Home namma chikmagalur ಅಮೃತಮಹಲ್ ಕಾವಲ್ ಪ್ರದೇಶದ ಒತ್ತುವರಿ ತೆರವಿಗೆ ಸೂಚನೆ
namma chikmagalurchikamagalurHomeLatest News

ಅಮೃತಮಹಲ್ ಕಾವಲ್ ಪ್ರದೇಶದ ಒತ್ತುವರಿ ತೆರವಿಗೆ ಸೂಚನೆ

Share
Share

ಚಿಕ್ಕಮಗಳೂರು: ಜಿಲ್ಲೆಯ ಅಮೃತಮಹಲ್ ಕಾವಲ್‌ನ ಒತ್ತುವರಿ ಪ್ರದೇಶದವನ್ನು ಕೂಡಲೇ ತೆರವುಗೊಳಿಸುವಂತೆ ಸರ್ಕಾರದ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ರಾಜೇಂದರ್ ಕುಮಾರ್ ಕಟಾರಿಯಾ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯತ್‌ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲೆಯ ಸಮಗ್ರ ಅಭಿವೃದ್ಧಿ ಕುರಿತ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಒತ್ತುವರಿಯಾಗಿರುವ ಭೂಪ್ರದೇಶವನ್ನು ತೆರವುಗೊಳಿಸುವಂತೆ ಹಿಂದಿನ ಸಭೆಯಲ್ಲಿ ಸೂಚಿಸಿದ್ದರೂ ಇದುವರೆಗೆ ಕ್ರಮ ಕೈಗೊಳ್ಳದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಕೂಡಲೇ ಜಂಟಿ ಸರ್ವೇ ನಡೆಸಿ ಒತ್ತುವರಿಯನ್ನು ತೆರವುಗೊಳಿಸಿ ಅಮೃತಮಹಲ್ ಕಾವಲ್ ಪ್ರದೇಶವನ್ನು ವಶಕ್ಕೆ ಪಡೆಯುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.

ಜಿಲ್ಲೆಯಲ್ಲಿ ೨೦೨೪-೨೫ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.೬೦ಕ್ಕಿಂತ ಕಡಿಮೆ ಫಲಿತಾಂಶ ಬಂದಿರುವ ಅನುದಾನಿತ ಶಾಲೆಗಳ ವಿರುದ್ಧ ಕ್ರಮ ಜರುಗಿಸುವಂತೆ ಸೂಚಿಸಲಾಗಿತ್ತು. ಈ ಬಗ್ಗೆ ಇದುವರೆಗೆ ಕ್ರಮ ಜರುಗಿಸದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಕೂಡಲೇ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಮಾಹಿತಿ ನೀಡಿ, ಶೇ.೬೦ಕ್ಕಿಂತ ಕಡಿಮೆ ಫಲಿತಾಂಶ ಬಂದಿರುವ ಜಿಲ್ಲೆಯ ಅನುದಾನಿತ ಶಾಲೆಗಳಿಗೆ ಕಾರಣ ಕೇಳಿ ನೋಟಿಸು ಜಾರಿ ಮಾಡಲಾಗಿದೆ ಮತ್ತು ಶೇ.೫೦ಕ್ಕಿಂತ ಕಡಿಮೆ ಫಲಿತಾಂಶ ಬಂದಿರುವ ೧೩ ಅನುದಾನಿತ ಪ್ರೌಢಶಾಲೆಗಳ ಮಾನ್ಯತೆಯನ್ನು ರದ್ದುಪಡಿಸುವ ಕುರಿತು ಆಡಳಿತ ಮಂಡಳಿಗೆ ನೋಟಿಸು ಜಾರಿ ಮಾಡಲಾಗಿದೆ. ೨೦೨೫-೨೬ನೇ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಬರಲು ೨೯ ಅಂಶಗಳ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಜಿಲ್ಲೆಯ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಮಾಹಿತಿ ನೀಡಿ, ಜಿಲ್ಲೆಯಲ್ಲಿ ಈ ಬಾರಿ ಜೂನ್‌ನಿಂದ ಇದುವರೆಗೆ ಆಗಿರುವ ಮಳೆ-ಗಾಳಿಯಿಂದ ಜಿಲ್ಲಾದ್ಯಂತ ೧೨೭೩ ವಿದ್ಯುತ್ ಕಂಬಗಳು ಧರೆಗುರುಳಿದ್ದು, ಮೆಸ್ಕಾಂಗೆ ೨೧೭.೫೧ ಲಕ್ಷ ರೂ. ನಷ್ಟ ಸಂಭವಿಸಿರುವುದಾಗಿ ತಿಳಿಸಿದ ಅವರು, ಹಾನಿಗೊಳಗಾದ ವಿದ್ಯುತ್ ಕಂಬಗಳನ್ನು ಬದಲಾಯಿಸುವ ಕಾರ್ಯ ತ್ವರಿತಗತಿಯಿಂದ ನಡೆದಿದ್ದು, ಚಿಕ್ಕಮಗಳೂರಲ್ಲಿ ೫೨೩, ಮೂಡಿಗೆರೆಯಲ್ಲಿ ೭೯, ಕಳಸ ೮೭, ಕಡೂರು ೨೨, ತರೀಕೆರೆ ೩೩, ಎನ್.ಆರ್.ಪುರ ೨೫೦, ಕೊಪ್ಪ ೧೪೫ ಹಾಗೂ ಶೃಂಗೇರಿಯಲ್ಲಿ ೯೭ ವಿದ್ಯುತ್ ಕಂಬಗಳನ್ನು ಬದಲಿಸಲಾಗಿದೆ ಎಂದರು.

ಜಿಲ್ಲೆಯಲ್ಲಿ ಒಟ್ಟು ೧೧.೪೯ ಕಿ.ಮೀ.ನಷ್ಟು ರಾಜ್ಯ ಹೆದ್ದಾರಿ ಹಾನಿ ಉಂಟಾಗಿದ್ದು, ೬.೧೫ ಕೋಟಿ ರೂ. ನಷ್ಟ ಸಂಭವಿಸಿದೆ. ೧೦.೯೭ ಕಿ.ಮೀ.ನಷ್ಟು ಜಿಲ್ಲಾ ಮುಖ್ಯ ರಸ್ತೆ ಹಾನಿಗೀಡಾಗಿ ೧೯೫೯ ಲಕ್ಷ ರೂ. ನಷ್ಟ ಸಂಭವಿಸಿದೆ. ಒಟ್ಟು ೧೬ ಸೇತುವೆಗಳು ಹಾನಿಗೊಳಗಾಗಿವೆ. ಒಟ್ಟಾರೆ ರಸ್ತೆ ಮತ್ತು ಸೇತುವೆ ಹಾನಿಯಿಂದಾಗಿ ೪೫೨೫ ಲಕ್ಷ ರೂ. ನಷ್ಟ ಸಂಭವಿಸಿದೆ ಎಂದು ತಿಳಿಸಿದರು.

ಜಿಲ್ಲೆಯ ೫೨೫.೩೬ ಕಿ.ಮೀ. ಗ್ರಾಮೀಣ ರಸ್ತೆಗಳು ಹಾನಿಯಾಗಿವೆ. ೨೭೮೮ ಲಕ್ಷ ರೂ. ನಷ್ಟ ಸಂಭವಿಸಿದೆ. ಗ್ರಾಮೀಣ ಭಾಗದಲ್ಲಿ ೨೮ ಸೇತುವೆ ಮತ್ತು ಕಲ್ವರ್ಟ್‌ಗಳು ಹಾನಿಗೀಡಾಗಿದ್ದು, ೪೪೦ ಲಕ್ಷ ರೂ. ನಷ್ಟವಾಗಿದೆ. ಇದೇ ಅವಧಿಯಲ್ಲಿ ಒಟ್ಟು ೧೧ ಸರ್ಕಾರಿ ಶಾಲಾ ಕಟ್ಟಡಗಳು ಮಳೆಯಿಂದ ಹಾನಿಗೀಡಾಗಿದ್ದು ೨೨ ಲಕ್ಷ ರೂ. ನಷ್ಟ ಸಂಭವಿಸಿದೆ. ಚಿಕ್ಕಮಗಳೂರು ತಾಲ್ಲೂಕಿನಲ್ಲಿ ಎರಡು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಹಾನಿಯಾಗಿ ೪ ಲಕ್ಷ ರೂ. ನಷ್ಟವಾಗಿದೆ. ಒಟ್ಟಾರೆ ಸರ್ಕಾರಿ ಕಟ್ಟಡಗಳ ಹಾನಿಯಿಂದ ೨೬ ಲಕ್ಷ ರೂ. ನಷ್ಟವುಂಟಾಗಿದೆ ಎಂದರು.

