Home namma chikmagalur chikamagalur ಸಾರ್ವಜನಿಕರ ಸಲಹೆ ಆಧರಿಸಿ ನಗರಸಭೆ ಬಜೆಟ್ ನಿರ್ಧಾರ
chikamagalurHomeLatest Newsnamma chikmagalur

ಸಾರ್ವಜನಿಕರ ಸಲಹೆ ಆಧರಿಸಿ ನಗರಸಭೆ ಬಜೆಟ್ ನಿರ್ಧಾರ

Share
Share

ಚಿಕ್ಕಮಗಳೂರು: ಮುಂದಿನ ದಿನಗಳಲ್ಲಿ ನಗರದ ಅಭಿವೃದ್ಧಿಗೆ ಪೂರಕವಾಗಿ ಕೋಟೆಕೆರೆಯನ್ನು ಅಭಿವೃದ್ಧಿಪಡಿಸಲಾಗುವುದೆಂದು ನಗರಸಭಾಧ್ಯಕ್ಷೆ ಶೀಲಾದಿನೇಶ್ ತಿಳಿಸಿದರು.

ಅವರು ಇಂದು ನಗರಸಭೆ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ೨೦೨೬-೨೭ನೇ ಸಾಲಿನ ಆಯ-ವ್ಯಯ ಸಾರ್ವಜನಿಕ ಪೂರ್ವಭಾವಿ ೨ನೇ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಂತೆ ಮಾರ್ಕೆಟ್ ಸುಸಜ್ಜಿತವಾಗಿ ಅಭಿವೃದ್ಧಿಪಡಿಸಬೇಕು, ಕೆರೆಗಳ ಅಭಿವೃದ್ಧಿ, ಆಟೋ ನಿಲ್ದಾಣ, ಕುಡಿಯುವ ನೀರು ಸರಬರಾಜು, ಚರಂಡಿ ಸ್ವಚ್ಚತೆ, ಬೀದಿದೀಪ ಮುಂತಾದವುಗಳ ಬಗ್ಗೆ ಸಾರ್ವಜನಿಕರು ನೀಡಿದ ಸೂಕ್ತ ಸಲಹೆ ಸೂಚನೆಗಳನ್ನು ಗಂಭೀರವಾಗಿ ಪರಿಗಣಿಸಿ ಉತ್ತಮ ಬಜೆಟ್ ಮಂಡನೆಗೆ ನಿರ್ಧರಿಸಲಾಗಿದೆ ಎಂದರು.

ಪೌರಾಯುಕ್ತ ಬಿ.ಸಿ. ಬಸವರಾಜ್ ಮಾತನಾಡಿ, ನಗರದ ಸರ್ವಾಂಗೀಣ ಅಭಿವೃದ್ಧಿಗೆ ನಗರಸಭೆಯಿಂದ ಕೈಗೊಳ್ಳಬೇಕಾದ ಕಾಮಗಾರಿಗಳ ಕುರಿತು ಈಗಾಗಲೇ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ರಾಜಕಾರಣಿಗಳು, ಸಾರ್ವಜನಿಕರು, ನಗರಸಭೆ ಸದಸ್ಯರು ಸೂಕ್ತ ಸಲಹೆ ಸೂಚನೆಗಳನ್ನು ನೀಡಿದ್ದಾರೆಂದರು.

ಮನೆ ಮನೆ ಕಸ ಸಂಗ್ರಹಣೆ ವ್ಯವಸ್ಥೆ ಸರಿಪಡಿಸಲು ನಿರ್ಧರಿಸಲಾಗಿದ್ದು, ೨೦ ಕೋಟಿ ರೂ ವೆಚ್ಚದಲ್ಲಿ ಈಗಾಗಲೇ ನಗರದ ಎಲ್ಲ ಪ್ರಮುಖ ರಸ್ತೆಗಳನ್ನು ಡಾಂಬರೀಕರಣ ಮಾಡಿ ಅಭಿವೃದ್ಧಿಪಡಿಸಲು ಕಾಮಗಾರಿ ಆರಂಭವಾಗಿದ್ದು, ೫ ಕೋಟಿ ರೂ ವೆಚ್ಚದ ಕಾಮಗಾರಿ ಮಾತ್ರ ಪೂರ್ಣಗೊಂಡಿದೆ ಎಂದು ತಿಳಿಸಿದರು.

ಇನ್ನೂ ೧೫ ಕೋಟಿ ರೂ ಕಾಮಗಾರಿ ನಡೆಯಬೇಕಿದ್ದು, ಮಾರ್ಚ್ ೩೧ ರೊಳಗೆ ಎಲ್ಲಾ ರಸ್ತೆ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡರೆ ಶೇ.೮೦ ರಷ್ಟು ನಗರದಲ್ಲಿ ಗುಂಡಿಮುಕ್ತ ರಸ್ತೆಗಳಾಗುತ್ತವೆ ಎಂದು ಮಾಹಿತಿ ನೀಡಿದರು.

ಪ್ರಮುಖ ರಸ್ತೆಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳ ಗುಂಡಿ ಮುಚ್ಚುವ ಕಾರ್ಯಕ್ಕೆ ಇಂದು ಚಾಲನೆ ನೀಡಿದ್ದು, ರಸ್ತೆಗಳ ಸಮಸ್ಯೆ ನಿವಾರಣೆಯಾಗಲಿದೆ. ಕುಡಿಯುವ ನೀರಿನ ಸಮಸ್ಯೆ ಶಾಂತಿನಗರ ಹೊರತುಪಡಿಸಿ ಉಳಿದಂತೆ ನಗರದಲ್ಲಿ ಸಮರ್ಪಕ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ತಿಳಿಸಿದರು.

ಯುಜಿಡಿ ಕಾಮಗಾರಿ ಇನ್ನೊಂದು ತಿಂಗಳಲ್ಲಿ ಪೂರ್ಣಗೊಳ್ಳುವ ವಿಶ್ವಾಸ ವ್ಯಕ್ತಪಡಿಸಿದ ಅವರು, ಒಟ್ಟಾರೆ ಒಳಚರಂಡಿ ಸಮಸ್ಯೆ ಇತ್ಯರ್ಥವಾಗಲಿದೆ. ಇಂದು ನಡೆದ ಬಜೆಟ್ ಪೂರ್ವ ಸಭೆಯಲ್ಲಿ ಸಾರ್ವಜನಿಕರಿಂದ ವ್ಯಕ್ತವಾದ ಸಲಹೆ ಸೂಚನೆಗಳನ್ನು ಈ ಬಾರಿಯ ನಗರಸಭೆ ಬಜೆಟ್‌ನಲ್ಲಿಟ್ಟು ಸುಂದರವಾದ ಬಜೆಟ್ ತಯಾರು ಮಾಡಲು ನಿರ್ಧರಿಸಲಾಗಿದೆ ಎಂದರು.

೩.೨೦ ಕೋಟಿ ರೂ ವೆಚ್ಚದಲ್ಲಿ ಕೋಟೆಕೆರೆ ಅಭಿವೃದ್ಧಿಗೆ ಡಿಪಿಆರ್ ಸಿದ್ಧಪಡಿಸಲಾಗಿದೆ. ೧೯.೫೦ ಕೋಟಿ ರೂ ವೆಚ್ಚದಲ್ಲಿ ಅತ್ಯಾಧುನಿಕ ಶೈಲಿಯ ಸಾರಿಗೆ ಬಸ್ ನಿಲ್ದಾಣ ಕಾಮಗಾರಿ ಆರಂಭವಾಗಿದ್ದು, ಮಯೂರ ಹೋಟೆಲ್ ಪಕ್ಕದಲ್ಲಿ ಖಾಲಿ ಇರುವ ಮಲ್ಟಿ ಪಾರ್ಕಿಂಗ್ ವ್ಯವಸ್ಥೆಗೆ ಜಿ+ಪಿಪಿ ಮಾದರಿಯಲ್ಲಿ ನಿರ್ಮಾಣ ಮಾಡಿ, ಎಂಜಿ ರಸ್ತೆಯಲ್ಲಿ ಉದ್ಭವಿಸಿರುವ ಪಾರ್ಕಿಂಗ್ ವ್ಯವಸ್ಥೆಗೆ ಸುಧಾರಣೆ ತರಲು ತೀರ್ಮಾನಿಸಲಾಗಿದೆ ಎಂದರು.

