Home namma chikmagalur chikamagalur ನಗರದಲ್ಲಿ 15ಕ್ಕೂ ಅಧಿಕ ಮಂದಿ ಪುಡ್‌ ಪಾಯಿಸನ್‌
chikamagalurHomeLatest Newsnamma chikmagalur

ನಗರದಲ್ಲಿ 15ಕ್ಕೂ ಅಧಿಕ ಮಂದಿ ಪುಡ್‌ ಪಾಯಿಸನ್‌

Share
Share

ಚಿಕ್ಕಮಗಳೂರು: ಚಿಕ್ಕಮಗಳೂರು ನಗರದಲ್ಲಿ ಕಳೆದ ಶನಿವಾರದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸುಮಾರು 15ಕ್ಕೂ ಅಧಿಕ ಮಂದಿ ಪುಡ್‌ ಪಾಯಿಸನ್‌ ನಿಂದ ದಾಖಲಾಗುತ್ತಿರುವುದು ಆತಂಕ ಮೂಡಿಸಿದೆ.

ಕಳೆದ ಶನಿವಾರ ನಗರದ ಖಾಸಗಿ ಹೋಟೆಲ್‌ ಒಂದರಲ್ಲಿ ಆಹಾರ ಸೇವಿಸಿದ ಸುಮಾರು 15ಕ್ಕೂ ಅಧಿಕ ಮಂದಿ ಪುಡ್‌ ಪಾಯಿಸನ್‌ ನಿಂದ ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿರುವುದು ಕಂಡು ಬಂದಿದೆ.

ಬಹುತೇಕರು ಒಂದೇ ಹೋಟೆಲ್‌ನಿಂದ ಆಹಾರ ಸೇವನೆ ಮಾಡಿದ್ದಾರೆ. ಹೀಗಾಗಿ, ಆ ಹೋಟೆಲ್‌ನಿಂದ ಆಹಾರ ಪದಾರ್ಥಗಳ ಮಾದರಿಯನ್ನು ಸಂಗ್ರಹಿಸಿರುವ ಆರೋಗ್ಯ ಇಲಾಖೆಯ ಅಧಿಕಾರಿಗಳು ಪರೀಕ್ಷೆಗೆ ಕಳುಹಿಸಿದ್ದಾರೆ. ಪರೀಕ್ಷಾ ವರದಿ ಬಂದ ಬಳಿಕ ಈ ಕುರಿತು ಮುಂದಿನ ತೀರ್ಮಾನ ತೆಗೆದುಕೊಳ್ಳುವುದಕ್ಕೆ ತೀರ್ಮಾನಿಸಲಾಗಿದೆ.

ಈ ಕುರಿತು ಕನ್ನಡಪ್ರಭದೊಂದಿಗೆ ಮಾತನಾಡಿದ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಭರತ್‌, ಪುಡ್‌ ಪಾಯಿಜನ್‌ ನಿಂದ ದಾಖಲಾದ ಬಹುತೇಕರು ಆಸ್ಪತ್ರೆಯಿಂದ ಮನೆಗೆ ವಾಪಾಸ್‌ ಆಗಿದ್ದಾರೆ. ಕೆಲವರಿಗೆ ಚಿಕಿತ್ಸೆ ಮುಂದುವರೆದಿದೆ. ಒಂದೇ ಕಡೆ ಆಹಾರ ಸೇವೆ ಮಾಡಿದ ಪ್ರಕರಣ ಹೆಚ್ಚಾಗಿರುವುದರಿಂದ ಖಾಸಗಿ ಹೋಟೆಲ್‌ನ ಆಹಾರದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ತಿಳಿಸಿದರು.

ಇನ್ನೂ ಬೇಸಿಗೆ ಸಮಯದಲ್ಲಿ ಸಾಮಾನ್ಯವಾಗಿ ಪುಡ್‌ ಪಾಯಿಸಜ್‌ ಪ್ರಕರಣ ಕಂಡು ಬರುತ್ತವೆ. ಅದು ಆಹಾರ ಮತ್ತು ನೀರು ಎರೆಡರಿಂದಲ್ಲೂ ಆಗುವ ಸಾಧ್ಯತೆ ಇರುತ್ತದೆ ಎಂದು ವಿವರಿಸಿದರು.

More than 15 people have been poisoned in the city

Share

Leave a comment

Leave a Reply

Your email address will not be published. Required fields are marked *

Don't Miss

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧ ರಂದು ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ’ರಾಷ್ಟ್ರೀಯ ಲೋಕ್ ಅದಾಲತ್’ ಹಮ್ಮಿಕೊಳ್ಳಲಾಗಿದೆ ಎಂದು ಗೌ.ಪ್ರಧಾನ ಜಿಲ್ಲಾ...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ ಸಂಚಾರ) ಬಂದ ಕಾರೊಂದು ಎದುರಿನಿಂದ ಬರುತ್ತಿದ್ದ ಮತ್ತೊಂದು ಕಾರಿಗೆ ದುಡುಕುತನದಿಂದ ಡಿಕ್ಕಿ ಹೊಡೆದ ಪರಿಣಾಮ...

Related Articles

ಅಮೃತ್ 2.0 ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ

ಚಿಕ್ಕಮಗಳೂರು: ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅಮೃತ್ 2.0 ಯೋಜನೆಯಡಿ ಅನುಷ್ಠಾನಗೊಳ್ಳುತ್ತಿರುವ ಕುಡಿಯುವ ನೀರಿನ...

ವಿಕಲಚೇತನ ವ್ಯಕ್ತಿಯ ₹8 ಲಕ್ಷ ಬ್ಯಾಂಕ್ ಸಾಲ ಕೇವಲ ₹15,000 ಕ್ಕೆ ಇತ್ಯರ್ಥ

ಚಿಕ್ಕಮಗಳೂರು:  ಇಲ್ಲಿನ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಮ್ಮಿಕೊಂಡಿದ್ದ ಮೆಗಾ ಲೋಕ ಅದಾಲತ್‌ನಲ್ಲಿ ನ್ಯಾಯಾಂಗದ ವಿಶೇಷ...

ಎಟಿಎಂ ಕಾರ್ಡ್ ಬದಲಿಸಿ ₹3.09 ಲಕ್ಷ ವಂಚನೆ

ಕಡೂರು: ಪಟ್ಟಣದ ಜೈನ್ ಟೆಂಪಲ್ ರಸ್ತೆಯಲ್ಲಿರುವ ಕೆನರಾ ಬ್ಯಾಂಕ್ ಎಟಿಎಂನಲ್ಲಿ ಹಣ ಹಿಂಪಡೆಯಲು ಯತ್ನಿಸುತ್ತಿದ್ದ ವೇಳೆ...

ಕೆಪಿಟಿಸಿಎಲ್ ಸಿಎಸ್‌ಆರ್ ಅನುದಾನ ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಕಣ್ಣಾವಲಿಗೆ ನೆರವು

ಚಿಕ್ಕಮಗಳೂರು: ಸರ್ಕಾರದ ಅನುದಾನದ ಕೊರತೆ ನಡುವೆ ಕೆಪಿಟಿಸಿಎಲ್ ಸಿಎಸ್‌ಆರ್ (ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ನಿಧಿ) ಅನುದಾನ...