Home Latest News ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ ನ್ಯಾಯಲಯಕ್ಕೆ ಹಾಜರು
Latest NewschikamagalurHomenamma chikmagalur

ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ ನ್ಯಾಯಲಯಕ್ಕೆ ಹಾಜರು

Share
Share

ಚಿಕ್ಕಮಗಳೂರು : ಪ್ರಕರಣ ಒಂದರ ಸಂಬಂಧ ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿಯನ್ನು ಚಿಕ್ಕಮಗಳೂರು ನ್ಯಾಯಲಯಕ್ಕೆ ಹಾಜರು ಪಡಿಸಲಾಯಿತು.

ಚಿಕ್ಕಮಗಳೂರು ಜಿಲ್ಲೆಯ ಹಲವು ಪ್ರಕರಣ ಸಂಬಂಧ ಕೇರಳ ಪೊಲೀಸರು ಬಿಗಿ ಬಂದೋಬಸ್ ನಲ್ಲಿ ಕರೆತಂದು ಹಾಜರುಪಡಿಸಿದರು.

ಮುಂದಿನ ತಿಂಗಳು 21ಕ್ಕೆ ಪ್ರಕರಣದ ವಿಚಾರಣೆಯನ್ನು ಜೆಎಂಎಫ್ ಸಿ ನ್ಯಾಯಲಯ ಮುಂದೂಡಿದೆ. ಕೇರಳದಲ್ಲಿ ಶರಣಾಗತಿಯಾಗಿದ್ದ ಬಿ. ಜಿ. ಕೃಷ್ಣಮೂರ್ತಿ ,ಸಾಕೇತ್ ರಾಜನ್ ನಂತರ

ರಾಜ್ಯದಲ್ಲಿ ಎರಡು ದಶಕಗಳಿಗೂ ಹೆಚ್ಚು ಕಾಲ ನಕ್ಸಲ್ ನಾಯಕತ್ವ ವಹಿಸಿದ್ದರು. ಕಳೆದ ವರ್ಷ ಕೇರಳದಲ್ಲಿ ಶರಣಾಗತಿಯಾಗಿದ್ದ ಮೊಸ್ಟ್ ವಾಂಟೆಡ್ ನಕ್ಸಲ್ ಬಿ.ಜಿ. ಕೃಷ್ಣಮೂರ್ತಿ ಮೇಲೆ ನಕ್ಸಲ್ ಚಟುವಟಿಕೆ ಸಂಬಂಧ 66 ಪ್ರಕರಣ ದಾಖಲಾಗಿದೆ.

ಚಿಕ್ಕಮಗಳೂರು-ಉಡುಪಿ-ದಕ್ಷಿಣ ಕನ್ನಡದಲ್ಲಿಯೂ ಬಿ.ಜಿ. ಕೃಷ್ಣಮೂರ್ತಿ ವಿರುದ್ದ ಪ್ರಕರಣ ಇದ್ದು, ದಶಕದ ಹಿಂದೆ ಕೇರಳದತ್ತ ಬಿ.ಜಿ. ಕೃಷ್ಣಮೂರ್ತಿ ಹಾಗೂ ಇತರೇ ನಕ್ಸಲರು ಮುಖ ಮಾಡಿದ್ದರು.

ವಿಕ್ರಂಗೌಡನ ಹತ್ಯೆ ನಂತರ ಹಲವು ನಕ್ಸಲರು ಶರಣಾಗಿದ್ದರು.

Naxal leader B.G. Krishnamurthy appears in court

Share

Leave a comment

Leave a Reply

Your email address will not be published. Required fields are marked *

Don't Miss

ಗುಡುಗು-ಸಿಡಿಲಿನ ಭಾರಿ ಮಳೆಗೆ ಇಡೀ ನಗರ ತಲ್ಲಣ

ಚಿಕ್ಕಮಗಳೂರು: ಶುಕ್ರವಾರ ಮಧ್ಯರಾತ್ರಿ ಗುಡುಗು-ಸಿಡಿಲಿನ ಅಬ್ಬರದೊಂದಿಗೆ ಸುರಿದ ಭಾರಿ ಮಳೆಗೆ ಇಡೀ ನಗರ ತಲ್ಲಣಗೊಂಡಿದೆ. ಮರಗಳು ವಿದ್ಯುತ್ ಕಂಬಗಳ ಸಹಿತ ರಸ್ತೆಗೆ ಉರಳಿದವು. ಹಲವು ಕಟ್ಟಡಗಳ ಚಾವಣಿ ಹಾರಿ ಹೋಗಿವೆ. ಮಧ್ಯರಾತ್ರಿ...

ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ನೇಮಕ ನಿಯಮ ಬಾಹಿರ

ಚಿಕ್ಕಮಗಳೂರು: ಇತ್ತೀಚೆಗೆ ಡಿ. ರಾಮೇಗೌಡರವರನ್ನು ಕರ್ನಾಟಕ ರಾಜ್ಯ ರೈತ ಸಂಘದ ಚಿಕ್ಕಮಗಳೂರು ತಾಲ್ಲೂಕು ಘಟಕದ ಅಧ್ಯಕ್ಷನಾಗಿ ನೇಮಕ ಮಾಡಿರುವುದು ನಿಯಮ ಬಾಹಿರವಾಗಿದ್ದು, ಈ ಆಯ್ಕೆ ಅಮಾನ್ಯ ಎಂದು ಜಿಲ್ಲಾಧ್ಯಕ್ಷ ಮಹೇಶ್ ಹೇಳಿದರು....

Related Articles

‘ನಮ್ಮೂರಿಗೆ ರಸ್ತೆ ಅಭಿವೃದ್ಧಿ ಬೇಡ’ ಎಂದು ಗ್ರಾಮಸ್ಥರು….?

ಚಿಕ್ಕಮಗಳೂರು: ಸಾಮಾನ್ಯವಾಗಿ ಗ್ರಾಮಗಳಿಗೆ ರಸ್ತೆ ಬೇಕು, ಕುಡಿಯುವ ನೀರು ಬೇಕು, ವಿದ್ಯುತ್ ಬೇಕು ಎಂದು ಜನ...

ಜಿಲ್ಲೆಯಲ್ಲಿ ಅಧಿಕಗೊಂಡ ನಾಪತ್ತೆ ಪ್ರಕರಣಗಳು

ಚಿಕ್ಕಮಗಳೂರು: ಬೀರೂರು ಮತ್ತು ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂರು ಪ್ರತ್ಯೇಕ ನಾಪತ್ತೆ ಪ್ರಕರಣಗಳು ದಾಖಲಾಗಿದ್ದು,...

ಮಲೆನಾಡಿನಲ್ಲಿ ಮತ್ತೆ ಅಪಾಯಕಾರಿ ಕಾಲುಸಂಕಗಳನ್ನೇ ಆಶ್ರಯ ಪಡೆದ ಗ್ರಾಮಸ್ಥರು

ಚಿಕ್ಕಮಗಳೂರು: ಕಾಫಿನಾಡಿನ ಮಲೆನಾಡು ಭಾಗದಲ್ಲಿ ನಕ್ಸಲ್ ಚಟುವಟಿಕೆಗಳು ಸ್ತಬ್ಧವಾಗುತ್ತಿದ್ದಂತೆ ಸರ್ಕಾರ ಅಲ್ಲಿನ ಕುಗ್ರಾಮಗಳನ್ನು ಸಂಪೂರ್ಣವಾಗಿ ಕೈಬಿಟ್ಟಿದೆ...

ಜೆಜೆಎಂನಲ್ಲಿ ನಕಲಿ ಛಾಪಾ ಕಾಗದ ಬಳಸಿ ಸರ್ಕಾರಕ್ಕೆ ವಂಚನೆ

ಶೃಂಗೇರಿ:  ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಜೆಜೆಎಂ (ಜಲ ಜೀವನ್ ಮಿಷನ್) ಹಾಗೂ ಟಾಸ್ಕ್ ಫೋರ್ಸ್...