Home National News ನಕ್ಸಲರು ಶರಣಾಗುತ್ತಿಲ್ಲ ಮುಖ್ಯವಾಹಿನಿಗೆ ಬರುತ್ತಿದ್ದಾರೆ : ಕೆ.ಎಲ್ ಅಶೋಕ್
National News

ನಕ್ಸಲರು ಶರಣಾಗುತ್ತಿಲ್ಲ ಮುಖ್ಯವಾಹಿನಿಗೆ ಬರುತ್ತಿದ್ದಾರೆ : ಕೆ.ಎಲ್ ಅಶೋಕ್

Share
Share

ಚಿಕ್ಕಮಗಳೂರು : ದಶಕಗಳ ಕಾಲ ಭೂಗತರಾಗಿದ್ದ ಆರು ನಕ್ಸಲರ ಶರಣಾಗತಿಗೆ ವೇದಿಕೆ ಸಿದ್ಧವಾಗಿದೆ, ಶಾಂತಿಗಾಗಿ ನಾಗರಿಕ ವೇದಿಕೆ ರಾಜ್ಯ ಸರ್ಕಾರದೊಂದಿಗೆ ನಡೆಸಿದ ಸುಧೀರ್ಘ ಮಾತುಕತೆ ಫಲಪ್ರದವಾಗಿದ್ದು ನಾಳೆ ಆರು ಜನ ನಕ್ಸಲರು ಮುಖ್ಯ ವಾಹಿನಿಗೆ ಬರಲಿದ್ದಾರೆ.

ಪ್ರಮುಖವಾಗಿ ಮುಂಡಗಾರು ಲತಾ, ಸುಂದರಿ ಕುಟ್ಲೂರು, ವನಜಾಕ್ಷಿ ಬಾಳೆಹೊಳೆ, ಮಾರಪ್ಪ ಅರೋಲಿ ಕೆ ವಸಂತ, ಟಿ ಎನ್ ಜೀಶ್ ಅಲಿಯಾಸ್ ಜಯಣ್ಣ ನಾಳೆ ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಶರಣಾಗಲಿದ್ದು ಈ ಬಗ್ಗೆ ಶಾಂತಿಗಾಗಿ ನಾಗರಿಕ ವೇದಿಕೆ ಪ್ರಮುಖ ಮುಖಂಡ ಕೆ ಎಲ್ ಅಶೋಕ್ ಮಾಹಿತಿ ನೀಡಿದ್ದಾರೆ.

ರಾಜ್ಯ ಸರಕಾರ ನಕ್ಸಲರ ಪ್ರಮುಖ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದು ಅವುಗಳಲ್ಲಿ ಪ್ರಮುಖವಾಗಿ ಮಲೆನಾಡಿನ ಅರಣ್ಯ ಇಲಾಖೆ ಕಿರುಕುಳ, ಗಿರಿಜನರಿಗಾಗಿ ಭೂಮಿ, ದಲಿತರಿಗಾಗಿ ವಸತಿ ಸೇರಿದಂತೆ ಪ್ರಮುಖ ಬೇಡಿಕೆಗಳನ್ನು ಶರಣಾಗಲಿರುವ ನಕ್ಸಲರು ಮುಂದೆ ಇಟ್ಟಿದ್ದಾರೆ‌ ಎಂದು ಕೆಎಲ್ ಅಶೋಕ್ ತಿಳಿಸಿದರು. ಇವುಗಳ ಜೊತೆಗೆ ರಾಜ್ಯ ಸರ್ಕಾರ ಶರಣಾಗುವ ನಕ್ಸಲರನ್ನು ಘನತೆ ಗೌರವದಿಂದ ನಡೆಸಿಕೊಳ್ಳಬೇಕು ಎಂಬ ಶರತ್ತನ್ನು ಇಟ್ಟಿದ್ದೇವೆ ಎಂದು ಅಶೋಕ್ ತಿಳಿಸಿದ್ದಾರೆ.

ನಕ್ಸಲ್ ಶರಣಾಗತಿ ಹೋರಾಟದ ಹೊಸ ಸ್ವರೂಪ

ನಾಳೆ ಆರು ಜನ ನಕ್ಸಲರು ಶರಣಾಗತಿ ಆಗುತ್ತಿಲ್ಲ, ಬದಲಾಗಿ ಸಮಾಜದ ಮುಖ್ಯ ವಾಹಿನಿಗೆ ಬರುತ್ತಿದ್ದಾರೆ. ಇನ್ನು ಮುಂದೆ ಅವರ ಹೋರಾಟದ ಸ್ವರೂಪ ಮತ್ತು ದಿಕ್ಕು ಬದಲಾಗಲಿದ್ದು ಇಷ್ಟು ದಿನ ಭೂಗತರಾಗಿ ನಡೆಸಿದ ಹೋರಾಟ ಇನ್ನು ಮುಂದೆ ನಾಗರಿಕ ಸಮಾಜದ ನಡುವೆ ಚಳುವಳಿ ರೂಪದಲ್ಲಿ ಕಾಣಿಸಿಕೊಳ್ಳಲಿದೆ ಎಂದು ಅಶೋಕ್ ಇದೆ ವೇಳೆ ಸ್ಪಷ್ಟಪಡಿಸಿದರು.

