Home namma chikmagalur ತಿಂಗಳಾಂತ್ಯದೊಳಗೆ ಬೆಳೆಹಾನಿ ಪರಿಹಾರ ಪಾವತಿಸುವಂತೆ ಸೂಚನೆ
namma chikmagalurchikamagalurHomeLatest News

ತಿಂಗಳಾಂತ್ಯದೊಳಗೆ ಬೆಳೆಹಾನಿ ಪರಿಹಾರ ಪಾವತಿಸುವಂತೆ ಸೂಚನೆ

Share
Share

ತರೀಕೆರೆ: ವನ್ಯಜೀವಿಯಿಂದ ಆಗಿರುವ ಎಲ್ಲಾ ಬೆಳೆಹಾನಿ ಪರಿಹಾರವನ್ನು ಈ ತಿಂಗಳಾಂತ್ಯದೊಳಗೆ ಪಾವತಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ತರೀಕೆರೆಯಲ್ಲಿ ಭಾನುವಾರ ಶಿವಮೊಗ್ಗ, ಉಂಬ್ಳೆಬೈಲು ಮತ್ತು ಚಿಕ್ಕಮಗಳೂರು ವಿಭಾಗದ ಹಿರಿಯ ಅರಣ್ಯಾಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಕಾಡು ಪ್ರಾಣಿಗಳು ತೋಟ, ಹೊಲ, ಗದ್ದೆಗೆ ನುಗ್ಗಿ ಬೆಳೆ ನಷ್ಟ ಮಾಡಿದರೆ, ಆದಷ್ಟು ಶೀಘ್ರ ಪರಿಹಾರ ಪಾವತಿಸುವಂತೆ ಇತ್ತೀಚೆಗೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದ್ದು, ಈ ನಿಟ್ಟಿನಲ್ಲಿ ಕ್ರಮ ವಹಿಸುವಂತೆ ಸೂಚಿಸಿದರು.

ಇತ್ತೀಚೆಗೆ ನವಿಲೇಕಲ್ ಗುಡ್ಡದಲ್ಲಿ ೫ ವರ್ಷದ ಬಾಲಕಿಯನ್ನು ಚಿರತೆ ಹೊತ್ತೊಯ್ದ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ ಸಚಿವರು, ವನ್ಯಜೀವಿಯಿಂದ ಒಂದೇ ಒಂದು ಸಾವು ಸಂಭವಿಸಬಾರದು, ಆದರೆ ಕೈಮೀರಿ ಇಂತಹ ದುರ್ಘಟನೆಗಳು ನಡೆಯುತ್ತಿವೆ. ಕೂಡಲೇ ಹಾಲಿ ಇರುವ ೮ ಬೋನಿನ ಜೊತೆಗೆ ಇನ್ನೂ ೪ ಹೆಚ್ಚುವರಿ ಬೋನುಗಳನ್ನಿಟ್ಟು, ನಾಡಿಗೆ ಬರುವ ಚಿರತೆಗಳ ಸೆರೆಗೆ ತುರ್ತು ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.

೨೦೧೫ರ ನಂತರ ಯಾವುದೇ ಹೊಸ ಅರಣ್ಯ ಒತ್ತುವರಿ ಆಗಿದ್ದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು. ಉಪಗ್ರಹ ಚಿತ್ರ ಆಧರಿಸಿ ಅರಣ್ಯ ಒತ್ತುವರಿ ಪತ್ತೆ ಹಚ್ಚಿ ಪ್ರಕರಣ ದಾಖಲಿಸಬೇಕು. ಇಲ್ಲವಾದರೆ ಆಯಾ ವಲಯದ ಅರಣ್ಯಾಧಿಕಾರಿ (ಆರ್.ಎಫ್.ಓ)ಗಳನ್ನೇ ಹೊಣೆ ಮಾಡಲಾಗುವುದು ಎಂದು ಈಶ್ವರ ಖಂಡ್ರೆ ಎಚ್ಚರಿಸಿದರು.

