Home namma chikmagalur chikamagalur ಜಿಲ್ಲಾಸ್ಪತ್ರೆಯಲ್ಲಿ ಸಕಾಲದಲ್ಲಿ ಚಿಕಿತ್ಸೆ ದೊರೆಯದೆ ರೋಗಿ ಸಾವು
chikamagalurCrime NewsHomeLatest Newsnamma chikmagalur

ಜಿಲ್ಲಾಸ್ಪತ್ರೆಯಲ್ಲಿ ಸಕಾಲದಲ್ಲಿ ಚಿಕಿತ್ಸೆ ದೊರೆಯದೆ ರೋಗಿ ಸಾವು

Share
Share

ಚಿಕ್ಕಮಗಳೂರು: ರೋಗಿಯೊಬ್ಬರಿಗೆ ಸಕಾಲದಲ್ಲಿ ಚಿಕಿತ್ಸೆ ದೊರೆಯದ ಕಾರಣ ಸಾವನ್ನಪ್ಪಿರುವ ಆರೋಪವೊಂದು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಲ್ಲಿ ಕೇಳಿ ಬಂದಿದೆ.

ಆಲ್ಲೂರು ಸಮೀಪದ ಗಾಳಿಗಂಡಿಯ ಲಕ್ಷ್ಮಣ್ (46) ಮೃತ ವ್ಯಕ್ತಿ.

ಗುರುವಾರ ಮಧ್ಯಾಹ್ನ ಅವರಿಗೆ ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕುಟುಂಬಸ್ಥರು ಜಿಲ್ಲಾಸ್ಪತ್ರೆಗೆ ಕರೆತಂದಿದ್ದರು. ಆದರೆ ಆಸ್ಪತ್ರೆಗೆ ದಾಖಲಿಸುವ ಸಂದರ್ಭದಲ್ಲಿ ಅಲ್ಲಿನ ವೈದ್ಯರು ಮತ್ತು ಸಿಬ್ಬಂದಿ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಲಕ್ಷ್ಮಣ್ ಕುಟುಂಬಸ್ಥರು ದೂರಿದ್ದಾರೆ.
ತುರ್ತು ಸಂದರ್ಭದಲ್ಲಿ ರೋಗಿಯನ್ನು ಕರೆದೊಯ್ಯಲು ಕನಿಷ್ಠ ವೀಲ್‌ಚೇರ್ ವ್ಯವಸ್ಥೆ ಕೂಡ ಮಾಡದೆ ವಿಳಂಬ ಮಾಡಿದ್ದರಿಂದಲೇ ಲಕ್ಷ್ಮಣ್ ಮೃತಪಟ್ಟಿದ್ದಾರೆ ಎಂದು ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ತವ್ಯ ಲೋಪ ಎಸಗಿದ ವೈದ್ಯರು ಹಾಗೂ ಸಿಬ್ಬಂದಿಯನ್ನು ತಕ್ಷಣವೇ ಅಮಾನತುಗೊಳಿಸಬೇಕು ಎಂದು ಜಿಲ್ಲಾ ಸರ್ಜನ್ ಅವರಿಗೆ ಮನವಿ ಸಲ್ಲಿಸಿದರು.

ಘಟನೆ ಕುರಿತು ಜಿಲ್ಲಾ ಸರ್ಜನ್ ಡಾ। ಚಂದ್ರಶೇಖರ್ ಮಾತನಾಡಿ, ಮೃತ ಕುಟುಂಬಸ್ಥರ ದೂರಿನ ಅನ್ವಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಆಸ್ಪತ್ರೆಯಲ್ಲಿ ನಡೆದ ಘಟನೆಗಳ ಬಗ್ಗೆ ಸಮಗ್ರ ತನಿಖೆ ನಡೆಸಿ ಚಿಕಿತ್ಸೆಯಲ್ಲಿ ವಿಳಂಬವಾಗಿರುವುದು ಸಾಬೀತಾದರೆ ಅವರ ವಿರುದ್ಧ ಕಟ್ಟುನಿಟ್ಟಿನ ಶಿಸ್ತು ಕ್ರಮ ಜರುಗಿಸಲಾಗುವುದು ತಿಳಿಸಿದ್ದಾರೆ.

Patient dies due to lack of timely treatment at district hospital

Share

Leave a comment

Leave a Reply

Your email address will not be published. Required fields are marked *

Don't Miss

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುಮಾರು 67 ಸಾವಿರ ಫಲಾನುಭವಿಗಳ ಪಿಂಚಣಿ ಸ್ಥಗಿತಗೊಳಿಸಲಾಗಿದೆ ಎಂದು ವಿಧಾನಪರಿಷತ್ ಸದಸ್ಯ...

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ ಅನುಭವಿಸುತ್ತಿದ್ದು, ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಜಿಪಂ–ತಾಪಂ ಸದಸ್ಯ...

Related Articles

ಮಳೆಗಾಲದಲ್ಲಿ ಟಿಂಬರ್ ಸಾಗಣೆರಸ್ತೆಯಿಂದ ರಸ್ತೆ ಹಾಳು

ಕೊಪ್ಪ: ತಾಲೂಕಿನ ಅಸಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಮಳೆಗಾಲದಲ್ಲಿಯೇ ಟಿಂಬರ್‌ಗಳನ್ನು ಕಡಿದು ಸಾಗಿಸುತ್ತಿರುವುದರಿಂದ...

ನಗರಕ್ಕೆ ಎರಡು ದಿನಗಳ ಕಾಲ ಕುಡಿಯುವ ನೀರಿನ ಸರಬರಾಜು ಸ್ಥಗಿತ

ಚಿಕ್ಕಮಗಳೂರು: ನಗರದ ದಂಟರಮಕ್ಕಿ ವ್ಯಾಪ್ತಿಯಲ್ಲಿ 600 ಎಂಎಂ ಸಾಮರ್ಥ್ಯದ ಪ್ರಮುಖ ಕುಡಿಯುವ ನೀರಿನ ಕೊಳವೆ ಮಾರ್ಗ...

ಚಿಕ್ಕಮಗಳೂರು-ಯಶವಂತಪುರ ಎಕ್ಸ್‌ಪ್ರೆಸ್ ರೈಲು ಸಂಚಾರ ಸ್ಥಗಿತ…?

ಚಿಕ್ಕಮಗಳೂರು: ಮಲ್ಲಸಂದ್ರ ಮತ್ತು ಗುಬ್ಬಿ ರೈಲ್ವೆ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ ಗೇಟ್ (LC-48) ಬದಲಿಗೆ...

ಅಣ್ಣ-ತಮ್ಮಂದಿರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ತರೀಕೆರೆ: ಮನೆಯಲ್ಲಿ ಆಟವಾಡುತ್ತಿದ್ದ ಮಗುವಿನ ಕೆನ್ನೆ ಊದಿಕೊಂಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಕ್ಷುಲ್ಲಕ ಕಾರಣಕ್ಕೆ ಅಣ್ಣ-ತಮ್ಮಂದಿರ ನಡುವೆ...