Home namma chikmagalur chikamagalur ಕೊಲೆ ಪ್ರಕರಣದ ಆರೋಪಿಗೆ ಜೀವಾವಧಿ ಶಿಕ್ಷೆ
chikamagalurCrime NewsHomeLatest Newsnamma chikmagalur

ಕೊಲೆ ಪ್ರಕರಣದ ಆರೋಪಿಗೆ ಜೀವಾವಧಿ ಶಿಕ್ಷೆ

Share
Share

ಚಿಕ್ಕಮಗಳೂರು: ಅಜ್ಜಂಪುರದಲ್ಲಿ ಕೇವಲ 1000 ರೂಪಾಯಿ ಹಣದ ವಿಚಾರಕ್ಕಾಗಿ ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಿಕ್ಕಮಗಳೂರು ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಹಳೆಯ ದ್ವೇಷದ ಹಿನ್ನೆಲೆಯಲ್ಲಿ ನಡೆದಿದ್ದ ಈ ಘೋರ ಕೃತ್ಯದಲ್ಲಿ ಆರೋಪಿ ಮಂಜುನಾಥ್‌ಗೆ ಜೀವಾವಧಿ ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶಿಸಿದೆ.

ಪ್ರಕರಣದ ಹಿನ್ನೆಲೆ: ಆರೋಪಿ ಮಂಜುನಾಥ್ ಮತ್ತು ಮೃತ ವೆಂಕಟಾಚಲಪತಿ ಇಬ್ಬರೂ ಸ್ನೇಹಿತರಾಗಿದ್ದು, ಕೂಲಿ ಕೆಲಸ ಮಾಡಿಕೊಂಡಿದ್ದರು. 2021ರ ಜುಲೈ 27ರಂದು ಅಜ್ಜಂಪುರದ ಸಂತೆ ಮೈದಾನದ ಹೋಟೆಲ್‌ನಲ್ಲಿ ಮಂಜುನಾಥ್ ತನಗೆ ಬರಬೇಕಿದ್ದ 1000 ರೂ. ಹಣವನ್ನು ವೆಂಕಟಾಚಲಪತಿಯ ಬಳಿ ಕೇಳಿದ್ದಾನೆ.

ಈ ಸಂದರ್ಭದಲ್ಲಿ ಇಬ್ಬರ ನಡುವೆ ತೀವ್ರ ಮಾತಿನ ಚಕಮಕಿ ನಡೆದಿತ್ತು. ಇದೇ ದ್ವೇಷವನ್ನು ಮನಸ್ಸಿನಲ್ಲಿಟ್ಟುಕೊಂಡ ಮಂಜುನಾಥ್, ಅಂದೇ ರಾತ್ರಿ 11:30ರ ಸುಮಾರಿಗೆ ಕಾಲೇಜು ಮೈದಾನದ ರಂಗಮಂದಿರದಲ್ಲಿ ಮಲಗಿದ್ದ ವೆಂಕಟಾಚಲಪತಿಯ ತಲೆಗೆ ದೊಣ್ಣೆಯಿಂದ ಬಲವಾಗಿ ಹೊಡೆದು ಬರ್ಬರವಾಗಿ ಕೊಲೆ ಮಾಡಿದ್ದನು.

ಈ ಪ್ರಕರಣದ ವಿಚಾರಣೆ ನಡೆಸಿದ ಚಿಕ್ಕಮಗಳೂರಿನ 2ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು, ಆರೋಪಿ ಮಂಜುನಾಥ್ ಮೇಲಿನ ಕೊಲೆ ಆರೋಪ ಸಾಬೀತಾಗಿದೆ ಎಂದು ತೀರ್ಪು ನೀಡಿದೆ. ಆರೋಪಿಗೆ ಜೀವಾವಧಿ ಜೈಲು ಶಿಕ್ಷೆ ಹಾಗೂ 10,000 ರೂಪಾಯಿ ದಂಡ ವಿಧಿಸಿ ನ್ಯಾಯಾಲಯ ಆದೇಶಿಸಿದೆ.

