Home namma chikmagalur Panchayat Katte:ಚಿಕ್ಕಮಗಳೂರು ಜಿಲ್ಲೆಯಾದ್ಯಂತ ‘ಪಂಚಾಯಿತಿ ಕಟ್ಟೆ ಮತ್ತು ಗ್ರಾಮ ಸ್ಪಂದನ’
namma chikmagalurHome

Panchayat Katte:ಚಿಕ್ಕಮಗಳೂರು ಜಿಲ್ಲೆಯಾದ್ಯಂತ ‘ಪಂಚಾಯಿತಿ ಕಟ್ಟೆ ಮತ್ತು ಗ್ರಾಮ ಸ್ಪಂದನ’

Share
????????????????????????????????????
Share

ಚಿಕ್ಕಮಗಳೂರು: ಸಾರ್ವಜನಿಕರ ದೂರು ಮತ್ತು ಅಹವಾಲುಗಳನ್ನು ಪಂಚಾಯಿತಿ ಮಟ್ಟದಲ್ಲಿ ಸ್ವೀಕರಿಸಿ ಇತ್ಯರ್ಥಪಡಿಸಲು ಜಿಲ್ಲಾ ಪಂಚಾಯಿತಿ ಮತ್ತು ಜಿಲ್ಲಾಡಳಿತದ ವತಿಯಿಂದ ಆರಂಭಿಸಿರುವ ‘ಪಂಚಾಯಿತಿ ಕಟ್ಟೆ ಮತ್ತು ಗ್ರಾಮ ಸ್ಪಂದನ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ವಿಸ್ತರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

ಜಿಲ್ಲಾ ಆಟದ ಮೈದಾನದಲ್ಲಿ ಜಿಲ್ಲಾಡಳಿತ ಭಾನುವಾರ ಏರ್ಪಡಿಸಿದ್ದ ಗಣ ರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ, ಧ್ವಜ ವಂದನೆ ಸ್ವೀಕರಿಸಿ ಮಾತನಾಡಿದ ಅವರು, “ಕಡೂರು ತಾಲೂಕಿನಲ್ಲಿ ಪ್ರಾಯೋಗಿಕವಾಗಿ ಆರಂಭಿಸಿದ್ದ ‘ಪಂಚಾಯಿತಿ ಕಟ್ಟೆ ಮತ್ತು ಗ್ರಾಮ ಸ್ಪಂದನ’ ಕಾರ್ಯಕ್ರಮಕ್ಕೆ ಉತ್ತಮ ಸ್ಪಂದನೆ ಸಿಕ್ಕಿದೆ. ಹೀಗಾಗಿ ಈ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಪರಿಣಾಮಕಾರಿಯಾಗಿ ಮುಂದುವರಿಸಲು ಕ್ರಮ ವಹಿಸಲಾಗಿದೆ”, ಎಂದರು.

“ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ಜಿಲ್ಲೆಯಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸುವ ಜತೆಗೆ ಜಿಲ್ಲೆಯ ಅಭಿವೃದ್ಧಿ ಕಾರ್ಯದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದೇ ಉತ್ತಮ ರೀತಿಯಲ್ಲಿ ಸಾಧನೆ ಮಾಡಲಾಗುತ್ತಿದೆ. ನಾಗರಿಕ ಸೇವೆಗಳನ್ನು ಕಾಲಮಿತಿಯಲ್ಲಿ ಒದಗಿಸುವ ಸಕಾಲ ಯೋಜನೆಯ ಅನುಷ್ಠಾನದಲ್ಲಿ ನಮ್ಮ ಜಿಲ್ಲೆಯು ಇತ್ತೀಚಿನ ರ‍್ಯಾಂಕ್ ಪಟ್ಟಿಯಲ್ಲಿ ರಾಜ್ಯಕ್ಕೆ 2ನೇ ಸ್ಥಾನ ಪಡೆದಿದೆ. ‘ಪೋಡಿ ಮುಕ್ತ’ ಆಂದೋಲನ ಯೋಜನೆ ಅನುಷ್ಠಾನದಲ್ಲಿ ಜಿಲ್ಲೆ ಮುಂಚೂಣಿಯಲ್ಲಿದೆ”, ಎಂದು ಸಚಿವರು ಮಾಹಿತಿ ನೀಡಿದರು.

