ಚಿಕ್ಕಮಗಳೂರು : ನರ್ಸ್ ಒಬ್ಬರು ಹೊಳೆಗೆ ಹಾರಿ ಸಾವಿಗೆ ಶರಣಾದಂತಹ ಆಘಾತಕಾರಿ ಘಟನೆ ಚಿಕ್ಕಮಗಳೂರಿನ ಎನ್.ಆರ್.ಪುರ ತಾಲೂಕಿನಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ರಾನ್ಮಾ(30) ಬೇಸಿಲ್ ಎಂದು ಗುರುತಿಸಲಾಗಿದೆ. ಅವರ ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಹೊಂದಿರುವ ರಾನ್ಯಾ ಬೇಸಿಲ್ ಅವರು ಎನ್.ಆರ್.ಪುರ ತಾಲೂಕಿನ ಮುತ್ತಿನಕೊಪ್ಪ ನಿವಾಸಿಯಾಗಿದ್ದು, ಹೊಳೆಗೆ ಹಾರಿ ಸಾವಿಗೆ ಶರಣಾಗಿದ್ದಾರೆ.
ಮುಡುಬ ಸಮೀಪದ ಸೇತುವೆ ಮೇಲಿಂದ ಹೊಳೆಗೆ ಹಾರಿ ರಾನ್ಯಾ ಸಾವಿಗೆ ಶರಣಾಗಿದ್ದು, ಅವರು ಶಿವಮೊಗ್ಗದ ನಗರದಲ್ಲಿರುವ ನಾರಾಯಣ ಹೃದಯಾಲಯದಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿ ಮನೆಗೆ ಬಂದಿದ್ದ ರನ್ಯಾ ಮತ್ತೆ ಮನೆಯಿಂದ ವಾಪಸ್ ಹೋಗಿ ಹೊಳೆಗೆ ಹಾರಿ ಶರಣಾಗಿದ್ದಾರೆ.
ಅವರ ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಘಟನೆಗೆ ಸಂಬಂಧಿಸಿದಂತೆ ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Nurse commits suicide by jumping into Bhadra river
Leave a comment