ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರ ನೇತೃತ್ವದಲ್ಲಿ ಛಾತ್ರೋನ್ ಕಿ ಗೂಂಚ್ ಎಂಬ ದೇಶ ವ್ಯಾಪಿ ವಿದ್ಯಾರ್ಥಿ ಆಂದೋಲನವನ್ನು ನೆಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ. ಕೆ.ಪಿ.ಅಂಶುಮಂತ್ ತಿಳಿಸಿದರು.
ಅವರು ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಕೆಪಿಸಿಸಿ ಮಾರ್ಗದರ್ಶನದಡಿಯಲ್ಲಿ ನೆಡೆಯುವ ಈ ಆಂದೋಲನಕ್ಕೆ ಸಂಪೂರ್ಣವಾಗಿ ತಯಾರಿ ನಡೆಸಿದ್ದು, ಪರೀಕ್ಷಾ ವೈಫಲ್ಯತೆಯನ್ನು ಖಂಡಿಸಿ ಹಮ್ಮಿಕೊಂಡಿರುವ ಈ ಆಂದೋಲನವು ಭವಿ?ದ ಆಸರೆಯನ್ನು ಕಳೆದುಕೊಂಡಿರುವ ಯುವ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಮೂಡಿಸಲು ಸಹಕಾರಿಯಾಗಲಿದೆ ಎಂದು ಹೇಳಿದರು.
ಈ ಆಂದೋಲನದ ಮೂಲಕ ದೇಶದ ೨೮ ಪ್ರಮುಖ ನಗರಗಳಿಗೆ ರಾಹುಲ್ ಗಾಂಧಿ, ಮಲ್ಲಿಕಾರ್ಜುನ್ ಖರ್ಗೆ ಹಾಗೂ ಎಲ್ಲಾ ಕಾಂಗ್ರೆಸ್ ಪಕ್ಷದ ನಾಯಕರು ವಿದ್ಯಾರ್ಥಿಗಳೊಂದಿಗೆ ಭೇಟಿಯಾಗಿ ಸಂವಾದ ನಡೆಸುವ ಮೂಲಕ ಅವರ ಸಮಸ್ಯೆಗಳನ್ನು ತಿಳಿದು ಭವಿಷ್ಯದಲ್ಲಿ ತೊಂದರೆ ಆಗದ ರೀತಿಯಲ್ಲಿ ಹೋರಾಟ ರೂಪಿಸಲಾಗುವುದು ಎಂದರು.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಿಂದಾಗಿ ಸಾವಿರಾರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದು, ಕೆಲವರು ಆತ್ಮಹತ್ಯೆಯಂತಹ ದುರ್ಘಟನೆಗಳಿಗೆ ಬಲಿಯಾಗಿದ್ದಾರೆ, ವಿದ್ಯಾರ್ಥಿಗಳು ಈ ದೇಶದ ಭವಿಷ್ಯ ಅವರ ಧ್ವನಿಯಾಗಿ ಕಾಂಗ್ರೆಸ್ ಪಕ್ಷ ನಿರಂತರವಾಗಿ ಇರುವುದಾಗಿ ತಿಳಿಸಿದರು
ಎನ್ಡಿಎ ಜವಾಬ್ದಾರಿಯನ್ನು ವಹಿಸಿಕೊಂಡಿರುವ ಕೇಂದ್ರ ಸರ್ಕಾರ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಷಯದಲ್ಲಿ ತೊರಿರುವ ನಿರ್ಲ್ಯಕ್ಷದಿಂದಾಗಿ ಆಡಳಿತ ನೆಡೆಸುವಲ್ಲಿ ವಿಫಲವಾಗಿರುವದೇ ಎಂಬ ಅನುಮಾನ ಮೂಡುತ್ತಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಪತ್ರಿಕಾಗೊಷ್ಠಿಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆ ಅಧ್ಯಕ್ಷ ಶಿವಾನಂದಸ್ವಾಮಿ, ತನೋಜ್ ನಾಯ್ಡ್, ಕಾಂಗ್ರೆಸ್ ಜಿಲ್ಲಾ ವಕ್ತಾರ ರೂಬೆನ್ ಮೊಸಸ್, ಶಬಾನಾ ಸುಲ್ತಾನ, ಮಲ್ಲೇಶಪ್ಪ, ಶಿವು, ಹೇಮಣ್ಣ ಉಪಸ್ಥಿತರಿದ್ದರು.
Nationwide Chatron Ki Goonch Student Movement
Leave a comment