Home namma chikmagalur ಭಾರಿ ಮಳೆ ಕರಾವಳಿ ಜಿಲ್ಲೆಗಳಿಗೆ ಆರೇಂಜ್ ಅಲರ್ಟ್
namma chikmagalurchikamagalurHomeLatest News

ಭಾರಿ ಮಳೆ ಕರಾವಳಿ ಜಿಲ್ಲೆಗಳಿಗೆ ಆರೇಂಜ್ ಅಲರ್ಟ್

Share
Share

ಬೆಂಗಳೂರು: ದೇಶದ ಹಲವು ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟದಿಂದ ಭೂಕುಸಿತ, ಪ್ರವಾಹ ಸೃಷ್ಟಿಯಾಗಿದೆ. ಹಲವು ಸಾವು ಸಂಭವಿಸಿದ್ದು, ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ. ಇತ್ತ ಕರ್ನಾಟಕದಲ್ಲೂ ಭಾರಿ ಮಳೆಯಾಗುತ್ತಿದೆ. ಕರಾವಳಿ ಜಿಲ್ಲೆಗಳು, ಮಲೆನಾಡು ಹಾಗೂ ಕೊಡಗು ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ.

ಮಳೆ ಬೆನ್ನಲ್ಲೇ ಹವಾಮಾನ ಇಲಾಖೆ ಕರಾವಳಿ ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ನೀಡಿದ್ದರೆ,ಬೆಂಗಲೂರು ಸೇರಿದಂತೆ ರಾಜ್ಯದ ಇತರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಭಾರಿ ಮಳೆ ಪರಿಣಾಮ ರಾಜ್ಯದ 5 ಜಿಲ್ಲೆಗಳ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ.

ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಹೀಗಾಗಿ ರಾಜ್ಯದ 5 ಜಿಲ್ಲೆಯ ಶಾಲಾ ಕಾಲೇಜಿಗೆ ಇಂದು (ಆಗಸ್ಟ್ 28) ರಜೆ ಘೋಷಿಸಲಾಗಿದೆ.

ಈ ಪೈಕಿ ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಯ ಕೆಲ ತಾಲೂಕಿನ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ. ಇನ್ನುಳಿದಂತೆ ಉಡುಪಿ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳ ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ.

ಯಾದಗಿರಿ ಜಿಲ್ಲೆಯ ಶಾಲಾ ಕಾಲೇಜು ಹಾಗೂ ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ. ಯಾದಿಗಿರಿ ಜಿಲ್ಲಾಧಿಕಾರಿ ಹರ್ಷಲ್ ಬೋಯರ್ ಆದೇಶ ಮಾಡಿದ್ದಾರೆ. ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ಹೋಗಲು ಆಗದಂತ ಸ್ಥಿತಿ ನಿರ್ಮಾಣವಾಗಿದೆ. ಜೊತೆಗೆ ವಿದ್ಯಾರ್ಥಿಗಳ‌ ಆರೋಗ್ಯದ ಹಿದೃಷ್ಟಿಯಿಂದ ರಜೆ ಘೋಷಣೆ ಮಾಡಲಾಗಿದೆ.

ಭಾರಿ ಮಳೆಯಾಗುತ್ತಿರುವ ಕಾರಣ ಬೀದರ್ ಜಿಲ್ಲೆಯ ಔರಾದ್ ಶಾಲಾ ಕಾಲೇಜಿಗೆ ಇಂದು ರಜೆ ಘೋಷಿಸಲಾಗಿದೆ. ತಹಸೀಲ್ದಾರ ಮಹೇಶ ಪಾಟೀಲ್ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಭಾರಿ ಮಳೆಗೆ ಮುನ್ನಚ್ಚರಿಕಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ.

Orange alert for coastal districts due to heavy rain

 

Share

Leave a comment

Leave a Reply

Your email address will not be published. Required fields are marked *

Don't Miss

ಚಿಕ್ಕಮಗಳೂರು ತಾಲೂಕು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆಗೆ ಆಗ್ರಹ

ಚಿಕ್ಕಮಗಳೂರು: ಈ ಬಾರಿಯ ಮುಂಗಾರು ಅವಧಿಯಲ್ಲಿ ಚಿಕ್ಕಮಗಳೂರು ತಾಲೂಕಿನಲ್ಲಿ ತೀವ್ರ ಮಳೆ ಕೊರತೆಯಾಗಿದ್ದು, ಕೃಷಿ, ತೋಟಗಾರಿಕೆ, ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಸಮಸ್ಯೆ ಎದುರಾಗುವ ಆತಂಕವಿದೆ. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು...

ಕಡೂರು ಬಸ್ ನಿಲ್ದಾಣದಲ್ಲಿ 50 ಗ್ರಾಂ ತೂಕದ ಚಿನ್ನದ ಸರ ಕಳ್ಳತನ

ಕಡೂರು: ಜನದಟ್ಟಣೆಯನ್ನೇ ಬಂಡವಾಳ ಮಾಡಿಕೊಂಡ ಕಳ್ಳರ ಗ್ಯಾಂಗ್ ಒಂದು, ಬಸ್ ಹತ್ತುವ ವೇಳೆ ಮಹಿಳೆಯ ಗಮನ ಬೇರೆಡೆ ಸೆಳೆದು ಕುತ್ತಿಗೆಯಲ್ಲಿದ್ದ ಬರೋಬ್ಬರಿ 50 ಗ್ರಾಂ ತೂಕದ ಚಿನ್ನದ ಸರವನ್ನು ಕ್ಷಣಾರ್ಧದಲ್ಲಿ ಎಗರಿಸಿ...

Related Articles

ಕೋಟ್ಯಂತರ ರೂಪಾಯಿ ವಂಚಿಸಿದ ನಕಲಿ ಲೇಡಿ ಪಿಎಸ್‌ಐ ಬಂಧನ

ಚಿಕ್ಕಮಗಳೂರು: ತಾನು ಬೆಂಗಳೂರಿನ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಎಂದು ನಂಬಿಸಿ, ಚಿನ್ನ, ಹಣ, ಮೊಬೈಲ್ ಹಾಗೂ ಕಾರು...

ನಲಪಾಡ್ ಹೇಳಿಕೆ ಖಂಡಿಸಿ ಜೆಡಿಎಸ್ ಅಲ್ಪಸಂಖ್ಯಾತ ಘಟಕ ಆಕ್ರೋಶ

ಚಿಕ್ಕಮಗಳೂರು: ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮತ್ತು ಜೆಡಿಎಸ್ ರಾಜ್ಯ ಯುವ ಘಟಕದ...

ಮಳಲೂರು ಏತ ನೀರಾವರಿ ಯೋಜನೆ ಸಮಸ್ಯೆ ಬಗೆಹರಿಸಲು ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಮಳಲೂರು ಏತ ನೀರಾವರಿ ಅನುಷ್ಠಾನ ಮತ್ತು ಅರಸನ ನಾಲೆ ಪುನಶ್ಚೇತನ ಯೋಜನೆಗಳ ಕಾಮಗಾರಿಗಳಿಗೆ ಉಂಟಾಗಿರುವ...

2ಬಿ ಮೀಸಲಾತಿ ಮರುಸ್ಥಾಪನೆಗೆ ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಚಿಕ್ಕಮಗಳೂರು: ರಾಜ್ಯದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗುತ್ತಿದ್ದ ಶೇ.4ರಷ್ಟು 2ಬಿ ಮೀಸಲಾತಿಯನ್ನು ಮರುಸ್ಥಾಪಿಸಲು ರಾಜ್ಯ ಸರ್ಕಾರ ಕೂಡಲೇ...