Home Latest News ಕೊಲೆ ಪ್ರಕರಣದ ಆರೋಪಿಗೆ ಜೀವಾವಧಿ ಶಿಕ್ಷೆ
Latest NewschikamagalurCrime NewsHomenamma chikmagalur

ಕೊಲೆ ಪ್ರಕರಣದ ಆರೋಪಿಗೆ ಜೀವಾವಧಿ ಶಿಕ್ಷೆ

Share
Share

ಚಿಕ್ಕಮಗಳೂರು: ಕೊಲೆ ಪ್ರಕರಣದ ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ ಐದು ಸಾವಿರ ದಂಡ ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.

ಏ.೮, ೨೦೨೨ರಂದು ನರಸಿಂಹರಾಜಪುರ ತಾಲೂಕು ಪೊಲೀಸ್ ಠಾಣಾ ವ್ಯಾಪ್ತಿಯ ಮೆಣಸೂರು ಗ್ರಾಮದ ಮೆಣಸೂರು ಬಳಿ ಆರೋಪಿ ಬಾಬು ನರಸಿಂಹರಾಜಪುರ ತಾಲೂಕು ಬಡಗಬೈಲು ಗ್ರಾಮದ ಅಳಲಗೆರೆ ಎ.ವೈ. ಶಿರೀಶ್ (೨೮) ಆತನಿಗೆ ಬಾಕಿ ಹಣ ಕೊಡುವುದಾಗಿ ಹೇಳಿ ಮನೆಗೆ ಕರೆಸಿಕೊಂಡು ಬಾಬು ಕತ್ತಿಯಿಂದ ತಲೆಗೆ ಹಲ್ಲೆ ನಡೆಸಿದ್ದನು.

ಹಲ್ಲೆಗೊಳಗಾದ ಶಿರೀಶ್‌ನನ್ನು ಆಸ್ಪತ್ರೆಗೆ ದಾಖಲಿಸಿದರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು ನರಸಿಂಹರಾಜ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ ಕೆ.ಪಿ.ಬಾಬುನನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದರು.

ಪೊಲೀಸ್ ವೃತ್ತ ನಿರೀಕ್ಷರಾಗಿದ್ದ ವಸಂತ್ ಶಂಕರ್ ಭಾಗವತ್ (ನಿವೃತ್ತ) ಅವರು ಪ್ರಕರಣ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಪಟ್ಟಿಯನ್ನು ಸಲ್ಲಿಸಿದ್ದರು.

ಪ್ರಕರಣದ ವಾದ ಪ್ರತಿವಾದ ಆಲಿಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರು ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ ಐದು ಸಾವಿರ ರೂ. ದಂಡ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ. ಸರ್ಕಾರಿ ಅಭಿಯೋಜಕರಾದ ಪಿ.ವೀಣಾ ವಾದ ಮಂಡಿಸಿದ್ದರು.

Murder accused gets life sentence

Share

Leave a comment

Leave a Reply

Your email address will not be published. Required fields are marked *

Don't Miss

ಪುನಗು ಬೆಕ್ಕು ಬೇಟೆಯಾಡಿದವನ ಬಂಧನ

ಚಿಕ್ಕಮಗಳೂರು:  ತಾಲೂಕಿನ ಉದ್ದೆಬೋರನಹಳ್ಳಿ ವ್ಯಾಪ್ತಿಯ ಪಾದುಮನೆ ಗ್ರಾಮದಲ್ಲಿ ಪುನುಗು ಬೆಕ್ಕು ಬೇಟೆಯಾಡಿದ್ದ ವ್ಯಕ್ತಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ. ಪುನುಗು ಬೆಕ್ಕು ಬೇಟೆಯಾಡಿ ಅದರ ಚರ್ಮ ಸುಲಿದು ಮಾಂಸ ತೆಗೆಯುವ ವೇಳೆಗೆ...

ಜಿಲ್ಲೆಯಲ್ಲಿ ಮಳೆಯ ಆರ್ಭಟ – ಕಾಫಿಬೆಳೆ ನಾಶ – ರಸ್ತೆ ಹುಡುಕಾಡುವ ಕಾಟ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿಂದ ಎಡ ಬಿಡದೆ ಮಳೆ ಸುರಿಯುತ್ತಿದೆ ಅದರಲ್ಲೂ ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಹೆಚ್ಚಾಗಿದೆ. ಮಳೆಯ ಆರ್ಭಟದಿಂದ ಕಾಫಿ ಕೊಳೆಯಲು ಆರಂಭವಾಗಿದೆ ಎಂದು ಕಾಫಿ ಬೆಳೆಗಾರರ...

Related Articles

ಪ್ರೀತಿ ನಿರಾಕರಣೆ-ಯುವತಿ ಮೇಲೆ ಚಾಕುವಿನಿಂದ ಹಲ್ಲೆ

ಚಿಕ್ಕಮಗಳೂರು: ಪ್ರೀತಿ ನಿರಾಕರಿಸಿದ ಕಾರಣಕ್ಕೆ ಸಿಟ್ಟಿಗೆದ್ದ ಯುವಕನೋರ್ವ ಯುವತಿ ಮೇಲೆ ಚಾಕುವಿನಿಂದ ಇರಿದು ಪರಾರಿಯಾಗಿರುವ ಘಟನೆ...

ದೊಡ್ಡ ಮನೆ ಡಿಚ್ಚಿ ಯಾರಿಗೆ – ಕೈ ಕಸರತ್ತು ? ಬಿಜೆಪಿಯಲ್ಲಿ ತಳಮಳ !

ಅಜ್ಜಂಪುರ: ಪಟ್ಟಣ ಪಂಚಾಯತಿ ಚುನಾವಣೆ ನಡೆದು ಇಪ್ಪತ್ತು ದಿನಗಳಾಗಿದೆ ಆದರೆ ಅಧ್ಯಕ್ಷ/ ಉಪಾಧ್ಯಕ್ಷರ ಚುನಾವಣೆ ವಿಳಂಬ...

ಜನರಿಗೆ ವಾಸ್ತವ ಸಂಗತಿ ಕಾಂಗ್ರೆಸ್ ಪ್ರಚಾರ ಸಮಿತಿ ರಾಜ್ಯಾದ್ಯಂತ ಪ್ರವಾಸ

ಚಿಕ್ಕಮಗಳೂರು : ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ನೀಡುತ್ತಿರುವ ಜನಪರ ಯೋಜನೆಗಳ ಪ್ರಚಾರ ಕೈಗೊಳ್ಳುವುದರೊಂದಿಗೆ ವಿರೋಧ...

ನನ್ನ ವಿರುದ್ಧ ಸುಳ್ಳು ಆರೋಪ ಮಾಡಿದ ಆರೋಪಿಗಳನ್ನು ಗಡಿಪಾರು ಮಾಡಬೇಕು

ಚಿಕ್ಕಮಗಳೂರು: ‘ಅಲ್ಲಂಪುರ ನಿವಾಸಿ ಓಂಕಾರಮೂರ್ತಿ ಮೇಲಿನ ಹಲ್ಲೆ ಸಂಬಂಧ ಪೊಲೀಸರು ತನಿಖೆ ನಡೆಸಿ ನ್ಯಾಯಾಲಯಕ್ಕೆ ‘ಬಿ’...