ಚಿಕ್ಕಮಗಳೂರು: ಪತ್ನಿಯನ್ನು ಕತ್ತು ಹಿಸುಕಿ ಹಾಗೂ ಮೂಗು–ಬಾಯಿ ಮುಚ್ಚಿ ಉಸಿರುಗಟ್ಟಿಸಿ ಕೊಲೆ ಮಾಡಿದ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ ಚಿಕ್ಕಮಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ₹10,000 ದಂಡ ವಿಧಿಸಿದೆ.
ಕೊಪ್ಪ ತಾಲ್ಲೂಕಿನ ಮೇಗುಂದಾ ಹೋಬಳಿಯ ಹೊನ್ನಗುಂಡಿ ಗ್ರಾಮದ ಸದಾನಂದ ಬಿನ್ ಲೇಟ್ ಗುರುವ (49) ಶಿಕ್ಷೆಗೆ ಗುರಿಯಾದ ಆರೋಪಿ.
ಪ್ರಕರಣದ ಹಿನ್ನೆಲೆ: 2022ರ ನವೆಂಬರ್ 15ರಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ಮೃತ ಯಶೋಧಾ ಅವರು ಸದಾನಂದನಿಗೆ ಬೇರೆ ಮಹಿಳೆಯೊಂದಿಗೆ ಸಂಬಂಧ ಹೊಂದಿರುವ ಬಗ್ಗೆ ಪ್ರಶ್ನಿಸಿದ್ದರು. ಈ ವೇಳೆ ಆರೋಪಿ ಕೋಲಿನಿಂದ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಅದೇ ದಿನ ರಾತ್ರಿ 11 ಗಂಟೆ ಸುಮಾರಿಗೆ ಮಗ ಮಲಗಿದ ಬಳಿಕ ಯಶೋಧಾಳ ಕತ್ತು ಹಿಸುಕಿ, ಮೂಗು ಮತ್ತು ಬಾಯಿ ಮುಚ್ಚಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿತ್ತು.
ಈ ಸಂಬಂಧ ಜಯಪುರ ಪೊಲೀಸ್ ಠಾಣೆಯಲ್ಲಿ ಮೊ.ನಂ.50/2022ರಂತೆ ಭಾರತೀಯ ದಂಡ ಸಂಹಿತೆ (IPC) ಕಲಂ 302ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ನ್ಯಾಯಾಲಯದ ತೀರ್ಪು: ಪ್ರಕರಣದ ವಿಚಾರಣೆ ನಡೆಸಿದ ಚಿಕ್ಕಮಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 2026ರ ಆಗಸ್ಟ್ 31ರಂದು ತೀರ್ಪು ಪ್ರಕಟಿಸಿದ್ದು, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಸದಾನಂದನಿಗೆ IPC ಕಲಂ 302ರ ಅಡಿಯಲ್ಲಿ ಜೀವಾವಧಿ ಶಿಕ್ಷೆ ಹಾಗೂ ₹10,000 ದಂಡ ವಿಧಿಸಿದೆ.
ತನಿಖೆ ಮತ್ತು ವಾದ ಮಂಡನೆ: ಪ್ರಕರಣದ ತನಿಖಾಧಿಕಾರಿ ಸಿ.ಪಿ.ಐ. ಜೆ. ಮಂಜು ಅವರು ತನಿಖೆ ಪೂರ್ಣಗೊಳಿಸಿ ಆರೋಪಿಯ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಸರ್ಕಾರದ ಪರ ಸರ್ಕಾರಿ ಅಭಿಯೋಜಕರಾದ ಭಾವನ ಅವರು ಸಾಕ್ಷಿದಾರರನ್ನು ವಿಚಾರಣೆ ನಡೆಸಿ ಸಮರ್ಥವಾಗಿ ವಾದ ಮಂಡಿಸಿದ್ದರು.
