Home namma chikmagalur chikamagalur ಪತ್ರಿಕೆ ಸೋರಿಕೆ ಖಂಡಿಸಿ ಎನ್‌ಎಸ್‌ಯುಐ ಪ್ರತಿಭಟನೆ
chikamagalurHomeLatest Newsnamma chikmagalur

ಪತ್ರಿಕೆ ಸೋರಿಕೆ ಖಂಡಿಸಿ ಎನ್‌ಎಸ್‌ಯುಐ ಪ್ರತಿಭಟನೆ

Share
Share

ಚಿಕ್ಕಮಗಳೂರು: ನೀಟ್-ಯು.ಜಿ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಯುಐ) ನೇತೃತ್ವದಲ್ಲಿ ವಿದ್ಯಾರ್ಥಿಗಳು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ನೀಟ್ ಪರೀಕ್ಷೆ ಬರೆಯಲು ಹಲವು ವರ್ಷಗಳಿಂದ ವಿದ್ಯಾರ್ಥಿಗಳು ತಯಾರಿ ನಡೆಸುತ್ತಾರೆ. ಆದರೆ, ಜವಾಬ್ದಾರಿಯೇ ಇಲ್ಲದವರಂತೆ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಲಾಗಿದೆ. ಈ ಪ್ರಕರಣದಲ್ಲಿ ನೈತಿಕ ಹೊಣೆ ಹೊತ್ತು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ನೀಟ್ ಪರೀಕ್ಷೆಯ ಅಕ್ರಮದಲ್ಲಿ ಬಿಜೆಪಿ ನಾಯಕರ ಕೈವಾಡ ಇರುವುದು ಬಯಲಾಗಿದೆ. ಬಿಜೆಪಿಯ ಕೆಲವರು ಸೆರೆ ಸಿಕ್ಕಿದ್ದಾರೆ. ಎಲ್ಲ ಆರೋಪಿಗಳನ್ನು ಬಂಧಿಸಿ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.

ದೇಶದಾದ್ಯಂತ ವೈದ್ಯಕೀಯ ಶಿಕ್ಷಣ ಪ್ರವೇಶಕ್ಕೆ ನಡೆದಿದ್ದ ನೀಟ್ ಪರೀಕ್ಷೆಯ ಜವಾಬ್ದಾರಿ ಹೊತ್ತಿದ್ದ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯು 22.7 ಲಕ್ಷ ವಿದ್ಯಾರ್ಥಿಗಳ ಭವಿಷ್ಯಕ್ಕೆ ಕೊಳ್ಳಿ ಇಟ್ಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇವರು ನಡೆಸಿದ ಈ ಅಕ್ರಮಕ್ಕೆ ದೇಶದಲ್ಲಿ 4 ವಿದ್ಯಾರ್ಥಿಗಳು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. ಇವರ ಸಾವಿಗೆ ಕೇಂದ್ರ ಸರ್ಕಾರವೇ ನೇರ ಹೊಣೆ. ದೇಶದಲ್ಲಿ 22 ಲಕ್ಷ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದ್ದರೂ ಈ ಬಗ್ಗೆ ಒಬ್ಬ ಬಿಜೆಪಿ ನಾಯಕನೂ ಮಾತನಾಡುತ್ತಿಲ್ಲ. ಇದು ಅವರ ಜಾಣಕುರುಡುತನಕ್ಕೆ ಸಾಕ್ಷಿಯಾಗಿದೆ ಎಂದು ಆರೋಪಿಸಿದರು.

ಈ ಪ್ರಕರಣವನ್ನು ಸಿಬಿಐ ಇನ್ನಷ್ಟು ಗಂಭೀರವಾಗಿ ಪರಿಗಣಿಸಬೇಕು. ಪ್ರಕರಣದ ಎಲ್ಲರನ್ನು ಬಂಧಿಸಬೇಕು. ಕಳೆದ 2024ರಲ್ಲಿಯೂ ನೀಟ್ ಯುಜಿ ಕುರಿತು ಪ್ರಶ್ನೆಪತ್ರಿಕೆ ವಿವಾದ ದೇಶದಾ ದ್ಯಂತ ಕೇಳಿ ಬಂದಿದ್ದರೂ ಸರಿಪಡಿಸುವಲ್ಲಿ ಪರೀಕ್ಷಾ ಏಜೆನ್ಸಿ ವಿಫಲವಾಗಿದೆ. ರಾಷ್ಟ್ರ ಮಟ್ಟದ ಈ ಪರೀಕ್ಷೆಯ ಭದ್ರತೆ ಮತ್ತು ವಿಶ್ವಾಸಾರ್ಹತೆ ಕಾಪಾಡುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಕೇಂದ್ರ ಸರ್ಕಾರವನ್ನು ಈ ಕೂಡಲೇ ವಜಾಗೊಳಿಸಿ ವಿದ್ಯಾರ್ಥಿಗಳಲ್ಲಿ ಹಾಗೂ ಪೋಷಕರಲ್ಲಿ ವಿಶ್ವಾಸ ಮೂಡುವಂತೆ ಮಾಡಬೇಕು ಎಂದು ಆಗ್ರಹಿಸಿದರು.

