Home namma chikmagalur chikamagalur ಆನ್‌ಲೈನ್ ಬುಕಿಂಗ್ ವ್ಯವಸ್ಥೆಯ ವಂಚನೆ ಪತ್ತೆ
chikamagalurHomeLatest Newsnamma chikmagalur

ಆನ್‌ಲೈನ್ ಬುಕಿಂಗ್ ವ್ಯವಸ್ಥೆಯ ವಂಚನೆ ಪತ್ತೆ

Share
Share

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಕಳೆದ ಕೆಲವು ದಿನಗಳಿಂದ ಸುರಿದ ಧಾರಾಕಾರ ಮಳೆಯಿಂದ ಪ್ರಕೃತಿ ಸೌಂದರ್ಯ ಮತ್ತಷ್ಟು ಇಮ್ಮಡಿಗೊಂಡಿದ್ದು, ಚಂದ್ರದ್ರೋಣ ಪರ್ವತ ಶ್ರೇಣಿಯ ಮುಳ್ಳಯ್ಯನಗಿರಿ, ದತ್ತಪೀಠ ಸೇರಿದಂತೆ ಪ್ರಮುಖ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ.

ವಾರಾಂತ್ಯದಲ್ಲಿ (ವೀಕೆಂಡ್) ಪ್ರವಾಸಿಗರ ಸಂಖ್ಯೆ ಗಣನೀಯವಾಗಿ ಹೆಚ್ಚಾಗುತ್ತಿದ್ದು, ಆನ್‌ಲೈನ್ ಬುಕಿಂಗ್ ವ್ಯವಸ್ಥೆಯನ್ನು ದುರುಪಯೋಗಪಡಿಸಿಕೊಂಡು ವಂಚನೆ ನಡೆಸುತ್ತಿದ್ದ ಜಾಲವನ್ನು ಪ್ರವಾಸೋದ್ಯಮ ಇಲಾಖೆ ಪತ್ತೆಹಚ್ಚಿದೆ.

ಗಿರಿ ಪ್ರದೇಶಕ್ಕೆ ಪ್ರವೇಶಿಸಲು ಪ್ರವಾಸೋದ್ಯಮ ಇಲಾಖೆಯು ದಿನಕ್ಕೆ ಎರಡು ಸ್ಲಾಟ್‌ಗಳಲ್ಲಿ ಒಟ್ಟು 1,600 ವಾಹನಗಳಿಗೆ ಮಾತ್ರ ಆನ್‌ಲೈನ್ ಬುಕಿಂಗ್ ಮೂಲಕ ಅವಕಾಶ ಕಲ್ಪಿಸಿದೆ. ಆದರೆ ವಾರಾಂತ್ಯದಲ್ಲಿ ಎಲ್ಲಾ ಸ್ಲಾಟ್‌ಗಳು ಕ್ಷಣಾರ್ಧದಲ್ಲೇ ಭರ್ತಿಯಾಗುತ್ತಿರುವುದನ್ನು ಬಂಡವಾಳ ಮಾಡಿಕೊಂಡ ಕೆಲ ಕಿಡಿಗೇಡಿಗಳು, ಇಲಾಖೆಯ ಅಧಿಕೃತ ಸಾಫ್ಟ್‌ವೇರ್ ಹಾಗೂ ಬುಕಿಂಗ್ ರಶೀದಿಯ ಮಾದರಿಯನ್ನೇ ನಕಲಿ ರೂಪದಲ್ಲಿ ಸೃಷ್ಟಿಸಿ, ಹಣ ಪಾವತಿಯಾಗಿರುವಂತೆ ಕೃತಕ ರಶೀದಿಗಳನ್ನು ತಯಾರಿಸಿ ಪ್ರವಾಸಿಗರಿಗೆ ನೀಡುತ್ತಿದ್ದರು. ಈ ಮೂಲಕ ಅನೇಕ ಮಂದಿಯನ್ನು ವಂಚಿಸಿ ಗಿರಿ ಪ್ರದೇಶಕ್ಕೆ ಕಳುಹಿಸುತ್ತಿದ್ದ ಜಾಲ ಸಕ್ರಿಯವಾಗಿತ್ತು.

