ಚಿಕ್ಕಮಗಳೂರು: ಅಧಿಕಾರಕ್ಕಾಗಿ ನಾನು ರಾಜಕಾರಣಕ್ಕೆ ಬಂದವನಲ್ಲ, ಸಿದ್ಧಾಂತ ಹಾಗೂ ಜನಪರ ಕಾರ್ಯಗಳಿಗಾಗಿ ರಾಜಕಾರಣಕ್ಕೆ ಬಂದಿz್ದೆÃನೆ. ಅಧಿಕಾರಕ್ಕಿಂತ ಸಿದ್ಧಾಂತ, ಜನರಿಗಾಗಿ ಮಾಡುವ ಕೆಲಸವೇ ಮುಖ್ಯ ಎಂಬ ನಿಲುವಿನೊಂದಿಗೆ ರಾಜಕಾರಣ ಮಾಡಿದ್ದೇನೆ ಎಂದು ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ತಿಳಿಸಿದರು.
ತಾಲೂಕಿನ ಬೆಳವಾಡಿ ಕೆರೆಗೆ ಶನಿವಾರ ಬಾಗಿನ ಅರ್ಪಿಸಿ ಮಾತನಾಡಿದ ಅವರು, ಭಾರತೀಯ ಪರಂಪರೆಯಲ್ಲಿ ಪ್ರಕೃತಿ ಹಾಗೂ ಜೀವಜಲದ ಮೂಲಗಳಿಗೆ ಕೃತಜ್ಞತೆ ಸಲ್ಲಿಸುವ ಸಂಸ್ಕೃತಿ ಇದೆ. ಗಂಗಾ ಮಾತೆ ನಮ್ಮನ್ನು ಜೀವಜಲದ ಮೂಲಕ ಕಾಪಾಡುತ್ತಿರುವುದಕ್ಕೆ ಕೃತಜ್ಞತೆ ಸಲ್ಲಿಸಿ, ಮುಂದೆಯೂ ಸಮೃದ್ಧಿ ಕರುಣಿಸಲಿ ಎಂಬ ಆಶಯದಿಂದ ಬಾಗಿಣ ಸಮರ್ಪಿಸಲಾಗಿದೆ ಎಂದರು.
ಜಗತ್ತಿನ ಇತಿಹಾಸದಲ್ಲಿ ಸುಳ್ಳು ಶಾಶ್ವತವಾಗಿ ಗೆದ್ದ ಉದಾಹರಣೆ ಇಲ್ಲ. ಕೆಲವೊಮ್ಮೆ ಸತ್ಯ ಮೌನವಾಗಿದ್ದಾಗ ಸುಳ್ಳು ಊರ ತುಂಬಾ ಮೆರೆಯಬಹುದು. ಆದರೆ ಕೊನೆಗೆ ಗೆಲ್ಲುವುದು ಸತ್ಯವೇ. ತಮ್ಮ ೨೦ ವರ್ಷಗಳ ಶಾಸಕತ್ವದ ಅವಧಿಯಲ್ಲಿ ಚಿಕ್ಕಮಗಳೂರು ಕ್ಷೇತ್ರದ ಅಭಿವೃದ್ಧಿಗೆ ಹಲವು ಕೆಲಸಗಳನ್ನು ಮಾಡಿದ್ದೇನೆ. ರಸ್ತೆ, ನೀರಾವರಿ, ಸಮುದಾಯ ಭವನಗಳು, ಅಂಬೇಡ್ಕರ್ ಭವನ, ದೇವಸ್ಥಾನಗಳ ಜೀರ್ಣೋದ್ಧಾರ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ನೀಡಿದ್ದೇನೆ ಎಂದರು.
ಕ್ಷೇತ್ರದಲ್ಲಿ ರಸ್ತೆ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದ್ದರಿಂದ ಇಂದು ರಸ್ತೆಗಾಗಿ ಹೋರಾಟ ಮಾಡುವ ಪರಿಸ್ಥಿತಿ ನಿರ್ಮಾಣವಾಗಿಲ್ಲ. ಬಹುತೇಕ ರಸ್ತೆಗಳನ್ನೂ ಕಾಂಕ್ರೀಟ್, ಡಾಂಬರೀಕರಣ ಹಾಗೂ ಅಗಲೀಕರಣದ ಮೂಲಕ ಸುವ್ಯವಸ್ಥಿತಗೊಳಿಸಲಾಗಿದೆ. ಈಗಿನ ಸಂದರ್ಭದಲ್ಲಿ ಅಲ್ಲೊಂದು ಇಲ್ಲೊಂದು ಗುಂಡಿ ಮುಚ್ಚುವುದಷ್ಟೇ ಉಳಿದಿದೆ ಎಂದು ಹೇಳಿದರು.
