Home namma chikmagalur ಚಾರ್ಮಾಡಿ ಘಾಟ್ ನಲ್ಲಿ ವಾಹನಗಳ ಸಂಚಾರಕ್ಕೆ ಹೊಸ ನಿಯಮ
namma chikmagalurchikamagalurHomeLatest News

ಚಾರ್ಮಾಡಿ ಘಾಟ್ ನಲ್ಲಿ ವಾಹನಗಳ ಸಂಚಾರಕ್ಕೆ ಹೊಸ ನಿಯಮ

Share
Share

ಚಿಕ್ಕಮಗಳೂರು:  ಕಾಫಿನಾಡು ಕರಾವಳಿಯನ್ನು ಸಂಪರ್ಕಿಸುವ ಪ್ರಮುಖ ಕೊಂಡಿಯಾಗಿರುವ ಚಾರ್ಮಾಡಿ ಘಾಟ್ ನಲ್ಲಿ ರಾತ್ರಿ ವೇಳೆ ಸಂಚರಿಸುವ ವಾಹನಗಳಿಗೆ ಇನ್ಮುಂದೆ ಹೊಸ ನಿಯಮಗಳು ಜಾರಿಯಾಗಲಿದೆ. ರಾತ್ರಿ ವೇಳೆಯಲ್ಲಿ ಚೆಕ್ ಪೋಸ್ಟ್ ಮೂಲಕ ಸಾಗುವ ಎಲ್ಲಾ ವಾಹನಗಳನ್ನು ಕಡ್ಡಾಯವಾಗಿ ತಪಾಸಣೆ ಮಾಡಿ ಸಂಚರಿಸುವ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತದೆ

ಚಾರ್ಮಾಡಿ ಘಾಟ್ ನಲ್ಲಿ ರಾತ್ರಿ ವೇಳೆ ಗೋ ಕಳ್ಳತನ ಹಾಗೂ ಅಪರಾಧ ಚಟುವಟಿಕೆಗಳು ನಡೆಯುತ್ತಿವೆ ಅನ್ನೋ ಆರೋಪ ಕೇಳಿ ಬರುತ್ತದೆ ಹೀಗಾಗಿ ಇದಕ್ಕೆ ಬ್ರೇಕ್ ಹಾಕಲು ಪೊಲೀಸರು ಹೊಸ ನಿಯಮ ಜಾರಿಗೆ ತರಲು ಮುಂದಾಗಿದ್ದಾರೆ. ರಾತ್ರಿ ವೇಳೆ ವಾಹನಗಳು ಕೊಟ್ಟಿಗೆಹಾರ ಚೆಕ್ ಪೋಸ್ಟ್ ದಾಟಬೇಕೆಂದರೆ ಸಂಪೂರ್ಣ ತಪಾಸಣೆಗೊಂಡು ಐದು ವಾಹನಗಳು ಒಟ್ಟಾಗಿ ತೆರಳುವಂತೆ ನಿಯಮ ರೂಪಿಸಲಾಗಿದೆ

ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ ಈಗಿರುವ ಬ್ಯಾರಿಕೇಡ್ ಬದಲಾಗಿ ಹೊಸ ಭೂಮ್ ಬ್ಯಾರಿಯರ್ ನಿರ್ಮಿಸಿ ರಾತ್ರಿ ವೇಳೆ ಓರ್ವ ಪಿಎಸ್‌ಐ ನೇತೃತ್ವದಲ್ಲಿ ಪೊಲೀಸರು ಕರ್ತವ್ಯ ನಿರ್ವಹಿಸಲಿದ್ದಾರೆ. ಒಂದೂವರೆ ಕಿಲೀ ಮೀಟ‌ರ್ ರಸ್ತೆಯನ್ನು ಗೋಕಳ್ಳರು ದುರುಪಯೋಗ ಮಾಡುತ್ತಿದ್ದು ಅನ್ನೋ ದೂರುಗಳಿದ್ದವು ಅಲ್ಲಿ ಕೆಲವು ಮನೆಗಳಿದ್ದು ಸ್ಥಳೀಯರ ಜೊತೆ ಮಾತುಕತೆ ನಡೆಸಿ ಆ ರಸ್ತೆಯಲ್ಲಿ ಗೇಟ್ ನಿರ್ಮಿಸಲು ನಿರ್ಧರಿಸಲಾಗಿದೆ. ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆವರೆಗೆ ಈ ಗೇಟ್ ಕ್ಲೋಸ್ ಮಾಡಲು ನಿರ್ಧರಿಸಲಾಗಿದೆ.

