Home Latest News ಪೌರಕಾರ್ಮಿಕರ ಸಮಸ್ಯೆ ತಾಲ್ಲೂಕು ಮಟ್ಟದಲ್ಲೇ ಪರಿಹರಿಸಲು ಸೂಚನೆ
Latest NewschikamagalurHomenamma chikmagalur

ಪೌರಕಾರ್ಮಿಕರ ಸಮಸ್ಯೆ ತಾಲ್ಲೂಕು ಮಟ್ಟದಲ್ಲೇ ಪರಿಹರಿಸಲು ಸೂಚನೆ

Share
????????????????????????????????????
Share

ಚಿಕ್ಕಮಗಳೂರು: ಪೌರ ಕಾರ್ಮಿಕರ ಸಮಸ್ಯೆಯನ್ನು ತಾಲ್ಲೂಕು ಮಟ್ಟದ ಅಧಿಕಾರಿಗಳು ತಮ್ಮ ಹಂತದಲ್ಲಿ ಪರಿಹರಿಸಲು ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಸೂಚಿಸಿದರು.

ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮ್ಯಾನುಯಲ್ ಸ್ಕ್ಯಾವೆಂಜರ್‌ಗಳ ನೇಮಕಾತಿ ನಿ?ಧ ಮತ್ತು ಅವರ ಪುನರ್ವಸತಿ ಅಧಿನಿಯಮ ೨೦೧೩ ರನ್ವಯ ಜಿಲ್ಲಾ ಮಟ್ಟದ ಜಾಗೃತಿ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪೌರ ಕಾರ್ಮಿಕರ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಪಂದಿಸಬೇಕು. ಅವರಿಗೆ ಸವಲತ್ತುಗಳನ್ನು ಕಲ್ಪಿಸುವತ್ತ ಗಮನ ಹರಿಸಬೇಕು ಎಂದ ಅವರು, ಸರ್ಕಾರ ಪೌರ ಕಾರ್ಮಿಕರಿಗಾಗಿ ನೀಡಿರುವ ಸವಲತ್ತುಗಳನ್ನು ಕೊಡುವಲ್ಲಿ ಅಧಿಕಾರಿಗಳು ವಿಳಂಬ ಮಾಡಬಾರದು ಎಂದರು.

ಪೌರಕಾರ್ಮಿಕರ ಆರೋಗ್ಯದ ಹಿತದೃಷ್ಟಿಯಿಂದ ಅವರಿಗೆ ನಿಯಮಿತವಾಗಿ ಆರೋಗ್ಯ ತಪಾಸಣೆಯನ್ನು ಮಾಡಿಸಬೇಕು, ಗುರುತಿನ ಚೀಟಿಯನ್ನು ಕಡ್ಡಾಯವಾಗಿ ನೀಡಬೇಕೆಂದ ಅವರು, ಪುರುಷರು ಹಾಗೂ ಮಹಿಳೆಯರಿಗೆ ಪ್ರತ್ಯೇಕವಾದ ವಿಶ್ರಾಂತಿ ಗೃಹಗಳನ್ನು ನಗರಸಭೆ ಹಾಗೂ ಪುರಸಭೆ ವ್ಯಾಪ್ತಿಯಲ್ಲಿ ಮಾಡಬೇಕಲ್ಲದೆ, ಸರ್ಕಾರಿ ಆಸ್ಪತ್ರೆಗಳಲ್ಲೂ ಕೂಡ ಅವರಿಗೆ ವಿಶ್ರಾಂತಿ ಗೃಹಗಳನ್ನು ಕಲ್ಪಿಸಿಕೊಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಕಸ ಸಂಗ್ರಹಣೆಗಾಗಿ ಬರುವ ಪೌರ ಕಾರ್ಮಿಕರಿಗೆ ಕಡಿಮೆ ವೇತನ ನೀಡಲಾಗುತ್ತಿದ್ದು, ಕನಿಷ್ಠ ವೇತನವನ್ನಾದರೂ ನೀಡುವಂತೆ ಸಮಿತಿಯ ಸದಸ್ಯರಾದ ವೆಂಕಟೇಶ್ ಅವರು ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಈ ಮೊದಲು ಕಸ ಸಂಗ್ರಹಣೆಗೆ ಗುತ್ತಿಗೆ ನೀಡಲಾಗಿತ್ತು. ಗುತ್ತಿಗೆ ಅವಧಿ ಇನ್ನೂ ಒಂದು ತಿಂಗಳಲ್ಲಿ ಮುಗಿಯುತ್ತದೆ. ನಂತರ ಈ ಕುರಿತು ಕ್ರಮ ವಹಿಸುವಂತೆ ಪೌರಾಯುಕ್ತರಿಗೆ ಸೂಚಿಸಿದರು.

ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ಪ್ರತಿ ಮಾಹೆ ೫ನೇ ತಾರೀಖಿನೊಳಗೆ ವೇತನ ಪಾವತಿಸಲು ಕ್ರಮ ವಹಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ತಿಳಿಸಿದ ಅವರು, ಪೌರ ಕಾರ್ಮಿಕರಿಗೆ ರಜೆ ಮಂಜೂರು ಮಾಡಲು ಸಂಬಂಧಿಸಿದ ತಾಲ್ಲೂಕು ವೈದ್ಯಾಧಿಕಾರಿಗಳಿಗೆ ಕ್ರಮ ವಹಿಸುವಂತೆ ತಿಳಿಸಿದರು.

ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಮಾಲತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಶ್ವತ್ಥಬಾಬು, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಮಿತಿಯ ಸದಸ್ಯರುಗಳು ಹಾಜರಿದ್ದರು.

Notice to solve the problem of civic workers at taluk level

 

Share

Leave a comment

Leave a Reply

Your email address will not be published. Required fields are marked *

Don't Miss

ಅಜ್ಜಂಪುರದ‌ಲ್ಲಿ ಇಂದು ನೂತನ ರಸ್ತೆ ಮೇಲ್ವೇತುವೆಯ ನಿರ್ಮಾಣ ಕಾರ್ಯಕ್ಕೆ ಶಿಲಾನ್ಯಾಸ

ಚಿಕ್ಕಮಗಳೂರು: ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆ ಸಚಿವರಾದ ವಿ.ಸೋಮಣ್ಣ ಅವರು ಮೇ 31 ರಂದು (ನಾಳೆ ಭಾನುವಾರ) ಚಿಕ್ಕಮಗಳೂರು ಜಿಲ್ಲೆಯ ವಿವಿಧ ರೈಲ್ವೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಬೆಳಿಗ್ಗೆ...

ಶ್ರೀಗಂಧ ಮರಗಳ ರಕ್ಷಣೆ, ಪ್ಲಾಸ್ಟಿಕ್ ಮುಕ್ತಕ್ಕೆ ಆಗ್ರಹಿಸಿ ಮೌನ ಪ್ರತಿಭಟನೆ

ಚಿಕ್ಕಮಗಳೂರು: ನಾಡಿನಲ್ಲಿ ಶ್ರೀಗಂಧ ಮರಗಳ ರಕ್ಷಣೆ ಮತ್ತು ನಗರವನ್ನು ಪ್ಲಾಸ್ಟಿಕ್ ಮು ಕ್ತಗೊಳಿಸಬೇಕು ಎಂದು ಆಗ್ರಹಿಸಿ ಶುಕ್ರವಾರ ಜಿಲ್ಲಾ ಶ್ರೀಗಂಧ ಮತ್ತು ವನಕೃಷಿ ಬೆಳೆಗಾರರ ಸಂಘ ಮತ್ತು ವಿವಿಧ ಕನ್ನಡಪರ ಸಂಘಟನೆಗಳ...

Related Articles

ಪ್ಲೆಕ್ಸ್‌ ಹರಿದ ಪ್ರಕರಣ ಇಬ್ಬರು ಆರೋಪಿಗಳ ಬಂಧನ

ಚಿಕ್ಕಮಗಳೂರು: ಕಾಫಿನಾಡಿನ ಕಾಂಗ್ರೆಸ್ ಶಾಸಕ ಹೆಚ್.ಡಿ.ತಮ್ಮಯ್ಯ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಭಾವಚಿತ್ರವಿದ್ದ ಪ್ಲೆಕ್ಸ್‌ಗೆ...

ಅಡಿಕೆ ಕಳವು ಪ್ರಕರಣದ ಆರೋಪಿಗಳ ಬಂಧನ

ಬಾಳೆಹೊನ್ನೂರು: ಇಲ್ಲಿಗೆ ಸಮೀಪದ ಜಕ್ಕಣಕ್ಕಿಯ ರೈತರ ಗೋದಾಮಿನಲ್ಲಿಟ್ಟಿದ್ದ ಅಡಿಕೆಯನ್ನು ಕಳವು ಮಾಡಿದ ಆರೋಪದಲ್ಲಿ ಪೊಲೀಸರು ಇಬ್ಬರನ್ನು...

ಮೂಡಿಗೆರೆಯಲ್ಲಿ ಬಾಗಿಲು ಮುರಿದು ಕಳ್ಳತನ

ಮೂಡಿಗೆರೆ: ಬೀಗ ಹಾಕಿದ್ದ ಮನೆಯೊಂದರ ಮುಂಬಾಗಿಲು ಮುರಿದು ಮನೆಯೊಳಗೆ ನುಗ್ಗಿ ನಗದು ಸಹಿತ ಅಪಾರ ಮೌಲ್ಯದ...

ನಾಗಲಕ್ಷ್ಮಿ ಚಿತ್ರಮಂದಿರದ ಪ್ರದರ್ಶನ ಸ್ಥಗಿತ

ಚಿಕ್ಕಮಗಳೂರು: ಅಗ್ನಿ ಸುರಕ್ಷತಾ ಪರಿಕರಗಳನ್ನು ಅಳವಡಿಸದ ಕಾರಣಕ್ಕೆ ನಗರದ ನಾಗಲಕ್ಷ್ಮಿ ಚಿತ್ರಮಂದಿರದಲ್ಲಿ ಚಲನಚಿತ್ರ ಪ್ರದರ್ಶನಗಳನ್ನು ಅಧಿಕಾರಿಗಳು...