ಚಿಕ್ಕಮಗಳೂರು: ಸಮಾಜಸೇವೆ ಮತ್ತು ಕನ್ನಡ ನಾಡು-ನುಡಿ, ನೆಲ-ಜಲ ರಕ್ಷಣೆ ಮಾಡುವ ಉದ್ದೇಶದಿಂದ ಕರ್ನಾಟಕ ರಾಜ್ಯ ರಕ್ಷಣಾ ವೇದಿಕೆಯನ್ನು ಹೊಸದಾಗಿ ಅಸ್ತಿತ್ವಕ್ಕೆ ತರಲಾಗಿದೆ ಎಂದು ವೇದಿಕೆಯ ರಾಜ್ಯಾಧ್ಯಕ್ಷ ರಾಜ್ ಪ್ರಶಾಂತ್ ತಿಳಿಸಿದರು.
ಅವರು ಇಂದು ನಗರದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವೇದಿಕೆಯ ಜಿಲ್ಲಾ ಘಟಕವನ್ನು ಚಿಕ್ಕಮಗಳೂರಿನಲ್ಲಿ ಮೇ.೨೩ ರಂದು ಸ್ಥಾಪಿಸಲಾಗಿದ್ದು, ರಾಜ್ಯದ ೩೧ ಜಿಲ್ಲೆಗಳಲ್ಲಿ ಮತ್ತು ೨೪೪ ತಾಲ್ಲೂಕುಗಳಲ್ಲಿ ಘಟಕಗಳನ್ನು ಆರಂಭಿಸಲು ಗುರಿಹೊಂದಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ಘಟಕವನ್ನು ಪದಾಧಿಕಾರಿಗಳ ಆಯ್ಕೆಯ ನಂತರ ಶೀಘ್ರದಲ್ಲೇ ಉದ್ಘಾಟಿಸಲು ನಿರ್ಧರಿಸಿದ್ದೇವೆ, ಈಗಾಗಲೇ ಹಾಸನ, ಬೇಲೂರು, ಶಿವಮೊಗ್ಗ ಮುಂತಾದೆಡೆ ರಕ್ಷಣಾ ವೇದಿಕೆಯನ್ನು ಸ್ಥಾಪಿಸಿದ್ದೇವೆ ಎಂದರು.
ರಾಜ್ಯದ ಅಭಿವೃದ್ಧಿಗೆ ಶ್ರಮಿಸುವುದು, ಧಕ್ಷೆ ಉಂಟಾದಲ್ಲಿ ಹೋರಾಟ ಮಾಡುವುದು, ಬಡವರು ಮತ್ತು ಶೋಷಿತರ ಮೇಲೆ ನಡೆಯುವ ದೌರ್ಜನ್ಯ ತಡೆಯುವ ಜೊತೆಗೆ ಅವರ ಏಳಿಗೆಗೆ ಶ್ರಮಿಸುವುದು, ಪರಿಸರ ಸಂರಕ್ಷಣೆ, ಜನತೆಯ ಹಕ್ಕು ಮತ್ತು ಸ್ವಾತಂತ್ರ್ಯ ರಕ್ಷಣೆ, ರೈತರ ಹಾಗೂ ಕಾರ್ಮಿಕರ ಅಭಿವೃದ್ಧಿಗೆ ಶ್ರಮಿಸಲು ಉದ್ದೇಶಿಸಲಾಗಿದೆ ಎಂದರು.
ಗ್ರಾಮೀಣ ಜನತೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಕ್ರಮವಹಿಸಲಾಗುವುದು, ಪ್ರಮುಖ ರಾಷ್ಟ್ರೀಯ ಹಬ್ಬಗಳ ಆಚರಣೆ ಹಮ್ಮಿಕೊಳ್ಳಲಾಗುವುದು, ಗ್ರಾಮೀಣ ಕ್ರೀಡೆಗಳಿಗೆ ಉತ್ತೇಜನ ನೀಡುವ ಸಲುವಾಗಿ ಕ್ರೀಡಾಕೂಟಗಳನ್ನು ಏರ್ಪಡಿಸಿ ಜಿಲ್ಲಾ ಮಟ್ಟ ಹಾಗೂ ರಾಜ್ಯಮಟ್ಟದ ಕ್ರೀಡೆಗಳನ್ನು ಆಯೋಜಿಸಲು ನಿರ್ಧರಿಸಲಾಗಿದೆ ಎಂದರು.
ಅತೀ ಶೀಘ್ರದಲ್ಲಿ ವೇದಿಕೆಯನ್ನು ಜಿಲ್ಲಾ ಮಟ್ಟದಲ್ಲಿ, ತಾಲ್ಲೂಕು ಮಟ್ಟದಲ್ಲಿ, ನಗರ ಮಟ್ಟದಲ್ಲಿ ಘಟಕಗಳನ್ನು ಸ್ಥಾಪಿಸಿ ಅವುಗಳಿಗೆ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ, ಕಾರ್ಯಕರ್ತರು, ಸದಸ್ಯರನ್ನು ನೇಮಿಸುವ ಉದ್ದೇಶವನ್ನು ಹೊಂದಿದ್ದು, ಆಸಕ್ತಿ ಉಳ್ಳವರು ತಮ್ಮ ಮೊಬೈಲ್ ಸಂಖ್ಯೆ-೯೦೧೯೯೫೧೮೩೭ ನ್ನು ಸಂಪರ್ಕಿಸಬಹುದಾಗಿದೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ವೇದಿಕೆ ಉಪಾಧ್ಯಕ್ಷ ಲಕ್ಷ್ಮಣ್, ನಿರ್ದೇಶಕರುಗಳಾದ ಬಿ.ಬಿ. ಹಾಲಪ್ಪ, ಚಂದ್ರು, ಕುಮಾರ್ ಉಪಸ್ಥಿತರಿದ್ದರು.
New protection platform to be established to protect land language soil and water
Leave a comment