Home namma chikmagalur chikamagalur ಗ್ಯಾಸ್ ಏಜೆನ್ಸಿ-ಗೋದಾಮಿನಿಂದ ಸಿಲಿಂಡರ್ ವಿತರಣೆ ಇಲ್ಲ
chikamagalurHomeLatest Newsnamma chikmagalur

ಗ್ಯಾಸ್ ಏಜೆನ್ಸಿ-ಗೋದಾಮಿನಿಂದ ಸಿಲಿಂಡರ್ ವಿತರಣೆ ಇಲ್ಲ

Share
Share

ಚಿಕ್ಕಮಗಳೂರು:  ಗೃಹಬಳಕೆ ಎಲ್‌ಪಿಜಿ ಸಿಲಿಂಡರ್‌ಗಳನ್ನು ಎಂದಿನಂತೆ ಜೇಷ್ಠತೆ ಆಧಾರದ ಮೇಲೆ ಗ್ರಾಹಕರ ಮನೆಗಳಿಗೆ ಸಂಬಂಧಿಸಿದ ಗ್ಯಾಸ್ ಏಜೆನ್ಸಿಗಳ ಮೂಲಕ ತಲುಪಿಸಲಾಗುತ್ತಿದ್ದು, ಗ್ರಾಹಕರು ಆತಂಕಪಡುವ ಅಗತ್ಯವಿಲ್ಲ. ಈ ಹಿನ್ನೆಲೆಯಲ್ಲಿ ಗ್ರಾಹಕರು ಗ್ಯಾಸ್ ಏಜೆನ್ಸಿಯ ಕಚೆರಿ, ಗೋದಾಮುಗಳಿಗೆ ಸಿಲಿಂಡರ್ ಪಡೆಯಲು ಹೋಗಬಾರದೆಂದು ಕೋರಲಾಗಿದೆ.

ಗ್ರಾಹಕರ ಸುರಕ್ಷತೆ ಹಾಗೂ ಎಲ್.ಪಿ.ಜಿ. ಸಿಲಿಂಡರ್ ಸುಗಮ ವಿತರಣೆ ದೃಷ್ಟಿಯಿಂದ ಯಾವುದೇ ಕಾರಣಕ್ಕೂ ಗ್ಯಾಸ್ ಏಜೆನ್ಸಿ ಗೋದಾಮುಗಳಲ್ಲಿ ಗ್ರಾಹಕರಿಗೆ ಸಿಲಿಂಡರ್ ವಿತರಿಸದಂತೆ ಜಿಲ್ಲೆಯ ಎಲ್ಲಾ ಗ್ಯಾಸ್ ಏಜೆನ್ಸಿ ಮಾಲೀಕರಿಗೆ ಕಟ್ಟುನಿಟ್ಟಾಗಿ ಸೂಚಿಸಲಾಗಿದೆ.

ಗ್ರಾಹಕರು ಮನೆ ಬಳಿಯೇ ಸಿಲಿಂಡರ್ ಪಡೆದು ಎಲ್.ಪಿ.ಜಿ.ಯನ್ನು ಮಿತವಾಗಿ ಬಳಸುವ ಮೂಲಕ ಸಹಕರಿಸಬೇಕೆಂದು ಜಿಲ್ಲಾ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕರು ಕೋರಿದ್ದಾರೆ.

