Home namma chikmagalur ನಿಸ್ವಾರ್ಥಗುಣ, ಸೇವಾಮನೋಭಾವದಿಂದ ಸಂಘಟನೆ ವೃದ್ದಿ
namma chikmagalurchikamagalurHomeLatest News

ನಿಸ್ವಾರ್ಥಗುಣ, ಸೇವಾಮನೋಭಾವದಿಂದ ಸಂಘಟನೆ ವೃದ್ದಿ

Share
Share

ಚಿಕ್ಕಮಗಳೂರು:  ಪ್ರಾಮಾಣಿಕತೆ, ನಿಸ್ವಾರ್ಥ ಗುಣ ಹಾಗೂ ಸೇವಾ ಮನೋಭಾವದಿಂ ದ ಸಂಘಟನೆಯನ್ನು ಕಟ್ಟಿಬೆಳೆಸಿದಾಗ ಮಾತ್ರ ಸಮಾಜದಲ್ಲಿ ಪರಿಪೂರ್ಣವಾಗಿ ಬೇರೂರಲು ಸಾಧ್ಯ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದರು.

ನಗರದ ಕುವೆಂಪು ಕಲಾಮಂದಿರದಲ್ಲಿ ಗುರುವಾರ ನಡೆದ ಕರ್ನಾಟಕ ಶ್ರಮಿಕ ಟ್ಯಾಕ್ಸಿ ಚಾಲಕರ ವೇ ದಿಕೆ ಜಿಲ್ಲಾ ಪದಾಧಿಕಾರಿಗಳ ಆಯ್ಕೆ ಮತ್ತು ಪದಗ್ರಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಸಂಘಟನೆಗಳಲ್ಲಿ ಸ್ವಾರ್ಥ ನುಸುಳಿದರೆ, ಅಹಂಗೆ ಅವಕಾಶ ನೀಡಿದರೆ, ಒಳಗಿರುವವರ ಪ್ರತಿಷ್ಟೆಗೆ ವೇದಿ ಕೆಯಾದರೆ ಬಹುಕಾಲ ಉಳಿಗಾಲವಿಲ್ಲ. ಹೀಗಾಗಿ ಸಂಘಟನೆ ನೇತೃತ್ವದ ರೂವಾರಿಗಳು ನಿಸ್ವಾರ್ಥತನದಿಂ ದ ಕಾರ್ಯನಿರ್ವಹಿಸಬೇಕು. ಆ ನಿಟ್ಟಿನಲ್ಲ ಟ್ಯಾಕ್ಸಿ ಸಂಘಟನೆ ಅಧ್ಯಕ್ಷರು, ಚಾಲಕರಿಗೆ ಸೂಕ್ತ ಮಾರ್ಗದರ್ಶನ ನೀಡಿ ನೆರವಿಗೆ ಧಾವಿಸಬೇಕು ಎಂದರು.

ನದಿಗಳು ಎಂದಿಗೂ ದೊಡ್ಡಪ್ರವಾಹದಿಂದ ಹುಟ್ಟುವುದಿಲ್ಲ. ನದಿಗಳ ಉಗಮ ಸ್ಥಾನವನ್ನು ಗಮನಿಸಿರ ಬಹುದು. ಸಣ್ಣ ಸಣ್ಣ ತೊರೆಗಳಿಂದ ಹೊಳೆಯಾಗಿ, ನದಿಗಳಾಗುತ್ತವೆ. ಆ ರೀತಿಯಲ್ಲಿ ಇದೀಗ ತೊರೆಗಳಾಗಿ ಉಗಮಿಸಿರುವ ಟ್ಯಾಕ್ಸಿ ಚಾಲಕರ ಸಂಘಟನೆಗೆ ಹಲವರ ಕೈಜೋಡಣೆಯಿದ ದೊಡ್ಡನದಿಗಳಾಗಿ ಸಾಮರ್ಥ್ಯ ವಿಸ್ತರಿಸಬೇಕು ಎಂದು ತಿಳಿಸಿದರು.

ಪ್ರಸ್ತುತ ಟ್ಯಾಕ್ಸಿ ಚಾಲಕರೊಂದಿಗೆ ಸಂಕಷ್ಟದ ಸಮಯ ಹಾಗೂ ಒಳ್ಳೆಯ ಕೆಲಸಕ್ಕೆ ಮನೆಮಗನಂತೆ ಸದಾ ನಿಮ್ಮೊಂದಿಗೆ ನಿಲ್ಲಲು ಸಿದ್ಧ. ಸಂಘಟನೆ ಪದಾಧಿಕಾರಿಗಳು ಯಾವುದೇ ಆತಂಕಕ್ಕೆ ಒಳಗಾಗದೇ ಸಂಘಟನೆ ಯನ್ನು ಬಲಿಷ್ಟಗೊಳಿಸುವಲ್ಲಿ ಹೆಜ್ಜೆಹಾಕುವ ಜೊತೆಗೆ ಸಾರಿಗೆ ಇಲಾಖೆಯ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸೂಚಿಸಿದರು.

ಕರ್ನಾಟಕ ಶ್ರಮಿಕ ಟ್ಯಾಕ್ಸಿ ಚಾಲಕರ ವೇದಿಕೆ ರಾಜ್ಯಾಧ್ಯಕ್ಷ ಹೆಚ್.ಕೆ.ಪ್ರಕಾಶ್ ಮಾತನಾಡಿ ರಾಜ್ಯದ ಚಾ ಲಕರು ಹೊರರಾಜ್ಯಗಳಲ್ಲಿ ಬ್ರೇಕ್‌ಡೌನ್ ಅಥವಾ ಅಂಗವೈಫಲ್ಯತೆಯಾದಲ್ಲಿ ವೇದಿಕೆಯಿಂದ ಸಹಾಯಧನ ಕಲ್ಪಿಸುವ ಗುರಿಹೊಂದಿದೆ. ಚಾಲಕರ ಕುಟುಂಬಕ್ಕೆ ಪ್ರತಿಭಾ ಪುರಸ್ಕಾರ, ರಕ್ತದಾನ ಶಿಬಿರ ಆಯೋಜಿಸಿ ಚಾಲ ಕರ ಶ್ರೇಯೋಭಿವೃದ್ದಿಗೆ ಕೆಲಸ ಮಾಡಲಾಗುವುದು ಎಂದರು.

