Home namma chikmagalur chikamagalur ಜಿಲ್ಲಾಸ್ಪತ್ರೆಗೆ ಎಂಎಲ್ಸಿ ಸಿ.ಟಿ. ರವಿ ಭೇಟಿ
chikamagalurHomeLatest Newsnamma chikmagalur

ಜಿಲ್ಲಾಸ್ಪತ್ರೆಗೆ ಎಂಎಲ್ಸಿ ಸಿ.ಟಿ. ರವಿ ಭೇಟಿ

Share
Share

ಚಿಕ್ಕಮಗಳೂರು: ನಗರದ ಅರಳಗುಪ್ಪೆ ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿನ ಅವ್ಯವಸ್ಥೆ ಹಾಗೂ ಔಷಧಿಗಳ ತೀವ್ರ ಕೊರತೆಯ ಕುರಿತು ಕೇಳಿಬಂದ ದೂರುಗಳ ಹಿನ್ನೆಲೆಯಲ್ಲಿ, ಎಂಎಲ್ಸಿ ಸಿ.ಟಿ. ರವಿ ಅವರು ಇಂದು ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಆಸ್ಪತ್ರೆಯ ದುಸ್ಥಿತಿ ಕಂಡು ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಸಿ.ಟಿ. ರವಿ ಅವರಿಗೆ ರೋಗಿಗಳು ಮತ್ತು ಅವರ ಸಂಬಂಧಿಕರು ತಮ್ಮ ಸಂಕಷ್ಟಗಳನ್ನು ಬಿಚ್ಚಿಟ್ಟರು. “ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತವಾಗಿ ಚಿಕಿತ್ಸೆ ಸಿಗುತ್ತದೆ ಎಂದು ಬಂದರೆ, ಇಲ್ಲಿನ ವೈದ್ಯರು ಔಷಧಿಗಳನ್ನು ಹೊರಗಿನಿಂದ ತರಲು ಚೀಟಿ ಬರೆದುಕೊಡುತ್ತಿದ್ದಾರೆ.

ಬಡವರು ಹಣಕ್ಕೆ ಎಲ್ಲಿ ಹೋಗಬೇಕು?” ಎಂದು ರೋಗಿಗಳ ಸಂಬಂಧಿಕರು ಕಣ್ಣೀರಿಟ್ಟರು. ಆಸ್ಪತ್ರೆಯ ಅವ್ಯವಸ್ಥೆ ಕಂಡು ಸಿ.ಟಿ. ರವಿ ಅವರು  ವೈದ್ಯರ ವಿರುದ್ಧ ಸ್ಥಳದಲ್ಲೇ ಗರಂ ಆದರು. ಆಸ್ಪತ್ರೆಯ ಸಿಬ್ಬಂದಿ ಹಾಗೂ ಜಿಲ್ಲಾ ಸರ್ಜನ್ ಅವರನ್ನು ತರಾಟೆಗೆ ತೆಗೆದುಕೊಂಡ ಸಿ.ಟಿ. ರವಿ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು

ಬಡವರ ಬದುಕು ದುಸ್ತರ: “ಸರ್ಕಾರಿ ಆಸ್ಪತ್ರೆಗೆ ಬರುವವರು ಅಸಹಾಯಕರು ಮತ್ತು ಬಡವರು. ಇಲ್ಲಿಯೇ ಔಷಧಿ ಇಲ್ಲದಿದ್ದರೆ ಅವರು ಎಲ್ಲಿಂದ ಹಣ ತರಬೇಕು? ರಾಜ್ಯದಾದ್ಯಂತ ಪ್ರತಿ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆ ಕಾಡುತ್ತಿದೆ,” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಆದ್ಯತೆ ಯಾವುದು?: “ನಿಮಗೆ ಸಚಿವ ಸಂಪುಟದ ಸ್ಥಾನಮಾನ ನೀಡುವುದು ಮೊದಲ ಆದ್ಯತೆಯೋ ಅಥವಾ ಜೀವ ಉಳಿಸಿಕೊಳ್ಳಲು ಬರುವ ಬಡವರಿಗೆ ಚಿಕಿತ್ಸೆ ನೀಡುವುದು ಆದ್ಯತೆಯೋ?” ಎಂದು ಸರ್ಕಾರವನ್ನು ನೇರವಾಗಿ ಪ್ರಶ್ನಿಸಿದರು.

