Home Crime News ಕಲ್ಕೆರೆ ಗ್ರಾಮದಲ್ಲಿ ಪ್ರೀತಿಗೆ ಅಡ್ಡಿ – ಯುವಕನ ಕೊಲೆ
Crime NewschikamagalurHomeLatest Newsnamma chikmagalur

ಕಲ್ಕೆರೆ ಗ್ರಾಮದಲ್ಲಿ ಪ್ರೀತಿಗೆ ಅಡ್ಡಿ – ಯುವಕನ ಕೊಲೆ

Share
Share

ಚಿಕ್ಕಮಗಳೂರು: ಪ್ರೀತಿಗೆ ಅಡ್ಡಿಪಡಿಸಿದ ವಿಚಾರವಾಗಿ ನಡೆದ ಜಗಳದಲ್ಲಿ ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕಲ್ಕೆರೆ ಗ್ರಾಮದಲ್ಲಿ ನಡೆದಿದೆ.

ರಾಜೇಶ್ (27) ಕೊಲೆಯಾದ ದುರ್ದೈವಿ. ಕಲ್ಕೆರೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ವರುಣ್ ಎಂಬಾತನು ರಾಜೇಶ್‌ರನ್ನು ಕೊಲೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ಕೊಲೆಯಾದ ರಾಜೇಶ್ ಅವರ ಪತ್ನಿಯ ಸಹೋದರಿಯನ್ನು ಆರೋಪಿ ವರುಣ್ ಪ್ರೀತಿಸುತ್ತಿದ್ದನು ಎನ್ನಲಾಗಿದೆ.

ಈ ಪ್ರೇಮ ಸಂಬಂಧಕ್ಕೆ ರಾಜೇಶ್ ಅಡ್ಡಿಪಡಿಸುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. ಈ ಹಿಂದೆ ಇದೇ ವಿಚಾರವಾಗಿ ರಾಜೇಶ್ ಮತ್ತು ವರುಣ್ ನಡುವೆ ಹಲವು ಬಾರಿ ಮಾತಿನ ಚಕಮಕಿ ನಡೆದಿತ್ತು.

ಇಂದು ರಾಜೇಶ್ ಬಾಳೆಹೊನ್ನೂರು ಸಮೀಪದ ಬಾಸಾಪುರದಿಂದ ಕಲ್ಕೆರೆ ಗ್ರಾಮದಲ್ಲಿರುವ ತಮ್ಮ ಪತ್ನಿಯ ಮನೆಗೆ ಹೋಗಿದ್ದರು. ಅಲ್ಲಿ ವರುಣ್, ರಾಜೇಶ್‌ಗೆ ಚಾಕುವಿನಿಂದ ಇರಿದು ಗಂಭೀರವಾಗಿ ಗಾಯಗೊಳಿಸಿದ್ದಾನೆ.

ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ರಾಜೇಶ್‌ರನ್ನು ತಕ್ಷಣ ಆಸ್ಪತ್ರೆಗೆ ರವಾನಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಆರೋಪಿ ವರುಣ್ ಕೊಪ್ಪ ತಾಲೂಕಿನ ಮಂಡಗದ್ದೆ ಮೂಲದವನಾಗಿದ್ದು ಈ ಸಂಬಂಧ ಜಯಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Obstacle to love in Kalkere village – youth murdered

Share

Leave a comment

Leave a Reply

Your email address will not be published. Required fields are marked *

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...

Related Articles

ಧರ್ಮಸ್ಥಳ ಸಂಘದ ಸಾಲದ ವಿಚಾರ-ದಂಪತಿಗಳ ಮೇಲೆ ದೊಣ್ಣೆಗಳಿಂದ ಹಲ್ಲೆ

ಶೃಂಗೇರಿ: ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಉಂಟಾದ ಸಣ್ಣ ಭಿನ್ನಾಪ್ರಾಯ ವಿಕೋಪಕ್ಕೆ ತಿರುಗಿ, ದಂಪತಿಗಳ ಮೇಲೆ...

ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟ ಪ್ರದರ್ಶಿಸಿ

ಚಿಕ್ಕಮಗಳೂರು: ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟಿನ ಮಂತ್ರ ಪಠಿಸಬೇಕು. ಪರಸ್ಪರ ಒಡೆದಾಳುವ ನೀತಿ ಅನುಸರಿಸಿದರೆ, ಸರ್ಕಾರಗಳು...

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ...