Home namma chikmagalur chikamagalur ರೈತ ಸಂಘದ ಆಂತರಿಕ ವಿಚಾರದ ಹಸ್ತಕ್ಷೇಪ ಸಹಿಸುವುದಿಲ್ಲ
chikamagalurHomeLatest Newsnamma chikmagalur

ರೈತ ಸಂಘದ ಆಂತರಿಕ ವಿಚಾರದ ಹಸ್ತಕ್ಷೇಪ ಸಹಿಸುವುದಿಲ್ಲ

Share
Share

ಚಿಕ್ಕಮಗಳೂರು: ಕರ್ನಾಟಕ ರಾಜ್ಯ ರೈತ ಸಂಘದ ಆಂತರಿಕ ವಿಚಾರದಲ್ಲಿ ಬಾಹ್ಯ ವ್ಯಕ್ತಿಗಳ ಹಸ್ತಕ್ಷೇಪವನ್ನು ಸಂಘಟನೆ ಸಹಿಸುವುದಿಲ್ಲ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಮಾಜಿ ಅಧ್ಯಕ್ಷ ಗುರುಶಾಂತಪ್ಪ ಎಚ್ಚರಿಸಿದ್ದಾರೆ.

ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರೈತ ಸಂಘದ ತಾಲೂಕು ಅಧ್ಯಕ್ಷರಾಗಿದ್ದ ಸುನಿಲ್‌ಕುಮಾರ್ ಅವರನ್ನು ಉಚ್ಛಾಟನೆ ಮಾಡಿರುವ ಬಗ್ಗೆ ತುಳಸೇಗೌಡ ಮತ್ತು ದಯಾಕರ ಎಂಬುವರು ಹೇಳಿಕೆ ನೀಡಿದ್ದಾರೆ. ಮೂಲತಃ ಅವರು ರೈತ ಸಂಘದ ಸದಸ್ಯರೇ ಅಲ್ಲ. ತುಳಸೇಗೌಡ ಯಾವ ಸಂಘಟನೆಯಲ್ಲೂ ಇಲ್ಲದ ವ್ಯಕ್ತಿ, ದಯಾಕರ ರೈತ ಸಂಘ ಗ್ರೀನ್ ಬ್ರಿಗೇಡ್ ಅಧ್ಯಕ್ಷ ಎಂದು ಹೇಳಿಕೊಂಡು ಸ್ವ-ಹಿತಾಸಕ್ತಿಗೋಸ್ಕರ ಹಸಿರು ಶಾಲು ಹಾಕಿಕೊಂಡು ಓಡಾಡುವ ವ್ಯಕ್ತಿಗಳಾಗಿದ್ದಾರೆಂದು ಆರೋಪಿಸಿದರು.

ಸೈದ್ಧಾಂತಿಕ ಮತ್ತು ಜಾತ್ಯಾತೀತ ವಿಚಾರಗಳಿಗೆ ಬದ್ಧರಾಗಿ ರೈತಪರ ಚಳುವಳಿಗಳಲ್ಲಿ ತೊಡಗಿಸಿಕೊಂಡು ಲಾಟಿಏಟು, ಜೈಲು ಶಿಕ್ಷೆ ಅನುಭವಿಸಿರುವ ಅನೇಕ ಕಾರ್ಯಕರ್ತರು ನಮ್ಮಲ್ಲಿದ್ದಾರೆ. ಇಂತಹ ಯಾವುದೇ ಹಿನ್ನೆಲೆ ಇರದ ಈ ಇಬ್ಬರು ವ್ಯಕ್ತಿಗಳು ಕರ್ನಾಟಕ ರಾಜ್ಯ ರೈತ ಸಂಘದ ಆಂತರಿಕ ವಿಚಾರದಲ್ಲಿ ಮೂಗು ತೂರಿಸಲು ಬರುತ್ತಿದ್ದಾರೆ. ಸುನಿಲ್‌ಕುಮಾರ್ ತಾಲೂಕು ಅಧ್ಯಕ್ಷರಾಗಿ ಮುಂದುವರಿಯುತ್ತಾರೆ ಎಂದು ಹೇಳಲು ಇವರಿಗೆ ಯಾವುದೇ ನೈತಿಕತೆ ಇಲ್ಲ ಎಂದು ಹೇಳಿದರು.