“ನಮ್ಮ ದೇಶ ಸ್ವತಂತ್ರ ಭಾರತ ಎಂದು ಹೆಮ್ಮೆ ಪಡಲು ಹಾಗೂ ಗಣರಾಜ್ಯವಾಗಿ ರೂಪುಗೊಳ್ಳಲು ಆಗಿರುವ ತ್ಯಾಗ, ಬಲಿದಾನಗಳಿಗೆ ಲೆಕ್ಕವೇ ಇಲ್ಲ. ನಮ್ಮ ಪೂರ್ವಜರು ನಮ್ಮ ಭವಿಷ್ಯಕ್ಕಾಗಿ ತಮ್ಮ ರಕ್ತ, ಬೆವರುಗಳನ್ನು ಹರಿಸಿ ಸ್ಥಾಪಿಸಿದ ನಮ್ಮ ನೆಲದಲ್ಲಿ ಭಾರತೀಯ ಪ್ರಜೆಗಳಾದ ನಾವು ಸ್ವಾತಂತ್ರ್ಯದ ಉಸಿರಿನೊಂದಿಗೆ ಶಾಂತಿ ಹಾಗೂ ಸೌಹಾರ್ದಯುತ ಬದುಕಿನ ಅನುಭವವನ್ನು ಪಡೆಯುತ್ತಿದ್ದೇವೆ. ಡಾ.ಬಿ.ಆರ್.ಅಂಬೇಡ್ಕರ್ ನೇತೃತ್ವದಲ್ಲಿ ರಚನೆಯಾದ ಸಂವಿಧಾನದಿಂದಾಗಿ ‘ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು’ ಕಲ್ಪಿಸಲು ಸಾಧ್ಯವಾಗಿದೆ”, ಎಂದರು.

“ಉತ್ತರದ ಕಾಶ್ಮೀರದಿಂದ ದಕ್ಷಿಣದ ತಮಿಳುನಾಡುವರೆಗೂ ಹಾಗೂ ಪಶ್ಚಿಮದ ಗುಜರಾತ್ ನಿಂದ ಪೂರ್ವದ ಅಸ್ಸಾಂ ವರೆಗೂ ವಿವಿಧ ಧಾರ್ಮಿಕ ಆಚರಣೆಯುಳ್ಳ ದೊಡ್ಡ ಭೂಭಾಗಗಳು, ವಿಭಿನ್ನ ಆಹಾರ ಪದ್ಧತಿ ಮತ್ತು ಸಾಂಸ್ಕೃತಿಕ ಹಿನ್ನೆಲೆಯುಳ್ಳ ಹಲವು ಬುಡಕಟ್ಟು ಪ್ರದೇಶಗಳನ್ನೂ ಒಳಗೊಂಡ ನಮ್ಮ ದೇಶಕ್ಕೆ ಸರಿಹೊಂದುವ ಸಂವಿಧಾನದ ಅವಶ್ಯಕತೆ ಇದ್ದ ಕಾಲಘಟ್ಟದಲ್ಲಿ ವಿಶ್ವದ ಅತಿದೊಡ್ಡ ಲಿಖಿತ ಸಂವಿಧಾನವನ್ನು ಅತ್ಯಂತ ಸಮರ್ಪಕವಾಗಿ ರಚನೆ ಮಾಡಿದ್ದು ಡಾ. ಬಿ.ಆರ್. ಅಂಬೇಡ್ಕರ್ ಅವರ ನೇತೃತ್ವದ ಸಮಿತಿಯ ಅತಿ ದೊಡ್ಡ ಸಾಧನೆ. ಹಲವು ದೇಶಗಳ ಸಂವಿಧಾನವನ್ನು ಅಧ್ಯಯನ ಮಾಡಿ ಅವುಗಳಲ್ಲಿರುವ ಉತ್ತಮ ಅಂಶಗಳನ್ನು ನಮ್ಮ ದೇಶದ ಸಂವಿಧಾನದಲ್ಲಿ ಅಳವಡಿಸಿದ್ದಾರೆ. ಈ ಸಂವಿಧಾನವು ಭಾರತವನ್ನು ಒಂದು ಪ್ರಬಲ ಪ್ರಜಾಪ್ರಭುತ್ವ ರಾಷ್ಟ್ರವಾಗಿಸಲು ಮತ್ತು ಎಲ್ಲಾ ನಾಗರಿಕರಿಗೆ ಸಮಾನ ಹಕ್ಕುಗಳು ಮತ್ತು ಅವಕಾಶಗಳನ್ನು ಒದಗಿಸಲು ಸಹಾಯ ಮಾಡಿದೆ”, ಎಂದು ಹೇಳಿದರು.