ಈ ಪ್ರಕರಣದ ಸಮಗ್ರ ತನಿಖೆಯನ್ನು ಅಜ್ಜಂಪುರ ಪೊಲೀಸ್ ಠಾಣೆಯ ದಿವಂಗತ ಪೊಲೀಸ್ ನಿರೀಕ್ಷಕ ಲಿಂಗರಾಜು ಅವರು ನಡೆಸಿ, ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ಅಭಿಯೋಜಕಿ ಶ್ರೀಮತಿ ಭಾವನ ಅವರು ನ್ಯಾಯಾಲಯದಲ್ಲಿ ಪ್ರಬಲವಾಗಿ ವಾದ ಮಂಡಿಸಿದ್ದರು. ತನಿಖಾ ಸಹಾಯಕ ಎ.ಎಸ್.ಐ ಚಂದ್ರಶೇಖರ್ ಹಾಗೂ ಸಿ.ಪಿ.ಸಿ ಮಂಜುನಾಥ ಬಿ ಅವರು ನ್ಯಾಯಾಲಯದ ಕರ್ತವ್ಯದಲ್ಲಿ ಸಹಕರಿಸಿದ್ದರು.

Murder accused gets life sentence

Share

Leave a comment

Leave a Reply

Your email address will not be published. Required fields are marked *

Don't Miss

ಚಿಕ್ಕಮಗಳೂರು ತಾಲೂಕು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆಗೆ ಆಗ್ರಹ

ಚಿಕ್ಕಮಗಳೂರು: ಈ ಬಾರಿಯ ಮುಂಗಾರು ಅವಧಿಯಲ್ಲಿ ಚಿಕ್ಕಮಗಳೂರು ತಾಲೂಕಿನಲ್ಲಿ ತೀವ್ರ ಮಳೆ ಕೊರತೆಯಾಗಿದ್ದು, ಕೃಷಿ, ತೋಟಗಾರಿಕೆ, ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಸಮಸ್ಯೆ ಎದುರಾಗುವ ಆತಂಕವಿದೆ. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು...

ಕಡೂರು ಬಸ್ ನಿಲ್ದಾಣದಲ್ಲಿ 50 ಗ್ರಾಂ ತೂಕದ ಚಿನ್ನದ ಸರ ಕಳ್ಳತನ

ಕಡೂರು: ಜನದಟ್ಟಣೆಯನ್ನೇ ಬಂಡವಾಳ ಮಾಡಿಕೊಂಡ ಕಳ್ಳರ ಗ್ಯಾಂಗ್ ಒಂದು, ಬಸ್ ಹತ್ತುವ ವೇಳೆ ಮಹಿಳೆಯ ಗಮನ ಬೇರೆಡೆ ಸೆಳೆದು ಕುತ್ತಿಗೆಯಲ್ಲಿದ್ದ ಬರೋಬ್ಬರಿ 50 ಗ್ರಾಂ ತೂಕದ ಚಿನ್ನದ ಸರವನ್ನು ಕ್ಷಣಾರ್ಧದಲ್ಲಿ ಎಗರಿಸಿ...

Related Articles

ಕೋಟ್ಯಂತರ ರೂಪಾಯಿ ವಂಚಿಸಿದ ನಕಲಿ ಲೇಡಿ ಪಿಎಸ್‌ಐ ಬಂಧನ

ಚಿಕ್ಕಮಗಳೂರು: ತಾನು ಬೆಂಗಳೂರಿನ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಎಂದು ನಂಬಿಸಿ, ಚಿನ್ನ, ಹಣ, ಮೊಬೈಲ್ ಹಾಗೂ ಕಾರು...

ನಲಪಾಡ್ ಹೇಳಿಕೆ ಖಂಡಿಸಿ ಜೆಡಿಎಸ್ ಅಲ್ಪಸಂಖ್ಯಾತ ಘಟಕ ಆಕ್ರೋಶ

ಚಿಕ್ಕಮಗಳೂರು: ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮತ್ತು ಜೆಡಿಎಸ್ ರಾಜ್ಯ ಯುವ ಘಟಕದ...

ಮಳಲೂರು ಏತ ನೀರಾವರಿ ಯೋಜನೆ ಸಮಸ್ಯೆ ಬಗೆಹರಿಸಲು ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಮಳಲೂರು ಏತ ನೀರಾವರಿ ಅನುಷ್ಠಾನ ಮತ್ತು ಅರಸನ ನಾಲೆ ಪುನಶ್ಚೇತನ ಯೋಜನೆಗಳ ಕಾಮಗಾರಿಗಳಿಗೆ ಉಂಟಾಗಿರುವ...

2ಬಿ ಮೀಸಲಾತಿ ಮರುಸ್ಥಾಪನೆಗೆ ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಚಿಕ್ಕಮಗಳೂರು: ರಾಜ್ಯದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗುತ್ತಿದ್ದ ಶೇ.4ರಷ್ಟು 2ಬಿ ಮೀಸಲಾತಿಯನ್ನು ಮರುಸ್ಥಾಪಿಸಲು ರಾಜ್ಯ ಸರ್ಕಾರ ಕೂಡಲೇ...