Home namma chikmagalur ajjampura ಅಜ್ಜಂಪುರ ಪಟ್ಟಣ ಪಂಚಾಯಿತಿಯಲ್ಲಿ ಪತಿಯ ದರ್ಬಾರ್
ajjampuraHomeLatest Newsnamma chikmagalur

ಅಜ್ಜಂಪುರ ಪಟ್ಟಣ ಪಂಚಾಯಿತಿಯಲ್ಲಿ ಪತಿಯ ದರ್ಬಾರ್

Share
Share

ಅಜ್ಜಂಪುರ: ಪಟ್ಟಣ ಪಂಚಾಯಿತಿಯಲ್ಲಿ ಜನಪ್ರತಿನಿಧಿಯೊಬ್ಬರ ಪತಿ ಆಡಳಿತಾತ್ಮಕ ವ್ಯವಹಾರಗಳಲ್ಲಿ ನೇರ ಹಸ್ತಕ್ಷೇಪ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಪಟ್ಟಣ ಪಂಚಾಯಿತಿ ಉಪಾಧ್ಯಕ್ಷೆ ಶೋಭಾ ಅವರ ಪತಿ ಹಾಗೂ ಬಿಜೆಪಿ ಮುಖಂಡ ಸಂತೋಷ್ ಅವರು ಪತ್ನಿಯ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಪಂಚಾಯಿತಿ ಕಚೇರಿಯಲ್ಲಿ ದರ್ಬಾರ್ ನಡೆಸುತ್ತಿದ್ದಾರೆ ಎಂಬ ಆರೋಪ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಉಪಾಧ್ಯಕ್ಷೆ ಶೋಭಾ ಅವರ ಪಕ್ಕದಲ್ಲೇ ಕುಳಿತಿದ್ದ ಸಂತೋಷ್, ಸ್ವತಃ ಅಧಿಕಾರಿಗಳ ಸಭೆಯ ನೇತೃತ್ವ ವಹಿಸಿ ಸೂಚನೆಗಳನ್ನು ನೀಡುತ್ತಿರುವ ದೃಶ್ಯಗಳು ಕಂಡುಬಂದಿವೆ. ಉಪಾಧ್ಯಕ್ಷೆಯ ಪತಿಯೇ ಅಧಿಕಾರಿಗಳ ಸಭೆ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಜನರಿಂದ ಆಯ್ಕೆಯಾದ ಪ್ರತಿನಿಧಿಗಳಿಗೆ ಮಾತ್ರ ಸೀಮಿತವಾಗಿರುವ ಅಧಿಕಾರವನ್ನು ಅವರ ಕುಟುಂಬದ ಸದಸ್ಯರು ಚಲಾಯಿಸುವುದು ಎಷ್ಟು ಸರಿ ಎಂಬ ಚರ್ಚೆ ಇದೀಗ ಮುನ್ನೆಲೆಗೆ ಬಂದಿದೆ. ಅಧಿಕಾರಿಗಳ ಸಭೆಗಳಲ್ಲಿ ಉಪಾಧ್ಯಕ್ಷೆಯ ಪತಿಯ ಅನಧಿಕೃತ ಹಸ್ತಕ್ಷೇಪದ ಬಗ್ಗೆ ಪಟ್ಟಣ ಪಂಚಾಯಿತಿ ಸದಸ್ಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಸಂತೋಷ್ ಅವರ ಹಸ್ತಕ್ಷೇಪಕ್ಕೆ ಕಡಿವಾಣ ಹಾಕಿ, ಅಧಿಕಾರ ದುರುಪಯೋಗದ ಆರೋಪದ ಕುರಿತು ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪಟ್ಟಣ ಪಂಚಾಯಿತಿ ಸದಸ್ಯರು ಅಜ್ಜಂಪುರ ತಹಶೀಲ್ದಾರ್ ಅವರಿಗೆ ದೂರು ಸಲ್ಲಿಸಿದ್ದಾರೆ.