ಜಿಲ್ಲೆಯಲ್ಲಿ ಮಳೆಯಿಂದಾಗಿ ಜೂನ್‌ನಿಂದ ಈವರೆಗೆ ಒಟ್ಟು ೩೮ ಮನೆಗಳಿಗೆ ಹಾನಿಯಾಗಿವೆ. ಈ ಪೈಕಿ ೯ ಮನೆಗಳು ಪೂರ್ಣ ಪ್ರಮಾಣದಲ್ಲಿ ಹಾನಿಗೊಳಗಾಗಿದ್ದು, ೮ ಮನೆಗಳಿಗೆ ಪರಿಹಾರ ನೀಡಲಾಗಿದೆ. ಉಳಿದಂತೆ ೧೬ ಮನೆಗಳಿಗೆ ಪರಿಹಾರ ನೀಡುವುದು ಬಾಕಿ ಉಳಿದಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಚ್.ಎಸ್.ಕೀರ್ತನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಮ್ ಅಮಟೆ, ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ, ಉಪವಿಭಾಗಾಧಿಕಾರಿಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

Notice to clear encroachment in Amritmahal Kaval area

Share

Leave a comment

Leave a Reply

Your email address will not be published. Required fields are marked *

Don't Miss

ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿದ ರೈತರ ಸ್ಥಿತಿ ಅವಲೋಕಿಸಿದ ಸಚಿವ ಜಾರ್ಜ್

ಚಿಕ್ಕಮಗಳೂರು: ಸಕಾಲದಲ್ಲಿ ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿರುವ ರೈತರು, ಒಣಗಿ ನಿಂತಿರುವ ಭೂಮಿ, ಮಳೆಯ ನಿರೀಕ್ಷೆಯಲ್ಲಿ ಬಿತ್ತನೆ ಮಾಡಿದ್ದ ಬೀಜಗಳು ಮೊಳಕೆ ಒಡೆಯದೆ ಬಿಸಿಲಿನ ಝಳಕ್ಕೆ ಸಿಲುಕಿ ಸುಟ್ಟುಹೋಗಿರುವುದನ್ನು ಜಿಲ್ಲಾ ಉಸ್ತುವಾರಿ ಸಚಿವ...

ಸಚಿವ ಕೆ.ಜೆ. ಜಾರ್ಜ್ ಬೆಂಗಾವಲು ವಾಹನ ಅಪಘಾತ

ಚಿಕ್ಕಮಗಳೂರು : ಅಜ್ಜಂಪುರ ಜಿಲ್ಲೆಯ ಬಯಲುಸೀಮೆ ಪ್ರದೇಶಗಳಲ್ಲಿ ಬರ ಪರಿಸ್ಥಿತಿ ವೀಕ್ಷಣೆಗಾಗಿ ಪ್ರವಾಸದಲ್ಲಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅವರ ಬೆಂಗಾವಲು (Escort) ವಾಹನ ಅಪಘಾತಕ್ಕೀಡಾದ ಘಟನೆ ಅಜ್ಜಂಪುರ ಪಟ್ಟಣದಲ್ಲಿ...

Related Articles

ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆ ಮಲೆನಾಡಿಗೆ ಕಂಟಕ

ಚಿಕ್ಕಮಗಳೂರು: ಪಶ್ಚಿಮ ಘಟ್ಟ ವ್ಯಾಪ್ತಿಯ ರಾಜ್ಯದ ೧೦ ಜಿಲ್ಲೆಗಳ ೨೦ ಸಾವಿರಕ್ಕೂ ಅಧಿಕ ಚದರ ಕಿಲೋ...

ಅಂಗಾಂಗ ದಾನ ರೂಬೆನ್ ಮೊಸಸ್ ಕುಟುಂಬ ಸಮಾಜಕ್ಕೆ ಮಾದರಿ

ಚಿಕ್ಕಮಗಳೂರು: ಅಂಗಾಂಗ ದಾನ ಮಾಡಿ ರೂಬೆನ್ ಮೊಸಸ್ ಕುಟುಂಬ ಸಮಾಜಕ್ಕೆ ಮಾದರಿಯಾಗಿದೆ ಎಂದು ನಗರಸಭೆ ಪೌರಾಯುಕ್ತ...

ವೈಜ್ಞಾನಿಕ ರೀತಿಯಲ್ಲಿ ಕಸ ವಿಲೇವಾರಿಗೆ ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅಧಿಕಾರಿಗಳಿಗೆ ಸೂಚಿಸಿದರು. ಕೊಪ್ಪ...

ಫಸಲ್ ಬಿಮಾ ನೋಂದಣಿ ಹೆಚ್ಚಿಸಲು ಜಿಲ್ಲಾಧಿಕಾರಿ ನಿರ್ದೇಶನ

ಚಿಕ್ಕಮಗಳೂರು: ಫಸಲ್ ಬಿಮಾ ಯೋಜನೆಯಡಿ ನೋಂದಣಿ ಕಡಿಮೆಯಾಗಿದ್ದು, ತಕ್ಷಣ ಅಗತ್ಯ ಪ್ರಚಾರ ಕೈಗೊಂಡು ರೈತರ ಮನವೊಲಿಸಿ...