ಚಿಕ್ಕಮಗಳೂರು, ಕಡೂರು ಹಾಗೂ ತರೀಕೆರೆ ಭಾಗದ ಕೆರೆಗಳನ್ನು ತುಂಬಿಸುವ ಉದ್ದೇಶದಿಂದ ಭದ್ರಾ ನದಿಯಿಂದ ನೀರು ಹರಿಸುವ ಯೋಜನೆಗೆ ೧,೨೮೧ ಕೋಟಿ ರೂ. ಮಂಜೂರಾತಿ ದೊರಕಿಸಲು ಶ್ರಮಿಸಿz್ದÉÃನೆ. ತಾವು ಸಚಿವರಾಗಿದ್ದ ಸಂದರ್ಭದಲ್ಲಿ ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಈ ಕುರಿತು ಚರ್ಚಿಸಿದ್ದೆ. ನಂತರ ಬಿಜೆಪಿ ರಾಷ್ಟಿçÃಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡ ಸಂದರ್ಭದಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಮುನ್ನವೂ ಶಾಶ್ವತ ನೀರಾವರಿ ಯೋಜನೆ ಮಂಜೂರು ಮಾಡುವಂತೆ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದ್ದೆ. ಹಣಕಾಸಿನ ತೊಂದರೆ ಇದ್ದರೂ ಜನರಿಗೆ ನೀಡಿದ್ದ ಮಾತನ್ನು ನೆನಪಿಸಿ ಯೋಜನೆಗೆ ಮಂಜೂರಾತಿ ಕೊಡಿಸುವಂತೆ ಒತ್ತಾಯಿಸಿದ್ದೆ ಎಂದು ತಿಳಿಸಿದರು.
ಇದರ ಫಲವಾಗಿ ೧,೨೮೧ ಕೋಟಿ ರೂ. ಮೊತ್ತದ ಯೋಜನೆಗೆ ಮಂಜೂರಾತಿ ದೊರೆತಿದೆ. ಹಂತ ಹಂತವಾಗಿ ಕಾಮಗಾರಿ ನಡೆಯುತ್ತಿದೆ. ಯೋಜನೆಯ ವಿವಿಧ ಹಂತಗಳಲ್ಲಿ ತರೀಕೆರೆ, ಕಡೂರು ಹಾಗೂ ಚಿಕ್ಕಮಗಳೂರು ತಾಲೂಕುಗಳ ನೂರಾರು ಕೆರೆಗಳಿಗೆ ನೀರು ತುಂಬಿಸುವ ಉದ್ದೇಶ ಹೊಂದಲಾಗಿದೆ ಎಂದರು.
ರಣಘಟ್ಟ ಯೋಜನೆಯಲ್ಲೂ ಬೆಳವಾಡಿ ಕೆರೆಯನ್ನು ಸೇರಿಸಿ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ಕೊಡಿಸುವಲ್ಲಿ ಯಶಸ್ವಿಯಾಗಿz್ದÉÃನೆ. ಈ ಯೋಜನೆಗೆ ೧೨೫.೪೬ ಕೋಟಿ ರೂ. ಮಂಜೂರಾತಿ ದೊರೆತಿದ್ದು, ಈ ಭಾಗದ ನೀರಿನ ಸಮಸ್ಯೆ ಪರಿಹರಿಸುವ ಉದ್ದೇಶದಿಂದ ಯೋಜನೆಯನ್ನು ರೂಪಿಸಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್.ಸಿ.ಕಲ್ಮುರುಡಪ್ಪ, ಜಿಪಂ ಮಾಜಿ ಸದಸ್ಯ ಬೆಳವಾಡಿ ರವೀಂದ್ರ, ಈಶ್ವರಹಳ್ಳಿ ಮಹೇಶ್, ಕೋಟೆ ರಂಗನಾಥ್, ವೆಂಕಟೇಶ್, ಬ್ಯಾಂಕ್ ಬಸವರಾಜು, ಪ್ರಕಾಶ್, ರಾಜು, ಬಾಬು, ಕನಕರಾಜ್ ಅರಸ್, ಚಂದ್ರಶೇಖರ್ ಉಪಸ್ಥಿತರಿದ್ದರು.
People-oriented work is the true yardstick of politics.
Leave a comment