Pati Durbar in Ajjampur Town Panchayat

Share

Leave a comment

Leave a Reply

Your email address will not be published. Required fields are marked *

Don't Miss

ಮೊಬೈಲ್‌ಗೆ 300 ಸಂದೇಶ-ಖಾತೆಯಿಂದ ₹1.49 ಲಕ್ಷ ವಂಚನೆ

ಚಿಕ್ಕಮಗಳೂರು: ಮೊಬೈಲ್‌ಗೆ ಏಕಾಏಕಿ 300 ಸಂದೇಶಗಳು ಬಂದ ಬೆನ್ನಲ್ಲೇ ವ್ಯಕ್ತಿಯೊಬ್ಬರ ಕೆನರಾ ಬ್ಯಾಂಕ್ ಖಾತೆಯಿಂದ ₹1.49 ಲಕ್ಷ ಹಣವನ್ನು ಯುಪಿಐ ಮೂಲಕ ಅಪರಿಚಿತರು ವರ್ಗಾಯಿಸಿಕೊಂಡಿದ್ದಾರೆ. ಸೋಮಲಾಪುರ ಕಾಚಗಲ್ ಕೊಪ್ಪದ ನಾಗರಾಜ್ ಎಸ್....

ಮನೆ ಬೀಗ ಮುರಿದು ₹5.55 ಲಕ್ಷ ಮೌಲ್ಯದ ಚಿನ್ನ-ಆಭರಣ ಕಳವು

ಚಿಕ್ಕಮಗಳೂರು: ಕುಟುಂಬ ಸಮೇತ ಬೆಂಗಳೂರಿಗೆ ತೆರಳಿದ್ದ ಮನೆಯೊಂದರ ಬೀಗ ಮುರಿದು ಒಳನುಗ್ಗಿದ ಕಳ್ಳರು ₹5.55 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ವಸ್ತುಗಳು ಹಾಗೂ ನಗದು ಹಣ ಕಳವು ಮಾಡಿರುವ ಘಟನೆ ನಗರದ...

Related Articles

ಅನಂತ್ ಅಗಲಿಕೆ ವೈಯಕ್ತಿಕವಾಗಿ ಅಪಾರ ನೋವು ತಂದಿದೆ

ಮೂಡಿಗೆರೆ: ತಾವು ಸಚಿವೆಯಾಗಿದ್ದ ಸಂದರ್ಭದಲ್ಲಿ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡಿದ್ದ ಎಂ.ಎಸ್. ಅನಂತ್ ಅವರು...

ಅಡಿಕೆ ತೋಟದ ನೀರಿನ ತೊಟ್ಟಿಯಲ್ಲಿ ಇಬ್ಬರು ಕಾರ್ಮಿಕರ ಶವ ಪತ್ತೆ

ತರೀಕೆರೆ: ಅಡಿಕೆ ತೋಟದ ಮನೆಯ ನೀರಿನ ತೊಟ್ಟಿಯಲ್ಲಿ ಇಬ್ಬರು ಕಾರ್ಮಿಕರ ಮೃತದೇಹಗಳು ಪತ್ತೆಯಾಗಿರುವ ಘಟನೆ ತಾಲೂಕಿನ...

ಬಸ್ ಹತ್ತುವ ಮಹಿಳೆಯ 5 ಲಕ್ಷ ರೂ. ಮೌಲ್ಯದ ಮಾಂಗಲ್ಯ ಸರ ಕಳವು

ಚಿಕ್ಕಮಗಳೂರು: ಬಸ್ ಹತ್ತುವ ಸಂದರ್ಭದಲ್ಲಿ ಉಂಟಾದ ನೂಕುನುಗ್ಗಲನ್ನೇ ದುರುಪಯೋಗಪಡಿಸಿಕೊಂಡ ಕಳ್ಳರು ಮಹಿಳೆಯೊಬ್ಬರ ಕುತ್ತಿಗೆಯಲ್ಲಿದ್ದ ಸುಮಾರು 5...

ಮಹಿಳೆಯ ಕುತ್ತಿಗೆಯಿಂದ 6 ಲಕ್ಷ ರೂ. ಮೌಲ್ಯದ ಚಿನ್ನದ ಸರ ಕಳವು

ಚಿಕ್ಕಮಗಳೂರು: ರಾತ್ರಿ ವಾಕಿಂಗ್‌ಗೆ ತೆರಳಿದ್ದ ಮಹಿಳೆಯೊಬ್ಬರ ಕುತ್ತಿಗೆಯಲ್ಲಿದ್ದ ಸುಮಾರು 6 ಲಕ್ಷ ರೂ. ಮೌಲ್ಯದ ಚಿನ್ನದ...