ಡಯಾಲಿಸಿಸ್ ಸಮಸ್ಯೆ: ಡಯಾಲಿಸಿಸ್ ಘಟಕದ ಟೆಂಡರ್ ಪಡೆದ ಖಾಸಗಿ ಕಂಪನಿಗೆ ಕಳೆದ ೧೦ ತಿಂಗಳಿನಿಂದ ಸರ್ಕಾರ ಒಂದು ರೂಪಾಯಿ ಹಣವನ್ನೂ ನೀಡಿಲ್ಲ. ಇದರಿಂದಾಗಿ ರೋಗಿಗಳಿಗೆ ಚಿಕಿತ್ಸೆ ಸಿಗದಂತಾಗಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ತುರ್ತು ಕ್ರಮಕ್ಕೆ ಆಗ್ರಹ: ಔಷಧಿಗಳ ಸರಬರಾಜು ಸಂಬಂಧ ಸರ್ಕಾರ ಯಾವುದೇ ಗಂಭೀರ ಕ್ರಮ ಕೈಗೊಂಡಿಲ್ಲ. ಸರ್ಕಾರ ತಕ್ಷಣ ಎಚ್ಚೆತ್ತುಕೊಂಡು ಬಡ ರೋಗಿಗಳಿಗೆ ಅಗತ್ಯವಿರುವ ಔಷಧಿ ಹಾಗೂ ಸೌಲಭ್ಯಗಳನ್ನು ಒದಗಿಸಬೇಕು, ಇಲ್ಲದಿದ್ದರೆ ಹೋರಾಟ ಅನಿವಾರ್ಯ ಎಂದು ಅವರು ಎಚ್ಚರಿಸಿದರು.

MLC C.T. Ravi visits the district hospital

Share

Leave a comment

Leave a Reply

Your email address will not be published. Required fields are marked *

Don't Miss

ಮನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ನಗ-ನದದು ಕಳವು

ಚಿಕ್ಕಮಗಳೂರು : ತಾಲೂಕಿನ ಕಂಚೇನಹಳ್ಳಿಯಲ್ಲಿ ಹಾಡಹಗಲೇ ಕಳ್ಳತನ ನಡೆದಿದ್ದು ರೈತ ಉಮೇಶ್ ಎಂಬುವವರ ಮನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ನಗದು ಹಾಗೂ ಚಿನ್ನಾಭರಣವನ್ನು ಕಳ್ಳರು ದೋಚಿದ್ದಾರೆ. ಉಮೇಶ್ ಜಮೀನು ಕೆಲಸಕ್ಕೆ ತೆರಳಿದ್ದ...

ಲಾಭಾಂಶ ಆಮಿಷ ಯುವಕನಿಗೆ ಲಕ್ಷಾಂತರ ರೂಪಾಯಿ ವಂಚನೆ

ಚಿಕ್ಕಮಗಳೂರು: ಟ್ರೇಡಿಂಗ್ ಹೆಸರಿನಲ್ಲಿ ಹೆಚ್ಚಿನ ಲಾಭಾಂಶ ನೀಡುವ ಆಮಿಷವೊಡ್ಡಿ ಯುವಕನೊಬ್ಬನಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಸಂಬಂಧ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿನಯ್ ಬಿ.ಕೆ....

Related Articles

ನಿಗಮದ ಸಾಲದ ಬಡ್ಡಿ ಮನ್ನಾಗೆ ಸಿ.ಟಿ.ರವಿ ಖಂಡನೆ

ಚಿಕ್ಕಮಗಳೂರು: ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಸಾಲದ ಬಡ್ಡಿ ಮನ್ನಾ ಮಾಡಿರುವ ರಾಜ್ಯ ಸರ್ಕಾರದ ನೀತಿಯನ್ನ ತೀವ್ರವಾಗಿ...

ಸ್ನಾನಕ್ಕೆ ಇಳಿದಿದ್ದ ಯುವಕ ಕೆರೆಯಲ್ಲಿ ನಾಪತ್ತೆ

ಕಳಸ : ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾದ ಅಂಬಾತೀರ್ಥದಲ್ಲಿ ಭೀಕರ ದುರಂತವೊಂದು ಸಂಭವಿಸಿದೆ. ಇಲ್ಲಿನ ಭದ್ರಾ...

ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ ಮಹಿಳೆಗೆ ವಂಚನೆ

ಚಿಕ್ಕಮಗಳೂರು : ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಹೆಚ್ಚಿನ ಲಾಭ ಗಳಿಸುವ ಅಮಿಷಕ್ಕೆ ಒಳಗಾದ ಮಹಿಳೆಯೊಬ್ಬರು...

ಅಕ್ರಮವಾಗಿ ಸಾಕುತ್ತಿದ್ದ ಕಾಡುಗಿಳಿಗಳ ವಶ

ಚಿಕ್ಕಮಗಳೂರು: ಮೂರು ಕಾಡು ಗಿಳಿಗಳನ್ನು ಅಕ್ರಮವಾಗಿ ಬಂಧನದಲ್ಲಿಟ್ಟು ಸಾಕುತ್ತಿದ್ದ ಆರೋಪದಲ್ಲಿ ನಗರದ ನೆಹರುನಗರದ ನಿವಾಸಿ ಬಾಬು...