Home namma chikmagalur ದುಷ್ಕರ್ಮಿಗಳಿಂದ 700ಕ್ಕೂ ಅಧಿಕ ಕಾಫಿಗಿಡ ನಾಶ
namma chikmagalurchikamagalurHomeLatest News

ದುಷ್ಕರ್ಮಿಗಳಿಂದ 700ಕ್ಕೂ ಅಧಿಕ ಕಾಫಿಗಿಡ ನಾಶ

Share
Share

ಬಾಳೆಹೊನ್ನೂರು: ಸಮೀಪದ ಹಿರೇಗದ್ದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಡಿಗೆಬೈಲು ತುಪ್ಪೂರು ಬಳಿ ಫಸಲು ತುಂಬಿದ್ದ 750ಕ್ಕೂ ಅಧಿಕ ಕಾಫಿ ಗಿಡಗಳನ್ನು ರಾತ್ರಿ ವೇಳೆ ದುಷ್ಕರ್ಮಿಗಳು ಕಡಿದು ಹಾಕಿದ್ದಾರೆ ಎಂದು ಆರೋಪಿಸಿ ತುಪ್ಪೂರಿನ ಶಂಕರೇಗೌಡ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

ಮನೆಯಿಂದ ಸುಮಾರು ಒಂದು ಕಿ.ಮೀ ದೂರದಲ್ಲಿದ್ದ ಎರಡು ಎಕರೆಯ ಕಾಫಿ ತೋಟದಲ್ಲಿ ಈ ಬಾರಿ ಉತ್ತಮ ಫಸಲು ಇತ್ತು. ಶನಿವಾರ ರಾತ್ರಿ ಕಾಫಿ ಗಿಡಗಳನ್ನು ಕಡಿದು ಹಾಕಲಾಗಿದೆ. ದುಷ್ಕೃತ್ಯದಲ್ಲಿ ಸ್ಥಳೀಯರ ಕೈವಾಡದ ಶಂಕೆ ಇದ್ದು, ಆರೋಪಿಗಳನ್ನು ಪತ್ತೆ ಹಚ್ಚು ವಂತೆ ದೂರಿನಲ್ಲಿ ಮನವಿ ಮಾಡಿದ್ದಾರೆ.

ಸ್ಥಳಕ್ಕೆ ಕೊಪ್ಪ ಡಿವೈಎಸ್ಪಿ ಬಾಲಾಜಿ ಸಿಂಗ್, ಸಿಪಿಐ ಗುರುದತ್ ಕಾಮತ್, ಅಪ ರಾಧ ವಿಭಾಗದ ಪಿಎಸ್‌ಐ ಯೋಗೀಶ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.

More than 700 coffee plants destroyed by miscreants

Share

Leave a comment

Leave a Reply

Your email address will not be published. Required fields are marked *

Don't Miss

ಎತ್ತಿನ ಗಾಡಿ ತೆರಿಗೆ ಬಡಿದು ಒಬ್ಬರಿಗೆ ಗಂಭೀರ ಗಾಯ

ಚಿಕ್ಕಮಗಳೂರು : ಇತಿಹಾಸ ಪ್ರಸಿದ್ಧ ಅಂತರಘಟ್ಟೆ ಜಾತ್ರಾ ಮಹೋತ್ಸವದಲ್ಲಿ ಎತ್ತಿನ ಗಾಡಿ ತೆರಿಗೆ ಬಡಿದು ಒಬ್ಬರಿಗೆ ಗಂಭೀರ ಗಾಯವಾಗಿದೆ. ರೇಸಿಗೆ ಬಿದ್ದ ಎತ್ತಿನಗಾಡಿಗಳ ಪೈಪೋಟಿ ಮಧ್ಯೆ ಎತ್ತಿನ ಗಾಡಿ ತೇರಿಗೆ ಡಿಕ್ಕಿಯೊಡೆದಿದೆ....

ಕಡೂರು ಪುರಸಭೆಯ ಇಬ್ಬರು ದ್ವಿತೀಯ ದರ್ಜೆ ಸಹಾಯಕರ ಅಮಾನತು

ಚಿಕ್ಕಮಗಳೂರು: ಆಸ್ತಿ ಗುರುತಿನ ಸ್ವತ್ತಿನ ಚಕ್ಕುಬಂಧಿಯನ್ನು ಅಕ್ರಮವಾಗಿ ತಿದ್ದುಪಡಿ ಮಾಡಿರುವ ಹಿನ್ನೆಲೆಯಲ್ಲಿ ಕಡೂರು ಪುರಸಭೆಯ ಇಬ್ಬರು ದ್ವಿತೀಯ ದರ್ಜೆ ಸಹಾಯಕರನ್ನು ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್ ಸೇವೆಯಿಂದ ಅಮಾನತ್ತುಗೊಳಿಸಿ ಬುಧವಾರ ಆದೇಶಿಸಿದ್ದಾರೆ. ಪಟ್ಟಣದ...

Related Articles

ಜಿಲ್ಲೆಯಲ್ಲಿ ಮಲೆನಾಡು ಡ್ರೈವಿಂಗ್ ಸ್ಕೂಲ್ ಅಸೋಸಿಯೇಷನ್ ಸ್ಥಾಪನೆ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಲೆನಾಡು ಡ್ರೈವಿಂಗ್ ಸ್ಕೂಲ್ ಅಸೋಸಿಯೇಶನ್ ಸ್ಥಾಪಿಸಿದ್ದು, ಮುಂದಿನ ದಿನಗಳಲ್ಲಿ ರಸ್ತೆ ಸುರಕ್ಷತೆ ಬಗ್ಗೆ...

ಮೂಡಿಗೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಶೂನ್ಯ

ಚಿಕ್ಕಮಗಳೂರು: ಮೂಡಿಗೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಶೂನ್ಯ ಸಾಧನೆ ಮಾಡಿರುವ ಶಾಸಕರು ಉಳಿದಿರುವ...

ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ವಾಹನ ವಶ

ಚಿಕ್ಕಮಗಳೂರು : ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ವಾಹನವೊಂದನ್ನು ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ. ಕೆಎಂ ರಸ್ತೆಯ...

ಮನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ನಗ-ನದದು ಕಳವು

ಚಿಕ್ಕಮಗಳೂರು : ತಾಲೂಕಿನ ಕಂಚೇನಹಳ್ಳಿಯಲ್ಲಿ ಹಾಡಹಗಲೇ ಕಳ್ಳತನ ನಡೆದಿದ್ದು ರೈತ ಉಮೇಶ್ ಎಂಬುವವರ ಮನೆಯಿಂದ ಲಕ್ಷಾಂತರ...