ಕ್ರಿಕೆಟ್ ಬಗ್ಗೆ ಅಭಿಮಾನವಿದೆ. ಈ ನಿಟ್ಟಿನಲ್ಲಿ ಆರ್‌ಸಿಬಿ ಕ್ರಿಕೆಟ್ ತಂಡಕ್ಕೆ ಬೆಂಬಲ ಸೂಚಿಸಿ ಶುಭ ಹಾರೈಕೆ ಸಲ್ಲಿಸುತ್ತೇನೆ ಎಂದರು.

ಮುಂದೆ ಜನರಲ್ಲಿರುವ ಕ್ರೀಡಾ ಮನೋಭಾವನೆಯನ್ನು ಉತ್ತೇಜಿಸಲು ಕ್ರಿಕೆಟ್ ಪಂದ್ಯಗಳಲ್ಲಿ ಗೆಲುವು ಸಾಧಿಸಿ ಮನರಂಜನೆ ನೀಡಲಿ ಎಂದು ಹೇಳಿದರು.

MLA Thammaiyya wishes RCB team good luck for victory

Share

Leave a comment

Leave a Reply

Your email address will not be published. Required fields are marked *

Don't Miss

ಜಿಲ್ಲೆಯಲ್ಲಿ ಮೂರು ತಿಂಗಳಿಂದ ಪಿಂಚಣಿ ಹಣ ಸ್ಥಗಿತ

ಚಿಕ್ಕಮಗಳೂರು: ಸಾಮಾಜಿಕ ಭದ್ರತಾ ಯೋಜನೆಗಳಡಿ ವೃದ್ಧಾಪ್ಯ, ವಿಧವಾ ಸೇರಿದಂತೆ ವಿವಿಧ ಮಾಸಿಕ ಪಿಂಚಣಿಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ “ತಿಳುವಳಿಕೆ ಪತ್ರ” ನೀಡುವ ನೆಪದಲ್ಲಿ ಕಳೆದ ಸುಮಾರು ಮೂರು ತಿಂಗಳಿಂದ ಪಿಂಚಣಿ ಹಣ ತಡೆಹಿಡಿಯಲಾಗಿದೆ...

ಕಾಡುಕೋಣ ದಾಳಿಗೆ ಕಾರ್ಮಿಕ ಬಲಿ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡುಕೋಣಗಳ ಹಾವಳಿ ಮತ್ತೆ ಜೀವ ಬಲಿ ಪಡೆದಿದೆ. ಕೊಪ್ಪ ತಾಲೂಕಿನ ಅಗಳಗಂಡಿ ಸಮೀಪದ ದೋಣಿಹಡ್ಲು ಗ್ರಾಮದಲ್ಲಿ ಕಾಡುಕೋಣ ದಾಳಿಗೆ 45 ವರ್ಷದ ಮಂಜುನಾಥ್ ಮೃತಪಟ್ಟಿದ್ದಾರೆ. ಮಂಜುನಾಥ್...

Related Articles

ಯಗಟಿ ಸಮೀಪದ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಬಲಿ

ಚಿಕ್ಕಮಗಳೂರು: ಕಾಡುಹಂದಿ ಬೇಟೆಗಾಗಿ ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ತಂತಿ ತಗುಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಸಿಕ್ಕಿಬೀಳುವ ಭೀತಿಯಿಂದ ಬೇಟೆಗಾರರು...

ಸಿ.ಟಿ.ರವಿಯನ್ನು ಇನ್ನೆರಡು ದಿನದಲ್ಲಿ ಬಂಧಿಸದಿದ್ದರೆ ಜಿಲ್ಲಾ ಬಂದ್‌

ಮೂಡಿಗೆರೆ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಸಮರ್ಥಿಸುವ ಭರದಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು...

ಸಿ.ಟಿ.ರವಿಯಿಂದ ಸಮಾಜದಲ್ಲಿ ಸಾಮರಸ್ಯ ಕದಡುವ ಕೆಲಸ

ಚಿಕ್ಕಮಗಳೂರು : ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಮುಲ್ಲಾನ ಎದೆ ಸೀಳಿದರೆ ಮೂರಕ್ಷರ ಇಲ್ಲ...

ಎಲ್ಲಾ ಧರ್ಮದವರನ್ನು ಗೌರವಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ

ಚಿಕ್ಕಮಗಳೂರು : ಜಿಲ್ಲೆಯಲ್ಲಿ ಎಲ್ಲಾ ಧರ್ಮದ ಜನರು ಪ್ರೀತಿ ಸ್ನೇಹದಿಂದ ಬದುಕುತ್ತಿರುವ ಇಂತಹ ಪರಂಪರೆಯನ್ನು ಗೌರವಿಸಬೇಕಾಗಿರುವುದು...