ಜಯಪುರ ಪೊಲೀಸ್ ಠಾಣೆಯ ತನಿಖಾ ಸಹಾಯಕ ಹಾಗೂ ನ್ಯಾಯಾಲಯದ ಸಿಬ್ಬಂದಿಗಳಾದ ತಿಪ್ಪೇಶ್, ಸಿ.ಹೆಚ್.ಸಿ. ಮತ್ತು ಆಕಾಶ್ ಬಿ.ಸಿ., ಸಿ.ಪಿ.ಸಿ. ಅವರು ಸಾಕ್ಷಿದಾರರನ್ನು ಸಮರ್ಪಕವಾಗಿ ನ್ಯಾಯಾಲಯಕ್ಕೆ ಹಾಜರುಪಡಿಸುವ ಮೂಲಕ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆಯಾಗಲು ಸಹಕರಿಸಿದ್ದಾರೆ.
Murder accused gets life sentence
ಚಿಕ್ಕಮಗಳೂರು: ಕಲ್ಲು ಮುಳ್ಳಿನ ಆತಂಕವಿಲ್ಲ, ಮುಗಿಲೆತ್ತರಕ್ಕೆ ಕಾಣುವ ಕಡಿದಾದ ಗುಡ್ಡ ಏರಲು ದಣಿವಿಲ್ಲ, ಚೂಪು ಕಲ್ಲಿನಂತಹ ಬೆಟ್ಟದ ತುದಿಯಲ್ಲಿ ಕುಳಿತ ದೇವಿಯ ದರ್ಶನ ಪಡೆಯುವ ತವಕದಲ್ಲಿ ಈ ಹಾದಿ ಹಿಡಿದು ಹೊರಟ...
ByN Raju Chief EditorNovember 7, 2026ಅಜ್ಜಂಪುರ: ಪಟ್ಟಣ ಪಂಚಾಯಿತಿಯಲ್ಲಿ ಜನಪ್ರತಿನಿಧಿಯೊಬ್ಬರ ಪತಿ ಆಡಳಿತಾತ್ಮಕ ವ್ಯವಹಾರಗಳಲ್ಲಿ ನೇರ ಹಸ್ತಕ್ಷೇಪ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಪಟ್ಟಣ ಪಂಚಾಯಿತಿ ಉಪಾಧ್ಯಕ್ಷೆ ಶೋಭಾ ಅವರ ಪತಿ ಹಾಗೂ ಬಿಜೆಪಿ ಮುಖಂಡ ಸಂತೋಷ್ ಅವರು...
ByN Raju Chief EditorNovember 7, 2026ಚಿಕ್ಕಮಗಳೂರು; ಸ್ಟಿಂಗ್ ಆಪರೇಶನ್ ಎಂಬ ಅಸ್ತ್ರ ಇತ್ತೀಚೆಗೆ ಬಾರಿ ಸದ್ದು ಮಾಡುತ್ತಿದೆ.ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಈ ಬಗ್ಗೆ...
ByN Raju Chief EditorNovember 15, 2026ಚಿಕ್ಕಮಗಳೂರು; ಚಿಕ್ಕಮಗಳೂರು ಜಿಲ್ಲೆಯ ಬಿ.ಎಂ.ಸುದೀಪ್ ತೆಲಂಗಾಣ ಕಾಂಗ್ರೆಸ್ ನ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ. ಕಳೆದ ಒಂದುವರೆ...
ByN Raju Chief EditorNovember 15, 2026ಚಿಕ್ಕಮಗಳೂರು: ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಎಐಟಿಯುಸಿ) 43ನೇ ರಾಷ್ಟ್ರೀಯ ಸಮ್ಮೇಳನವು ನ.22ರಿಂದ 26ರವರೆಗೆ...
ByN Raju Chief EditorNovember 15, 2026ಕಡೂರು: ಕಾರು ಮತ್ತು ಥಾರ್ ಜೀಪ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೆಸ್ಕಾಂ ಇಲಾಖೆಯ...
ByN Raju Chief EditorNovember 15, 2026Excepteur sint occaecat cupidatat non proident
Leave a comment