Home Crime News ಕಾಳು ಮೆಣಸು ಕಳ್ಳತನ ಪ್ರಕರಣ-ಇಬ್ಬರು ಆರೋಪಿಗಳ ಬಂಧನ
Crime NewschikamagalurHomeLatest Newsnamma chikmagalur

ಕಾಳು ಮೆಣಸು ಕಳ್ಳತನ ಪ್ರಕರಣ-ಇಬ್ಬರು ಆರೋಪಿಗಳ ಬಂಧನ

Share
Share

ಚಿಕ್ಕಮಗಳೂರು: ಕಾಳು ಮೆಣಸು ಕಳ್ಳತನ ಪ್ರಕರಣದಲ್ಲಿ ಇಬ್ಬರು ಆರೋಪಿತರನ್ನು ಬಂಧಿಸಿ ೧.೨ ಲಕ್ಷ ರೂ ಮೌಲ್ಯದ ೧೯೫ ಕೆಜಿ ಕಾಳುಮೆಣಸು, ಕೃತ್ಯಕ್ಕೆ ಬಳಸಿದ ೩ ಲಕ್ಷ ರೂ ಮೌಲ್ಯದ ಹುಂಡೈ ಕಾರು ಹಾಗೂ ೧೦ಸಾವಿರ ನಗದು ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಗ್ರಾಮಾಂತರ ಪೊಲೀಸರಿಗೆ ಅಕ್ಟೋಬರ್ ೫ ರಂದು ಎನ್.ಸಿ. ನಾಗರಾಜು ಎಂಬುವರು ದಾಸರಹಳ್ಳಿ ತೋಟದ ಮನೆಯಲ್ಲಿಟ್ಟಿದ್ದ ೧.೨೦ ಲಕ್ಷ ರೂ. ಬೆಲೆ ಬಾಳುವ ೧೯೫ ಕೆಜಿ ಕಾಳುಮೆಣಸನ್ನು ಯಾರೋ ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿರುವುದಾಗಿ ದೂರು ನೀಡಿದ್ದರು.

ಆರೋಪಿಗಳನ್ನು ಶೀಘ್ರವಾಗಿ ಪತ್ತೆ ಹಚ್ಚಿ ಕದ್ದಮಾಲನ್ನು ವಶಕ್ಕೆ ಪಡೆಯುವ ನಿಟ್ಟಿನಲ್ಲಿ ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿ ಡಾ.ವಿಕ್ರಮ್ ಅಮಟೆ,ಹೆಚ್ಚುವರಿ ಪೊಲೀಸ್ ಮುಖ್ಯಾಧಿಕಾರಿ ಸಿ.ಟಿ.ಜಯಕುಮಾರ್, ಡಿವೈಎಸ್‌ಪಿ ಶೈಲೆಂದ್ರ ಅವರ ಮಾರ್ಗದರ್ಶನದಲ್ಲಿ ಗ್ರಾಮಾಂತರ ಠಾಣೆಯ ಪೊಲೀಸ್ ನಿರೀಕ್ಷಕ ಸಚಿನ್ ಕುಮಾರ ನೇತೃತ್ವದಲ್ಲಿ ಪೊಲೀಸ್ ಉಪನಿರೀಕ್ಷಕ ಎಸ್.ವಿ. ರಘುನಾಥ, ಸಿಬ್ಬಂದಿಗಳಾದ ಲೋಹಿತ್, ರಮೇಶ, ಲಕ್ಷ್ಮಣ, ಕಿರಣ, ಶಿವರಾಜ, ಶಶಿಧರ ಮತ್ತು ವಿನಾಯಕ ರನ್ನೊಳಗೊಂಡ ಅಪರಾಧ ಪತ್ತೆ ಕಾರ್ಯದ ತನಿಖಾ ತಂಡವನ್ನು ರಚಿಸಲಾಗಿತ್ತು.

ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿ ಆರೋಪಿಗಳಾದ ಪ್ರಜ್ವಲ್, ಸುನಿಲ್ ಎಂಬುವರನ್ನು ವಶಕ್ಕೆ ಪಡೆದು ಕಳ್ಳತನವಾಗಿದ್ದ ೧.೨೦ ಲಕ್ಷ ರೂ ಬೆಲೆ ಬಾಳುವ ೧೯೫ ಕೆ.ಜಿ.ಕಾಳು ಮೆಣಸು, ಹಾಗೂ ಕಳ್ಳತನ ಮಾಡಲು ಉಪಯೋಗಿಸಿದ ೩ ಲಕ್ಷ ಬೆಲೆ ಬಾಳುವ ಹ್ಯೂಂಡಾಯ್ ಕಾರು ಹಾಗೂ ಆರೋಪಿಗಳಿಂದ ೧೦ಸಾವಿರ ರೂ ನಗದು ಹಣವನ್ನು ವಶಕ್ಕೆ ತೆಗೆದುಕೊಂಡು ಆರೋಪಿಗಳನ್ನು ನ್ಯಾಯಾಂಗ ಬಂದನಕ್ಕೆ ಒಪ್ಪಿಸಿದ್ದಾರೆ.

