ಶೃಂಗೇರಿ: ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿಯನ್ನು ಕೇರಳ ಪೊಲೀಸರು ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ಶುಕ್ರವಾರ ಹಾಜರುಪಡಿಸಿದರು.
ಶೃಂಗೇರಿ ತಾಲೂಕಿನ ಬುಕ್ಕಡಿಬೈಲು ಗ್ರಾಮದ ನಿವಾಸಿಯಾಗಿರುವ ಬಿ.ಜಿ. ಕೃಷ್ಣಮೂರ್ತಿ ವಿರುದ್ಧ ಕರ್ನಾಟಕದಲ್ಲಿ ಒಟ್ಟು 54 ಪ್ರಕರಣಗಳು ದಾಖಲಾಗಿವೆ. ಪ್ರಸ್ತುತ ಕೇರಳದ ವಿಯೂರು ಸೆಂಟ್ರಲ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಚಂದ್ರಕಾಂತ್ ಅವರ ಮನೆ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಕೇರಳದಿಂದ ಶೃಂಗೇರಿ ನ್ಯಾಯಾಲಯಕ್ಕೆ ಕರೆತರಲಾಗಿತ್ತು. ಪ್ರಕರಣದ ಮುಂದಿನ ವಿಚಾರಣೆಯನ್ನು ನ್ಯಾಯಾಲಯ ಜುಲೈ 16ಕ್ಕೆ ಮುಂದೂಡಿದೆ.
ಪ್ರಕರಣದ ವಿಚಾರಣೆಯನ್ನು ನ್ಯಾಯಾಧೀಶ ಆರ್.ಎಸ್. ಜೀತು ನಡೆಸಿದರು. ವಿಚಾರಣೆ ವೇಳೆ ಆರೋಪಿ ಪರ ವಕೀಲ ವಿ.ಆರ್. ನಟಶೇಖರ್ ಹಾಜರಿದ್ದರು. ಈ ವೇಳೆ ಕೇರಳ ಹಾಗೂ ಕರ್ನಾಟಕ ಪೊಲೀಸರಿಂದ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು.
Naxal leader B.G. Krishnamurthy appears in Sringeri JMFC court
Leave a comment