Home namma chikmagalur chikamagalur ಶ್ರೀ ಗುರು ದತ್ತಾತ್ರೇಯ ಪೀಠದಲ್ಲಿ ಹೊಸ ಹೊಸ ಆಚರಣೆ
chikamagalurHomeLatest Newsnamma chikmagalur

ಶ್ರೀ ಗುರು ದತ್ತಾತ್ರೇಯ ಪೀಠದಲ್ಲಿ ಹೊಸ ಹೊಸ ಆಚರಣೆ

Share
Share

ಚಿಕ್ಕಮಗಳೂರು: ಶ್ರೀ ಗುರು ದತ್ತಾತ್ರೇಯ ಪೀಠದಲ್ಲಿ ಕಾನೂನು ಉಲ್ಲಂಘನೆ ಮಾಡಿ ಗುಹೆಯ ಒಳಭಾಗದಲ್ಲಿ ಮುಸಲ್ಮಾನರು ಹೊಸ ಹೊಸ ಆಚರಣೆ ಮಾಡಿರುವುದನ್ನು ಖಂಡಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಯಥಾಸ್ಥಿತಿ ಕಾಪಾಡುವಂತೆ ಒತ್ತಾಯಿಸಲಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಟಿ.ರಂಗನಾಥ್ ತಿಳಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ದತ್ತಪೀಠದ ವಿಚಾರ ನ್ಯಾಯಾಲಯದಲ್ಲಿ ಇರುವುದರಿಂದ ದತ್ತಪೀಠದಲ್ಲಿ ಯಾವುದೇ ಹೊಸ ಆಚರಣೆ ಮಾಡುವಂತಿಲ್ಲ. ಆದರೂ ಕಾನೂನನ್ನು ಉಲ್ಲಂಘಿಸಿ ೨೩-೦೧-೨೦೨೬ ರಂದು ಹೊಸದಾಗಿ ಕಲಮ ತಯ್ಯಬಾ ಎಂಬ ಆಚರಣೆ ಮಾಡಿದ್ದಾರೆ. ಅವರಿಗೆ ಜಿಲ್ಲಾಡಳಿತ ಅವಕಾಶ ನೀಡಿರುವುದರಿಂದ ಹಿಂದೂಗಳಿಗೂ ಗುಹೆಯ ಮುಂಭಾಗದಲ್ಲಿ ಹೋಮ ಹವನ ಅವಕಾಶ ಮಾಡಿಕೊಡಬೇಕೆಂದು ಆಗ್ರಹಿಸಿದರು.

೧೯೭೮ ರ ದತ್ತಪೀಠದ ವಿಚಾರಣೆಯಲ್ಲಿ ಆಗಿನ ಶಾಖಾದ್ರಿ ದಿವಂಗತ ಸೈಯದ್ ಪೀರ್ ಮೊಹಮದ್ ಅವರು ದತ್ತಪೀಠದಲ್ಲಿ ಪೂಜೆ ಮಾಡುವವರಿಗೆ ಮದುವೆ ಆಗಿರುವಂತಿಲ್ಲ ಮತ್ತು ೨೫ ವರ್ಷಗಳಿಗಿಂತ ಹೆಚ್ಚು ವರ್ಷಗಳ ಕಾಲ ಪೂಜೆ ಮಾಡುವಂತಿಲ್ಲ ಎಂದಿದ್ದಾರೆ. ಆದರೆ, ಈಗಿರುವ ಮುಜಾವರ್ ಗಳಿಗೆ ಮೂವರಿಗೂ ಮದುವೆ ಆಗಿದೆ ಮತ್ತು ಅವರು ೩೫ ಕ್ಕೂ ಹೆಚ್ಚು ವರ್ಷಗಳಿಂದ ಇಲ್ಲಿ ಇರುವುದರಿಂದ ಅವರನ್ನು ಬದಲಾಯಿಸಬೇಕಾಗಿ ಒತ್ತಾಯಿಸಿದರು.

ಹಿಂದೂ ಪೂಜಾ ಪದ್ಧತಿಯಲ್ಲಿ ಅವಿವಾಹಿತರು ಪೂಜೆ ಮಾಡಬೇಕೆಂಬ ನಿಯಮವಿಲ್ಲ. ಆದರೂ ಸಹ ಈಗ ದತ್ತಾತ್ರೇಯ ಸ್ವಾಮಿಯವರ ಪೂಜೆ ಮಾಡುತ್ತಿರುವ ಅರ್ಚಕರು ಅವಿವಾಹಿತರಾಗಿದ್ದಾರೆ. ಈ ಮುಜಾವರ್‌ಗಳನ್ನು ಜಿಲ್ಲಾಡಳಿತ ಮುಂದುವರೆಸಿದರೆ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿದಂತಾಗುತ್ತದೆ. ಕೂಡಲೇ ಈ ಮುಜಾವರ್‌ಗಳನ್ನು ಬದಲಿಸಿ ಹೊಸಬರನ್ನು ನೇಮಕ ಮಾಡಬೇಕೆಂದು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಸಹ ಕಾರ್ಯದರ್ಶಿ ಅಮಿತ್, ಶ್ಯಾಮ್ ವಿ ಗೌಡ, ಬಜರಂಗದಳ ಜಿಲ್ಲಾ ಸಹ ಸಂಯೋಜಕ ಸುನಿಲ್, ಮಾತೃಶಕ್ತಿ ಪ್ರಮುಖ್ ಪುಷ್ಪಾಂಜಲಿ, ವಿನುತಾ, ಮೇಘ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

New rituals at Sri Guru Dattatreya Peetha

Share

Leave a comment

Leave a Reply

Your email address will not be published. Required fields are marked *

Don't Miss

ಅಜ್ಜಂಪುರದ ಇಲಿಗೆ ‘ಹಣದ ಮೋಹ’

ಚಿಕ್ಕಮಗಳೂರು : ತುಮಕೂರಿನಲ್ಲಿ ಇತ್ತೀಚೆಗೆ ಇಲಿಯೊಂದು ಚಿನ್ನದ ಆಭರಣಗಳನ್ನು ಎಗರಿಸಿ ಸುದ್ದಿಯಾಗಿದ್ದರೆ, ಇತ್ತ ಚಿಕ್ಕಮಗಳೂರಿನಲ್ಲಿ ಮತ್ತೊಂದು ಚಾಣಾಕ್ಷ ಇಲಿ ಒಂದು ಹೆಜ್ಜೆ ಮುಂದೆ ಹೋಗಿ ನೇರವಾಗಿ ಹಣವನ್ನೇ ಕದ್ದು ತನ್ನ ಸಾಮ್ರಾಜ್ಯ...

ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಹೆಸರಿನಲ್ಲಿಯೂ ನಕಲಿ ವಾಟ್ಸಪ್ ಖಾತೆ

ಚಿಕ್ಕಮಗಳೂರು: ಇತ್ತೀಚಿನ ದಿನಗಳಲ್ಲಿ ಸೈಬರ್ ಕ್ರೈಂ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಹ್ಯಾಕರ್‌ಗಳು ಮತ್ತು ವಂಚಕರು ವಾಟ್ಸಪ್, ಫೇಸ್‌ಬುಕ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಪ್ರಮುಖರ ಹೆಸರನ್ನು ದುರ್ಬಳಕೆ ಮಾಡಿಕೊಂಡು ಜನರನ್ನು...

Related Articles

ಮುಳ್ಳಯ್ಯನಗಿರಿ ಕ್ರಾಸ್ ಬಳಿ ಟಿಟಿ ವಾಹನ ಮರಕ್ಕೆ ಡಿಕ್ಕಿ

ಚಿಕ್ಕಮಗಳೂರು: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಮುಳ್ಳಯ್ಯನಗಿರಿ ಕ್ರಾಸ್ ಬಳಿ ಶುಕ್ರವಾರ ಇನೋವಾ ಕಾರು ನಿಯಂತ್ರಣ...

ಹಾಸ್ಟೆಲ್‌ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ

ಚಿಕ್ಕಮಗಳೂರು: ಸಮಗ್ರ ಗಿರಿಜನ ಕಲ್ಯಾಣ ಇಲಾಖೆ (ಐಟಿಡಿಪಿ) ವ್ಯಾಪ್ತಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ...

ಮನೆಯ ಮೇಲ್ಛಾವಣಿಯ ಹೆಂಚು ತೆಗೆದು ನುಗ್ಗಿ ಸರಗಳ್ಳತನ

ನರಸಿಂಹರಾಜಪುರ: ಮನೆಯಲ್ಲಿ ದಂಪತಿ ಮಲಗಿದ್ದ ವೇಳೆ ಮೇಲ್ಛಾವಣಿಯ ಹೆಂಚು ತೆಗೆದು ಒಳನುಗ್ಗಿದ ಕಳ್ಳನೊಬ್ಬ ಮಹಿಳೆಯ ಕೊರಳಿನಲ್ಲಿದ್ದ...

ಕನಸು ಫೈನಾನ್ಸ್ ಹೆಸರಿನಲ್ಲಿ ₹1.60 ಲಕ್ಷ ವಂಚನೆ ಆರೋಪ

ಕಡೂರು: ಪ್ರತಿದಿನ ಉಳಿತಾಯದ ಹಣವನ್ನು ಸ್ವೀಕರಿಸಿ ಶೇ.7ರಷ್ಟು ಬಡ್ಡಿ ನೀಡುವುದಾಗಿ ನಂಬಿಸಿ, ಹಣವನ್ನು ವಾಪಸ್ ನೀಡದೆ...