ಮೆಣಸು ಕಳವು ಪ್ರಕರಣವನ್ನು ಯಶಸ್ವಿಯಾಗಿ ಭೇದಿಸಿ ಆರೋಪಿತರನ್ನು, ಕದ್ದಮಾಲನ್ನು ವಶಕ್ಕೆ ಪಡೆದು ಸೂಕ್ತ ಕಾನೂನು ಕ್ರಮ ಜರುಗಿಸುವಲ್ಲಿ ಶ್ರಮಿಸಿದ ಅಪರಾಧ ಪತ್ತೆ ಕಾರ್ಯದ ತನಿಖಾ ತಂಡದಲ್ಲಿದ್ದ ಅಧಿಕಾರಿ ಸಿಬ್ಬಂದಿಯವರ ಕರ್ತವ್ಯವನ್ನು ಪೊಲೀಸ್ ಅಧೀಕ್ಷಕರು ಶ್ಲಾಘಿಸಿದ್ದಾರೆ.

Pepper theft case – two accused arrested

Share

Leave a comment

Leave a Reply

Your email address will not be published. Required fields are marked *

Don't Miss

ದನದ ಮಾಂಸ ಮಾರಾಟದಲ್ಲಿ 40 ಕೆ.ಜಿ ಮಾಂಸ, ಕತ್ತಿ–ಚಾಕುಗಳು ಜಪ್ತಿ

ಚಿಕ್ಕಮಗಳೂರು: ನಗರದ ಅಯ್ಯಪ್ಪನಗರದ ಸಮೀಪದ ಶೆಡ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಗರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ.9ರಂದು ಮಧ್ಯಾಹ್ನ...

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ ಸಾಧನೆ ಯೋಗ ಮಾಡುವವರಿಗೆ ಒಂದು ಪ್ರೇರಣೆ ಕೊಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ.ರವಿ...

Related Articles

ಕೇಬಲ್ ಕಳ್ಳರೆಂದು ಶಂಕಿಸಿ ಮೂವರ ಮೇಲೆ ಹಲ್ಲೆ

ಕಡೂರು: ಪಂಪ್‌ಸೆಟ್‌ ಮೋಟಾರ್‌ ಕೇಬಲ್‌ ಕಳ್ಳರೆಂದು ಅನುಮಾನಿಸಿ ಮೂವರು ಯುವಕರ ಮೇಲೆ ಗುಂಪೊಂದು ಗಂಭೀರವಾಗಿ ಹಲ್ಲೆ...

₹5 ಲಕ್ಷ ಮೌಲ್ಯದ ಶ್ರೀಗಂಧದ ಮರಗಳ ಕಳವು

ತರೀಕೆರೆ: ಕೃಷಿ ತೋಟಕ್ಕೆ ನುಗ್ಗಿದ ಕಳ್ಳರು ಸುಮಾರು 15 ಶ್ರೀಗಂಧದ ಮರಗಳನ್ನು ಕಡಿದು ಕಳವು ಮಾಡಿಕೊಂಡು...

ಸ್ಕೂಟರ್‌ ಅಪಘಾತ: ಚಿಕಿತ್ಸೆ ಫಲಿಸದೆ ಸಾವು

ಕಡೂರು: ರಸ್ತೆಯಲ್ಲಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸ್ಕೂಟರ್‌ ನಿಯಂತ್ರಣ ತಪ್ಪಿ ಬಿದ್ದು...

ಧ್ವಜಾರೋಹಣದ ಕೆಲವೇ ಗಂಟೆಗಳಲ್ಲಿ ಕೆಳಗಿಳಿಸಿದ ರಾಷ್ಟ್ರಧ್ವಜ …?

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದೇ ಚಿಕ್ಕಮಗಳೂರಿನಲ್ಲಿ ರಾಷ್ಟ್ರಧ್ವಜಕ್ಕೆ ಸಂಬಂಧಿಸಿದಂತೆ ವಿವಾದವೊಂದು ಭುಗಿಲೆದ್ದಿದ್ದು, ಕರ್ನಾಟಕ ರಾಜ್ಯ ರೈತ ಸಂಘದ...