ಹಳೇ ಶರಣಾಗತಿಯಲ್ಲಾದ ದೋಷ ಮರು ಕಳುಹಿಸಿದಂತೆ ಮನವಿ

ಈ ಹಿಂದೆ ಶರಣಾಗತಿ ಆಗಿದ್ದ ನಕ್ಸಲರನ್ನು ರಾಜ್ಯ ಸರ್ಕಾರ ನಡೆಸಿಕೊಂಡ ರೀತಿ ಹಾಗೂ ಅವರಿಗೆ ಸೌಲಭ್ಯ ಕಲ್ಪಿಸದೇ ಇದ್ದುದರ ಬಗ್ಗೆ ಬೇಸರ ವ್ಯಕ್ತಪಡಿಸಿದ ಕೆ ಎಲ್ ಅಶೋಕ್ ಈ ಬಾರಿ ಆ ರೀತಿ ಆಗುವುದಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಈ ಬಾರಿ ಲಿಖಿತ ರೂಪದಲ್ಲಿ ರಾಜ್ಯ ಸರ್ಕಾರ ಭರವಸೆ ನೀಡುತ್ತಿದೆ ಎಂದು ತಿಳಿಸಿದರು.

Share

Leave a comment

Leave a Reply

Your email address will not be published. Required fields are marked *

Don't Miss

ಜನಗಣತಿ ಲೋಪಗಳಿಗೆ ಆಸ್ಪದ ನೀಡದಂತೆ ಕೆಲಸ ಮಾಡಿ ಜಿಲ್ಲಾಧಿಕಾರಿ

ಚಿಕ್ಕಮಗಳೂರು: ಜನಗಣತಿಯ ಮಾಹಿತಿ ನಿಖರ ಮತ್ತು ಸಮಗ್ರವಾಗಿ ದಾಖಲಿಸುವುದು ಅತ್ಯಂತ ಪ್ರಾಮುಖ್ಯತೆ ಹೊಂದಿರುವುದರಿಂದ ಗಣತಿ ಕಾರ್ಯಕ್ಕೆ ನಿಯೋಜಿಸಿರುವ ಎಲ್ಲಾ ಅಧಿಕಾರಿಗಳು, ಸಿಬ್ಬಂದಿಗಳು ಲೋಪ ದೋಷಗಳಿಗೆ ಆಸ್ಪದ ನೀಡದೆ ಅಚ್ಚುಕಟ್ಟಾಗಿ ಕಾರ್ಯ ನಿರ್ವಹಿಸುವಂತೆ...

ಅಗಲಿದ ಎಂ.ಎಸ್. ಅನಂತ್ ಗೆ ಬುದ್ಧ ವಂದನೆ

ಚಿಕ್ಕಮಗಳೂರು: ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹಾಗೂ ಬೌದ್ಧ ಧಮ್ಮದ ಮಾಜಿ ಜಿಲ್ಲಾ ಅಧ್ಯಕ್ಷರಾಗಿದ್ದ ಎಂ.ಎಸ್. ಅನಂತ್ ಅವರ ನಿಧನಕ್ಕೆ ಗುರುವಾರ ನಗರದ ಆಜಾದ್ ವೃತ್ತದಲ್ಲಿ ವಿವಿಧ ಸಂಘಟನೆಗಳ ವತಿಯಿಂದ ಬುದ್ಧ...

Related Articles

ಶೃಂಗೇರಿ ಮತ ಎಣಿಕೆ ವಿಡಿಯೋ ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ

ಹೊಸದಿಲ್ಲಿ: ಕರ್ನಾಟಕದ ಶೃಂಗೇರಿ ವಿಧಾನಸಭಾ ಕ್ಷೇತ್ರದ 2023ರ ಚುನಾವಣಾ ಫಲಿತಾಂಶಕ್ಕೆ ಸಂಬಂಧಿಸಿದ ವಿವಾದ ಮತ್ತೊಮ್ಮೆ ಸುಪ್ರೀಂ...

ಏಷ್ಯನ್ ಗೇಮ್ಸ್‌ನಲ್ಲಿಶಾನುವಳ್ಳಿಯ ಎಸ್.ಎಸ್. ಸ್ನೇಹಾಗೆ ಕಂಚು

ಚಿಕ್ಕಮಗಳೂರು: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ 2026ರ ಏಷ್ಯನ್ ಗೇಮ್ಸ್‌ನ ಮಿಶ್ರ 4×100 ಮೀಟರ್ ರಿಲೇ...

ಮೌಲ್ಯ – ಸೇವೆ ಮರೆತು ಹಣ ದೂಚಲು ಪ್ರಜಾಪ್ರಭುತ್ವದ ಕಗ್ಗೂಲೆ…

ಅದಲು-ಬದಲು ಯಾವ ಪಕ್ಷಗಳಿಗೆ ಸಿದ್ದಾಂತ, ನೈತಿಕತೆ ಇದೆ ಭಾರತದಲ್ಲಿ ಸಾಧ್ಯವಿಲ್ಲ. ಎಲ್ಲಾ ಪಕ್ಷಗಳು ಬೆರಿಕೆಯ ತುರಿಕೆಯಲ್ಲಿವೆ.ಅದರಲ್ಲೂ...

ಡಿ.ಕೆ.ಗೆ ಪ್ರಾರಂಭದಲ್ಲಿ ಡಿಚ್ಚಿ ! ಹರಿ ಬ್ರೇಕ್, ಸಿದ್ದು ಸ್ಟೀರಿಂಗ್ ಯಾವ ಕಡೆ ತಿರುಗುತ್ತದೆ

ಬೆಂಗಳೂರು:  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಯಾರನ್ನು ನಂಬಿದ್ದರು ಅವರೇ ಕೈ ಕೊಡುವ ಸೂಚನೆ ಅರಿತು ರಾಹುಲ್...