ಈ ಬಗ್ಗೆ ಮಾಹಿತಿ ದೊರಕುತ್ತಿದ್ದಂತೆ ಪ್ರವಾಸೋದ್ಯಮ ಇಲಾಖೆ ತನಿಖೆ ನಡೆಸಿ ನಕಲಿ ಬುಕಿಂಗ್ ರಶೀದಿಗಳನ್ನು ಸೃಷ್ಟಿಸುತ್ತಿದ್ದ ನಾಲ್ವರನ್ನು ಪತ್ತೆಹಚ್ಚಿದೆ. ಅಧಿಕಾರಿಗಳು ಆರೋಪಿಗಳಿಂದ ತಪ್ಪೊಪ್ಪಿಗೆ ಪತ್ರ, ಆಧಾರ್ ಕಾರ್ಡ್ ಸೇರಿದಂತೆ ಅಗತ್ಯ ದಾಖಲೆಗಳನ್ನು ವಶಪಡಿಸಿಕೊಂಡು, ಮುಂದಿನ ಕಾನೂನು ಕ್ರಮಕ್ಕಾಗಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಇನ್ನು ಮುಂದೆ ಇಲಾಖೆಯ ಅಧಿಕೃತ ವೆಬ್‌ಸೈಟ್, ಬುಕಿಂಗ್ ವ್ಯವಸ್ಥೆ ಅಥವಾ ರಶೀದಿಗಳನ್ನು ನಕಲು ಮಾಡಿ ಸರ್ಕಾರ ಹಾಗೂ ಪ್ರವಾಸಿಗರಿಗೆ ವಂಚನೆ ಮಾಡಲು ಯತ್ನಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರವಾಸೋದ್ಯಮ ಇಲಾಖೆ ಎಚ್ಚರಿಕೆ ನೀಡಿದೆ.

ಇದೇ ವೇಳೆ, ಸ್ಥಳೀಯ ಜೀಪ್ ಚಾಲಕರು ಮುಂಗಡ ಬುಕಿಂಗ್ ಮಾಡಿಕೊಂಡು ಸ್ಲಾಟ್‌ಗಳು ಮುಕ್ತಾಯಗೊಂಡಿವೆ ಎಂದು ಹೇಳಿ ಪ್ರವಾಸಿಗರಿಂದ ಅಧಿಕ ಹಣ ವಸೂಲಿ ಮಾಡುತ್ತಿರುವ ಆರೋಪಗಳೂ ಕೇಳಿಬಂದಿವೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯ ಸಭೆಯಲ್ಲಿ ಚರ್ಚೆ ನಡೆಸಲಾಗಿದ್ದು, ಚಂದ್ರದ್ರೋಣ ಪರ್ವತದ ತಪ್ಪಲಿನಿಂದ ಮುಳ್ಳಯ್ಯನಗಿರಿ ಹಾಗೂ ದತ್ತಪೀಠಕ್ಕೆ ಸಂಚರಿಸುವ ಜೀಪ್‌ಗಳಿಗೆ ಜರಿಫಾಲ್ಸ್ ಮಾದರಿಯಲ್ಲೇ ನಿಗದಿತ ದರ ನಿಗದಿ ಮಾಡಲು ತೀರ್ಮಾನಿಸಲಾಗಿದೆ.

ಶೀಘ್ರದಲ್ಲೇ ನಿಗದಿತ ದರಪಟ್ಟಿಯನ್ನು ಪ್ರಮುಖ ಸ್ಥಳಗಳಲ್ಲಿ ಪ್ರದರ್ಶಿಸಿ, ಪ್ರವಾಸಿಗರಿಗೆ ಆಗುತ್ತಿರುವ ವಂಚನೆಯನ್ನು ತಡೆಯಲು ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಲೋಹಿತ್ ತಿಳಿಸಿದ್ದಾರೆ.

Online booking system fraud detected

Share

Leave a comment

Leave a Reply

Your email address will not be published. Required fields are marked *

Don't Miss

ಬೆಳವಾಡಿ ಕೆರೆಗೆ ಎತ್ತಿನಹೊಳೆ ನೀರು-ರೈತರಲ್ಲಿ ಸಂತಸ

ಚಿಕ್ಕಮಗಳೂರು: ಎತ್ತಿನಹೊಳೆ ಯೋಜನೆಯ ನೀರಿನಿಂದ ಚಿಕ್ಕಮಗಳೂರು ತಾಲೂಕಿನ ಲಕ್ಯಾ ಹೋಬಳಿಯ ಬೆಳವಾಡಿ ಕೆರೆ ತುಂಬಿ ಕೋಡಿ ಬಿದ್ದ ಹಿನ್ನೆಲೆಯಲ್ಲಿ ಶಾಸಕ ಹೆಚ್.ಡಿ.ತಮ್ಮಯ್ಯ ಹಾಗೂ ವಿಧಾನ ಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ ಅವರು...

`ನಾನು’ ಎಂಬುದನ್ನು ಬಿಟ್ಟು `ನಾವು’ ಎಂಬ ಮನೋಭಾವ ಬೆಳೆಸಿಕೊಳ್ಳಿ

ಚಿಕ್ಕಮಗಳೂರು: `ನಾನು ಮಾಡಿದ್ದು, ನಾನು ಮಾಡಿದ್ದು’ ಎನ್ನುವುದಕ್ಕಿಂತ `ನಾವು ಮಾಡಿದ್ದು’ ಎಂಬ ಮನೋಭಾವ ಬೆಳೆಸಿಕೊಳ್ಳಬೇಕು. ಜನರ ಆಶೀರ್ವಾದದಿಂದಲೇ ಜನಪ್ರತಿನಿಧಿಗಳು ಅಧಿಕಾರಕ್ಕೆ ಬರುತ್ತಾರೆ. ಅಭಿವೃದ್ಧಿ ಕಾರ್ಯಗಳಿಗೆ ವೈಯಕ್ತಿಕ ಹಕ್ಕು ಸಾಧಿಸುವ ಬದಲು ಎಲ್ಲರ...

Related Articles

ಮುಖ್ಯಮಂತ್ರಿ ಸೂಕ್ತ ಭದ್ರತಾ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಮುಖ್ಯಮಂತ್ರಿಗಳ ಜಿಲ್ಲಾ ಭೇಟಿಯ ಸಂದರ್ಭದಲ್ಲಿ ಸೂಕ್ತ ರೀತಿಯಲ್ಲಿ ಭದ್ರತಾ ವ್ಯವಸ್ಥೆ ಕಲ್ಪಿಸುವುದಲ್ಲದೆ, ಶಿಷ್ಟಾಚಾರ ಪಾಲನೆಗೆ...

ಎಂ.ಸಿ. ಹಳ್ಳಿಯಲ್ಲಿ ಕಡವೆ ಬೇಟೆ-ಆರೋಪಿಗಳ ಬಂಧನ

ತರೀಕೆರೆ: ಲಕ್ಕವಳ್ಳಿ ವಲಯದ ಎಂ.ಸಿ. ಹಳ್ಳಿ ಶಾಖೆಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ಕಡವೆಯನ್ನು ಬೇಟೆ ಮಾಡಿ ಮಾಂಸ...

ಸೆ.21ರಿಂದ ಮುಖ್ಯಮಂತ್ರಿ ನಿವಾಸದವರೆಗೆ ಬೃಹತ್ ಪಾದಯಾತ್ರೆ

ಚಿಕ್ಕಮಗಳೂರು: ಹೊರಗುತ್ತಿಗೆ ಪೌರನೀರು ಸರಬರಾಜು ನೌಕರರನ್ನು ಪೌರಕಾರ್ಮಿಕರ ಮಾದರಿಯಲ್ಲಿ ವಿಶೇಷ ನೇರ ನೇಮಕಾತಿ ಅಥವಾ ನೇರಪಾವತಿ...

 ವಿಶ್ವಕರ್ಮ ಸಮುದಾಯ ಎಲ್ಲ ರಂಗಗಳಲ್ಲೂ ಮುಂಚೂಣಿಗೆ ಬರಲಿ

ಚಿಕ್ಕಮಗಳೂರು: ವಿಶ್ವಕರ್ಮ ಸಮುದಾಯ ಎಲ್ಲ ರಂಗಗಳಲ್ಲೂ ಮುಂಚೂಣಿಗೆ ಬರಬೇಕು ಎಂದು ರಾಜ್ಯ ಪರಿಸರ ಮೌಲ್ಯಮಾಪನ ಪ್ರಾಧಿಕಾರದ...