Home namma chikmagalur ಮನೆಕಳವು ಮಾಡಿ ಸಂಪಾದಿಸಿದ ಹಣದಲ್ಲಿ 20 ಮಕ್ಕಳ ವಿದ್ಯಾಭ್ಯಾಸ ಹಣ
namma chikmagalurchikamagalurCrime NewsHomeLatest News

ಮನೆಕಳವು ಮಾಡಿ ಸಂಪಾದಿಸಿದ ಹಣದಲ್ಲಿ 20 ಮಕ್ಕಳ ವಿದ್ಯಾಭ್ಯಾಸ ಹಣ

Share
Share

ಬೆಂಗಳೂರು: ಮನೆಕಳವು ಮಾಡಿ ಸಂಪಾದಿಸಿದ ಹಣದಲ್ಲಿ ತನ್ನ ಸ್ನೇಹಿತರಿಗೆ ಆಟೋ ಹಾಗೂ 20 ಮಕ್ಕಳ ವಿದ್ಯಾಭ್ಯಾಸಕ್ಕಾಗಿ 14 ಲಕ್ಷ ರು.ಗಳನ್ನು ನೆರವು ನೀಡಿದ್ದ ‘ಆಧುನಿಕ ರಾಬಿನ್‌ಹುಡ್’ ಹಾಗೂ ಆತನ ಇಬ್ಬರು ಸಹಚರರು ಈಗ ಸೆಂಟ್ರಲ್‌ ಜೈಲು ಸೇರಿದ್ದಾರೆ.

ತಮಿಳುನಾಡು ಮೂಲದ ಶಿವು ಕುಟುಂಬ ಹಲವು ವರ್ಷಗಳ ಹಿಂದೆಯೇ ನಗರಕ್ಕೆ ಬಂದು ನೆಲೆಸಿತ್ತು. ಮೊದಲು ಸಣ್ಣಪುಟ್ಟ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಆತ, ತರುವಾಯ ಸುಲಭವಾಗಿ ಹಣ ಸಂಪಾದನೆಗೆ ಅಡ್ಡದಾರಿ ಹಿಡಿದಿದ್ದಾನೆ. ಮನೆಗಳ್ಳತನವನ್ನೇ ವೃತ್ತಿಯಾಗಿಸಿಕೊಂಡ ಶಿವು ವಿರುದ್ಧ ನಗರದ ಬೇಗೂರು, ಎಲೆಕ್ಟ್ರಾನಿಕ್ ಸಿಟಿ, ಆನೇಕಲ್ ಹಾಗೂ ಜಿಗಣಿ ಸೇರಿದಂತೆ ಇತರೆ ಠಾಣೆಗಳಲ್ಲಿ 10ಕ್ಕೂ ಹೆಚ್ಚಿನ ಪ್ರಕರಣಗಳು ದಾಖಲಾಗಿವೆ.
ಮನೆಗಳ್ಳತನಕ್ಕೆ ಕುಖ್ಯಾತನಾಗಿದ್ದ ಆತ, ತಾನು ಕಳ್ಳತನದಲ್ಲಿ ಸಂಪಾದಿಸಿದ್ದ ಹಣದಲ್ಲಿ ಸ್ಪಲ್ಪ ಹಣವನ್ನು ಜನರಿಗೆ ದಾನ ಮಾಡಿ ಕೊಡುಗೈ ದಾನಿ ಹಾಗೂ ರಾಬಿನ್‌ಹುಡ್‌ ಎಂದೆಲ್ಲ ಕರೆಸಿಕೊಳ್ಳುತ್ತಿದ್ದ ಎಂದು ಪೊಲೀಸರು ವಿವರಿಸಿದ್ದಾರೆ.
Money earned by robbing houses was used to pay for the education of 20 children
Share

