Home namma chikmagalur chikamagalur ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಓಮಿನಿ ಪಲ್ಟಿ
chikamagalurCrime NewsHomeLatest Newsnamma chikmagalur

ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಓಮಿನಿ ಪಲ್ಟಿ

Share
Share

ಚಿಕ್ಕಮಗಳೂರು : ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಓಮಿನಿ ಕಾರೊಂದು ಚಾಲಕನ ನಿರ್ಲಕ್ಷ್ಯದಿಂದ ಪಲ್ಟಿಯಾದ ಘಟನೆ ಚಿಕ್ಕಮಗಳೂರು ತಾಲೂಕಿನ ದಿಣ್ಣೆಕೆರೆ ಗ್ರಾಮದ ಬಳಿ ಸಂಭವಿಸಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.

ಕೂದುವಳ್ಳಿಯ ಲಿಟಲ್ ಫ್ಲವರ್ ಪ್ಲೇ ಹೋಮ್ ಗೆ ಸೇರಿದ ಓಮಿನಿ ಕಾರಿನಲ್ಲಿ ಅಪಘಾತ ಸಂಭವಿಸಿದ ವೇಳೆ 12ಕ್ಕೂ ಹೆಚ್ಚು ಪುಟ್ಟ ಮಕ್ಕಳು ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ಪೋಷಕರು ಹಾಗೂ ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ.

ಮಕ್ಕಳನ್ನು ಶಾಲೆಗೆ ಕರೆತರುವ ಮತ್ತು ಕರೆದೊಯ್ಯುವ ಉದ್ದೇಶಕ್ಕಾಗಿ ಕಮರ್ಷಿಯಲ್ ವಾಹನಗಳನ್ನೇ ಬಳಸಬೇಕು ಎಂಬ ನಿಯಮವಿದ್ದರೂ, ಕಳೆದ ಹಲವು ವರ್ಷಗಳಿಂದ ವೈಟ್‌ಬೋರ್ಡ್ (ಖಾಸಗಿ ಬಳಕೆಯ) ವಾಹನದಲ್ಲೇ ಮಕ್ಕಳನ್ನು ಸಾಗಿಸಲಾಗುತ್ತಿತ್ತು ಎಂಬ ಆರೋಪ ಕೇಳಿ ಬಂದಿದೆ. ಇದರಿಂದ ಮಕ್ಕಳ ಸುರಕ್ಷತೆ ವಿಚಾರದಲ್ಲಿ ಪ್ಲೇ ಹೋಮ್ ಆಡಳಿತ ಮಂಡಳಿಯ ನಿರ್ಲಕ್ಷ್ಯ ಬಯಲಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ.

ಇನ್ನೂ ಆತಂಕಕಾರಿ ಸಂಗತಿಯೆಂದರೆ, ವಾಹನ ಚಲಾಯಿಸುತ್ತಿದ್ದ ವ್ಯಕ್ತಿಗೆ ಮಾನ್ಯ ಚಾಲನಾ ಪರವಾನಗಿ (DL) ಇರಲಿಲ್ಲ ಎನ್ನಲಾಗಿದೆ. ಆತ ಕೇವಲ ಇತ್ತೀಚೆಗೆ ಲರ್ನಸ್್ರ ಲೈಸೆನ್ಸ್ (LLR) ಪಡೆದಿದ್ದನು ಎಂದು ತಿಳಿದುಬಂದಿದ್ದು, ಇಂತಹ ವ್ಯಕ್ತಿಗೆ ಮಕ್ಕಳಿದ್ದ ವಾಹನದ ಜವಾಬ್ದಾರಿ ನೀಡಿರುವುದು ಪ್ರಶ್ನೆಗೆ ಕಾರಣವಾಗಿದೆ.

ಅಲ್ಲದೆ, ಅಪಘಾತಕ್ಕೀಡಾದ ವಾಹನದ ವಿಮೆ (ಇನ್ಸೂರೆನ್ಸ್) ಅವಧಿಯೂ ಮುಕ್ತಾಯಗೊಂಡಿರುವ ಮಾಹಿತಿ ಹೊರಬಿದ್ದಿದೆ. ಈ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೋಷಕರು ಪ್ಲೇ ಹೋಮ್ ಆಡಳಿತ ಮಂಡಳಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಕ್ಕಳ ಜೀವದೊಂದಿಗೆ ಚೆಲ್ಲಾಟವಾಡಿರುವವರ ವಿರುದ್ಧ ಸಂಬಂಧಪಟ್ಟ ಇಲಾಖೆಗಳು ಹಾಗೂ ಸಾರಿಗೆ ಅಧಿಕಾರಿಗಳು ಸಮಗ್ರ ತನಿಖೆ ನಡೆಸಿ, ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪೋಷಕರು ಹಾಗೂ ಸಾರ್ವಜನಿಕರು ಒತ್ತಾಯಿಸಿದ್ದಾರೆ.

Omni carrying school children overturns

Share

Leave a comment

Leave a Reply

Your email address will not be published. Required fields are marked *

Don't Miss

ನಾಮಫಲಕದಲ್ಲಿ ಶೇ.೬೦ರಷ್ಟು ಕನ್ನಡಕ್ಕೆ ಪ್ರಾಧಾನ್ಯತೆಗೆ ಸೂಚನೆ

ಚಿಕ್ಕಮಗಳೂರು: ಮುಂದಿನ ಒಂದು ವಾರದೊಳಗೆ ಉದ್ಯಮದ ಎಲ್ಲಾ ನಾಮಫಲಕಗಳಲ್ಲಿ ಸರ್ಕಾರದ ನಿಯಮಗಳ ಅನ್ವಯ ಶೇ. ೬೦ರಷ್ಟು ಕನ್ನಡ ನಾಮಫಲಕ ಇರುವಂತೆ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ನಗರಸಭೆಯಿಂದ ನಾಮಫಲಕಗಳನ್ನು ತೆರವುಗೊಳಿಸಿ ಕಾನೂನು ರೀತಿ...

ಮದುವೆ ಮನೆಯಲ್ಲಿ ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಚಿಕ್ಕಮಗಳೂರು: ಜಿಲ್ಲೆಯ ಬಾಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಸುಮಾರು ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳುವಾಗಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಇಬ್ಬರು ಸಂಬಂಧಿಕರ...

Related Articles

ಮನೆಯಲ್ಲಿ ಇಟ್ಟಿದ್ದ ಚಿನ್ನಾಭರಣ-20 ಸಾವಿರ ನಗದು ಕಳವು

ಚಿಕ್ಕಮಗಳೂರು: ಮನೆಯ ಬೀರುವಿನಲ್ಲಿ ಇರಿಸಿದ್ದ ಸುಮಾರು ೨೮ ಗ್ರಾಂ ಚಿನ್ನಾಭರಣ ಹಾಗೂ ?೨೦ ಸಾವಿರ ನಗದು...

ವೃದ್ದಾಪ್ಯ, ಅಂಗವಿಕಲ ವೇತನ ವಿಳಂಬ ಖಂಡಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದಾಪ್ಯ, ವಿಧವಾ, ವಿಕಲಚೇತನ ಹಾಗೂ ಬಿಪಿಎಲ್ ಕಾರ್ಡ್ ರದ್ದು ಪಡಿಸಿರುವ ರಾಜ್ಯದ ಕಾಂಗ್ರೆಸ್ ಸರ್ಕಾರದ...

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ....

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ...