Home namma chikmagalur chikamagalur ಇಳೆಹೊಳೆ ಗ್ರಾಮದಲ್ಲಿ ನಮ್ಮೂರ ಶಾಲೆ ಪ್ರತಿರೋಧ ಚಳವಳಿಗೆ ಚಾಲನೆ
chikamagalurHomeLatest Newsnamma chikmagalur

ಇಳೆಹೊಳೆ ಗ್ರಾಮದಲ್ಲಿ ನಮ್ಮೂರ ಶಾಲೆ ಪ್ರತಿರೋಧ ಚಳವಳಿಗೆ ಚಾಲನೆ

Share
Share

ಚಿಕ್ಕಮಗಳೂರು: ಜಿಲ್ಲೆಯ ಇಳೆಹೊಳೆ ಗ್ರಾಮದಲ್ಲಿ “ನಮ್ಮೂರ ಶಾಲೆ ನಮ್ಮಯ ಕಣ್ಮಣಿ” ಎಂದು ಹೆಸರಿರುವಬ್ಯಾನರ್ ಅನ್ನು ಶಾಲಾಭಿವೃದ್ಧಿ ಸಮಿತಿ ಪದಾಧಿಕಾರಿಗಳು, ಪೋಷಕರು, ಗ್ರಾಮಸ್ಥರು ಹಾಗೂ ಶಿಕ್ಷಣ ಉಳಿಸಿ ಸಮಿತಿ ಸದಸ್ಯರು ಕಟ್ಟುವ ಮುಖಾಂತರ ಎಲ್ಲ ವಿದ್ಯಾರ್ಥಿಗಳಿಗೂ ಮುಂದಿನ ಶೈಕ್ಷಣಿಕ ವರ್ಷಕ್ಕೆ ಸ್ವಾಗತಿಸುತ್ತಾ, ನಮ್ಮೂರ ಶಾಲೆ ಮುಚ್ಚಲು ನಾವು ಎಂದಿಗೂ ಬಿಡುವುದಿಲ್ಲ ಎಂದು ಘೋಷಣೆ ತೆಗೆದುಕೊಂಡು, ಪ್ರತಿರೋಧ ಚಳವಳಿಗೆ ಚಾಲನೆ ನೀಡಿದರು.

ನಂತರ ಪೋಷಕರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಎಐಡಿಎಸ್‌ಒ ರಾಜ್ಯ ಖಜಾಂಚಿ ಸುಭಾಷ್ ಬೆಟ್ಟದ ಕೊಪ್ಪ,ನಮ್ಮೂರ ಶಾಲೆ ಉಳಿಯಬೇಕು ಮತ್ತು ಕೆಪಿಎಸ್ ಯೋಜನೆ ರದ್ದಾಗಬೇಕೆಂದು ಆಗ್ರಹಿಸಿ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ರಚಿಸಿಕೊಂಡು ಕಳೆದ ೫ ತಿಂಗಳಿಂದ ಗ್ರಾಮಸ್ಥರು ಹಾಗೂ ಪೋಷಕರು ಹೋರಾಟ ನಡೆಸಿದ್ದೇವೆ. ಗ್ರಾಮಮಟ್ಟದಿಂದ ಆರಂಭಿಸಿ ಜಿಲ್ಲಾ ಮಟ್ಟ ಹಾಗೂ ರಾಜ್ಯ ಮಟ್ಟದವರೆಗೂ ಪ್ರತಿಭಟನೆ ಹಾಗೂ ಸಮಾವೇಶಗಳನ್ನು ನಡೆಸಿದ್ದೇವೆ. ನಾಡಿನ ಹೆಸರಾಂತ ಸಾಹಿತಿಗಳು ಹಾಗೂ ಶಿಕ್ಷಣ ತಜ್ಞರು ನಮ್ಮೊಂದಿಗೆ ಧ್ವನಿಗೂಡಿಸಿದ್ದಾರೆಂದರು.

ಈಷ್ಟೆಲ್ಲ ಹೋರಾಟ, ಪ್ರತಿಭಟನೆ ನಡೆದರೂ ರಾಜ್ಯ ಸರ್ಕಾರ ನಾಡಿನ ಪೋಷಕರ, ಶಿಕ್ಷಣ ತಜ್ಞರ, ಸಾಹಿತಿಗಳ ಮಾತನ್ನು ಕೇಳದೆ ಹಠಮಾರಿತನ ಧೋರಣೆ ತಾಳುತ್ತಿದೆ. ಬಡವರ ರೈತ ಕಾರ್ಮಿಕರ ಮಕ್ಕಳು ಶಿಕ್ಷಣದಿಂದ ವಂಚಿತರಾದರೂ ಪರವಾಗಿಲ್ಲ ಕೆಪಿಎಸ್ ಯೋಜನೆಯನ್ನು ಜಾರಿಗೊಳಿಸಲು ಮುಂದಾಗಿದೆ ಎಂದು ತಿಳಿಸಿದರು.

