Home namma chikmagalur chikamagalur ಕಾಡಾನೆಗಳ ದಾಳಿಯಿಂದ 500ಕ್ಕೂ ಹೆಚ್ಚು ಅಡಿಕೆ ಗಿಡ ನಾಶ
chikamagalurHomeLatest Newsnamma chikmagalur

ಕಾಡಾನೆಗಳ ದಾಳಿಯಿಂದ 500ಕ್ಕೂ ಹೆಚ್ಚು ಅಡಿಕೆ ಗಿಡ ನಾಶ

Share
Share

ನರಸಿಂಹರಾಜಪುರ: ತಾಲ್ಲೂಕಿನ ಮಡಬೂರು ಗ್ರಾಮ ವ್ಯಾಪ್ತಿಯಲ್ಲಿ ಕಾಡಾನೆಗಳ ಹಿಂಡು ಬೀಡು ಬಿಟ್ಟಿದ್ದು, ಅಡಿಕೆ ಗಿಡಗಳನ್ನು ಧರೆಗುರುಳಿಸಿ ನಾಶ ಮಾಡಿವೆ. ಮಡಬೂರು ಗ್ರಾಮದ ನಿವಾಸಿ ವನಮಾಲಮ್ಮ ಅವರ ಅಡಿಕೆ ತೋಟಕ್ಕೆ ಹೆಚ್ಚು ಕಾಡಾನೆಗಳ ಹಿಂಡು ದಾಳಿ ಮಾಡಿ. ೩ರಿಂದ ೪ ವರ್ಷದ ಸುಮಾರು ೫೦೦ಕ್ಕೂ ಹೆಚ್ಚು ಅಡಿಕೆ ಗಿಡಗಳನ್ನು ಧರೆಗುರುಳಿಸಿವೆ.

ಮಡಬೂರು ಗ್ರಾಮದ ವ್ಯಾಪ್ತಿಗೆ, ಆರಂಬಳ್ಳಿ ಮೀಸಲು ಅರಣ್ಯ ವ್ಯಾಪ್ತಿಗೆ ಭದ್ರಾ ವನ್ಯಜೀವಿ ವಿಭಾಗದಿಂದ ಭದ್ರಾ ಹಿನ್ನೀರು ದಾಟಿ ಐದಾರು ಅನೆಗಳು ಬಂದಿದ್ದವು. ಇಂದು ಮರಿ ಆನೆಗಳು ಸೇರಿ ಒಟ್ಟು ೧೬ ಕಾಡಾನೆಗಳು ಬಂದಿದ್ದು, ಅರಣ್ಯ ಸಿಬ್ಬಂದಿ ಹಾಗೂ ಆನೆ ಕಾರ್ಯಪಡೆ ತಂಡದ ಸಹಯೋಗದಲ್ಲಿ ಅವುಗಳನ್ನು ಅರಣ್ಯಕ್ಕೆ ಓಡಿಸುವ ಕಾರ್ಯಾಚರಣೆ ಮಾಡಲಾಗಿದೆ.

ಅಡಿಕೆ ಗಿಡ ನಾಶ ಮಾಡಿದ ತೋಟಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಲಾಗಿದೆ ಎಂದು ನರಸಿಂಹರಾಜಿಪುರ ವಲಯ ಅರಣ್ಯಾಧಿಕಾರಿ ಪ್ರವೀಣ್ ಕುಮಾರ್ ಮಾಹಿತಿ ನೀಡಿದರು. ಕಳೆದ ಹಲವು ದಿನಗಳಿಂದ ಕಡಿಮೆಯಾಗಿದ್ದ ಕಾಡಾನೆಗಳ ಹಾವಳಿ ಭದ್ರಾಹಿನ್ನೀರು ಕಡಿಮೆಯಾಗುತ್ತಿದ್ದಂತೆ ಹೆಚ್ಚಾಗಿದ್ದು, ಭದ್ರಾ ಹಿನ್ನೀರು ದಾಟಿ ಗ್ರಾಮಗಳತ್ತ ಕಾಡಾನೆಗಳು ದಾಂಗುಡಿ ಇಡುತ್ತಿರು ವುದು ರೈತರಲ್ಲಿ ಮತ್ತು ಗ್ರಾಮಸ್ಥರಲ್ಲಿ ಆತಂಕವನ್ನು ಹೆಚ್ಚಿಸಿದೆ.

ಕಾಡಾನೆಗಳನ್ನು ಅಭಯಾರಣ್ಯಕ್ಕೆ ಓಡಿಸುವ ಕೆಲಸ ಅರಣ್ಯ ಇಲಾಖೆಯವರು ಮಾಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

More than 500 areca nut plants destroyed by wild elephant attacks

Share

Leave a comment

Leave a Reply

Your email address will not be published. Required fields are marked *

Don't Miss

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆ-ಜಿಲ್ಲಾಧಿಕಾರಿ

ಚಿಕ್ಕಮಗಳೂರು: ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಇದೇ ಮಾರ್ಚ್ ೧೮ ರಿಂದ ಪ್ರಾರಂಭವಾಗಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ನಡೆಯಲು ಎಲ್ಲಾ ರೀತಿಯ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ತಿಳಿಸಿದರು. ಜಿ.ಪಂ.ನ ಅಬ್ದುಲ್...

ಜಿಲ್ಲೆಯಲ್ಲಿ ಗೃಹಬಳಕೆ ಸಿಲಿಂಡರ್‌ಗೆ ಕೊರತೆ ಇಲ್ಲ

ಚಿಕ್ಕಮಗಳೂರು, ಮಾ.೧೩: ಜಿಲ್ಲೆಯಲ್ಲಿ ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಸಮರ್ಪಕ ಸಂಗ್ರಹ ಮತ್ತು ಸರಬರಾಜು ಲಭ್ಯವಿರುವುದನ್ನು ದೃಢಪಡಿಸಿ ಎಂದಿನಂತೆ ಎಲ್‌ಪಿಜಿ ವಿತರಕರು ಗ್ರಾಹಕರ ಮನೆಬಾಗಿಲಿಗೆ ಸರಬರಾಜು ಮಾಡಲಿದ್ದಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಯಲ್ಲಿ...

Related Articles

ವಿದ್ಯುತ್ ಸ್ಪರ್ಶಕ್ಕೆ ಯುವಕನ ಧಾರುಣ ಸಾವು

ಅಜ್ಜಂಪುರ: ವಿದ್ಯುತ್ ಸ್ಪರ್ಶದಿಂದ ಪ್ರವೀಣ್ ಎಂಬ ಯುವಕ ಮೃತಪಟ್ಟಿದ್ದಾನೆ ಸೊಕ್ಕೆ ಪರಮೇಶಣ್ಣ ಅವರ ಮಗ. ಹೆಬ್ಬೂರು...

ಏಕಲವ್ಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಮನಸೋಇಚ್ಛೆ ಹಲ್ಲೆ

ಮೂಡಿಗೆರೆ:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ತರುವೆ ಗ್ರಾಮದಲ್ಲಿರುವ ಏಕಲವ್ಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ...

ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯ 25ಕ್ಕೂ ಹೆಚ್ಚುಕಡೆ ಬೆಂಕಿ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು  ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ...

3.50 ಕೋಟಿ ರೂ ವೆಚ್ಚದ ವಿವಿಧ ರಸ್ತೆಗಳ ಲೋಕಾರ್ಪಣೆ

ಚಿಕ್ಕಮಗಳೂರು:  ಬಡವರ ಬಗ್ಗೆ ಕಾಳಜಿ ಇಲ್ಲದ ಕೇಂದ್ರ ಸರ್ಕಾರ ಧರ್ಮ ಧರ್ಮಗಳ ಮಧ್ಯೆ ವಿಷಬೀಜ ಬಿತ್ತಿ...