ಚಿಕ್ಕಮಗಳೂರು : ಕಳೆದ ಒಂದು ವಾರದಿಂದ ರೂಮರ್ ಗಳೇ ಹರಿದಾಡುತ್ತಿದ್ದ ನಕ್ಸಲರ ಚಟುವಟಿಕೆ ಕೊನೆಗೂ ದೃಢಪಟ್ಟಿದೆ. ಅಲ್ಲಿ ಬಂದರು ಇಲ್ಲಿ ಹೋದರು ಎಂಬೆಲ್ಲಾ ಊಹಾಪೋಹ. ಗಳಿಗೆ ಕಡೆಗೂ ಖಾತ್ರಿ ದೊರೆತಿದೆ. ಮುಂಡಗಾರು ಲತಾ ಟೀಮ್ ಮೇಲೆ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು ಗ್ರಾಮವೊಂದರ ಮನೆಗೆ ಬಂದು ಗನ್ ತೋರಿಸಿ ಊಟ ಮಾಡಿ ಹೋಗಿರುವುದು ಖಚಿತಗೊಂಡಿದೆ.
ಮಲೆನಾಡಲ್ಲಿ ಮತ್ತೆ ನಕ್ಸಲರ ಚಟುವಟಿಕೆ ಆರಂಭವಾಗಿದೆ ಶೃಂಗೇರಿ ಸುತ್ತಮುತ್ತಲಿನ ಹಳ್ಳಿಗಳಿಗೆ ಬಂದು ಜನರನ್ನ ಹೆಸರಿಸಲು ನಕ್ಸಲರು ಮುಂದಾಗಿದ್ದಾರೆ. ಹಾರ್ಡ್ ಕೋರ್ ನಕ್ಸಲ್ ಮುಂಡಗಾರು ಲತಾ ವಿರುದ್ಧ ಸದ್ಯ ಪ್ರಕರಣ ಒಂದು ದಾಖಲಾಗಿದೆ. ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಯುಎ.ಪಿಎ ಆಕ್ಟ್ ಅಡಿ ಪ್ರಕರಣ ದಾಖಲಾಗಿದೆ ಎ.ಎನ್.ಎಫ್. ಡಿವೈಎಸ್ಪಿ ದೂರಿನ ಹಿನ್ನೆಲೆ ಎಫ್ಐಆರ್ ಆಗಿದ್ದು ಮುಂಡಗಾರು ಲತಾ, ಜಯಣ್ಣ ಸೇರಿ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ, ಮನೆಗೆ ಬಂದು ಗನ್ ತೋರಿಸಿ ಊಟ ಮಾಡಿ ಹೋದ ಮುಂಡಗಾರು ಲತಾ ಬಗ್ಗೆ ಪೊಲೀಸರಿಗೆ ಮಾಹಿತಿ ಹೋಗುತ್ತಿದ್ದಂತೆ ಸ್ಥಳದಿಂದ ನಕ್ಸಲರು ನಾಪತ್ತೆಯಾಗಿದ್ದಾರೆ ಈ ವೇಳೆ ಸ್ಥಳದಲ್ಲಿ 3 ಗನ್ ಹಾಗೂ ಗುಂಡುಗಳು ಪತ್ತೆಯಾಗಿದ್ದು ಅವುಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಸದ್ಯ ತಲೆಮರೆಸಿಕೊಂಡ ನಕ್ಸಲರಿಗಾಗಿ ಸ್ಥಳಿಯ ಪೊಲೀಸರ ಜೊತೆ ಎ.ಎನ್.ಎಫ್. ಸಿಬ್ಬಂದಿ ತೀವ್ರ ಶೋಧ ನಡೆಸಿದ್ದಾರೆ. ಡಾಗ್ ಸ್ಕ್ವಾಡ್ ಜೊತೆ ಕೂಂಬಿಂಗ್ ಸಹಾ ಚುರುಕು ಗೊಳಿಸಿದ ಪೊಲೀಸರು ಅಲರ್ಟ್ ಆಗಿದ್ದಾರೆ ಇದರೊಂದಿಗೆ ದಶಕಗಳ ಬಳಿಕ ಮಲೆನಾಡಲ್ಲಿ ಮತ್ತೆ ನಕ್ಸಲರ ಹೆಜ್ಜೆ ಗುರುತುಗಳು ಕಂಡು ಬಂದಿವೆ. ಚಿಕ್ಮ್ಕಗಳೂರು ಜಿಲ್ಲೆ ಮಲೆನಾಡು ಭಾಗ ಮತ್ತೊಮ್ಮೆ ಬೆಚ್ಚಿ ಬಿದ್ದಿದೆ.
Leave a comment