ಸಭೆಯ ನಂತರ ನಮ್ಮೂರ ಶಾಲೆ ಉಳಿಯಬೇಕು ಎಂದು ಆಗ್ರಹಿಸಿ ಬರೆದಿರುವ ಪತ್ರಗಳನ್ನು ಬಿಇಓ ಗೆ ಕೊಡುವ ಮುಖಾಂತರ ಪತ್ರ ಚಳವಳಿಗೂ ಕೂಡ ಚಾಲನೆ ನೀಡಲಾಯಿತು.

ಸಭೆಯಲ್ಲಿ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ಕಾರ್ಯದರ್ಶಿ ಯೋಗೀಶ್, ಉಪಾಧ್ಯಕ್ಷರಾದ ಮಂಜುನಾಥ್ ಹಾಗೂ ಕೃಷ್ಣ, ಸದಸ್ಯರಾದ ಜ್ಯೋತಿ, ಮನು, ಸಿದ್ದೇಶ್, ನಿಂಗರಾಜು, ಪ್ರದೀಪ್, ಪುಟ್ಟಸ್ವಾಮಿ, ಉದ್ದಯ್ಯ, ಕೃಷ್ಣಮೂರ್ತಿ, ವಿದ್ಯಾರ್ಥಿ ಸಂಘಟನೆಯ ಪದಾಧಿಕಾರಿಗಳಾದ ಚೈತ್ರ, ಸುಷ್ಮಾ, ಅಭಿಷೇಕ್, ದರ್ಶನ್, ಶ್ರೇಯಸ್ ಇದ್ದರು.

Nammura School resistance movement launched in Ilehole village

Share

Leave a comment

Leave a Reply

Your email address will not be published. Required fields are marked *

Don't Miss

ದನದ ಮಾಂಸ ಮಾರಾಟದಲ್ಲಿ 40 ಕೆ.ಜಿ ಮಾಂಸ, ಕತ್ತಿ–ಚಾಕುಗಳು ಜಪ್ತಿ

ಚಿಕ್ಕಮಗಳೂರು: ನಗರದ ಅಯ್ಯಪ್ಪನಗರದ ಸಮೀಪದ ಶೆಡ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಗರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ.9ರಂದು ಮಧ್ಯಾಹ್ನ...

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ ಸಾಧನೆ ಯೋಗ ಮಾಡುವವರಿಗೆ ಒಂದು ಪ್ರೇರಣೆ ಕೊಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ.ರವಿ...

Related Articles

ಕೇಬಲ್ ಕಳ್ಳರೆಂದು ಶಂಕಿಸಿ ಮೂವರ ಮೇಲೆ ಹಲ್ಲೆ

ಕಡೂರು: ಪಂಪ್‌ಸೆಟ್‌ ಮೋಟಾರ್‌ ಕೇಬಲ್‌ ಕಳ್ಳರೆಂದು ಅನುಮಾನಿಸಿ ಮೂವರು ಯುವಕರ ಮೇಲೆ ಗುಂಪೊಂದು ಗಂಭೀರವಾಗಿ ಹಲ್ಲೆ...

₹5 ಲಕ್ಷ ಮೌಲ್ಯದ ಶ್ರೀಗಂಧದ ಮರಗಳ ಕಳವು

ತರೀಕೆರೆ: ಕೃಷಿ ತೋಟಕ್ಕೆ ನುಗ್ಗಿದ ಕಳ್ಳರು ಸುಮಾರು 15 ಶ್ರೀಗಂಧದ ಮರಗಳನ್ನು ಕಡಿದು ಕಳವು ಮಾಡಿಕೊಂಡು...

ಸ್ಕೂಟರ್‌ ಅಪಘಾತ: ಚಿಕಿತ್ಸೆ ಫಲಿಸದೆ ಸಾವು

ಕಡೂರು: ರಸ್ತೆಯಲ್ಲಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸ್ಕೂಟರ್‌ ನಿಯಂತ್ರಣ ತಪ್ಪಿ ಬಿದ್ದು...

ಧ್ವಜಾರೋಹಣದ ಕೆಲವೇ ಗಂಟೆಗಳಲ್ಲಿ ಕೆಳಗಿಳಿಸಿದ ರಾಷ್ಟ್ರಧ್ವಜ …?

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದೇ ಚಿಕ್ಕಮಗಳೂರಿನಲ್ಲಿ ರಾಷ್ಟ್ರಧ್ವಜಕ್ಕೆ ಸಂಬಂಧಿಸಿದಂತೆ ವಿವಾದವೊಂದು ಭುಗಿಲೆದ್ದಿದ್ದು, ಕರ್ನಾಟಕ ರಾಜ್ಯ ರೈತ ಸಂಘದ...