Home namma chikmagalur chikamagalur ಮುಳ್ಳಯ್ಯನಗಿರಿ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ಹೊಸ ರೂಲ್ಸ್
chikamagalurHomeLatest Newsnamma chikmagalur

ಮುಳ್ಳಯ್ಯನಗಿರಿ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ಹೊಸ ರೂಲ್ಸ್

Share
Share

ಚಿಕ್ಕಮಗಳೂರು:  ಕರ್ನಾಟಕದ ನೆಚ್ಚಿನ ಪ್ರವಾಸಿ ತಾಣವಾದ ಕಾಫಿನಾಡು ಚಿಕ್ಕಮಗಳೂರಿನ  ಪ್ರಸಿದ್ಧ ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಹೊಸ ನಿಯಮ ಜಾರಿ ಮಾಡಲಾಗಿದೆ. ಚಂದ್ರದ್ರೋಣ ಪರ್ವತದ ಸಾಲಿನಲ್ಲಿರುವ ವಿಶ್ವ ಪ್ರಸಿದ್ಧ ಎತ್ತರದ ಶಿಖರ ಮುಳ್ಳಯ್ಯನಗಿರಿ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ಹೊಸ ರೂಲ್ಸ್ ಮಾಡಲಾಗಿದೆ.

ಮುಳ್ಳಯ್ಯನಗಿರಿಯಲ್ಲಿ ಕಾಲ ಕಳೆಯಲು ಪ್ರವಾಸಿಗರಿಗೆ ಮೂರು ಗಂಟೆಗಳ ಸಮಯ ನಿಗದಿ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಹಾಗೇ ಮುಳ್ಳಯ್ಯನಗಿರಿ ,ಸೀತಾಳಯ್ಯನಗಿರಿ ಭಾಗದಲ್ಲಿ ಅಡುಗೆ ಮಾಡುವುದು ಹಾಗೂ ಪ್ಲಾಸ್ಟಿಕ್ ಬಳಕೆ ನಿಷೇಧಿಸಲಾಗಿದೆ.

ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ತೆರಳದಂತೆ ಪ್ರವಾಸೋದ್ಯಮ ಇಲಾಖೆ ಸೂಚನ ಫಲಕಗಳ ಅಳವಡಿಸಿದೆ. ಇನ್ನು ಪ್ರವಾಸಿಗರು ಝರಿ ಫಾಲ್ಸ್ ಗೆ ಕಾಲ್ನಡಿಗೆಯಲ್ಲಿ ತೆರಳಲು ಅನುಮತಿ ನೀಡಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ನಾಗರಾಜ್ ವರು ಆದೇಶ ಹೊರಡಿಸಿದ್ದಾರೆ.

ಚಂದ್ರದ್ರೋಣ ಪರ್ವತದ ಸಾಲಿನ ಮುಳ್ಳಯ್ಯನಗಿರಿ ಸೇರಿದಂತೆ ಸೀತಾಳಯ್ಯನಗಿರಿ, ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ, ಗಾಳಿಕೆರೆ ಹೊನ್ನಮ್ಮನ ಹಳ್ಳಕ್ಕೆ ಪ್ರವಾಸಿಗರ ದಂಡೇ ಹರಿದು ಬರುತ್ತೆ. ನಿತ್ಯವೂ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದೆ.

ಅದರಲ್ಲೂ ಈಗ ಸ್ಕೂಲ್ ಹಾಲಿಡೇಸ್ ಇರುವುರಿದ ಪೋಷಕರು ಮಕ್ಕಳ ಸಮೇತ ಪ್ರವಾಸಕ್ಕೆ ಆಗಮಿಸುತ್ತಾರೆ. ಹೀಗಾಗಿ ಮತ್ತಷ್ಟು ಜನ ದಟ್ಟಣೆ ಹೆಚ್ಚಾಗುವ ಸಾಧ್ಯತೆಗಳಿವೆ. ಹಾಗೇ ಮುಂಜಾಗ್ರತಾ ಕ್ರಮವಾಗಿ ಯಾವುದೇ ಅಹಿತಕ ಘಟನೆಗಳು ನಡೆಯದಂತೆ, ಅಲ್ಲದೇ ಹೆಚ್ಚು ಹೊತ್ತು ಮೋಜು ಮಸ್ತಿಗೆ ಜಿಲ್ಲಾಡಳಿ ಬ್ರೇಕ್ ಹಾಕಿದೆ.

ಕರ್ನಾಟಕದಲ್ಲಿ ಪ್ರಕೃತಿ ಸೌಂದರ್ಯದೊಂದಿಗೆ ಪ್ರವಾಸಿ ತಾಣಗಳನ್ನು ನೋಡಬೇಕೆಂದರೆ ಚಿಕ್ಕಮಗಳೂರಿಗೆ ಹೋಗಬೇಕು. ಬೆಂಗಳೂರಿನಿಂದ ಚಿಕ್ಕಮಗಳೂರು ಸುಮಾರು 250 ರಿಂದ 265 ಕಿ.ಮೀ ದೂರದಲ್ಲಿದ್ದು, ಚಿಕ್ಕಮಗಳೂರಿನಲ್ಲಿ ನೋಡಬೇಕಾದ ಸಾಕಷ್ಟು ಪ್ರವಾಸಿ ಆಕರ್ಷಣೆಗಳಿವೆ.

ಕುದುರೆಮುಖ ರಾಷ್ಟ್ರೀಯ ಉದ್ಯಾನವನ, ಮಾಣಿಕ್ಯಧಾರ ಜಲಪಾತ, ಕಲ್ಹಟ್ಟಿ ಜಲಪಾತ, ಮುಳ್ಳಯ್ಯನಗಿರಿ, ಹೆಬ್ಬೆ ಜಲಪಾತ, ಬಾಬಾ ಬುಡನ್‌ಗಿರಿ, ಕೆಮ್ಮಣ್ಣುಗುಂಡಿ, ಭದ್ರಾ ವನ್ಯಜೀವಿ ಧಾಮ, ಕಾಫಿ ವಸ್ತು ಸಂಗ್ರಹಾಲಯ, ಕದಂಬಿ ಜಲಪಾತ, ಝಡ್ ಪಾಯಿಂಟ್ ಸೇರಿದಂತೆ ಇನ್ನು ಹಲವಾರು ಪ್ರವಾಸಿ ತಾಣಗಳು ಪ್ರವಾಸಿಗರ ಕಣ್ಮನಸೆಳೆಯುವಂತಿವೆ.

ಚಳಿಗಾಲದಲ್ಲಿ ಜಿನುಗುವ ಮಂಜು ನೋಡುವುದೇ ಒಂದು ಮಜಾ. ಇನ್ನು ಮಳೆಗಾಲದಲ್ಲಿ ಎಲ್ಲಿ ನೋಡಿದರೂ ಅಲ್ಲಿ ಹಚ್ಚ ಹಸಿರಿನಿಂದ ಕೂಡಿರುತ್ತೆ. ಕಣ್ಣು ಹಾಯಿಸುವ ಕಡೆಗಳಲ್ಲಿ ವಿವಿಧ ಬಗೆಯ ಹೂವುಗಳು ಗಿಡಿ ಮರಗಳ ಪ್ರಕೃತಿ ಸೌಂದರ್ಯವನ್ನು ಸವಿಯಬಹುದು.

New rules for tourists visiting Mullayanagiri

Share

Leave a comment

Leave a Reply

Your email address will not be published. Required fields are marked *

Don't Miss

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ನೀಡಿದ್ದು, ೮೧ ಸಾವಿರ ರೂ.ಗಳ ದಂಡ...

ಹುಬ್ಬಳ್ಳಿ-ಚಿಕ್ಕಮಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆ ವಿಸ್ತರಣೆ

ಚಿಕ್ಕಮಗಳೂರು: ನೈಋತ್ಯ ರೈಲ್ವೆಯು ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ ಹುಬ್ಬಳ್ಳಿ ಮತ್ತು ಚಿಕ್ಕಮಗಳೂರು ನಡುವೆ ಚಲಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆಯನ್ನು ವಿಸ್ತರಿಸಲು ನಿರ್ಧರಿಸಿದೆ. ಈ ಹಿಂದೆ ಜೂನ್ 21,...

Related Articles

ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

ಚಿಕ್ಕಮಗಳೂರು: RVR ಹೆಲ್ತ್ ಕೇರ್ ವತಿಯಿಂದ, ಶ್ರೀ ವಿಜಯ್ ಎಂ.ಎನ್. ಶೆಟ್ಟಿ ಹಾಗೂ ಡಾ. (ಪ್ರೊ). ರಾಘವೇಂದ್ರ...

ಧುಮ್ಮಿಕ್ಕಿ ಹರಿಯುತ್ತಿರುವ ಹೆಬ್ಬೆ ಫಾಲ್ಸ್‌

ಚಿಕ್ಕಮಗಳೂರು: ಕಾಫಿನಾಡಿನ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಮಳೆ (Rain) ಅಬ್ಬರ ಜೋರಾಗಿದ್ದು, ತರೀಕೆರೆ (Tarikere) ತಾಲೂಕಿನಲ್ಲಿರುವ ಹೆಬ್ಬೆ...

ಶ್ರೀಈಶ್ವರ-ಚೌಡೇಶ್ವರಿ ದೇವಾಲಯಗಳಲ್ಲಿ ಆಭರಣ ಕಳವು

ಕಡೂರು: ತಾಲ್ಲೂಕಿನ ಸಿಂಗಟಗೆರೆ ಸಮೀಪದ ಎಸ್.ಡಿ. ಕೊಪ್ಪಲು ಗ್ರಾಮದ ಶ್ರೀಈಶ್ವರ ಹಾಗೂ ಚೌಡೇಶ್ವರಿ ದೇವಾಲಯಗಳಲ್ಲಿ ದೇವರ...

ತರೀಕೆರೆಯ ಗೋಪಿಕೃಷ್ಣಗೆ ಎಂಎಲ್ ಸಿ ಸ್ಥಾನ ನೀಡಬೇಕು

ಚಿಕ್ಕಮಗಳೂರು: ಅಹಿಂದ ಪರವಾಗಿ ಮಾತಾಡುವ ಕಾಂಗ್ರೆಸ್ ಪಕ್ಷ ಮಡಿವಾಳ ಸಮುದಾಯದ ಮುಖಂಡರಿಗೆ ರಾಜಕೀಯ ಪ್ರಾತಿನಿಧ್ಯ ನೀಡುತ್ತಿಲ್ಲ....