Home namma chikmagalur chikamagalur ನೂತನ ಜಿಲ್ಲಾಡಳಿತ ಸಂಕೀರ್ಣ ಮಾರ್ಚ್-ಏಪ್ರಿಲ್ ವೇಳೆಗೆ ಲೋಕಾರ್ಪಣೆ
chikamagalurHomeLatest Newsnamma chikmagalur

ನೂತನ ಜಿಲ್ಲಾಡಳಿತ ಸಂಕೀರ್ಣ ಮಾರ್ಚ್-ಏಪ್ರಿಲ್ ವೇಳೆಗೆ ಲೋಕಾರ್ಪಣೆ

Share
Share

ಚಿಕ್ಕಮಗಳೂರು: ಕಾಫಿನಾಡಿನ ಸಮಗ್ರ ಅಭಿವೃದ್ಧಿ ನೀಲನಕ್ಷೆಯ ಭಾಗವಾಗಿ ನಿರ್ಮಾಣವಾಗುತ್ತಿರುವ ಬಹುನಿರೀಕ್ಷಿತ ನೂತನ ಜಿಲ್ಲಾಡಳಿತ ಸಂಕೀರ್ಣದ (ಡಿಸಿ ಕಾಂಪ್ಲೆಕ್ಸ್) ಕಾಮಗಾರಿ ಮುಕ್ತಾಯದ ಹಂತ ತಲುಪಿದ್ದು, 2027ರ ಮಾರ್ಚ್ ಅಥವಾ ಏಪ್ರಿಲ್ ವೇಳೆಗೆ ಲೋಕಾರ್ಪಣೆಗೊಳ್ಳುವ ನಿರೀಕ್ಷೆಯಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ತಿಳಿಸಿದ್ದಾರೆ.

ಕಾಮಗಾರಿ ವೀಕ್ಷಿಸಿ ಮಾತನಾಡಿದ ಅವರು ಈ ಹಿಂದೆ ತಾಜ್ ಹೋಟೆಲ್ ಬಳಿ ಜಾಗದ ವಿವಾದ ಹಾಗೂ ಸಾರ್ವಜನಿಕರ ಆಕ್ಷೇಪ ವ್ಯಕ್ತವಾದ ಹಿನ್ನೆಲೆಯಲ್ಲಿ, ತೋಟಗಾರಿಕಾ ಇಲಾಖೆಯ ಸುಸಜ್ಜಿತ ಜಾಗವನ್ನು ಗುರುತಿಸಿ 60 ಕೋಟಿ ರೂಪಾಯಿಗಳ ಅನುಮೋದನೆ ಪಡೆದು ಕಾಮಗಾರಿಗೆ ಚಾಲನೆ ನೀಡಲಾಗಿತ್ತು.

ಪ್ರಸ್ತುತ 56 ಕೋಟಿ ರೂಪಾಯಿ ವೆಚ್ಚದಲ್ಲಿ ಆಡಿಟೋರಿಯಂ, ಕಾಂಪ್ಲೆಕ್ಸ್ ಹಾಗೂ ಲ್ಯಾಂಡ್‌ ಪಿಂಗ್ ಒಳಗೊಂಡಂತೆ ನಿರ್ಮಾಣವಾಗುತ್ತಿರುವ ಈ ಸಂಕೀರ್ಣದಲ್ಲಿ ಜಿಲ್ಲಾ ಮಟ್ಟದ ಏಳು ಪ್ರಮುಖ ಇಲಾಖೆಗಳು ಒಂದೇ ಸೂರಿನಡಿ ಕಾರ್ಯನಿರ್ವಹಿಸಲಿವೆ.

ಹೊಸ ಸಂಕೀರ್ಣದ ಜೊತೆಗೆ ಸಾರ್ವಜನಿಕರಿಗೆ ಅಗತ್ಯವಿರುವ ಕ್ಯಾಂಟೀನ್, ಹೊರಭಾಗದಲ್ಲಿ ಸುಸಜ್ಜಿತ ಶೌಚಾಲಯ, ಜೆರಾಕ್ಸ್ ಮತ್ತು ಪ್ರಿಂಟಿಂಗ್ ಸೇವಾ ಕೇಂದ್ರಗಳನ್ನು ವ್ಯವಸ್ಥೆಗೊಳಿಸಬೇಕಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಾರ್ವಜನಿಕರು ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತಲು ಹಾಗೂ ಹೋರಾಟಗಳನ್ನು ನಡೆಸಲು ಜಿಲ್ಲಾಧಿಕಾರಿ ಕಚೇರಿ ಸಮೀಪದಲ್ಲೇ ಪ್ರತ್ಯೇಕ ವೇದಿಕೆ ಅಥವಾ ಸ್ಥಳಾವಕಾಶ ಕಲ್ಪಿಸುವುದು ಅತ್ಯಗತ್ಯವಾಗಿದೆ.

ಇದರೊಂದಿಗೆ ಜಿಲ್ಲಾ ಪಂಚಾಯಿತಿ ಕಚೇರಿಯಿಂದ ಎಐಟಿ ವೃತ್ತದವರೆಗೆ ನಿರ್ಮಿಸಲಾಗಿರುವ ಸರ್ವಿಸ್ ರಸ್ತೆಯನ್ನು ಹನುಮಂತಪ್ಪ ವೃತ್ತ ಅಥವಾ ಕತ್ರಿಮಾರಮ್ಮ ದೇವಸ್ಥಾನದವರೆಗೆ ವಿಸ್ತರಿಸಿದರೆ ಶಾಲೆ, ಎಪಿಎಂಸಿ ಮತ್ತು ಡಿಸಿ ಕಾಂಪ್ಲೆಕ್ಸ್‌ಗೆ ಬರುವ ಜನರಿಗೆ ಸಂಚಾರ ದಟ್ಟಣೆ ಹಾಗೂ ಅಪಘಾತ ಮುಕ್ತ ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ಸಿ.ಟಿ. ರವಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

New district administration complex to be inaugurated by March-April

Share

Leave a comment

Leave a Reply

Your email address will not be published. Required fields are marked *

Don't Miss

ಚಿಕ್ಕಮಗಳೂರು ಜಿಲ್ಲಾಸ್ಪತ್ರೆ ವೈದ್ಯನ ಡಬಲ್ ಡ್ಯೂಟಿ.!

ಚಿಕ್ಕಮಗಳೂರು : ಸರ್ಕಾರದ ಬೊಕ್ಕಸದಿಂದ ಕೈತುಂಬಾ ಸಂಬಳ ಪಡೆಯುತ್ತಾ, ಕರ್ತವ್ಯದ ಸ್ಥಳದಲ್ಲಿ ರೋಗಿಗಳನ್ನು ಸತಾಯಿಸಿ ನೆರೆಯ ಕೇರಳದ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ಗಂಭೀರ ಆರೋಪ...

ಶಾಸಕರುಗಳಿಗೆ ಅಧಿಕಾರದ ಹಠ-ರೈತರಿಗೆ ಬರಗಾಲದ ಭಯ

ಕಡೂರು ಬರಪೀಡಿತ ತಾಲೂಕು ಪಟ್ಟಿಯಿಂದ ಹೊರಕ್ಕೆ: ಜನಪ್ರತಿನಿಧಿಗಳು, ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ ಕಡೂರು: ಕಡೂರು ತಾಲ್ಲೂಕು ಪ್ರತಿ ವರ್ಷವೂ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದರೂ, ಪ್ರಸಕ್ತ ಸಾಲಿನ ಬರಪೀಡಿತ ತಾಲೂಕುಗಳ ಪಟ್ಟಿಯಿಂದ...

Related Articles

ಕಾಡಾನೆ-ಕಾಡುಕೋಣ ದಾಳಿಯಿಂದ ಭೀತಿಯಲ್ಲಿ ಕಾರ್ಮಿಕರು

ಮೂಡಿಗೆರೆ: ಮಲೆನಾಡಿನಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದ್ದು, ಬೆಳೆಗಾರರು ಹಾಗೂ ಕಾರ್ಮಿಕರು ಆತಂಕದಲ್ಲಿ ದಿನದೂಡುತ್ತಿದ್ದಾರೆ. ಒಂದೆಡೆ...

ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಹಪ್ರಾಧ್ಯಾಪಕರ ಹಾಜರಾತಿ ತಿದ್ದುಪಡಿ ಆರೋಪ

ಚಿಕ್ಕಮಗಳೂರು: ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (CIMS)ಯಲ್ಲಿ ಸಹಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಡಾ. ಗಣೇಶ್ ಪಿ....

ತರೀಕೆರೆಯಲ್ಲಿ ಖಾಸಗಿ ಬಸ್ ಏಜೆಂಟ್‌ರ ನಡುರಸ್ತೆಯಲ್ಲೇ ಪುಂಡಾಟ

ತರೀಕೆರೆ: ಸರ್ಕಾರಿ ಬಸ್ ಚಾಲಕನ ಮೇಲೆ ಖಾಸಗಿ ಬಸ್ ಏಜೆಂಟ್‌ಗಳು ನಡುರಸ್ತೆಯಲ್ಲೇ ಪುಂಡಾಟ ನಡೆಸಿ, ರಕ್ತ...

ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿಗೆ ಸೆ.6ಕ್ಕೆ ಲಿಖಿತ ಪರೀಕ್ಷೆ

ಚಿಕ್ಕಮಗಳೂರು : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಿಎಆರ್ ಹಾಗೂ ಡಿಎಆರ್ ವೃಂದದ...