Home namma chikmagalur chikamagalur ಧರ್ಮಸ್ಥಳದ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ಆಣೆ-ಪ್ರಮಾಣ
chikamagalurHomeLatest Newsnamma chikmagalur

ಧರ್ಮಸ್ಥಳದ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ಆಣೆ-ಪ್ರಮಾಣ

Share
Share

ಶೃಂಗೇರಿ : ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕ್ರಿಯೆಯು ತೀವ್ರ ವಾದ-ವಿವಾದಗಳಿಗೆ ಕಾರಣವಾಗಿದ್ದು, ಈ ಬೆಳವಣಿಗೆಯು ಈಗ ಧರ್ಮಸ್ಥಳದ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ಆಣೆ-ಪ್ರಮಾಣ ಮಾಡುವ ಹಂತಕ್ಕೆ ತಲುಪಿದೆ.

2023ರ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಪಾರದರ್ಶಕವಾಗಿ ನಡೆದಿತ್ತು ಎಂದು ಪ್ರತಿಪಾದಿಸಿರುವ ಬಿಜೆಪಿ ಮುಖಂಡರಾದ ರಾಮಸ್ವಾಮಿ ಶೆಟ್ಟಿಗದ್ದೆ ಮತ್ತು ಸತೀಶ್‌ ಅದ್ದಡ ಅವರು ಇಂದು ಧರ್ಮಸ್ಥಳದಲ್ಲಿ ಪ್ರಮಾಣ ಮಾಡಿದ್ದಾರೆ. ಕಳೆದ ಚುನಾವಣೆಯಲ್ಲಿ ರಾಮಸ್ವಾಮಿ ಅವರು ಚುನಾವಣಾ ಏಜೆಂಟ್ ಆಗಿ ಹಾಗೂ ಸತೀಶ್ ಅವರು ಅಂಚೆ ಮತಗಳ ಟೇಬಲ್ ಏಜೆಂಟ್ ಆಗಿ ಕಾರ್ಯನಿರ್ವಹಿಸಿದ್ದರು.

ಆಗಿನ ಮತ ಎಣಿಕೆ ವೇಳೆ ಕಾಂಗ್ರೆಸ್ಸಿಗರಿಂದ ಹಣ ಪಡೆದು ಮೋಸ ಮಾಡಲಾಗಿದೆ ಎಂಬ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ, ಈ ಇಬ್ಬರೂ ನಾಯಕರು ನಿನ್ನೆ ಕೊಪ್ಪದ ವೀರಭದ್ರಸ್ವಾಮಿ ದೇಗುಲದಲ್ಲಿ ಪ್ರಮಾಣ ಮಾಡಿದ್ದರು. ಇಂದು ಧರ್ಮಸ್ಥಳಕ್ಕೆ ತೆರಳಿ ಅಂತಹ ಯಾವುದೇ ಅಕ್ರಮ ನಡೆದಿಲ್ಲ ಎಂದು ಪುನರುಚ್ಚರಿಸಿದ್ದಾರೆ.

2023ರ ಚುನಾವಣೆಯಲ್ಲಿ ಟಿ.ಡಿ. ರಾಜೇಗೌಡ ಅವರು 201 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಆದರೆ, ಇತ್ತೀಚೆಗೆ ನಡೆದ 2023ರ ಅಂಚೆ ಮತಗಳ ಮರು ಎಣಿಕೆಯಲ್ಲಿ ಡಿ.ಎನ್. ಜೀವರಾಜ್ ಅವರು 52 ಮತಗಳ ಅಂತರದಿಂದ ಜಯಗಳಿಸಿದ್ದಾರೆ ಎಂದು ಘೋಷಿಸಲಾಗಿದೆ.

ಈ ಫಲಿತಾಂಶದ ಬದಲಾವಣೆಯನ್ನು ವಿರೋಧಿಸಿ ಈಗಾಗಲೇ ರಾಜೇಗೌಡ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ನ್ಯಾಯಾಲಯದ ಹೋರಾಟದ ಜೊತೆಗೆ ಶೃಂಗೇರಿ ಕ್ಷೇತ್ರದ ವಿವಿಧ ದೇವಾಲಯಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿರುವ ರಾಜೇಗೌಡ ಅವರು, ಮತ ಚೋರಿ ಮಾಡಿದವರಿಗೆ ದೈವಿಕ ಶಿಕ್ಷೆಯಾಗಲಿ ಎಂದು ಆಶಿಸಿದ್ದಾರೆ.

ಒಟ್ಟಾರೆಯಾಗಿ ಶೃಂಗೇರಿ ರಾಜಕೀಯ ಜಿದ್ದಾಜಿದ್ದಿ ಈಗ ಕಾನೂನು ಮತ್ತು ದೈವಿಕ ಎರಡೂ ಸ್ತರಗಳಲ್ಲಿ ಚರ್ಚೆಯಾಗುತ್ತಿದೆ.

Oath-taking in the presence of Manjunatha Swami of Dharamsthala

Share

Leave a comment

Leave a Reply

Your email address will not be published. Required fields are marked *

Don't Miss

ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

ಚಿಕ್ಕಮಗಳೂರು: ತೋಟ ಹಾಗೂ ಮನೆಯ ಕೆಲಸಗಾರನಾಗಿ ಸುಮಾರು ಎರಡು ವರ್ಷಗಳಿಂದ ನಂಬಿಕಸ್ಥನಾಗಿದ್ದ ವ್ಯಕ್ತಿಯೊಬ್ಬನೇ ಮಾಲೀಕರ ಮನೆಯ ಲಾಕರ್‌ನಿಂದ ಭಾರಿ ಪ್ರಮಾಣದ ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿಕೊಂಡು ಪರಾರಿಯಾಗಿರುವ ಘಟನೆ ಚಿಕ್ಕಮಗಳೂರು...

200 ರೂ.ಸಾಲ ನೀಡಿಲ್ಲ ಎಂದು ಸುತ್ತಿಗೆಯಿಂದ ತಲೆ ಜಜ್ಜಿ ಕೊಲೆಗೆ ಯತ್ನ

ತರೀಕೆರೆ: ಕೇವಲ ಇನ್ನೂರು ರೂಪಾಯಿ ಹಣ ನೀಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬನ ತಲೆಯ ಹಿಂಭಾಗಕ್ಕೆ ಸುತ್ತಿಗೆಯಿಂದ ಜಜ್ಜಿ ಕೊಲೆಗೆ ಯತ್ನಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಜೋಡಿ ಗೋವಿಂದಪ್ಪ...

Related Articles

ಪ್ರತ್ಯೇಕ ರೈತ ಸಂಘಟನೆ ಘೋಷಣೆಗೆ ನಿರ್ಧಾರ

ಚಿಕ್ಕಮಗಳೂರು: ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಅವರು ರೈತ ಸಂಘದಲ್ಲಿ ಸಕ್ರೀಯರಾಗಿದ್ದ...

ಎರಡು ಪ್ರತ್ಯೇಕ ಪೋಕೋ ಪ್ರಕರಣದಲ್ಲಿ ಇಬ್ಬರ ಬಂಧನ

ಬಾಳೆಹೊನ್ನೂರು: ಅಪ್ರಾಪ್ತರ ಮೇಲಿನ ದೌರ್ಜನ್ಯ ಕುರಿತಂತೆ 2 ಪ್ರತ್ಯೇಕ ಪೋಕೋ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ಬಾಳೆಹೊನ್ನೂರು...

ವೈದ್ಯರ ಬೇಜವಾಬ್ದಾರಿತನಕ್ಕೆ ಮೂರು ತಿಂಗಳ ಹಸುಗೂಸು ಸಾವು

ಚಿಕ್ಕಮಗಳೂರು: ವೈದ್ಯರ ಬೇಜವಾಬ್ದಾರಿತನ ಹಾಗೂ ನಿರ್ಲಕ್ಷ್ಯದ ಆರೋಪಕ್ಕೆ ಮೂರು ತಿಂಗಳ ಹಸುಗೂಸೊಂದು ಬಲಿಯಾಗಿರುವ ಘಟನೆ ಚಿಕ್ಕಮಗಳೂರು...

ಜಿಲ್ಲೆಯಾದ್ಯಂತ ಮೊಹರಂ ಹಬ್ಬ ಆಚರಣೆ

ಚಿಕ್ಕಮಗಳೂರು: ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ಮೊಹರಂ ಹಬ್ಬವನ್ನು ಮುಸ್ಲಿಮರು ಜಿಲ್ಲೆಯಾದ್ಯಂತ ಶುಕ್ರವಾರ ಶ್ರದ್ದಾಭಕ್ತಿಯಿಂದ ಆಚರಿಸಿದರು....