Leave a comment

Leave a Reply

Your email address will not be published. Required fields are marked *

Don't Miss

ಸೀತಾಳಯ್ಯನಗಿರಿಯಲ್ಲಿ ಜೀಪ್ ಚಾಲಕರ ಪರಸ್ಪರ ಹೊಡೆದಾಟ

ಚಿಕ್ಕಮಗಳೂರು: ಪ್ರಸಿದ್ಧ ಪ್ರವಾಸಿ ತಾಣವಾದ ಮುಳ್ಳಯ್ಯನಗಿರಿಯ ಸಮೀಪದ ಸೀತಾಳಯ್ಯನಗಿರಿಯಲ್ಲಿ ಪ್ರವಾಸಿಗರನ್ನು ಕರೆದೊಯ್ಯುವ ವಿಚಾರಕ್ಕೆ ಸಂಬಂಧಿಸಿದಂತೆ ಖಾಸಗಿ ಜೀಪ್ ಚಾಲಕರು ಪರಸ್ಪರ ಕೈಕೈ ಮಿಲಾಯಿಸಿ ಹೊಡೆದಾಡಿಕೊಂಡಿರುವ ಘಟನೆ ನಡೆದಿದೆ. ವಾರಾಂತ್ಯದ ದಿನಗಳಲ್ಲಿ ಚಂದ್ರದ್ರೋಣ...

ರಾಜಕೀಯ ಸಮರವಾಗಿ ಮಾರ್ಪಟ್ಟ ರಸ್ತೆ ಕಾಮಗಾರಿ ವೀಕ್ಷಣೆ ಪ್ರಕರಣ

ಚಿಕ್ಕಮಗಳೂರು: ರಸ್ತೆ ಕಾಮಗಾರಿ ವಿಚಾರವಾಗಿ ಆರಂಭವಾದ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವಿನ ಬೀದಿ ಕಾಳಗವು ಇದೀಗ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು, ರಾಜಕೀಯ ಸಮರವಾಗಿ ಮಾರ್ಪಟ್ಟಿದೆ. ನಗರ ಠಾಣೆಯಲ್ಲಿ ದೂರು-ಪ್ರತಿದೂರುಗಳ ಸ್ಪರ್ಧೆಯೇ...

Related Articles

ಗುಡುಗು ಸಿಡಿಲಿನ ಆರ್ಭಟಕ್ಕೆ ಬಸ್ ತಂಗುದಾಣದನಲ್ಲಿದ್ದ ದಂಪತಿ ಗಾಯ

ಎನ್.ಆ‌ರ್.ಪುರ: ಕಾಫಿನಾಡಿನಲ್ಲಿ ಮುಂಗಾರುಪೂರ್ವ ಮಳೆಯ ಅಬ್ಬರ ಜೋರಾಗಿದ್ದು, ಗುಡುಗು ಸಿಡಿಲಿನ ಆರ್ಭಟಕ್ಕೆ ದಂಪತಿ ಗಾಯಗೊಂಡಿರುವ ಘಟನೆ...

ಗಾಯಗೊಂಡು ಚಿಕಿತ್ಸೆ ಫಲಿಸದೆ ನಿವೃತ್ತ ಸೈನಿಕ ನಿಧನ

ಕಡೂರು: ತಂದೆಯ ನಿಧನದ ಸುದ್ದಿ ಕೇಳಿ ತವರಿಗೆ ಬರುತ್ತಿದ್ದ ನಿವೃತ್ತ ಸೈನಿಕರೊಬ್ಬರು ರಸ್ತೆ ಅಪಘಾತದಲ್ಲಿ ಗಾಯಗೊಂಡು...

ದಂಪತಿಯಿಂದ 70 ಸಾವಿರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿದ ಖದೀಮ

ಅಜ್ಜಂಪುರ: ಅರಣ್ಯ ಇಲಾಖೆಯ ಅಧಿಕಾರಿಯಂತೆ ನಟಿಸಿ ದಂಪತಿಯನ್ನು ನಂಬಿಸಿ, ಅವರಿಂದ ಸುಮಾರು 70 ಸಾವಿರ ರೂಪಾಯಿ...

ಸಿದ್ದು ಮೌನಂ ಸಮ್ಮತಿ ಯಾವಾಗ ಸ್ಪೋಟಿಸುತ್ತದೆ ?

ಕರ್ನಾಟಕದ ರಾಜಕಾರಣದಲ್ಲಿ ಇಂತಹ ಬೆಳವಣಿಗೆ ನಡೆಯ ಬಹುದು ಎಂದು ಯಾರು ಕೂಡ ನಿರೀಕ್ಷೆ ಮಾಡಿರಲಿಲ್ಲ. 2013...