ಕಾಳಿಂಗ ಸರ್ಪಗಳು ತೋಟ, ಮನೆಯ ಬಳಿ ಬಂದ ಬಗ್ಗೆ ದೂರು ಬಂದರೆ ಅರಣ್ಯ ಇಲಾಖೆಯ ಸಿಬ್ಬಂದಿಯೇ ಅದನ್ನು ಹಿಡಿಯಬೇಕು. ಇದಕ್ಕಾಗಿ ಮಲೆನಾಡು ಮತ್ತು ಕೊಡಗು ಜಿಲ್ಲೆಯಲ್ಲಿನ ಪ್ರತಿ ವಲಯದಲ್ಲಿ ಕನಿಷ್ಠ ೫ ಸಿಬ್ಬಂದಿಗೆ ಕಾಳಿಂಗ ಸರ್ಪ ರಕ್ಷಣೆಯ ತರಬೇತಿ ಕೊಡಿಸಬೇಕು. ಕಾಳಿಂಗ ಸರ್ಪಗಳ ರಕ್ಷಣೆಗೆ ಖಾಸಗಿ ಸಂಸ್ಥೆಗಳ ನೆರವು ಪಡೆಯಬಾರದು ಎಂದು ಅರಣ್ಯ ಸಚಿವರು ತಿಳಿಸಿದರು.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಈಗಾಗಲೇ ಸೆಕ್ಷನ್ ೪ ಆಗಿ ಸೆಕ್ಷನ್ ೧೭ ಆಗದ ಎಷ್ಟು ಪ್ರಕರಣ ಇದೆ ಮತ್ತು ಯಾವ ಹಂತದಲ್ಲಿದೆ ಎಂಬ ಬಗ್ಗೆ ಒಂದು ವಾರದೊಳಗೆ ಸಚಿವಾಲಯಕ್ಕೆ ಮಾಹಿತಿ ನೀಡುವಂತೆ ಆದೇಶ ನೀಡಿದರು. ಅಜ್ಜಂಪುರ ತಾಲೂಕಿನಲ್ಲಿ ವೃಕ್ಷೋದ್ಯಾನ ನಿರ್ಮಾಣಕ್ಕೆ ಜಾಗವನ್ನು ಗುರುತಿಸಿ ೧೦ ದಿನಗಳ ಒಳಗಾಗಿ ಪ್ರಸ್ತಾವನೆ ಸಲ್ಲಿಸುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಅಧಿಕಾರಿಗಳಿಗೆ ತಿಳಿಸಿದರು.

ಅರಣ್ಯ ಸಿಬ್ಬಂದಿ ಮತ್ತು ರೈತರ ನಡುವೆ ಸ್ನೇಹಭಾವ ಇರಬೇಕು. ಅನ್ನದಾತರೊಂದಿಗೆ ಮತ್ತು ಸಾರ್ವಜನಿಕರೊಂದಿಗೆ ಹೆಚ್ಚು ಜನಸ್ನೇಹಿಯಾಗಿ ವರ್ತಿಸಿ, ಅವರ ಕುಂದು ಕೊರತೆ ಆಲಿಸಿ, ಸಾಧ್ಯವಾದಷ್ಟು ಶೀಘ್ರ ಪರಿಹಾರ ಒದಗಿಸಿ. ಹಿರಿಯ ಅಧಿಕಾರಿಗಳು ಕ್ಷೇತ್ರಕ್ಕೆ ಮತ್ತು ವನ್ಯಜೀವಿ ಸಂಘರ್ಷ ಇರುವ ಕಾಡಿನಂಚಿನ ಗ್ರಾಮಗಳಿಗೆ ತೆರಳಿ ಜನಸಂಪರ್ಕ ಸಭೆಗಳನ್ನು ನಡೆಸಿ ಎಂದೂ ಸಚಿವರು ಸೂಚಿಸಿದರು. ತರೀಕೆರೆ ಶಾಸಕ ಜಿಎಚ್ ಶ್ರೀನಿವಾಸ ಮತ್ತು ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು.