ಪ್ರಸ್ತುತ ರಾಜ್ಯದಲ್ಲಿ ೨೭೦ಕ್ಕೂ ಹೆಚ್ಚು ಸದಸ್ಯರು ನೋಂದಣಿಯಾಗಿದೆ. ಈ ಪೈಕಿ ಜಿಲ್ಲೆಯಲ್ಲಿ ೧೧೦ ಚಾಲ ಕರು ವೇದಿಕೆಯಲ್ಲಿ ಸದಸ್ಯತ್ವ ಹೊಂದಿದ್ದಾರೆ. ಜಿಲ್ಲೆಯಿಂದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು ಮು ಮುಂದೆ ಮಂಡ್ಯ, ಶಿವಮೊಗ್ಗ ಜಿಲ್ಲೆಗಳಲ್ಲಿ ಸಂಘಟನೆ ಪದಾಧಿಕಾರಿಗಳನ್ನು ನೇಮಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಆರ್‌ಟಿಓ ಅಧಿಕಾರಿ ನರಸೇಗೌಡ, ಚಂದ್ರಕಲಾ, ವೇದಿಕೆ ರಾಜ್ಯ ಗೌರವಾಧ್ಯಕ್ಷ ರಾಜು, ಉಪಾಧ್ಯಕ್ಷ ಸಂಗಪ್ಪ ಬಾಗಲಕೋಟೆ, ಪ್ರಧಾನ ಕಾರ್ಯದರ್ಶಿ ಇ.ಗಿರೀಶ್, ಜಂಟಿ ಕಾರ್ಯದರ್ಶಿ ರಾಜ್‌ಕುಮಾರ್, ಖಜಾಂಚಿ ನಾಗರಾಜು, ಸಂಘಟನಾ ಕಾರ್ಯದರ್ಶಿ ಯೋಗೇಶ್, ಸಹ ಸಂಘಟನಾ ಕಾರ್‍ಯದರ್ಶಿ ರಾಜು ಹಾಗೂ ಚಾಲಕರು ಉಪಸ್ಥಿತರಿದ್ದರು.

Organizational growth through selflessness and service spirit

Share

Leave a comment

Leave a Reply

Your email address will not be published. Required fields are marked *

Don't Miss

ದಾಸರಹಳ್ಳಿ ಕೆರೆ ಸೆ.೧೦ ರಂದು ಲೋಕಾರ್ಪಣೆ

ಚಿಕ್ಕಮಗಳೂರು: ಸುಮಾರು ೨ ಕೋಟಿ ರುಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿರುವ ದಾಸರಹಳ್ಳಿ ಕೆರೆಯನ್ನು ಸೆಪ್ಟಂಬರ್ ೧೦ ರಂದು ಲೋಕಾರ್ಪಣೆ ಮಾಡಲಾಗುವುದು ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅವರು ಹೇಳಿದರು. ಸೋಮವಾರ ಕೆರೆಯ...

ಸಾಮಾಜಿಕ ಹೋರಾಟಗಾರನ ಹತ್ಯೆಯ ಆರೋಪಿಗಳ ಕಠಿಣ ಶಿಕ್ಷೆಗೆ ಮನವಿ

ಚಿಕ್ಕಮಗಳೂರು:  ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ಭೂಮಾನ ಂದ ಹತ್ಯೆಗೈದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ, ನೊಂದ ಕುಟುಂಬಕ್ಕೆ ಸರ್ಕಾರಿ ಹುದ್ದೆ ಕಲ್ಪಿಸಿಕೊಡಬೇ ಕು ಎಂದು ಆಗ್ರಹಿಸಿ ದಸಂಸ ಮುಖಂಡರುಗಳು...

Related Articles

ನಗರದಲ್ಲಿ ಅವಿಧಿ ಮುಗಿದ ಚಾಕೊಲೇಟ್ ಸಾಸ್ ಬಳಸಿ ಕೇಕ್ ….?

ಚಿಕ್ಕಮಗಳೂರು: ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಹೋಟೆಲ್‌ ಹಾಗೂ ಬೇಕರಿಗಳ ಮೇಲೆ ಕ್ಷಿಪ್ರ ಕಾರ್ಯಾಚರಣೆ...

ಬಿಜೆಪಿ-ಸಂಘಪರಿವಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಚಿಕ್ಕಮಗಳೂರು: ಉತ್ತರಾಖಾಂಡ ರಾಜ್ಯದ ಹಾಲದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಮೈದಾನವನ್ನು...

ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿಯಿಂದ...

ರಾಷ್ಟ್ರಧ್ವಜ ಅವಮಾನ ಆರೋಪ: ಕಾನೂನು ಕ್ರಮಕ್ಕೆ ರೈತ ಸಂಘ ಆಗ್ರಹ

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದು ಬೆಳಿಗ್ಗೆ ರಾಷ್ಟ್ರಧ್ವಜಾರೋಹಣ ಮಾಡಿ, ಮಧ್ಯಾಹ್ನದ ವೇಳೆಗೆ ಧ್ವಜವನ್ನು ಅವರೋಹಣ ಮಾಡಿರುವ ಘಟನೆಗೆ...