“ದೇಶದ ಸಂವಿಧಾನದ ಬಹಳ ಮುಖ್ಯ ಅಂಶವಾದ ಸಾಮಾಜಿಕ ಹಾಗೂ ಆರ್ಥಿಕ ಸಮಾನತೆಯನ್ನು ತನ್ನ ಎಲ್ಲಾ ಪ್ರಜೆಗಳಿಗೆ ನೀಡುವ ದೃಷ್ಟಿಯಿಂದ ನಮ್ಮ ಸರ್ಕಾರವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಅಧಿಕಾರಕ್ಕೆ ಬಂದ ನಂತರ ಸಮಾನತೆಯ ಆಶಯವನ್ನು ಸಾರುವ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಸಮರ್ಪಕವಾಗಿ ಅನುಷ್ಠಾನ ಮಾಡುತ್ತಿದೆ”, ಎಂದು ವಿವರಿಸಿದರು.

ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆಗೆ ಸಂಬಂಧಿಸಿದಂತೆ ಮಾತನಾಡಿದ ಸಚಿವರು, “ನಮ್ಮ ಜಿಲ್ಲೆಯ ಶ್ರೀ ಗುರು ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ಶಾಂತಿಯುತವಾಗಿ ದತ್ತ ಜಯಂತಿ, ಉರುಸ್ ಆಚರಣೆ, ಸಾರ್ವಜನಿಕ ಗಣಪತಿ ಉತ್ಸವ, ಹಾಗೂ ಕ್ರಿಸ್‌ಮಸ್ ಆಚರಣೆಯಂತಹ ಧಾರ್ಮಿಕ ಕಾರ್ಯಕ್ರಮಗಳು ಶಾಂತಿಯುತವಾಗಿ ಸಂಪನ್ನಗೊಳ್ಳುವ ಮೂಲಕ ಸಂವಿಧಾನದ ಜಾತ್ಯತೀತ ಆಶಯಗಳನ್ನು ಈಡೇರಿಸುತ್ತಿದೆ”, ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಶಾಸಕ ಎಚ್‌.ಡಿ.ತಮ್ಮಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿಧಾನಪರಿಷತ್‌ ಉಪ ಸಭಾಪತಿ ಎಂ.ಕೆ ಪ್ರಾಣೇಶ್‌, ಸದಸ್ಯರಾದ ಎಸ್‌.ಎಲ್‌. ಭೋಜೇಗೌಡ, ಸಿ.ಟಿ.ರವಿ, ಭದ್ರಾ ಕಾಡಾ ಅಧ್ಯಕ್ಷ ಡಾ. ಅಂಶುಮಂತ್‌, ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮದ ಅಧ್ಯಕ್ಷ ಬಿ.ಎಚ್‌. ಹರೀಶ್‌, ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಯಾಜ್‌ ಅಹಮದ್‌, ಜಿಲ್ಲಾಧಿಕಾರಿ ಮೀನಾ ನಾಗರಾಜ್‌, ಜಿಲ್ಲಾ ರಕ್ಷಣಾಧಿಕಾರಿ ಡಾ. ವಿಕ್ರಂ ಅಮಟೆ, ಜಿಪಂ ಸಿಇಓ ಕೀರ್ತನಾ ಮತ್ತಿತರರು ಪಾಲ್ಗೊಂಡಿದ್ದರು.

