ಚಿಕ್ಕಮಗಳೂರು: ಪರಿಶಿಷ್ಟಜಾತಿ,ಪರಿಶಿಷ್ಟ ಪಂಗಡದ ಸರ್ಕಾರಿ ನೌಕರರು, ನಿವೃತ್ತ ಸರ್ಕಾರಿ ನೌಕರ ಸಂಘದವರು ಸಮುದಾಯದ ಅಭಿವೃದ್ಧಿಗೆ ದುಡಿಯುವ ಸಂಕಲ್ಪ ಮಾಡಬೇಕು ಎಂದು ಜಿಲ್ಲಾಧಿಕಾರಿ ಕೆಲಸ ನಿರ್ವಹಿಸಿ ಬೆಂಗಳೂರಿಗೆ ವರ್ಗಾವಣೆ ಗೊಂಡಿರುವ ಎನ್.ಎಂ. ನಾಗರಾಜ್ ಹೇಳಿದರು.
ನಗರದ ಕುವೆಂಪು ಕಲಾಮಂದಿರದಲ್ಲಿ ಪರಿಶಿಷ್ಟಜಾತಿ, ಪರಿಶಿಷ್ಟ ಪಂಗಡ ಸರ್ಕಾರಿ ನೌಕರರು ಮತ್ತು ಪರಿಶಿಷ್ಟ ಜಾತಿ ನಿವೃತ್ತ ನೌಕರ ಸಂಘದ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ೧೩೫ನೇ ಜಯಂತಿ ಹಾಗೂ ಎಸ್.ಎಸ್.ಎಲ್.ಸಿ, ಪಿಯುಸಿ, ಸ್ನಾತಕೋತ್ತರ, ಪಿಹೆಚ್ಡಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಪರಿಶಿಷ್ಟಜಾತಿ, ಪರಿಶಿಷ್ಟ ಪಂಗಡದ ನೌಕರ ಸಂಘದವರು ಸ್ವಸಹಾಯ ಸಂಘಗಳನ್ನು ಸ್ಥಾಪಿಸುವ ಮೂಲಕ ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು. ಸಂಘದಲ್ಲಿ ಉಳಿತಾಯವಾಗುವ ಹಣದಲ್ಲಿ ಸಮುದಾಯದ ಬಡವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ನೆರವುನೀಡಬೇಕು. ಸಮುದಾಯದ ಅಭಿವೃದ್ಧಿಗೆ ಕೆಲಸ ನಿರ್ವಹಿಸಲು ಮುಂದಾಗಬೇಕೆಂದು ಸಲಹೆ ನೀಡಿದರು.
ಚಿಕ್ಕ ಸಮುದಾಯದವರು ತಮ್ಮ ಸಮುದಾಯದ ಮುಖಂಡರು ಹೇಳಿದ ಮಾತುಗಳನ್ನು ಕೇಳುತ್ತಾರೆ. ಆ ಸಮುದಾಯದ ಮುಖಂಡರು ಸಮುದಾಯದ ಅಭಿವೃದ್ಧಿಗೆ ತ್ಯಾಗಮನೋಭಾವದಿಂದ ಕೆಲಸ ಮಾಡುತ್ತಾರೆ. ಆದರೆ ಪರಿಶಿಷ್ಟಜಾತಿ, ಪರಿಶಿಷ್ಟ ಪಂಗಡದಲ್ಲಿ ಆ ರೀತಿ ಆಗುವುದಿಲ್ಲ.ಮುಂದಿನ ದಿನಗಳಲ್ಲಿ ಒಗ್ಗೂಡುವ ಮೂಲಕ ಸಮುದಾಯ ಅಭಿವೃದ್ಧಿಗೆ ದುಡಿಯಬೇಕೆಂದು ಕಿವಿಮಾತು ಹೇಳಿದರು.
ಪಂಚಾಯತ್ರಾಜ್ ಇಲಾಖೆಯ ನಿವೃತ್ತ ಉಪ ಕಾರ್ಯದರ್ಶಿ ಡಾ.ಎಸ್.ಪ್ರೇಮಕುಮಾರ್ ಅಂಬೇಡ್ಕರ್ ಕುರಿತು ಮಾತನಾಡಿದರು. ಅಂಬೇಡ್ಕರ್ ಜೀವಿತದ ಅವಧಿಯಲ್ಲಿ ನಡೆಸಿದ ಹೋರಾಟವನ್ನು ತಿಳಿಸಿಕೊಟ್ಟರು.
ಪರಿಶಿಷ್ಟಜಾತಿ, ಪರಿಶಿಷ್ಟ ಪಂಗಡದ ಸರ್ಕಾರಿ ನೌಕರರ ಸಮನ್ವಯ ಸಮಿತಿ ರಾಜ್ಯಾಧ್ಯಕ್ಷ ಡಿ.ಶಿವಕುಮಾರ್ ಮಾತನಾಡಿದರು.
ಪರಿಶಿಷ್ಟಜಾತಿ ನಿವೃತ್ತ ನೌಕರ ಸಂಘದ ಅಧ್ಯಕ್ಷ ಎಂ. ಜವರಯ್ಯ ಅಧ್ಯಕ್ಷತೆವಹಿಸಿದ್ದರು. ಕಂದಾಯ ಇಲಾಖೆ ನೌಕರ ಎನ್.ನಾಗೇಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಅತಿಥಿಗಳನ್ನು ನಿವೃತ್ತ ನೌಕರ ಸಂಘದ ಸಹಕಾರ್ಯದರ್ಶಿ ಬಿಳಿಯಪ್ಪ ವೇದಿಕೆಗೆ ಆಹ್ವಾನಿಸಿದರು.ಪೊಲೀಸ್ ಇಲಾಖೆಯ ಜಗದೀಶ್ ಸ್ವಾಗತಿಸಿ,ರಮೇಶ್ ವಂದಿಸಿದರು.
ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಅಂಬೇಡ್ಕರ್ ಜಯಂತಿ ಅಂಗವಾಗಿ ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ೬ ಮಂದಿ ವಿದ್ಯಾರ್ಥಿಗಳಿಗೆ ಬಹುಮಾನ ಮತ್ತು ಪ್ರಶಸ್ತಿ ಪತ್ರಗಳನ್ನು ನೀಡಲಾಯಿತು.
One should resolve to work for the development of the community.
Leave a comment