Home Latest News ಅಂತರ್ ಜಾತಿ ವಿವಾಹಕ್ಕೆ ಪೋಷಕರ ವಿರೋಧ : ಎಸ್ಪಿ ಕಚೇರಿ ಬಳಿಯೇ ಹಾರ ಬದಲಾವಣೆ
Latest News

ಅಂತರ್ ಜಾತಿ ವಿವಾಹಕ್ಕೆ ಪೋಷಕರ ವಿರೋಧ : ಎಸ್ಪಿ ಕಚೇರಿ ಬಳಿಯೇ ಹಾರ ಬದಲಾವಣೆ

Share
Share

ಚಿಕ್ಕಮಗಳೂರು : ಅಂರ್ತಾಜಾತಿ ಪ್ರೇಮಿಗಳು ವಿವಾಹವಾಗಿ ರಕ್ಷಣೆ ಕೋರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮೆಟ್ಟಿಲೇರಿ ರುವ ಘಟನೆ ನಡೆದಿದೆ. ಅಜೇಯ್ ಹಾಗೂ ಶಾಲಿನಿ ಅಂರ್ತಾಜಾತಿ ಪ್ರೇಮಿಗಳಾಗಿದ್ದು, ಮದುವೆಗೆ ಮನೆಯವರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ಮದುವೆಯಾಗಿ ರಕ್ಷಣೆ ನೀಡುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ|ವಿಕ್ರಮ್ ಅಮಟೆಯವರನ್ನು ಭೇಟಿಯಾಗಿದ್ದಾರೆ.

ದಲಿತ ಸಂಘರ್ಷ ಸಮಿತಿ ಮುಖಂಡ ಮರ್ಲೆ ಅಣ್ಣಯ್ಯ ನೇತೃತ್ವದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಆಗಮಿಸಿದ ಅಂರ್ತಾಜಾತಿ ಪ್ರೇಮಿಗಳು ದೇವಸ್ಥಾನದಲ್ಲಿ ಮದುವೆಯಾದ ನಂತರವೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಆವರಣದಲ್ಲಿ ಹಾರ ಬದಲಾಯಿಸಿಕೊಂಡು ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

ಘಟನೆ ಸಂಬಂಧ ಮಾಹಿತಿ ಪಡೆದು ಸುದ್ದಿಗಾರರ ಜತೆ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ|ವಿಕ್ರಮ್ ಅಮಟೆ ಅಜೇಯ್ ಮತ್ತು ಶಾಲಿನಿ ಅಂರ್ತಾಜಾತಿ ಪ್ರೇಮಿಗಳಾಗಿದ್ದು, ಕುಟುಂಬಸ್ಥರು ಮದುವೆಗೆ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ಮದುವೆಯಾಗಿರುವುದಾಗಿ ತಿಳಿಸಿದ್ದಾರೆ.
ಇಬ್ಬರು ವಯಸ್ಕರಾಗಿದ್ದು, ಕಾನೂನಿನಲ್ಲಿ ಇವರ ವಿವಾಹಕ್ಕೆ ಮಾನ್ಯತೆ ಇದೆ. ಶಾಲಿನಿ ಭದ್ರಾವತಿ ಮೂಲದವರು ಅಜೇಯ್ ತರೀಕೆರೆ ತಾಲೂಕು ಲಕ್ಕವಳ್ಳಿ ಸಮೀಪದ ರಂಗೇನಹಳ್ಳಿಯವರಾಗಿದ್ದು ತಮಗೆ ರಕ್ಷಣೆಬೇಕೆಂದು ತಮ್ಮನ್ನು ಭೇಟಿಯಾಗಿದ್ದಾರೆ. ಅಜೇಯ್ ಪೋಷಕರು ಮತ್ತು ಶಾಲಿನಿಯವರ ಪೋಷಕರನ್ನು ಕರೆದು ಮಾತನಾಡುವಂತೆ ತರೀಕೆರೆ ಪೊಲೀಸ್ ಠಾಣೆಯ ಠಾಣಾ ಧಿಕಾರಿಗೆ ಸೂಚನೆ ನೀಡಲಾಗಿದೆ. ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ ಎಸ್ಪಿ ಹುಡುಗಿ ಪೋಷಕರು ತರೀಕೆರೆ ಪೊಲೀಸ್ ಠಾಣೆಗೆ ಬಂದಿದ್ದು, ಹುಡುಗ, ಹುಡುಗಿ ಠಾಣೆಗೆ ಬಾರದಿರುವ ಕಾರಣ ಹಿಂದುರುಗಿದ್ದಾರೆ. ಅವರನ್ನು ಮತ್ತೇ ಪೊಲೀಸ್ ಠಾಣೆಗೆ ಕರೆಸಿ ತಿಳುವಳಿಕೆ ನೀಡಲಾಗುವುದು ಎಂದು ಹೇಳಿದರು.

Share

Leave a comment

Leave a Reply

Your email address will not be published. Required fields are marked *

Don't Miss

ದನದ ಮಾಂಸ ಮಾರಾಟದಲ್ಲಿ 40 ಕೆ.ಜಿ ಮಾಂಸ, ಕತ್ತಿ–ಚಾಕುಗಳು ಜಪ್ತಿ

ಚಿಕ್ಕಮಗಳೂರು: ನಗರದ ಅಯ್ಯಪ್ಪನಗರದ ಸಮೀಪದ ಶೆಡ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಗರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ.9ರಂದು ಮಧ್ಯಾಹ್ನ...

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ ಸಾಧನೆ ಯೋಗ ಮಾಡುವವರಿಗೆ ಒಂದು ಪ್ರೇರಣೆ ಕೊಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ.ರವಿ...

Related Articles

ಕೇಬಲ್ ಕಳ್ಳರೆಂದು ಶಂಕಿಸಿ ಮೂವರ ಮೇಲೆ ಹಲ್ಲೆ

ಕಡೂರು: ಪಂಪ್‌ಸೆಟ್‌ ಮೋಟಾರ್‌ ಕೇಬಲ್‌ ಕಳ್ಳರೆಂದು ಅನುಮಾನಿಸಿ ಮೂವರು ಯುವಕರ ಮೇಲೆ ಗುಂಪೊಂದು ಗಂಭೀರವಾಗಿ ಹಲ್ಲೆ...

₹5 ಲಕ್ಷ ಮೌಲ್ಯದ ಶ್ರೀಗಂಧದ ಮರಗಳ ಕಳವು

ತರೀಕೆರೆ: ಕೃಷಿ ತೋಟಕ್ಕೆ ನುಗ್ಗಿದ ಕಳ್ಳರು ಸುಮಾರು 15 ಶ್ರೀಗಂಧದ ಮರಗಳನ್ನು ಕಡಿದು ಕಳವು ಮಾಡಿಕೊಂಡು...

ಸ್ಕೂಟರ್‌ ಅಪಘಾತ: ಚಿಕಿತ್ಸೆ ಫಲಿಸದೆ ಸಾವು

ಕಡೂರು: ರಸ್ತೆಯಲ್ಲಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸ್ಕೂಟರ್‌ ನಿಯಂತ್ರಣ ತಪ್ಪಿ ಬಿದ್ದು...

ಧ್ವಜಾರೋಹಣದ ಕೆಲವೇ ಗಂಟೆಗಳಲ್ಲಿ ಕೆಳಗಿಳಿಸಿದ ರಾಷ್ಟ್ರಧ್ವಜ …?

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದೇ ಚಿಕ್ಕಮಗಳೂರಿನಲ್ಲಿ ರಾಷ್ಟ್ರಧ್ವಜಕ್ಕೆ ಸಂಬಂಧಿಸಿದಂತೆ ವಿವಾದವೊಂದು ಭುಗಿಲೆದ್ದಿದ್ದು, ಕರ್ನಾಟಕ ರಾಜ್ಯ ರೈತ ಸಂಘದ...