Home Crime News ಕರಕುಚ್ಚಿಯಲ್ಲಿ ವೈಯಕ್ತಿಕ ದ್ವೇಷಕ್ಕೆ 150ಕ್ಕೂ ಅಧಿಕ ಅಡಿಕೆ ಗಿಡಗಳ ಬಲಿ
Crime NewsHomeLatest Newsnamma chikmagalurTarikere

ಕರಕುಚ್ಚಿಯಲ್ಲಿ ವೈಯಕ್ತಿಕ ದ್ವೇಷಕ್ಕೆ 150ಕ್ಕೂ ಅಧಿಕ ಅಡಿಕೆ ಗಿಡಗಳ ಬಲಿ

Share
Share

ತರೀಕೆರೆ: ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ನಾಲ್ಕು ವರ್ಷಗಳ ಕಾಲ ಶ್ರಮಪಟ್ಟು ಬೆಳೆಸಿದ್ದ 150ಕ್ಕೂ ಅಧಿಕ ಅಡಿಕೆ ಗಿಡಗಳನ್ನು ಕಿಡಿಗೇಡಿಗಳು ರಾತ್ರೋರಾತ್ರಿ ಕಡಿದು ನಾಶಪಡಿಸಿರುವ ಘಟನೆ ತಾಲ್ಲೂಕಿನ ಕರಕುಚ್ಚಿ ಗ್ರಾಮದಲ್ಲಿ ವರದಿಯಾಗಿದೆ.

ಗ್ರಾಮದ ರೈತ ಸಣ್ಣಪ್ಪ ಅವರು ಮುಕ್ಕಾಲು ಎಕರೆ ಪ್ರದೇಶದಲ್ಲಿ ಅಡಿಕೆ ಗಿಡಗಳನ್ನು ಬೆಳೆಸಿದ್ದರು. ಕೂಲಿ ಕೆಲಸ ಮಾಡಿ ಸಂಪಾದಿಸಿದ ಹಣವನ್ನು ಕೃಷಿಯಲ್ಲಿ ಹೂಡಿಕೆ ಮಾಡಿ, ಗಿಡಗಳನ್ನು ಮಕ್ಕಳಂತೆ ಆರೈಕೆ ಮಾಡುತ್ತಾ ಬಂದಿದ್ದರು. ನಾಲ್ಕು ವರ್ಷಗಳ ಕಾಲ ಶ್ರಮವಹಿಸಿ ಬೆಳೆಸಿದ್ದ ಅಡಿಕೆ ಗಿಡಗಳಿಂದ ಫಸಲು ಪಡೆಯುವ ನಿರೀಕ್ಷೆಯಲ್ಲಿದ್ದ ರೈತನಿಗೆ ಕಿಡಿಗೇಡಿಗಳ ಕೃತ್ಯ ತೀವ್ರ ಆಘಾತ ಉಂಟುಮಾಡಿದೆ.

ರಾತ್ರೋರಾತ್ರಿ ತೋಟಕ್ಕೆ ನುಗ್ಗಿದ ದುಷ್ಕರ್ಮಿಗಳು 150ಕ್ಕೂ ಅಧಿಕ ಅಡಿಕೆ ಗಿಡಗಳನ್ನು ಕಡಿದು ನಾಶಪಡಿಸಿದ್ದಾರೆ ಎನ್ನಲಾಗಿದೆ. ಈ ಕೃತ್ಯದ ಹಿಂದೆ ವೈಯಕ್ತಿಕ ದ್ವೇಷವಿರುವ ಶಂಕೆ ವ್ಯಕ್ತವಾಗಿದೆ. ಕೃಷಿಯನ್ನೇ ನಂಬಿ ಬದುಕುತ್ತಿರುವ ರೈತನ ಹಲವು ವರ್ಷಗಳ ಪರಿಶ್ರಮಕ್ಕೆ ಕಿಡಿಗೇಡಿಗಳು ಕೊಡಲಿ ಪೆಟ್ಟು ನೀಡಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

ಘಟನೆಗೆ ಸಂಬಂಧಿಸಿದಂತೆ ಲಕ್ಕವಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ರೈತನಿಗೆ ನಷ್ಟ ಉಂಟುಮಾಡಿದ ಕಿಡಿಗೇಡಿಗಳನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಸಂತ್ರಸ್ತ ರೈತನಿಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

Over 150 areca nut saplings destroyed in Karakuchchi due to personal enmity!

