Home namma chikmagalur chikamagalur ಇನ್ಫೋಸಿಸ್ ಕಂಪನಿಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಆನ್‌ಲೈನ್ ಉದ್ಯೋಗ ವಂಚನೆ
chikamagalurCrime NewsHomeLatest Newsnamma chikmagalur

ಇನ್ಫೋಸಿಸ್ ಕಂಪನಿಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಆನ್‌ಲೈನ್ ಉದ್ಯೋಗ ವಂಚನೆ

Share
Share

ಚಿಕ್ಕಮಗಳೂರು : ಇಂಜಿನಿಯರಿಂಗ್ ಪದವೀಧರೆ ಆನ್‌ಲೈನ್ ಉದ್ಯೋಗ ವಂಚನೆಗೆ ಬಲಿಯಾಗಿದ್ದು, ಈ ಸಂಬಂಧ ಚಿಕ್ಕಮಗಳೂರು ನಗರದ ಸೆನ್ (CEN) ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

2025ರಲ್ಲಿ ಬಿ.ಇ ಕಂಪ್ಯೂಟರ್ ಸೈನ್ಸ್ ಶಿಕ್ಷಣ ಮುಗಿಸಿ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದ ಯುವತಿ, ಲಿಂಕ್ಸ್‌ಇನ್ (Linkedin) ಸಾಮಾಜಿಕ ಜಾಲತಾಣದ ಮೂಲಕ ವಂಚಕರ ಜಾಲಕ್ಕೆ ಸಿಲುಕಿದ್ದಾರೆ.

ಮನು ಕುಮಾ‌ರ್ ಎಂಬ ವ್ಯಕ್ತಿಯು ತಾನು ಇನ್ಫೋಸಿಸ್ ಕಂಪನಿಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ, ಶೀಲ್ ರತನ್ ಪಾಂಡುರಂಗ ಎಂಬುವವರ ಮೂಲಕ ಪ್ರಕ್ರಿಯೆ ನಡೆಸುವುದಾಗಿ ತಿಳಿಸಿದ್ದನು. ಕಂಪನಿಯ ಡೆವಲಪ್‌ಮೆಂಟ್ ಫಂಡ್ ಹಾಗೂ ಫೀಸ್ ಹೆಸರಿನಲ್ಲಿ ಒಟ್ಟು 3,10,000 ರೂಪಾಯಿಗಳನ್ನು ನೀಡುವಂತೆ ಯುವತಿಯನ್ನು ನಂಬಿಸಲಾಗಿತ್ತು.

ಇದನ್ನು ನೈಜವೆಂದು ನಂಬಿದ ಯುವತಿಯು ತನ್ನ ಐಸಿಐಸಿಐ ಬ್ಯಾಂಕ್ ಖಾತೆಯಿಂದ ವಿವಿಧ ಹಂತಗಳಲ್ಲಿ ವಂಚಕರು ಸೂಚಿಸಿದ ಬ್ಯಾಂಕ್ ಖಾತೆಗಳಿಗೆ ಹಣವನ್ನು ವರ್ಗಾವಣೆ ಮಾಡಿದ್ದರು. ಹಣ ಪಡೆದ ನಂತರ ಉದ್ಯೋಗ ನೀಡದೆ ಸತಾಯಿಸಿದ ಆರೋಪಿಗಳು, ಕೇಳಿದಾಗ ನಕಲಿ ನೇಮಕಾತಿ ಪತ್ರವನ್ನು (Job Letter) ಕಳುಹಿಸಿ ವಂಚಿಸಿದ್ದಾರೆ.

ಅಷ್ಟೇ ಅಲ್ಲದೆ, ಹಣ ವಾಪಸ್ ನೀಡುವಂತೆ ಒತ್ತಾಯಿಸಿದಾಗ ಊಟ ಮತ್ತು ಮಡಿಕೇರಿಯ ರೆಸಾರ್ಟ್ಗಳಿಗೆ ಬರುವಂತೆ ಯುವತಿಗೆ ಸೂಚಿಸಿ ದಿಕ್ಕು ತಪ್ಪಿಸಲು ಯತ್ನಿಸಿದ್ದಾರೆ. ತಾನು ಮೋಸ ಹೋಗಿರುವುದು ಖಚಿತವಾಗುತ್ತಿದ್ದಂತೆ ಯುವತಿಯು ಪೊಲೀಸ್ ಠಾಣೆ ಮೆಟ್ಟಿಲೇರಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Online job scam claiming to offer job at Infosys

Share

Leave a comment

Leave a Reply

Your email address will not be published. Required fields are marked *

Don't Miss

ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್

ಚಿಕ್ಕಮಗಳೂರು:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾರೀ ಗಾಳಿ-ಮಳೆಯ ಅಬ್ಬರ ಮುಂದುವರಿದಿದೆ. ನಿರಂತರ ಮಳೆಯಿಂದ ಬೃಹತ್ ಬಂಡೆಯೊಂದು ಹಾಗೂ ಮರ ರಸ್ತೆ ಮೇಲೆ ಧರೆಗುರುಳಿದ ಪರಿಣಾಮ ಸುಮಾರು ಅರ್ಧ ಗಂಟೆ...

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್ ಪ್ಲೇಟ್ ಇಲ್ಲದ ಇನ್ನೋವಾ ಕಾರಿನಲ್ಲಿ ಗೋವುಗಳ ಸಾಗಣೆಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಿಢೀರ್...

Related Articles

ಉಪ ಸಭಾಪತಿ ಸ್ಥಾನಕ್ಕೆ ಪ್ರಾಣೇಶ ರಾಜೀನಾಮೆ ಖಚಿತ

ಚಿಕ್ಕಮಗಳೂರು: ಉಪ ಸಭಾಪತಿ ಸ್ಥಾನಕ್ಕೆ ಎಂ,ಕೆ.ಪ್ರಾಣೇಶ್ ನಾಳೆ ರಾಜೀನಾಮೆನೀಡುತ್ತಾರೆ. ಕಳೆದ ನಾಲ್ಕುವರೆ ವರ್ಷಗಳಿಂದ ಪ್ರಾಣೇಶ್ ವಿಧಾನ...

ಬಹುಕೋಟಿ ರೂ.ಗಳ ಹಗರಣ ಪ್ರಕರಣದ ಸಿಬಿಐ-ಇಡಿ ತನಿಖೆಗೆ ತನಿಖೆ ಆಗ್ರಹ

ಚಿಕ್ಕಮಗಳೂರು : ವಿವಿಧ ಬ್ಯಾಂಕುಗಳಲ್ಲಿ ಬಡವರು, ಕೂಲಿ ಕಾರ್ಮಿಕರು, ಕೃಷಿಕರ ಹೆಸರಿನಲ್ಲಿ ಖಾತೆಗಳನ್ನು ತೆರೆದು ಬಹುಕೋಟಿ...

ಶಾಸಕಿ ನಯನ ನೈತಿಕತೆ ಇದ್ದರೆ ರಾಜೀನಾಮೆ ನೀಡಿ ಗೆದ್ದು ಬರಲಿ

ಚಿಕ್ಕಮಗಳೂರು: ಮೂಡಿಗೆರೆ ಶಾಸಕಿ ನಯನ ನೈತಿಕತೆ ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೆ ಚುನಾವಣೆಯಲ್ಲಿ...

 ಹೊಸ ಬುಲೆಟ್ ಬೈಕ್‌ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿ ರಸ್ತೆ ಅಪಘಾತದಲ್ಲಿ ಸಾವು

ಚಿಕ್ಕಮಗಳೂರು: ಹೊಸ ಬುಲೆಟ್ ಬೈಕ್‌ನಲ್ಲಿ ಸ್ನೇಹಿತನನ್ನು ಕರೆತರಲು ತೆರಳುತ್ತಿದ್ದ 19 ವರ್ಷದ ವಿದ್ಯಾರ್ಥಿಯೊಬ್ಬ ರಸ್ತೆ ಅಪಘಾತದಲ್ಲಿ...