Home ಮುದ್ದೆಯಲ್ಲಿ 20 ನಿದ್ರೆ ಮಾತ್ರೆ ಬೆರೆಸಿ ಅತ್ತೆಯ ಕೊಲೆ
HomechikamagalurLatest Newsnamma chikmagalur

ಮುದ್ದೆಯಲ್ಲಿ 20 ನಿದ್ರೆ ಮಾತ್ರೆ ಬೆರೆಸಿ ಅತ್ತೆಯ ಕೊಲೆ

Share
Share

ಚಿಕ್ಕಮಗಳೂರು: ಚಿಕ್ಕಮಗಳೂರು: ವಿವಾಹಿತ ಮಹಿಳೆಯೊಬ್ಬಳು ತನ್ನ ಪ್ರಿಯಕರನ ಜೊತೆ ಸೇರಿ ನಿದ್ರೆ ಮಾತ್ರೆ ಹಾಕಿ ತನ್ನ ಅತ್ತೆಯನ್ನೇ ಕೊಲೆ ಮಾಡಿದ ಪ್ರಕರಣವನ್ನು ಅಜ್ಜಂಪುರ ಪೊಲೀಸರು ಬಯಲಿಗೆಳೆದಿದ್ದಾರೆ.

ಅಜ್ಜಂಪುರ ತಾಲ್ಲೂಕು ಶಿವನಿಯ ದೇವೀರಮ್ಮ(೭೫) ಕೊಲೆಯಾದ ವೃದ್ಧೆಯಾಗಿದ್ದಾರೆ. ಆಕೆಯ ಸೊಸೆ ಅಶ್ವಿನಿ ಮತ್ತು ಆಕೆಯ ಪ್ರಿಯಕರ ಆಂಜನೇಯ ಬಂಧಿತ ಆರೋಪಿಗಳಾಗಿದ್ದಾರೆ.

ಪತಿ ಇದ್ದರೂ ಆಂಜನೇಯನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಅಶ್ವಿನಿ ಮನೆಯಲ್ಲಿದ್ದ ತಮ್ಮ ಅತ್ತೆ ದೇವೀರಮ್ಮ ಅವರಿಗೆ ಸೇರಿದ ಬೀರುವಿನಲ್ಲಿದ್ದ ಹಣ ಮತ್ತು ಚಿನ್ನಾಭರಣವನ್ನು ನಕಲಿ ಕೀಲಿ ಬಳಸಿ ಆಗಾಗ ಕದ್ದು ತನ್ನ ಪ್ರಿಯಕರನಿಗೆ ನೀಡುತ್ತಿದ್ದಳು. ಹೀಗೆ ಸುಮಾರು ೬೫ ಸಾವಿರ ರೂ. ನಗದು ಮತ್ತು ೨೦ ಲಕ್ಷ ರೂ.ಬೆಲೆ ಬಾಳುವ ಚಿನ್ನಾಭರವಣವನ್ನು ಎಗರಿಸಿದ್ದಳು.

ಈ ವಿಚಾರ ದೇವೀರಮ್ಮ ಅವರಿಗೆ ಗೊತ್ತಾಗುತ್ತಿದ್ದಂತೆ ಆಕೆಯನ್ನು ಮುಗಿಸಲು ತೀರ್ಮಾನಿಸಿದ ಅಶ್ವಿನಿ ಮತ್ತು ಆಂಜನೇಯ ಆಗಸ್ಟ್ ೧೦ ರಂದು ರಾತ್ರಿ ರಾಗಿ ಮುದ್ದೆಯಲ್ಲಿ ಸುಮಾರು ೨೦ ನಿದ್ರೆ ಮಾತ್ರೆಗಳನ್ನು ಬೆರೆಸಿ ದೇವೀರಮ್ಮ ಅವರಿಗೆ ತಿನ್ನಿಸಿ ಕೊಲೆ ಮಾಡಿ ಶವ ಸಂಸ್ಕಾರ ನಡೆಸಲಾಗಿದೆ.

ಬೀರುವಿನಲ್ಲಿದ್ದ ನಗದು, ಚಿನ್ನಾಭರಣ ಕಾಣೆಯಾಗಿರುವ ಬಗ್ಗೆ ದೇವೀರಮ್ಮನ ಮಗಳು ವೀಣಾ ಮಾಹಿತಿ ನೀಡಿದ್ದರು. ಸ್ಥಳಕ್ಕಾಗಮಿಸಿದ ಪೊಲೀಸರು ಅನುಮಾನಗೊಂಡು ಅಶ್ವಿನಿಯನ್ನು ವಿಚಾರಣೆಗೊಳಪಡಿಸಿದಾಗ ಇಡೀ ಸಂಚು ಬಯಲಾಗಿದೆ ಒಂದೆರಡು ದಿನಗಳಲ್ಲಿ ದೇವೀರಮ್ಮನವರ ಶವವನ್ನು ಹೊರಕ್ಕೆ ತೆಗೆದು ಮರಣೋತ್ತರ ಪರಿಕ್ಷೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

Mother-in-law murdered by mixing 20 sleeping pills in a lump

Share

Leave a comment

Leave a Reply

Your email address will not be published. Required fields are marked *

Don't Miss

ವೈದ್ಯರ ಬೇಜವಾಬ್ದಾರಿತನಕ್ಕೆ ಮೂರು ತಿಂಗಳ ಹಸುಗೂಸು ಸಾವು

ಚಿಕ್ಕಮಗಳೂರು: ವೈದ್ಯರ ಬೇಜವಾಬ್ದಾರಿತನ ಹಾಗೂ ನಿರ್ಲಕ್ಷ್ಯದ ಆರೋಪಕ್ಕೆ ಮೂರು ತಿಂಗಳ ಹಸುಗೂಸೊಂದು ಬಲಿಯಾಗಿರುವ ಘಟನೆ ಚಿಕ್ಕಮಗಳೂರು ನಗರದ ಸರ್ಕಾರಿ ಜಿಲ್ಲಾ ಹೆರಿಗೆ ಆಸ್ಪತ್ರೆಯಲ್ಲಿ ನಡೆದಿದೆ. ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ನೀಡದೆ...

ಜಿಲ್ಲೆಯಾದ್ಯಂತ ಮೊಹರಂ ಹಬ್ಬ ಆಚರಣೆ

ಚಿಕ್ಕಮಗಳೂರು: ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ಮೊಹರಂ ಹಬ್ಬವನ್ನು ಮುಸ್ಲಿಮರು ಜಿಲ್ಲೆಯಾದ್ಯಂತ ಶುಕ್ರವಾರ ಶ್ರದ್ದಾಭಕ್ತಿಯಿಂದ ಆಚರಿಸಿದರು. ಕಳೆದ ಎರಡು ದಿನಗಳಿಂದ ಉಪವಾಸವಿದ್ದ ಭಕ್ತರು ನಗರದ ಬಡಾವಣೆಗಳ ವಿವಿಧ ಮಸೀದಿಗಳಿಗೆ ಬೆಳಿಗ್ಗೆಯೇ ತೆರಳಿ...

Related Articles

ನೀವು ಬೆಳಿಗ್ಗೆ ಕಸ ಗುಡಿಸದಿದ್ದರೆ ದೇಶವೇ ನಡೆಯಲ್ಲ ಧೈರ್ಯವಾಗಿ ಹಕ್ಕು ಕೇಳಿ

ಚಿಕ್ಕಮಗಳೂರು:  “ನೀವು ಬೆಳಿಗ್ಗೆ ಎದ್ದು ಕಸ ಗುಡಿಸದಿದ್ದರೆ ಈ ದೇಶದ ಯಾವುದೇ ನಗರ, ಪಟ್ಟಣ, ಊರುಗಳು...

ಸರ್ಕಾರಿ ಕಚೇರಿಗಳಲ್ಲಿ ಇ-ಆಫೀಸ್ ಮೂಲಕವೇ ವ್ಯವಹರಿಸಿ

ಚಿಕ್ಕಮಗಳೂರು: ಪ್ರತೀ ಕಚೇರಿಗಳಲ್ಲೂ ಇ-ಆಫೀಸ್ ಮೂಲಕವೇ ಪತ್ರ ಹಾಗೂ ಕಡತಗಳನ್ನು ನಿರ್ವಹಿಸುವಂತೆ ಸರ್ಕಾರದ ಅಪರ ಮುಖ್ಯ...

ಕುಂದೂರು ಫಾರೆಸ್ಟ್‌ನ ಹೆಬ್ಬಾಳ ಗದ್ದೆಯಲ್ಲಿ ಗಂಡು ಕಾಡಾನೆ ಸಾವು

​ಚಿಕ್ಕಮಗಳೂರು: ಜಿಲ್ಲೆಯ ಆಲ್ದೂರು ಅರಣ್ಯ ವಲಯದ ವ್ಯಾಪ್ತಿಯಲ್ಲಿ ಒಂಟಿ ಗಂಡು ಕಾಡಾನೆಯೊಂದು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ...

ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ

ಶೃಂಗೇರಿ: ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿಯನ್ನು ಕೇರಳ ಪೊಲೀಸರು ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ಶುಕ್ರವಾರ  ಹಾಜರುಪಡಿಸಿದರು....