ಎನ್‌ಎಸ್‌ಯುಐ ರಾಜ್ಯ ಘಟಕದ ಅಧ್ಯಕ್ಷ ಕೀರ್ತಿ ಗಣೇಶ್, ಉಪಾಧ್ಯಕ್ಷ ಸಿ.ಕೆ.ಶ್ರೀಕಾಂತ್, ಜಿಲ್ಲಾ ಘಟಕದ ಅಧ್ಯಕ್ಷ ಬಿ.ಟಿ.ಸುಮಂತ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ.ಮಂಜೇಗೌಡ, ಪ್ರಚಾರ ಸಮಿತಿ ಅಧ್ಯಕ್ಷ ಪ್ರವೀಣ್, ಕಾಂಗ್ರೆಸ್ ನೀತಿ ಮತ್ತು ಸಂಶೋಧನಾ ವಿಭಾಗದ ಜಿಲ್ಲಾ ಘಟಕದ ಅಧ್ಯಕ್ಷ ಶಿವಕುಮಾರ್ ಹಿರೇಗೌಜ, ಕಾರ್ತಿಕ್, ಸೃಜನ್, ಸುಮನ್‌ ಭಾಗವಹಿಸಿದ್ದರು.

NSUI protests against newspaper leak

Share

Leave a comment

Leave a Reply

Your email address will not be published. Required fields are marked *

Don't Miss

ಚಿಕ್ಕಮಗಳೂರು ತಾಲೂಕು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆಗೆ ಆಗ್ರಹ

ಚಿಕ್ಕಮಗಳೂರು: ಈ ಬಾರಿಯ ಮುಂಗಾರು ಅವಧಿಯಲ್ಲಿ ಚಿಕ್ಕಮಗಳೂರು ತಾಲೂಕಿನಲ್ಲಿ ತೀವ್ರ ಮಳೆ ಕೊರತೆಯಾಗಿದ್ದು, ಕೃಷಿ, ತೋಟಗಾರಿಕೆ, ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಸಮಸ್ಯೆ ಎದುರಾಗುವ ಆತಂಕವಿದೆ. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು...

ಕಡೂರು ಬಸ್ ನಿಲ್ದಾಣದಲ್ಲಿ 50 ಗ್ರಾಂ ತೂಕದ ಚಿನ್ನದ ಸರ ಕಳ್ಳತನ

ಕಡೂರು: ಜನದಟ್ಟಣೆಯನ್ನೇ ಬಂಡವಾಳ ಮಾಡಿಕೊಂಡ ಕಳ್ಳರ ಗ್ಯಾಂಗ್ ಒಂದು, ಬಸ್ ಹತ್ತುವ ವೇಳೆ ಮಹಿಳೆಯ ಗಮನ ಬೇರೆಡೆ ಸೆಳೆದು ಕುತ್ತಿಗೆಯಲ್ಲಿದ್ದ ಬರೋಬ್ಬರಿ 50 ಗ್ರಾಂ ತೂಕದ ಚಿನ್ನದ ಸರವನ್ನು ಕ್ಷಣಾರ್ಧದಲ್ಲಿ ಎಗರಿಸಿ...

Related Articles

ಕೋಟ್ಯಂತರ ರೂಪಾಯಿ ವಂಚಿಸಿದ ನಕಲಿ ಲೇಡಿ ಪಿಎಸ್‌ಐ ಬಂಧನ

ಚಿಕ್ಕಮಗಳೂರು: ತಾನು ಬೆಂಗಳೂರಿನ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಎಂದು ನಂಬಿಸಿ, ಚಿನ್ನ, ಹಣ, ಮೊಬೈಲ್ ಹಾಗೂ ಕಾರು...

ನಲಪಾಡ್ ಹೇಳಿಕೆ ಖಂಡಿಸಿ ಜೆಡಿಎಸ್ ಅಲ್ಪಸಂಖ್ಯಾತ ಘಟಕ ಆಕ್ರೋಶ

ಚಿಕ್ಕಮಗಳೂರು: ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮತ್ತು ಜೆಡಿಎಸ್ ರಾಜ್ಯ ಯುವ ಘಟಕದ...

ಮಳಲೂರು ಏತ ನೀರಾವರಿ ಯೋಜನೆ ಸಮಸ್ಯೆ ಬಗೆಹರಿಸಲು ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಮಳಲೂರು ಏತ ನೀರಾವರಿ ಅನುಷ್ಠಾನ ಮತ್ತು ಅರಸನ ನಾಲೆ ಪುನಶ್ಚೇತನ ಯೋಜನೆಗಳ ಕಾಮಗಾರಿಗಳಿಗೆ ಉಂಟಾಗಿರುವ...

2ಬಿ ಮೀಸಲಾತಿ ಮರುಸ್ಥಾಪನೆಗೆ ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಚಿಕ್ಕಮಗಳೂರು: ರಾಜ್ಯದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗುತ್ತಿದ್ದ ಶೇ.4ರಷ್ಟು 2ಬಿ ಮೀಸಲಾತಿಯನ್ನು ಮರುಸ್ಥಾಪಿಸಲು ರಾಜ್ಯ ಸರ್ಕಾರ ಕೂಡಲೇ...