Home namma chikmagalur ಹಿಂದೂ ಯುವಕನ ಅಂತ್ಯ ಸಂಸ್ಕಾರ ನಡೆಸಿದ ಮುಸ್ಲಿಮರು !
namma chikmagalur

ಹಿಂದೂ ಯುವಕನ ಅಂತ್ಯ ಸಂಸ್ಕಾರ ನಡೆಸಿದ ಮುಸ್ಲಿಮರು !

Share
Muslims cremated a Hindu youth chikkamagaluru
Share

ಜಾತಿ-ಧರ್ಮದ ಹೆಸರಲ್ಲಿ ಹಗಜಗ್ಗಾಟಗಳು ನಡೆಯುತ್ತಿರುವ ಹೊತ್ತಲ್ಲೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಕ್ಕಮಕ್ಕಿ ಗ್ರಾಮದಲ್ಲಿ ಮೃತ ಹಿಂದೂ ವ್ಯಕ್ತಿಯ ಹೆಗಲಿಗೆ ಮುಸ್ಲಿಂ ಯುವಕರು ಹೆಗಲು ಕೊಟ್ಟು ಹಿಂದೂ ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ನಡೆಸಿದ್ದಾರೆ. 20 ವರ್ಷಗಳ ಹಿಂದೆಯೇ ಮನೆ ಬಿಟ್ಟು ಬಂದಿದ್ದ ವ್ಯಕ್ತಿ ಚಕ್ಕಮಕ್ಕಿಯ ಇಮ್ತಿಯಾಜ್ ಎಂಬುವವರ ನ್ಯೂ ಮಂಗಳೂರು ಹೋಟೆಲ್ ನಲ್ಲಿ ಕೆಲಸ ಮಾಡಿಕೊಂಡಿದ್ದನು.‌

ದುರದೃಷ್ಟವಶಾತ್ ಆ ವ್ಯಕ್ತಿ ಹೃದಯಘಾತದಿಂದ ಮೃತಪಟ್ಟಿದ್ದನು. ವರ್ಷಗಳ ಹಿಂದೆಯೇ ಮನೆ ಬಿಟ್ಟಿದ್ದರಿಂದ ಆತನಿಗೆ ಯಾರ ಸಂಪರ್ಕವೂ ಇರಲಿಲ್ಲ. ಮೃತ ವ್ಯಕ್ತಿಯ ಮೊಬೈಲ್ ಪರಿಶೀಲಿಸಿ ಯುವಕರು ಸಂಬಂಧಿಗಳಿಗೆ ಕರೆ ಮಾಡಿ ಮಾಹಿತಿ ನೀಡುತ್ತಾರೆ. ಮೃತ ವ್ಯಕ್ತಿಗೆ ಇಬ್ಬರು ಪತ್ನಿಯರಿದ್ದು, ಮೊದಲ ಪತ್ನಿ ಮೃತಪಟ್ಟಿರುತ್ತಾರೆ. ಎರಡನೇ ಪತ್ನಿಗೆ ಕರೆ ಮಾಡಿ ವಿಷಯ ತಿಳಿಸಿದರೂ ಯಾರು ಬರುವುದಿಲ್ಲ.

ಕೊನೆಗೆ ಮೊದಲ ಪತ್ನಿಯ ಮಗ ಆಳ್ವಾಸ್ ಕಾಲೇಜಿನಲ್ಲಿ ಇರುವುದನ್ನು ಖಚಿತ ಪಡಿಸಿಕೊಂಡ ಯುವಕರು ಕೊನೆಗೆ ಮಗನ ಕೈಯಲ್ಲೇ ತಂದೆಯ ಅಂತ್ಯ ಸಂಸ್ಕಾರ ಮಾಡಿಸಿದ್ದಾರೆ.‌ ಚಕ್ಕಮಕ್ಕಿಯ ಮುಸ್ಲಿಂ ಯುವಕರು ಹಾಗೂ ಸಮಾಜ ಸೇವಕ ಆರಿಫ್ ಯುವಕರ ಜೊತೆಗೆ ನಿಂತು
ಹಿಂದೂ ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆ.

ಅಂತ್ಯಕ್ರಿಯೆ ನೆರವೇರಿಸಲು ಮೂಡಿಗೆರೆಯ ರುದ್ರಭೂಮಿಗೆ ಪಾರ್ಥಿವ ಶರೀರವನ್ನು ತೆಗೆದುಕೊಂಡು ಹೋಗಿದ್ದಾರೆ . ಈ ವೇಳೆ ಮುಸ್ಲಿಂ ಬಾಂಧವರೇ ಶವಕ್ಕೆ ಹೆಗಲು ಕೊಟ್ಟು ಹಿಂದೂ ಸಂಪ್ರದಾಯದಂತೆ ಪೂಜೆ ನೆರವೇರಿಸಿ ಅಂತ್ಯಕ್ರಿಯೆ ನೆರವೇರಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Don't Miss

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಸಾವಯವ ರೈತರ ಬಳಗದಿಂದ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು ತನ್ನ ಪ್ರಾಥಮಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಮಿತಿಯ ಸದಸ್ಯರಾದ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಈ...

Related Articles

ಸ್ವಚ್ಛ ಪರಿಸರ ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ

ಚಿಕ್ಕಮಗಳೂರು: ಮಲೆನಾಡಿನ ನಿಸರ್ಗದತ್ತ ಸೌಂದರ್ಯ ಮತ್ತು ಸ್ವಚ್ಛ ಪರಿಸರವನ್ನು ಉಳಿಸಿ ಬೆಳೆಸುವ ಮಹತ್ತರವಾದ ಹೊಣೆಗಾರಿಕೆ ನಮ್ಮೆಲ್ಲರ...

ಪ್ರವಾಹ ಪರಿಸ್ಥಿತಿ ಎದುರಿಸುವ ಅಣಕು ಪ್ರದರ್ಶನ

ಚಿಕ್ಕಮಗಳೂರು: ಕಾಫಿನಾಡಿನ ಹಿರೇಕೊಳಲೆ ಕೆರೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಅಗ್ನಿಶಾಮಕ ಮತ್ತು...

ಯುವಜನತೆ ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಲಿ

ಚಿಕ್ಕಮಗಳೂರು: ಇಂದಿನ ಸಮಾಜದಲ್ಲಿ ಮಾದಕ ದ್ರವ್ಯಗಳ ಹಾವಳಿ ಹೆಚ್ಚಾಗುತ್ತಿದ್ದು, ಇದು ಯುವ ಪೀಳಿಗೆಯ ಭವಿಷ್ಯ ಹಾಗೂ...

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ...