Home namma chikmagalur chikamagalur ರಸ್ತೆ ಅಪಘಾತದಲ್ಲಿ ಗಾರೆ ಕೆಲಸಗಾರನ ಸಾವು
chikamagalurHomeLatest Newsnamma chikmagalur

ರಸ್ತೆ ಅಪಘಾತದಲ್ಲಿ ಗಾರೆ ಕೆಲಸಗಾರನ ಸಾವು

Share
Share

ಚಿಕ್ಕಮಗಳೂರು: ಗಾರೆ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿಯೊಬ್ಬರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕಡೂರು ತಾಲ್ಲೂಕಿನ ಕಾಮೇನಹಳ್ಳಿ ಗ್ರಾಮದ ಕುಮಾರ ಎಂಬುವರು ರಾತ್ರಿ ತಮ್ಮ ಸ್ಕೂಟರ್‌ನಲ್ಲಿ ಬರುತ್ತಿದ್ದಾಗ, ಸಖರಾಯಪಟ್ಟಣದ ಬಾಣಾವಾರ ರಸ್ತೆಯ ಡಾಬಾ ಕ್ರಾಸ್ ಬಳಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ.

ಅಪಘಾತದ ರಭಸಕ್ಕೆ ಸ್ಕೂಟರ್ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಕ್ಕದ ಕಾಲುವೆಗೆ ಬಿದ್ದಿದೆ. ತೀವ್ರವಾಗಿ ಗಾಯಗೊಂಡ ಕುಮಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಈ ಸಂಬಂಧ ಮೃತರ ಅಣ್ಣ ಆಂಜನಪ್ಪ ನೀಡಿದ ದೂರಿನ ಮೇರೆಗೆ ಸಖರಾಯಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಅಪಘಾತ ಎಸಗಿ ಪರಾರಿಯಾದ ವಾಹನ ಚಾಲಕನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Mortar worker dies in road accident

Share

Leave a comment

Leave a Reply

Your email address will not be published. Required fields are marked *

Don't Miss

ಅಜ್ಜಂಪುರದ ಇಲಿಗೆ ‘ಹಣದ ಮೋಹ’

ಚಿಕ್ಕಮಗಳೂರು : ತುಮಕೂರಿನಲ್ಲಿ ಇತ್ತೀಚೆಗೆ ಇಲಿಯೊಂದು ಚಿನ್ನದ ಆಭರಣಗಳನ್ನು ಎಗರಿಸಿ ಸುದ್ದಿಯಾಗಿದ್ದರೆ, ಇತ್ತ ಚಿಕ್ಕಮಗಳೂರಿನಲ್ಲಿ ಮತ್ತೊಂದು ಚಾಣಾಕ್ಷ ಇಲಿ ಒಂದು ಹೆಜ್ಜೆ ಮುಂದೆ ಹೋಗಿ ನೇರವಾಗಿ ಹಣವನ್ನೇ ಕದ್ದು ತನ್ನ ಸಾಮ್ರಾಜ್ಯ...

ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಹೆಸರಿನಲ್ಲಿಯೂ ನಕಲಿ ವಾಟ್ಸಪ್ ಖಾತೆ

ಚಿಕ್ಕಮಗಳೂರು: ಇತ್ತೀಚಿನ ದಿನಗಳಲ್ಲಿ ಸೈಬರ್ ಕ್ರೈಂ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಹ್ಯಾಕರ್‌ಗಳು ಮತ್ತು ವಂಚಕರು ವಾಟ್ಸಪ್, ಫೇಸ್‌ಬುಕ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಪ್ರಮುಖರ ಹೆಸರನ್ನು ದುರ್ಬಳಕೆ ಮಾಡಿಕೊಂಡು ಜನರನ್ನು...

Related Articles

ಮುಳ್ಳಯ್ಯನಗಿರಿ ಕ್ರಾಸ್ ಬಳಿ ಟಿಟಿ ವಾಹನ ಮರಕ್ಕೆ ಡಿಕ್ಕಿ

ಚಿಕ್ಕಮಗಳೂರು: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಮುಳ್ಳಯ್ಯನಗಿರಿ ಕ್ರಾಸ್ ಬಳಿ ಶುಕ್ರವಾರ ಇನೋವಾ ಕಾರು ನಿಯಂತ್ರಣ...

ಹಾಸ್ಟೆಲ್‌ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ

ಚಿಕ್ಕಮಗಳೂರು: ಸಮಗ್ರ ಗಿರಿಜನ ಕಲ್ಯಾಣ ಇಲಾಖೆ (ಐಟಿಡಿಪಿ) ವ್ಯಾಪ್ತಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ...

ಮನೆಯ ಮೇಲ್ಛಾವಣಿಯ ಹೆಂಚು ತೆಗೆದು ನುಗ್ಗಿ ಸರಗಳ್ಳತನ

ನರಸಿಂಹರಾಜಪುರ: ಮನೆಯಲ್ಲಿ ದಂಪತಿ ಮಲಗಿದ್ದ ವೇಳೆ ಮೇಲ್ಛಾವಣಿಯ ಹೆಂಚು ತೆಗೆದು ಒಳನುಗ್ಗಿದ ಕಳ್ಳನೊಬ್ಬ ಮಹಿಳೆಯ ಕೊರಳಿನಲ್ಲಿದ್ದ...

ಕನಸು ಫೈನಾನ್ಸ್ ಹೆಸರಿನಲ್ಲಿ ₹1.60 ಲಕ್ಷ ವಂಚನೆ ಆರೋಪ

ಕಡೂರು: ಪ್ರತಿದಿನ ಉಳಿತಾಯದ ಹಣವನ್ನು ಸ್ವೀಕರಿಸಿ ಶೇ.7ರಷ್ಟು ಬಡ್ಡಿ ನೀಡುವುದಾಗಿ ನಂಬಿಸಿ, ಹಣವನ್ನು ವಾಪಸ್ ನೀಡದೆ...