ಇತೀಚೆಗೆ ಕರ್ನಾಟಕ ರಾಜ್ಯ ರೈತ ಸಂಘ ತಾಲೂಕು ಸಮಿತಿಗೆ ಸ್ವಾಮೀಜಿಯೊಬ್ಬರನ್ನು ಸದಸ್ಯರನ್ನಾಗಿ ಮಾಡಿ ಅವರನ್ನು ತಾಲೂಕು ಸಲಹಾ ಸಮಿತಿಯ ಅಧ್ಯಕ್ಷರನ್ನಾಗಿ ಮಾಡುವುದಾಗಿ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವುದನ್ನು ರೈತ ಸಂಘ ಗಂಭೀರವಾಗಿ ಪರಿಗಣಿಸಿದೆ. ಇಂತಹ ಸ್ವಾಮೀಜಿಯಿಂದ ಸಲಹೆ ಪಡೆಯುವಷ್ಟು ರೈತ ಸಂಘ ದುರ್ಬಲವಾಗಿಲ್ಲ, ದಿವಾಳಿಯೂ ಆಗಿಲ್ಲ. ಇಂತಹ ಕುಚೋದ್ಯಗಳು ಮತ್ತೆ ಮುಂದುವರಿದರೆ ರೈತ ಸಂಘದ ಕಾರ್ಯಕರ್ತರೇ ಇಂತಹವರಿಗೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಎಚ್ಚರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಉಮೇಶ್, ರಾಜು, ಸಿದ್ದೇಗೌಡ, ವಿಜಯಕುಮಾರ್ ಮತ್ತಿತರರಿದ್ದರು.

No interference in the internal affairs of the farmers’ association will be tolerated.

Share

Leave a comment

Leave a Reply

Your email address will not be published. Required fields are marked *

Don't Miss

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುಮಾರು 67 ಸಾವಿರ ಫಲಾನುಭವಿಗಳ ಪಿಂಚಣಿ ಸ್ಥಗಿತಗೊಳಿಸಲಾಗಿದೆ ಎಂದು ವಿಧಾನಪರಿಷತ್ ಸದಸ್ಯ...

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ ಅನುಭವಿಸುತ್ತಿದ್ದು, ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಜಿಪಂ–ತಾಪಂ ಸದಸ್ಯ...

Related Articles

ಮಳೆಗಾಲದಲ್ಲಿ ಟಿಂಬರ್ ಸಾಗಣೆರಸ್ತೆಯಿಂದ ರಸ್ತೆ ಹಾಳು

ಕೊಪ್ಪ: ತಾಲೂಕಿನ ಅಸಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಮಳೆಗಾಲದಲ್ಲಿಯೇ ಟಿಂಬರ್‌ಗಳನ್ನು ಕಡಿದು ಸಾಗಿಸುತ್ತಿರುವುದರಿಂದ...

ನಗರಕ್ಕೆ ಎರಡು ದಿನಗಳ ಕಾಲ ಕುಡಿಯುವ ನೀರಿನ ಸರಬರಾಜು ಸ್ಥಗಿತ

ಚಿಕ್ಕಮಗಳೂರು: ನಗರದ ದಂಟರಮಕ್ಕಿ ವ್ಯಾಪ್ತಿಯಲ್ಲಿ 600 ಎಂಎಂ ಸಾಮರ್ಥ್ಯದ ಪ್ರಮುಖ ಕುಡಿಯುವ ನೀರಿನ ಕೊಳವೆ ಮಾರ್ಗ...

ಚಿಕ್ಕಮಗಳೂರು-ಯಶವಂತಪುರ ಎಕ್ಸ್‌ಪ್ರೆಸ್ ರೈಲು ಸಂಚಾರ ಸ್ಥಗಿತ…?

ಚಿಕ್ಕಮಗಳೂರು: ಮಲ್ಲಸಂದ್ರ ಮತ್ತು ಗುಬ್ಬಿ ರೈಲ್ವೆ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ ಗೇಟ್ (LC-48) ಬದಲಿಗೆ...

ಅಣ್ಣ-ತಮ್ಮಂದಿರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ತರೀಕೆರೆ: ಮನೆಯಲ್ಲಿ ಆಟವಾಡುತ್ತಿದ್ದ ಮಗುವಿನ ಕೆನ್ನೆ ಊದಿಕೊಂಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಕ್ಷುಲ್ಲಕ ಕಾರಣಕ್ಕೆ ಅಣ್ಣ-ತಮ್ಮಂದಿರ ನಡುವೆ...