ಸಂತೆ ಮಾರ್ಕೆಟ್ ಅಭಿವೃದ್ಧಿಗೆ ಅನುದಾನದ ಕೊರತೆಯಿಂದಾಗಿ ಅಭಿವೃದ್ಧಿ ಕುಂಠಿತವಾಗಿದೆ. ವಿಶೇಷ ಅನುದಾನ ಲಭ್ಯವಾದರೆ ಅತ್ಯಾಧುನಿಕ ಶೈಲಿಯಲ್ಲಿ ಸಂತೆಯನ್ನು ಅಭಿವೃದ್ಧಿಪಡಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.

ಪೂರ್ವಭಾವಿ ಸಭೆಯಲ್ಲಿ ನಗರಸಭೆ ಉಪಾಧ್ಯಕ್ಷೆ ಲಲಿತಾರವಿನಾಯ್ಕ್ ಹಾಗೂ ವಿವಿಧ ಸಂಘಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.

Municipal council budget decision based on public advice

Share

Leave a comment

Leave a Reply

Your email address will not be published. Required fields are marked *

Don't Miss

ಮನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ನಗ-ನದದು ಕಳವು

ಚಿಕ್ಕಮಗಳೂರು : ತಾಲೂಕಿನ ಕಂಚೇನಹಳ್ಳಿಯಲ್ಲಿ ಹಾಡಹಗಲೇ ಕಳ್ಳತನ ನಡೆದಿದ್ದು ರೈತ ಉಮೇಶ್ ಎಂಬುವವರ ಮನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ನಗದು ಹಾಗೂ ಚಿನ್ನಾಭರಣವನ್ನು ಕಳ್ಳರು ದೋಚಿದ್ದಾರೆ. ಉಮೇಶ್ ಜಮೀನು ಕೆಲಸಕ್ಕೆ ತೆರಳಿದ್ದ...

ಲಾಭಾಂಶ ಆಮಿಷ ಯುವಕನಿಗೆ ಲಕ್ಷಾಂತರ ರೂಪಾಯಿ ವಂಚನೆ

ಚಿಕ್ಕಮಗಳೂರು: ಟ್ರೇಡಿಂಗ್ ಹೆಸರಿನಲ್ಲಿ ಹೆಚ್ಚಿನ ಲಾಭಾಂಶ ನೀಡುವ ಆಮಿಷವೊಡ್ಡಿ ಯುವಕನೊಬ್ಬನಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಸಂಬಂಧ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿನಯ್ ಬಿ.ಕೆ....

Related Articles

ನಿಗಮದ ಸಾಲದ ಬಡ್ಡಿ ಮನ್ನಾಗೆ ಸಿ.ಟಿ.ರವಿ ಖಂಡನೆ

ಚಿಕ್ಕಮಗಳೂರು: ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಸಾಲದ ಬಡ್ಡಿ ಮನ್ನಾ ಮಾಡಿರುವ ರಾಜ್ಯ ಸರ್ಕಾರದ ನೀತಿಯನ್ನ ತೀವ್ರವಾಗಿ...

ಜಿಲ್ಲಾಸ್ಪತ್ರೆಗೆ ಎಂಎಲ್ಸಿ ಸಿ.ಟಿ. ರವಿ ಭೇಟಿ

ಚಿಕ್ಕಮಗಳೂರು: ನಗರದ ಅರಳಗುಪ್ಪೆ ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿನ ಅವ್ಯವಸ್ಥೆ ಹಾಗೂ ಔಷಧಿಗಳ ತೀವ್ರ ಕೊರತೆಯ ಕುರಿತು ಕೇಳಿಬಂದ...

ಸ್ನಾನಕ್ಕೆ ಇಳಿದಿದ್ದ ಯುವಕ ಕೆರೆಯಲ್ಲಿ ನಾಪತ್ತೆ

ಕಳಸ : ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾದ ಅಂಬಾತೀರ್ಥದಲ್ಲಿ ಭೀಕರ ದುರಂತವೊಂದು ಸಂಭವಿಸಿದೆ. ಇಲ್ಲಿನ ಭದ್ರಾ...

ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ ಮಹಿಳೆಗೆ ವಂಚನೆ

ಚಿಕ್ಕಮಗಳೂರು : ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಹೆಚ್ಚಿನ ಲಾಭ ಗಳಿಸುವ ಅಮಿಷಕ್ಕೆ ಒಳಗಾದ ಮಹಿಳೆಯೊಬ್ಬರು...