Home namma chikmagalur chikamagalur ನವವಿವಾಹಿತ ರಸ್ತೆ ಅಪಘಾತದಲ್ಲಿ ಸಾವು
chikamagalurCrime NewsHomeLatest Newsnamma chikmagalur

ನವವಿವಾಹಿತ ರಸ್ತೆ ಅಪಘಾತದಲ್ಲಿ ಸಾವು

Share
Share

ಚಿಕ್ಕಮಗಳೂರು: ಸರ್ಕಾರಿ ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ, ಐದು ದಿನಗಳ ಹಿಂದಷ್ಟೇ ವಿವಾಹವಾಗಿದ್ದ ನವವಿವಾಹಿತ ಬೈಕ್ ಸವಾರ ಮೃತಪಟ್ಟಿರುವ ದಾರುಣ ಘಟನೆ ಶೃಂಗೇರಿ ತಾಲೂಕಿನ ಮೆಣಸೆ ಸಮೀಪ ನಡೆದಿದೆ.

ಶೃಂಗೇರಿ ತಾಲೂಕಿನ ಕುಂಚೇಬೈಲು ನಿವಾಸಿ ನಾಗರಾಜ್ (32) ಮೃತಪಟ್ಟ ದುರ್ದೈವಿ. ಪೇಂಟಿಂಗ್ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ನಾಗರಾಜ್ ಅವರ ವಿವಾಹ ಐದು ದಿನಗಳ ಹಿಂದಷ್ಟೇ ನಡೆದಿತ್ತು ಎನ್ನಲಾಗಿದೆ. ನವಜೀವನ ಆರಂಭಿಸುವ ಮುನ್ನವೇ ಸಂಭವಿಸಿದ ಈ ದುರಂತ ಕುಟುಂಬಸ್ಥರು ಹಾಗೂ ಬಂಧುಗಳನ್ನು ಶೋಕಸಾಗರದಲ್ಲಿ ಮುಳುಗಿಸಿದೆ.

ಜಯಪುರದಿಂದ ಶೃಂಗೇರಿಯತ್ತ ತೆರಳುತ್ತಿದ್ದ ಸರ್ಕಾರಿ ಬಸ್ ಹಾಗೂ ನಾಗರಾಜ್ ಅವರು ಚಲಾಯಿಸುತ್ತಿದ್ದ ಬೈಕ್ ನಡುವೆ ಮೆಣಸೆ ಸಮೀಪ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಬೈಕ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ಬೆಂಕಿ ಬೈಕ್ ಸವಾರನಿಗೂ ವ್ಯಾಪಿಸಿದೆ ಎನ್ನಲಾಗಿದೆ. ಪರಿಣಾಮ ನಾಗರಾಜ್ ಅವರು ಗಂಭೀರವಾಗಿ ಸುಟ್ಟು ಮೃತಪಟ್ಟಿದ್ದಾರೆ.

ಅಪಘಾತದ ಬಳಿಕ ಸರ್ಕಾರಿ ಬಸ್ ರಸ್ತೆ ಬದಿಯ ಕಂದಕಕ್ಕೆ ಇಳಿದಿದೆ. ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಘಟನೆ ಕುರಿತು ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Newlywed dies in road accident

Share

Leave a comment

Leave a Reply

Your email address will not be published. Required fields are marked *

Don't Miss

ಜಾನಪದ ಅಕಾಡೆಮಿ ವಾರ್ಷಿಕ ಗೌರವ ಪ್ರಶಸ್ತಿಗೆ ಅಂಧ ಕಲಾವಿದ ಡಿ.ರಾಮಪ್ಪ ಆಯ್ಕೆ

ಕಡೂರು: ಕರ್ನಾಟಕ ಜಾನಪದ ಅಕಾಡೆಮಿಯ 2026-27ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿಗೆ ಕಡೂರು ತಾಲ್ಲೂಕು ಬೀರೂರು ಹೋಬಳಿ ಬಿಸಿಲೆರೆ ಸಮೀಪದ ಅರೇಹಳ್ಳಿ ಗ್ರಾಮದ ಅಂಧ ಕಲಾವಿದ ಡಿ.ರಾಮಪ್ಪ ಆಯ್ಕೆಯಾಗಿದ್ದಾರೆ. ಹುಟ್ಟಿನಿಂದಲೇ ಅಂಧರಾಗಿದ್ದರು...

ಶೇರು ಮಾರುಕಟ್ಟೆ ವಹಿವಾಟು ನಡೆಸುತ್ತಿದ್ದ ಯವಕ ಆತ್ಮಹತ್ಯೆ

ಚಿಕ್ಕಮಗಳೂರು: ಶೇರು ಮಾರುಕಟ್ಟೆ ವಹಿವಾಟು ನಡೆಸುತ್ತಿದ್ದ ಯುವಕನೊಬ್ಬ ತನ್ನ ಕೊಠಡಿಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಅನುಮಾನಾಸ್ಪದವಾಗಿ ಸಾವಿಗೆ ಶರಣಾಗಿರುವ ದುರ್ಘಟನೆ ಬೆಳಕಿಗೆ ಬಂದಿದೆ. ಸ್ಥಳೀಯ ನಿವಾಸಿ ಸಿ.ಎಸ್. ಯೋಗೀಶ್ ಮೃತ ದುರ್ದೈವಿ....

Related Articles

ಮಕ್ಕಳ ಲೈಂಗಿಕ ಶೋಷಣೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆ – ಪ್ರಕರಣ ದಾಖಲು

ಚಿಕ್ಕಮಗಳೂರು: ಅಪ್ರಾಪ್ತ ವಯಸ್ಸಿನ ಮಗು ಮತ್ತು ವಯಸ್ಕರು ಲೈಂಗಿಕ ಕ್ರಿಯೆಯಲ್ಲಿ ತೊಡಗಿರುವುದನ್ನು ತೋರಿಸುವ ವಿಡಿಯೋವನ್ನು ಸಾಮಾಜಿಕ...

ಹಿಟ್‌ ಆ್ಯಂಡ್‌ ರನ್‌-ಸವಾರ ಸಾವು

ಕಡೂರು: ಹಿಂಬದಿಯಿಂದ ಬಂದ ಅಪರಿಚಿತ ಗೂಡ್ಸ್ ವಾಹನದ ಚಾಲಕನೊಬ್ಬ ಅತಿವೇಗ ಹಾಗೂ ಅಜಾಗರೂಕತೆಯಿಂದ ವಾಹನ ಚಲಾಯಿಸಿ...

ಚಿಕ್ಕಮಗಳೂರಿನಲ್ಲಿ ಕ್ರೈಸ್ತ ಸಮುದಾಯದ ಬೃಹತ್ ಫಲಾನುಭವಿ ಸಮಾವೇಶ

ಚಿಕ್ಕಮಗಳೂರು: ಕರ್ನಾಟಕ ಕ್ರೈಸ್ತ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ಅಕ್ಟೋಬರ್ 28ರಂದು ಚಿಕ್ಕಮಗಳೂರು ನಗರದಲ್ಲಿ ಕ್ರೈಸ್ತ...

ಜಿಲ್ಲೆಯಲ್ಲಿ ಮತದಾರರ ಅಂತಿಮ ಪಟ್ಟಿಯಿಂದ 85,769 ಹೆಸರು ಹೊರಕ್ಕೆ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಪೂರ್ಣಗೊಂಡಿದ್ದು, ಮತದಾರರ ಅಂತಿಮ ಪಟ್ಟಿಯನ್ನು ಮಂಗಳವಾರ...