Notice to pay crop damage compensation by the end of the month

Share

Leave a comment

Leave a Reply

Your email address will not be published. Required fields are marked *

Don't Miss

ನಗರದಲ್ಲಿ ಎರಡು ಗುಂಪುಗಳ ನಡುವಿನ ಗಲಾಟೆ

ಚಿಕ್ಕಮಗಳೂರು : ಮಧ್ಯರಾತ್ರಿ ರಸ್ತೆಯಲ್ಲಿ ಕೆಟ್ಟ ಶಬ್ದಗಳಿಂದ ಬೈದಾಡಿಕೊಳ್ಳುತ್ತಾ ಸಾರ್ವಜನಿಕರ ನೆಮ್ಮದಿಗೆ ಭಂಗ ತಂದ ಎರಡು ಗುಂಪುಗಳ ನಡುವಿನ ಗಲಾಟೆಯನ್ನು ತಡೆದ ಗಸ್ತು ಪೊಲೀಸರು ಮೂವರನ್ನು ವಶಕ್ಕೆ ಪಡೆದ ಘಟನೆ ಚಿಕ್ಕಮಗಳೂರು...

ಬಡ ಸಾಗುವಳಿದಾರರನ್ನು ಒಕ್ಕಲೆಬ್ಬಿಸಬಾರದು.

ಚಿಕ್ಕಮಗಳೂರು:   ಐದು ಎಕರೆಗಿಂತ ಕಡಿಮೆ ಭೂಮಿ ಹೊಂದಿರುವ ಬಡ ಸಾಗುವಳಿ ದಾರರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸಬಾರದು. ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಅರಣ್ಯ ಸಚಿ ವರು ಸ್ಪಷ್ಟ ಸೂಚನೆ ನೀಡಿದ್ದಾರೆ ಎಂದು...

Related Articles

ಪುಸ್ತಕ ಸಂಸ್ಕೃತಿ-ಸಾಮಾಜಿಕ ಜವಾಬ್ದಾರಿ ಬೆಳೆಸುತ್ತದೆ

ಚಿಕ್ಕಮಗಳೂರು: ಪುಸ್ತಕ ಸಂಸ್ಕೃತಿ ಸಾಮಾಜಿಕ ಜವಾಬ್ದಾರಿ ಬೆಳೆಸುತ್ತದೆ ಎಂದು ನ್ಯೂಸ್ ಕಿಂಗ್ ಆನ್ಲೈನ್ ಪತ್ರಿಕೆಯ ಸಂಪಾದಕ...

ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿದ ಕಾರು

ಕಳಸ: ಸೇತುವೆಗೆ ತಡೆಗೋಡೆ ಇಲ್ಲದ ಪರಿಣಾಮ ಪ್ರವಾಸಿಗರ ಕಾರೊಂದು ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿದ...

ಸ್ವಾತಂತ್ರ್ಯೋತ್ಸವದಲ್ಲಿ ದಲಿತ ಸಂಘಟನೆಗಳ ಪ್ರತಿಭಟನೆ 

ಚಿಕ್ಕಮಗಳೂರು: ನಗರದ ನೇತಾಜಿ ಸುಭಾಷ್‌ಚಂದ್ರ ಬೋಸ್ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಮುಗಿದ ಬೆನ್ನಲ್ಲೇ ದಲಿತ...

‘ದೇಶ ಮೊದಲು’ ಎಂಬ ಭಾವನೆಯೊಂದಿಗೆ ಕರ್ತವ್ಯ ನಿರ್ವಹಿಸಿ

ಚಿಕ್ಕಮಗಳೂರು:  ಸ್ವಾತಂತ್ರ್ಯದ ೮೦ನೇ ವರ್ಷದ ಸಂಭ್ರಮ ಕೇವಲ ಹಬ್ಬದ ಆಚರಣೆಯಾಗದೆ, ಸ್ವಾತಂತ್ರ್ಯ ಹೋರಾಟಗಾರರಿಗೆ ಕೃತಜ್ಞತೆ ಸಲ್ಲಿಸುವ,...