Share

Leave a comment

Leave a Reply

Your email address will not be published. Required fields are marked *

Don't Miss

ಗೌರಮ್ಮನ ಮೆರವಣಿಗೆ ವೇಳೆ ಪಟಾಕಿ ಅವಘಡ-ಮೂವರು ಗಂಭೀರ ಗಾಯ

ಚಿಕ್ಕಮಗಳೂರು : ವಿಜೃಂಭಣೆಯಿಂದ ನಡೆಯುತ್ತಿದ್ದ ಗೌರಮ್ಮನ ಮೆರವಣಿಗೆ ವೇಳೆ ಪಟಾಕಿ ಅವಘಡ ಸಂಭವಿಸಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಲಕ್ಕಾ ಗ್ರಾಮದಲ್ಲಿ ನಡೆದಿದೆ. ಪ್ರತಿ ವರ್ಷದ ಸಂಪ್ರದಾಯದಂತೆ ಗಣಪತಿ...

ಮಾದಿಗ ಸಮುದಾಯಕ್ಕೆ ಶೇ.6ರಷ್ಟು ಮೀಸಲಾತಿಗೆ ಆಗ್ರಹ

ಚಿಕ್ಕಮಗಳೂರು: ಮುಂಬರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಮಾದಿಗ ಸಮುದಾಯದ ಜನಸಂಖ್ಯೆ ಮತ್ತು ಪ್ರಾತಿನಿಧ್ಯದ ವಾಸ್ತವಾಂಶಗಳನ್ನು ಪರಿಗಣಿಸಿ ಶೇ.6ರಷ್ಟು ಮೀಸಲಾತಿ ಕಲ್ಪಿಸಬೇಕು ಎಂದು ಕರ್ನಾಟಕ ಮಾದರ ಮಹಾಸಭಾದ ಚಿಕ್ಕಮಗಳೂರು...

Related Articles

ಚಿಕ್ಕಮಗಳೂರು ಜಿಲ್ಲೆಯಲ್ಲಿ ಧಾರಾಕಾರ ಮಳೆ

ಚಿಕ್ಕಮಗಳೂರು: ನಗರ ಸೇರಿ ಸುತ್ತಮುತ್ತ ಶುಕ್ರವಾರ ಭರ್ಜರಿ ಮಳೆ ಯಾಗಿದ್ದು, ಮಳೆಗಾಲದ ವಾತಾವರಣ ನಿರ್ಮಾಣವಾಯಿತು. ಮಳೆಗಾಲದಲ್ಲೂ...

ಪ್ಲಾಂಟೇಷನ್ ಕಾರ್ಮಿಕರಿಗೆ ಶೇ.17ರಷ್ಟು ವೇತನ ಹೆಚ್ಚಳ

ಚಿಕ್ಕಮಗಳೂರು: ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳ ಕಾಫಿ ಮತ್ತು ಟೀ ಪ್ಲಾಂಟೇಷನ್‌ಗಳಲ್ಲಿ ದುಡಿಯುವ ಕಾರ್ಮಿಕರ...

ಅ.26ರಂದು ಚಿಕ್ಕಮಗಳೂರಿನಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಚಿಕ್ಕಮಗಳೂರು: ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅ.26ರಂದು ಚಿಕ್ಕಮಗಳೂರಿನಲ್ಲಿ ಶ್ರದ್ಧಾಭಕ್ತಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುವುದು...

ಮೆಕ್ಕಾದಲ್ಲಿ ಸಿಲುಕಿದ ಚಿಕ್ಕಮಗಳೂರಿನ ಉದ್ಯಮಿ ಅಪ್ಸರ್ ಹಿಂದೂಸ್ಥಾನಿ

ಚಿಕ್ಕಮಗಳೂರು : ಸೌದಿ ಅರೇಬಿಯಾದ ಮೆಕ್ಕಾದಲ್ಲಿ ವಿಮಾನ ಸಂಚಾರ ಅಸ್ತವ್ಯಸ್ತಗೊಂಡಿರುವ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಹಾಗೂ ಕರಾವಳಿ...