‘Panchayat Katte and Gram Spandana’ across Chikkamagaluru district

Share

Leave a comment

Leave a Reply

Your email address will not be published. Required fields are marked *

Don't Miss

ಹಣ ದೋಚಿದ್ದ ಇಬ್ಬರು ಅಂತರ್ ಜಿಲ್ಲಾ ದರೋಡೆಕೋರರ ಬಂಧನ

ಚಿಕ್ಕಮಗಳೂರು : ಮನುಷ್ಯತ್ವಕ್ಕೆ ಮಸಿ ಬಳಿಯುವಂತೆ ವೃದ್ಧ ರೈತರೊಬ್ಬರ ಮೇಲೆ ಹಲ್ಲೆ ನಡೆಸಿ ಹಣ ದೋಚಿದ್ದ ಇಬ್ಬರು ಅಂತರ್ ಜಿಲ್ಲಾ ದರೋಡೆಕೋರರನ್ನು ಚಿಕ್ಕಮಗಳೂರು ನಗರ ಪೊಲೀಸರು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಕುರಿಚಿಕ್ಕನಹಳ್ಳಿಯ ನಿಂಗೇಗೌಡ...

ಹೋಂ ಸ್ಟೇ’ನಲ್ಲಿ ಯುವತಿ ಸಾವು-ಮಾಲೀಕ ವಿರುದ್ಧ ಪ್ರಕರಣ ದಾಖಲು

ಚಿಕ್ಕಮಗಳೂರು : ತಾಲೂಕಿನ ಹಾಂದಿ ಗ್ರಾಮದ ‘ಹಿಪ್ಲಾ ಹೋಂ ಸ್ಟೇ’ನಲ್ಲಿ ನಡೆದಿದ್ದ ಯುವತಿಯ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ, ನಾಲ್ಕು ತಿಂಗಳ ಬಳಿಕ ಮಾಲೀಕ ಸುಧಾಕರ್ ವಿರುದ್ಧ ಅಲ್ಲೂರು ಪೊಲೀಸ್ ಠಾಣೆಯಲ್ಲಿ...

Related Articles

ಇಂದಿನಿಂದ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ

ಚಿಕ್ಕಮಗಳೂರು : ಶನಿವಾರದಿಂದ ರಾಜ್ಯಾದ್ಯಂತ 2025 26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗುತ್ತಿದ್ದು ಇದಕ್ಕೆ...

ಸಾವಿನ ಹೆಣ ಇಟ್ಟುಕೊಂಡು ಕೀಳು ಮಟ್ಟದ ರಾಜಕೀಯ

ಚಿಕ್ಕಮಗಳೂರು: ಇತ್ತೀಚೆಗೆ ನಡೆದ ಆನೆ ದಾಳಿಯಿಂದಾದ ಸಾವು ಮತ್ತು ಅದರ ಸುತ್ತ ನಡೆಯುತ್ತಿರುವ ಬೆಳವಣಿಗೆಗಳ ಕುರಿತು...

ವೃದ್ಧ ಮಹಿಳೆಯೊಬ್ಬರ ಚಿನ್ನದ ಸರ ಕಳವು

ಚಿಕ್ಕಮಗಳೂರು: ಬಸವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಯುವಿಹಾರಕ್ಕೆ ತೆರಳಿದ್ದ ವೃದ್ಧ ಮಹಿಳೆಯೊಬ್ಬರನ್ನು ಅಡ್ಡಗಟ್ಟಿ, ಹಲ್ಲೆ ನಡೆಸಿ...

ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಚಿನ್ನಾಭರಣ ಕಳ್ಳತನ

ಚಿಕ್ಕಮಗಳೂರು: ಕೆ.ಎಂ. ರಸ್ತೆಯ ಕತ್ರಿಮಾರಮ್ಮ ದೇವಸ್ಥಾನದ ಸಮೀಪವಿರುವ ಬಸ್ ನಿಲ್ದಾಣದಿಂದ ಸಖರಾಯಪಟ್ಟಣಕ್ಕೆ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ...