Home namma chikmagalur chikamagalur ಸಂತ ಸೇವಾಲಾಲ್ ಜಯಂತಿಯಲ್ಲಿ ಸರ್ಕಾರದ ವಿರುದ್ಧದ ಆಕ್ರೋಶ
chikamagalurHomeLatest Newsnamma chikmagalur

ಸಂತ ಸೇವಾಲಾಲ್ ಜಯಂತಿಯಲ್ಲಿ ಸರ್ಕಾರದ ವಿರುದ್ಧದ ಆಕ್ರೋಶ

Share
Share

ಚಿಕ್ಕಮಗಳೂರು: ಕಾಫಿನಾಡಿನ ಕುವೆಂಪು ಕಲಾ ಮಂದಿರದಲ್ಲಿ ಆಯೋಜಿಸಲಾಗಿದ್ದ ಸಂತ ಸೇವಾಲಾಲ್ ಜಯಂತಿ ಕಾರ್ಯಕ್ರಮವು ಸಂಭ್ರಮದ ಬದಲು ಸರ್ಕಾರದ ವಿರುದ್ಧದ ಆಕ್ರೋಶದ ಅಖಾಡವಾಗಿ ಮಾರ್ಪಟ್ಟಿತು.

ಸಮಾರಂಭದಲ್ಲಿ ಶಾಸಕ ತಮ್ಮಯ್ಯ ಅವರು ಭಾಷಣ ಮಾಡಲು ಆಗಮಿಸುತ್ತಿದ್ದಂತೆ ಬಂಜಾರ ಸಮುದಾಯದ ಮುಖಂಡರು ಏಕಾಏಕಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್ ಸರ್ಕಾರವು ಒಳ ಮೀಸಲಾತಿ ಹಂಚಿಕೆಯಲ್ಲಿ ಬಂಜಾರ ಸಮಾಜಕ್ಕೆ ದೊಡ್ಡ ಮಟ್ಟದ ದ್ರೋಹ ಎಸಗಿದೆ ಎಂದು ಗುಡುಗಿದ ಪ್ರತಿಭಟನಾಕಾರರು, ಕೇವಲ ಮತ ಬ್ಯಾಂಕ್‌ಗಾಗಿ ನಮ್ಮ ಕಣ್ಣಿಗೆ ಬೆಣ್ಣೆ ಹಚ್ಚುವ ಕೆಲಸ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕ್ಯಾಬಿನೆಟ್ ನಿರ್ಧಾರದಂತೆ ಶೇ. 5ರಷ್ಟು ಮೀಸಲಾತಿಯಲ್ಲಿ ಕೇವಲ ಶೇ. 1ರಷ್ಟನ್ನು ಅಲೆಮಾರಿಗಳಿಗೆ ನೀಡಿ, ಉಳಿದ ಶೇ. 4ರಷ್ಟರಲ್ಲಿ ಬರೋಬ್ಬರಿ 69 ಜಾತಿಗಳನ್ನು ಸೇರಿಸುವ ಮೂಲಕ ಬಂಜಾರ ಸಮುದಾಯವನ್ನು ‘ಸಿ’ ವರ್ಗಕ್ಕೆ ತಳ್ಳಿ ಅನ್ಯಾಯ ಮಾಡಲಾಗಿದೆ ಎಂಬುದು ಸಮಾಜದ ಪ್ರಮುಖ ಆರೋಪವಾಗಿದೆ. ಈ ಅವೈಜ್ಞಾನಿಕ ವರ್ಗೀಕರಣದಿಂದಾಗಿ ಮುಂದಿನ 20 ವರ್ಷಗಳ ಕಾಲ ಬಂಜಾರ ಯುವಕರಿಗೆ ಸರ್ಕಾರಿ ನೌಕರಿ ಕನಸಿನ ಮಾತಾಗಲಿದೆ ಎಂದು ಅವರು ಅಳಲು ತೋಡಿಕೊಂಡರು.

ರಾಜ್ಯದ 42 ಕ್ಷೇತ್ರಗಳಲ್ಲಿ ಬಂಜಾರ ಮತಗಳೇ ನಿರ್ಣಾಯಕವಾಗಿದ್ದು, ಶಾಸಕ ತಮ್ಮಯ್ಯ ಅವರ ಗೆಲುವಿನಲ್ಲೂ ಸಮಾಜದ ಪಾಲು ದೊಡ್ಡದಿದೆ ಎಂಬುದನ್ನು ನೆನಪಿಸಿದ ಮುಖಂಡರು, ಇನ್ನುಂದೆ ನಮ್ಮ ಬೇಡಿಕೆ ಈಡೇರದಿದ್ದರೆ ಜನಪ್ರತಿನಿಧಿಗಳಿಗೆ ಎಲ್ಲೆಡೆ ಫೇರಾವ್ ಹಾಕುವುದಾಗಿ ಖಡಕ್ ಎಚ್ಚರಿಕೆ ನೀಡಿದ್ದಾರೆ.

Outrage against the government on Sant Sevalal Jayanti

Share

Leave a comment

Leave a Reply

Your email address will not be published. Required fields are marked *

Don't Miss

ದಬ್ಬಾಳಿಕೆಯಿಂದ ಬಿಡದಿ ಟೌನ್‌ಶಿಪ್ ಯೋಜನೆ ಜಾರಿಗೆ ಯತ್ನ

ಚಿಕ್ಕಮಗಳೂರು: ಬಿಡದಿ ಟೌನ್‌ಶಿಪ್ ಯೋಜನೆಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದಬ್ಬಾಳಿಕೆಯ ಮೂಲಕ ಜಾರಿಗೆ ತರಲು ಮುಂದಾಗಿದ್ದಾರೆ ಎಂದು ಜೆಡಿಎಸ್ ರಾಷ್ಟ್ರೀಯ ವಕ್ತಾರ ಸುಧಾಕರ ಶೆಟ್ಟಿ ಆರೋಪಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...

ಮೆಡಿಕಲ್ ಕಾಲೇಜು ಆಸ್ಪತ್ರೆ ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲಿ

ಚಿಕ್ಕಮಗಳೂರು:  ಮೆಡಿಕಲ್ ಕಾಲೇಜು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸ್ಥಾಪಿಸಿರುವ ಮೂಲ ಉದ್ದೇಶ ಇನ್ನೂ ಸಂಪೂರ್ಣವಾಗಿ ಈಡೇರಿಲ್ಲ. ಬಡ ರೋಗಿಗಳಿಗೆ ಜಿಲ್ಲೆಯಲ್ಲೇ ಉತ್ತಮ ಚಿಕಿತ್ಸೆ ದೊರೆಯುವಂತೆ, ಆಸ್ಪತ್ರೆಯನ್ನು ತಕ್ಷಣ ಪೂರ್ಣ ಪ್ರಮಾಣದಲ್ಲಿ...

Related Articles

ಬಯಲ ಬಂಗಾರದ”ಈರುಳ್ಳಿ” ಬಲು ದೂರ,ದೂರ

ಅಜ್ಜಂಪುರ: ಚಿಕ್ಕಮಗಳೂರು ಜಿಲ್ಲೆಯಲ್ಲಿ “ಬಯಲ ಬಂಗಾರದ ಬೆಳೆ ಬೆಳೆಯುವ ಕಪ್ಪು ಮಣ್ಣು ಅಜ್ಜಂಪುರ ಮತ್ತು ಕಡೂರು...

ರೈತನ ಮನೆ ಮೇಲೆ ಬೃಹತ್ ಮರ ಬಿದ್ದು ಸಂಪೂರ್ಣ ಮನೆ ಜಖಂ

ಚಿಕ್ಕಮಗಳೂರು:  ಕಳೆದೆರಡು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಗಾಳಿಯ ವೇಗ ಹೆಚ್ಚಿರುವುದರಿಂದ ಮರಗಳು ಧರೆಗುರುಳುತ್ತಿವೆ. ಮೂಡಿಗೇರೆಯ ಕೋಳೂರು...

ಆಸ್ತಿ- ಅಂತಸ್ತಿಗಿಂತ ಆರೋಗ್ಯವು ಮನುಷ್ಯನ ಅತಿದೊಡ್ಡ ಸಂಪತ್ತು

ಚಿಕ್ಕಮಗಳೂರು:  ಆಸ್ತಿ ಮತ್ತು ಅಂತಸ್ತಿಗಿಂತ ಆರೋಗ್ಯವು ಮನುಷ್ಯನ ಅತಿದೊಡ್ಡ ಸಂ ಪತ್ತು. ಈ ಆರೋಗ್ಯಯುತ ಬದುಕು...

ಭದ್ರಾ ಮೇಲ್ದಂಡೆ ಯೋಜನೆಗೆ ರಾಜ್ಯದಿಂದಲೇ 12 ಸಾವಿರ ಕೋಟಿ ರೂ. ವೆಚ್ಚ

ಚಿಕ್ಕಮಗಳೂರು:  ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್‌ನಲ್ಲಿ ೫,೩೦೦ ಕೋಟಿ ರೂ. ಘೋಷಿಸಿದ್ದ ಕೇಂದ್ರ ಸರ್ಕಾರ ಇದುವರೆಗೆ...