ಎಲ್ಲಾ  ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ. ಅಲ್ಲದೇ ವಿಶೇಷವಾಗಿ ಆಟೋ ಎಲ್.ಪಿ.ಜಿ.ಗೆ ಯಾವುದೇ ರೀತಿಯ ಕೊರತೆ ಇಲ್ಲ ಎಂದು ರಾಜ್ಯ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಎಲ್‌ಪಿಜಿ ಸರಬರಾಜು ವ್ಯವಸ್ಥೆಯನ್ನು, ವಿಶೇಷವಾಗಿ ಆಟೋ ಎಲ್‌ಪಿಜಿ ಪೂರೈಕೆಯನ್ನು ರಾಜ್ಯ ಸರ್ಕಾರವು ನಿಕಟವಾಗಿ ಗಮನಿಸುತ್ತಿದೆ.  ಕರ್ನಾಟಕದಾದ್ಯಂತ ಒಟ್ಟು ೭೨ ಆಟೋ ಎಲ್‌ಪಿಜಿ ಡಿಸ್ಪೆನ್ಸಿಂಗ್ ಸ್ಟೇಷನ್‌ಗಳು ಕಾರ್ಯ ನಿರ್ವಹಿಸುತ್ತಿವೆ. ಇವುಗಳಲ್ಲಿ ಕೇವಲ ಬೆಂಗಳೂರು ನಗರವೊಂದರಲ್ಲೇ ೩೧ ಕೇಂದ್ರಗಳು ಲಭ್ಯವಿವೆ.

ಸಾರ್ವಜನಿಕ ವಲಯದ ಪ್ರಮುಖ ತೈಲ ಮಾರಾಟ ಕಂಪನಿಗಳಾದ (ಒಎಂಸಿಎಸ್) ಐಒಸಿಎಲ್, ಬಿಪಿಸಿಎಲ್ ಮತ್ತು ಹೆಚ್‌ಪಿಸಿಎಲ್ ಮೂಲಕ ಆಟೋ ಎಲ್‌ಪಿಜಿ ಸರಬರಾಜು ಮಾಡಲಾಗುತ್ತಿದೆ. ಪ್ರಸ್ತುತ ಈ ಸಂಸ್ಥೆಗಳು ಪ್ರತಿ ಲೀಟರ್‌ಗೆ ರೂ. ೭೭.೭೪ ರ ದರದಲ್ಲಿ ಆಟೋ ಎಲ್‌ಪಿಜಿ ಪೂರೈಸುತ್ತಿವೆ.

ಕಳೆದ ವಾರದಲ್ಲಿ ದಿನಕ್ಕೆ ಸರಾಸರಿ ೬೪.೯ ಮೆಟ್ರಿಕ್ ಟನ್ ಆಟೋ ಎಲ್‌ಪಿಜಿಯನ್ನು ವಿತರಿಸಲಾಗಿದೆ. ಸಂಘರ್ಷದ ಮೊದಲು ಈ ಪ್ರಮಾಣವು  ದಿನಕ್ಕೆ ೫೭.೬ ಮೆಟ್ರಿಕ್ ಟನ್ ಇತ್ತು. ಇದು ಪೂರೈಕೆಯಲ್ಲಿನ ಗಮನಾರ್ಹ ಹೆಚ್ಚಳವನ್ನು ತೋರಿಸುತ್ತದೆ.

ರಾಜ್ಯದಾದ್ಯಂತ ಪ್ರತಿದಿನ ಸುಮಾರು ೪ ಲಕ್ಷ ಗೃಹ ಬಳಕೆ ಎಲ್‌ಪಿಜಿ ಸಿಲಿಂಡರ್‌ಗಳು ಹಾಗೂ ಸುಮಾರು ೧೮,೦೦೦ ವಾಣಿಜ್ಯ ಬಳಕೆ ಸಿಲಿಂಡರ್‌ಗಳನ್ನು ಪೂರೈಕೆ ಮಾಡಲಾಗುತ್ತಿದೆ. ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆಯಿಲ್ಲದೆ ಎಲ್‌ಪಿಜಿ ಸರಬರಾಜು ಆಗುವುದನ್ನು ಖಚಿತಪಡಿಸಿಕೊಳ್ಳಲು ರಾಜ್ಯ ಸರ್ಕಾರವು ನಿರಂತರವಾಗಿ ಪರಿಸ್ಥಿತಿಯ ಮೇಲೆ ನಿಗಾ ಇರಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

No cylinder delivery from gas agency-warehouse

Share

Leave a comment

Leave a Reply

Your email address will not be published. Required fields are marked *

Don't Miss

ಸರ್ಕಾರಿ ಶಾಲೆಗಳ ವಿಲೀನ ವಿರೋಧಿಸಿ ಪ್ರತಿಭಟನೆ

ಚಿಕ್ಕಮಗಳೂರು: ತಾಲೂಕಿನ ಅಣೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಸರಿಕೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯನ್ನು ಮೈಲಿಮನೆ ಕೆಪಿಎಸ್ ಮ್ಯಾಗ್ನೆಟ್ ಶಾಲೆಗೆ ವಿಲೀನಗೊಳಿಸುವುದನ್ನು ವಿರೋಧಿಸಿ ಬುಧವಾರ ಎಐಡಿಎಸ್‌ಓ ವಿದ್ಯಾರ್ಥಿ ಸಂಘಟನೆಯ ನೇತೃತ್ವದಲ್ಲಿ ಕೆಸರಿಕೆಯ...

ಕಾರ್ಮಿಕರಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸುವಂತೆ ಆಗ್ರಹಿಸಿ ಧರಣಿ

ಚಿಕ್ಕಮಗಳೂರು:  ಕಾರ್ಮಿಕರಿಗೆ ಆಗುತ್ತಿರುವ ಅನ್ಯಾಯ ಮತ್ತು ಕಾರ್ಮಿಕ ಕಲ್ಯಾಣ ಮಂಡಳಿಗೆ ಮಾಡುತ್ತಿರುವ ದ್ರೋಹವನ್ನು ಸರಿಪಡಿಸುವಂತೆ ಆಗ್ರಹಿಸಿ ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘದ ವತಿಯಿಂದ ನಗರದ ಆಜಾದ್‌ಪಾರ್ಕ್ ವೃತ್ತದಲ್ಲಿ ಬುಧವಾರ ಕಾರ್ಮಿಕರು ಪ್ರತಿಭಟನೆ...

Related Articles

ಮತಾಂತರಕ್ಕೆ ಪ್ರಚೋದನೆ ನೀಡುತ್ತಿದ್ದವರ ಬಂಧನ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮತಾಂತರದ ಭೂತ ಮತ್ತೆ ದರ್ಶನ ನೀಡಿದೆ. ವಾರದ ಸಂತೆಯಲ್ಲಿ ವ್ಯಾಪಾರಕ್ಕೆ ಬಂದಿದ್ದ...

ಏ.2ಕ್ಕೆ ಕಡೂರಿನಲ್ಲಿ ದೇವರದಾಸಿಮಯ್ಯ ಜಯಂತಿ

ಚಿಕ್ಕಮಗಳೂರು: ಜಿಲ್ಲಾ ಮಟ್ಟದ ೧೦೪೬ನೇ ಶ್ರೀ ದೇವರ ದಾಸಿಮಯ್ಯನವರ ಜಯಂತಿ ಮತ್ತು ದೇವಾಂಗ ಜನಜಾಗೃತಿ ಹಾಗೂ...

ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಉಳಿಸುವಂತೆ ಆಗ್ರಹಿಸಿ ಧರಣಿ

ಚಿಕ್ಕಮಗಳುರು: ಸರ್ಕಾರಿ ಶಾಲೆಗಳನ್ನು ಮುಚ್ಚುವ ಮೂಲಕ ಬಡ, ರೈತ, ಕೂಲಿ ಕಾರ್ಮಿಕ ಮಕ್ಕಳನ್ನು ಶಿಕ್ಷಣದಿಂದ ವಂಚಿಸಲಾಗುತ್ತಿದೆ...

ಸಾರ್ವಜನಿಕರು ಸ್ವಯಂ ಗಣತಿಯಲ್ಲಿ ಭಾಗವಹಿಸಲು ಅವಕಾಶ

ಚಿಕ್ಕಮಗಳೂರು: ಜನಗಣತಿಯು ದೇಶದ ಜನಸಂಖ್ಯೆಯ ಗಣತಿಯ ಜೊತೆಗೆ ದೇಶದ ಸಾಮಾಜಿಕ, ಆರ್ಥಿಕ ಸ್ಥಿತಿಗತಿಗಳು ಮತ್ತು ಸಾಂಸ್ಕೃತಿಕ...