ಗೋ ಕಳ್ಳತನ ಸೇರಿದಂತೆ ಅಪರಾಧ ಕೃತ್ಯಗಳನ್ನು ತಡೆಯಲು ಎಸ್ ಪಿ ವಿಕ್ರಂ ಅಮಟೆ ಮಾಸ್ಟರ್ ಪ್ಲಾನ್ ರೂಪಿಸಿದ್ದಾರೆ. ಹೊಸ ನಿಯಮಗಳಿಂದ ಅಪರಾಧ ಕೃತ್ಯಗಳು ಹಾಗೂ ಗೋಕಳ್ಳತನ ನಡೆಸುತ್ತಿದ್ದರು ವಾಹನಗಳ ಎಲ್ಲಾ ವಿವರಗಳು ಸಿಸಿಟಿವಿಯಲ್ಲಿ ಹಾಗೂ ಪೊಲೀಸರ ಪುಸ್ತಕದಲ್ಲಿ ದಾಖಲಾಗಿದ್ದು ಈ ಹೊಸ ನಿಯಮಗಳ ಕುರಿತು ಸಾರ್ವಜನಿಕರು ಮೆಚ್ಚುಗೆ ಸೂಚಿಸಿದ್ದಾರೆ.

New rules for vehicle traffic at Charmadi Ghat

Share

Leave a comment

Leave a Reply

Your email address will not be published. Required fields are marked *

Don't Miss

ದನದ ಮಾಂಸ ಮಾರಾಟದಲ್ಲಿ 40 ಕೆ.ಜಿ ಮಾಂಸ, ಕತ್ತಿ–ಚಾಕುಗಳು ಜಪ್ತಿ

ಚಿಕ್ಕಮಗಳೂರು: ನಗರದ ಅಯ್ಯಪ್ಪನಗರದ ಸಮೀಪದ ಶೆಡ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಗರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ.9ರಂದು ಮಧ್ಯಾಹ್ನ...

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ ಸಾಧನೆ ಯೋಗ ಮಾಡುವವರಿಗೆ ಒಂದು ಪ್ರೇರಣೆ ಕೊಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ.ರವಿ...

Related Articles

ಕೇಬಲ್ ಕಳ್ಳರೆಂದು ಶಂಕಿಸಿ ಮೂವರ ಮೇಲೆ ಹಲ್ಲೆ

ಕಡೂರು: ಪಂಪ್‌ಸೆಟ್‌ ಮೋಟಾರ್‌ ಕೇಬಲ್‌ ಕಳ್ಳರೆಂದು ಅನುಮಾನಿಸಿ ಮೂವರು ಯುವಕರ ಮೇಲೆ ಗುಂಪೊಂದು ಗಂಭೀರವಾಗಿ ಹಲ್ಲೆ...

₹5 ಲಕ್ಷ ಮೌಲ್ಯದ ಶ್ರೀಗಂಧದ ಮರಗಳ ಕಳವು

ತರೀಕೆರೆ: ಕೃಷಿ ತೋಟಕ್ಕೆ ನುಗ್ಗಿದ ಕಳ್ಳರು ಸುಮಾರು 15 ಶ್ರೀಗಂಧದ ಮರಗಳನ್ನು ಕಡಿದು ಕಳವು ಮಾಡಿಕೊಂಡು...

ಸ್ಕೂಟರ್‌ ಅಪಘಾತ: ಚಿಕಿತ್ಸೆ ಫಲಿಸದೆ ಸಾವು

ಕಡೂರು: ರಸ್ತೆಯಲ್ಲಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸ್ಕೂಟರ್‌ ನಿಯಂತ್ರಣ ತಪ್ಪಿ ಬಿದ್ದು...

ಧ್ವಜಾರೋಹಣದ ಕೆಲವೇ ಗಂಟೆಗಳಲ್ಲಿ ಕೆಳಗಿಳಿಸಿದ ರಾಷ್ಟ್ರಧ್ವಜ …?

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದೇ ಚಿಕ್ಕಮಗಳೂರಿನಲ್ಲಿ ರಾಷ್ಟ್ರಧ್ವಜಕ್ಕೆ ಸಂಬಂಧಿಸಿದಂತೆ ವಿವಾದವೊಂದು ಭುಗಿಲೆದ್ದಿದ್ದು, ಕರ್ನಾಟಕ ರಾಜ್ಯ ರೈತ ಸಂಘದ...