Home namma chikmagalur chikamagalur ಸಹೊದ್ಯೋಗಿಯ ಮಾನಭಂಗಕ್ಕೆ ಯತ್ನ-ಹೊರಗುತ್ತಿಗೆ ನೌಕರ ಬಂಧನ
chikamagalurHomeLatest Newsnamma chikmagalur

ಸಹೊದ್ಯೋಗಿಯ ಮಾನಭಂಗಕ್ಕೆ ಯತ್ನ-ಹೊರಗುತ್ತಿಗೆ ನೌಕರ ಬಂಧನ

Share
Share

ನರಸಿಂಹರಾಜಪುರ: ಸಹೊದ್ಯೋಗಿಯ ಮಾನಭಂಗಕ್ಕೆ ಯತ್ನಿಸಿದ ಆರೋಪದಲ್ಲಿ ಹೊರಗುತ್ತಿಗೆ ನೌಕರನೊಬ್ಬನನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಡೇಟಾ ಎಂಟ್ರಿ ಆಪರೇಟರ್ ಆಗಿದ್ದ ಪಟ್ಟಣದ ಅಂಬೇಡ್ಕರ್ ನಗರದ ನಿವಾಸಿ ಪ್ರಜ್ವಲ್ ಆರೋಪಿ.

ಸುಮಾರು ಒಂದೂವರೆ ವರ್ಷದಿಂದ ಆತ ಕಾರ್ಯನಿರ್ವಹಿಸುತ್ತಿದ್ದು, ತಾಲ್ಲೂಕಿನ ವ್ಯಾಪ್ತಿಯಲ್ಲಿ ಮನೆ ಮಾಡಿ ವಾಸವಾಗಿದ್ದೇನೆ. ನನಗೆ ವಿವಾಹವಾಗಿದ್ದು, ನ್ಯಾಯಾಲಯದಲ್ಲಿ ವಿಚ್ಛೇದನಕ್ಕೆ ಅರ್ಜಿಸಲ್ಲಿಸಿದ್ದೇನೆ. ನಾನು ಒಬ್ಬಳೇ ವಾಸವಾಗಿರುವುದನ್ನು ತಿಳಿದ ಪ್ರಜ್ವಲ್‌, ಮದುವೆಯಾಗುವಂತೆ ಕೇಳಿದ್ದು ಅದಕ್ಕೆ ನಾನು ಒಪ್ಪಿರಲಿಲ್ಲ. ಆದರೂ ಪದೇಪದೇ ಪೀಡಿಸುತ್ತಿದ್ದ. ಡಿ.11ರಂದು ಮನೆಯೊಳಗೆ ಬಂದು ಅಕ್ರಮವಾಗಿ ಬಂಧನದಲ್ಲಿಟ್ಟು ಕೂಗದಂತೆ ಬಾಯಿಯನ್ನು ಮುಚ್ಚಿ ಹಿಂಸೆ ನೀಡಿ ಬಟ್ಟೆ ಹರಿದು ಮಾನಭಂಗಕ್ಕೆ ಯತ್ನಿಸಿದ್ದಾನೆ ಎಂದು ಸಂತ್ರಸ್ತೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಅವನಿಂದ ತಪ್ಪಿಸಿಕೊಂಡು ಮನೆಯಿಂದ ಹೊರಗೆ ಬಂದು ಕೂಗಿದಾಗ ಸ್ಥಳೀಯರು ರಕ್ಷಿಸಿ ಉಪಚರಿಸಿದರು. ನಂತರ ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡು ದೂರು ನೀಡಿದ್ದೇನೆ ಎಂದು ತಿಳಿಸಿದ್ದಾರೆ. ಸಂತ್ರಸ್ತೆ ನೀಡಿದ ದೂರಿನನ್ವಯ ಪೊಲೀಸರು ಆರೋಪಿಯನ್ನು ಬಂಧಿಸಿ 15 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Outsourced employee arrested for attempting to defame colleague
Share

Leave a comment

Leave a Reply

Your email address will not be published. Required fields are marked *

Don't Miss

ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿದ ರೈತರ ಸ್ಥಿತಿ ಅವಲೋಕಿಸಿದ ಸಚಿವ ಜಾರ್ಜ್

ಚಿಕ್ಕಮಗಳೂರು: ಸಕಾಲದಲ್ಲಿ ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿರುವ ರೈತರು, ಒಣಗಿ ನಿಂತಿರುವ ಭೂಮಿ, ಮಳೆಯ ನಿರೀಕ್ಷೆಯಲ್ಲಿ ಬಿತ್ತನೆ ಮಾಡಿದ್ದ ಬೀಜಗಳು ಮೊಳಕೆ ಒಡೆಯದೆ ಬಿಸಿಲಿನ ಝಳಕ್ಕೆ ಸಿಲುಕಿ ಸುಟ್ಟುಹೋಗಿರುವುದನ್ನು ಜಿಲ್ಲಾ ಉಸ್ತುವಾರಿ ಸಚಿವ...

ಸಚಿವ ಕೆ.ಜೆ. ಜಾರ್ಜ್ ಬೆಂಗಾವಲು ವಾಹನ ಅಪಘಾತ

ಚಿಕ್ಕಮಗಳೂರು : ಅಜ್ಜಂಪುರ ಜಿಲ್ಲೆಯ ಬಯಲುಸೀಮೆ ಪ್ರದೇಶಗಳಲ್ಲಿ ಬರ ಪರಿಸ್ಥಿತಿ ವೀಕ್ಷಣೆಗಾಗಿ ಪ್ರವಾಸದಲ್ಲಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅವರ ಬೆಂಗಾವಲು (Escort) ವಾಹನ ಅಪಘಾತಕ್ಕೀಡಾದ ಘಟನೆ ಅಜ್ಜಂಪುರ ಪಟ್ಟಣದಲ್ಲಿ...

Related Articles

ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆ ಮಲೆನಾಡಿಗೆ ಕಂಟಕ

ಚಿಕ್ಕಮಗಳೂರು: ಪಶ್ಚಿಮ ಘಟ್ಟ ವ್ಯಾಪ್ತಿಯ ರಾಜ್ಯದ ೧೦ ಜಿಲ್ಲೆಗಳ ೨೦ ಸಾವಿರಕ್ಕೂ ಅಧಿಕ ಚದರ ಕಿಲೋ...

ಅಂಗಾಂಗ ದಾನ ರೂಬೆನ್ ಮೊಸಸ್ ಕುಟುಂಬ ಸಮಾಜಕ್ಕೆ ಮಾದರಿ

ಚಿಕ್ಕಮಗಳೂರು: ಅಂಗಾಂಗ ದಾನ ಮಾಡಿ ರೂಬೆನ್ ಮೊಸಸ್ ಕುಟುಂಬ ಸಮಾಜಕ್ಕೆ ಮಾದರಿಯಾಗಿದೆ ಎಂದು ನಗರಸಭೆ ಪೌರಾಯುಕ್ತ...

ವೈಜ್ಞಾನಿಕ ರೀತಿಯಲ್ಲಿ ಕಸ ವಿಲೇವಾರಿಗೆ ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅಧಿಕಾರಿಗಳಿಗೆ ಸೂಚಿಸಿದರು. ಕೊಪ್ಪ...

ಫಸಲ್ ಬಿಮಾ ನೋಂದಣಿ ಹೆಚ್ಚಿಸಲು ಜಿಲ್ಲಾಧಿಕಾರಿ ನಿರ್ದೇಶನ

ಚಿಕ್ಕಮಗಳೂರು: ಫಸಲ್ ಬಿಮಾ ಯೋಜನೆಯಡಿ ನೋಂದಣಿ ಕಡಿಮೆಯಾಗಿದ್ದು, ತಕ್ಷಣ ಅಗತ್ಯ ಪ್ರಚಾರ ಕೈಗೊಂಡು ರೈತರ ಮನವೊಲಿಸಿ...